1 యోహాను 5 : 1 (ERVTE)
{#1ದೇವರ ಮಕ್ಕಳು ಲೋಕದ ವಿರುದ್ಧ ಜಯಗಳಿಸುವರು } ಯೇಸುವೇ ಕ್ರಿಸ್ತನೆಂದು ನಂಬುವವರು ದೇವರ ಮಕ್ಕಳಾಗಿದ್ದಾರೆ. ತಂದೆಯನ್ನು (ದೇವರನ್ನು) ಪ್ರೀತಿಸುವವನು ತಂದೆಯ ಮಕ್ಕಳನ್ನೂ ಪ್ರೀತಿಸುತ್ತಾನೆ.
1 యోహాను 5 : 2 (ERVTE)
ನಾವು ದೇವರ ಮಕ್ಕಳನ್ನು ಪ್ರೀತಿಸುತ್ತಿದ್ದೇವೆಂಬುದು ನಮಗೆ ಹೇಗೆ ತಿಳಿದಿದೆ? ನಾವು ದೇವರನ್ನು ಪ್ರೀತಿಸುತ್ತಿರುವುದರಿಂದ ಮತ್ತು ಆತನ ಆಜ್ಞೆಗಳಿಗೆ ವಿಧೇಯರಾಗಿರುವುದರಿಂದ ದೇವರ ಆಜ್ಞೆಗಳು ನಮಗೆ ತಿಳಿದಿವೆ.
1 యోహాను 5 : 3 (ERVTE)
ದೇವರನ್ನು ಪ್ರೀತಿಸುವುದು ಎಂದರೆ ಆತನ ಆಜ್ಞೆಗಳಿಗೆ ವಿಧೇಯರಾಗಿರುವುದು. ದೇವರ ಆಜ್ಞೆಗಳು ನಮಗೆ ಕಠಿಣವಾದವುಗಳಲ್ಲ.
1 యోహాను 5 : 4 (ERVTE)
ಏಕೆಂದರೆ ದೇವರಿಂದ ಹೊಸದಾಗಿ ಹುಟ್ಟಿರುವ ಪ್ರತಿಯೊಬ್ಬನೂ ಲೋಕದ ವಿರುದ್ಧ ಗೆಲ್ಲುವ ಶಕ್ತಿಯನ್ನು ಹೊಂದಿದ್ದಾನೆ.
1 యోహాను 5 : 5 (ERVTE)
ಲೋಕದ ವಿರುದ್ಧ ಜಯಗಳಿಸಿದ್ದು ನಮ್ಮ ನಂಬಿಕೆಯೇ. ಆದ್ದರಿಂದ ಲೋಕದ ವಿರುದ್ಧ ಜಯಗಳಿಸುವವನು ಯಾರು? ಯೇಸುವನ್ನು ದೇವರ ಮಗನೆಂದು ನಂಬುವ ವ್ಯಕ್ತಿಯು ಮಾತ್ರ ಜಯಗಳಿಸುತ್ತಾನೆ.
1 యోహాను 5 : 6 (ERVTE)
{#1ದೇವರು ತನ್ನ ಮಗನನ್ನು ಕುರಿತು ನಮಗೆ ತಿಳಿಸಿದನು } ಬಂದಾತನೇ ಯೇಸು ಕ್ರಿಸ್ತನು. ಯೇಸು ನೀರಿನಿಂದ ಮಾತ್ರವಲ್ಲದೆ ರಕ್ತದಿಂದ ಬಂದನು. ಇದು ನಿಜವೆಂದು ನಮಗೆ ಆತ್ಮನು ತಿಳಿಸುತ್ತಾನೆ. ಏಕೆಂದರೆ ಆತ್ಮನು ಸತ್ಯಸ್ವರೂಪನಾಗಿದ್ದಾನೆ.
1 యోహాను 5 : 7 (ERVTE)
ಆದ್ದರಿಂದ ಯೇಸುವಿನ ಬಗ್ಗೆ ನಮಗೆ ತಿಳಿಸಲು ಮೂರು ಸಾಕ್ಷಿಗಳಿವೆ:
1 యోహాను 5 : 8 (ERVTE)
ಆತ್ಮ, ನೀರು ಮತ್ತು ರಕ್ತ. ಈ ಮೂರು ಸಾಕ್ಷಿಗಳ ಅಭಿಪ್ರಾಯವು ಒಂದೇ.
1 యోహాను 5 : 9 (ERVTE)
ಜನರು ಸಾಕ್ಷಿ ಹೇಳಿದಾಗ ನಾವು ನಂಬುತ್ತೇವೆ. ಆದರೆ ದೇವರ ಸಾಕ್ಷಿಯು ಅದಕ್ಕಿಂತಲೂ ವಿಶೇಷವಾಗಿದೆ. ದೇವರು ತನ್ನ ಸ್ವಂತ ಮಗನ ಕುರಿತು ಹೇಳಿದ ಸತ್ಯವೇ ಆತನು ನಮಗೆ ನೀಡಿದ ಸಾಕ್ಷಿಯಾಗಿದೆ.
1 యోహాను 5 : 10 (ERVTE)
ದೇವರ ಮಗನನ್ನು ನಂಬುವವನು ದೇವರಿಂದ ಸಾಕ್ಷೀಕರಿಸಲ್ಪಟ್ಟ ಸತ್ಯವನ್ನು ಹೊಂದಿರುತ್ತಾನೆ. ದೇವರನ್ನು ನಂಬದೆ ಇರುವವನು, ದೇವರನ್ನು ಸುಳ್ಳುಗಾರನನ್ನಾಗಿ ಮಾಡುತ್ತಾನೆ. ಏಕೆಂದರೆ ದೇವರು ತನ್ನ ಮಗನ ಬಗ್ಗೆ ನಮಗೆ ಹೇಳಿದುದನ್ನು ಅವನು ನಂಬುವುದಿಲ್ಲ.
1 యోహాను 5 : 11 (ERVTE)
ನಮಗೆ ನಿತ್ಯಜೀವವನ್ನು ತಾನು ದಯಪಾಲಿಸಿರುವುದಾಗಿ ದೇವರು ಹೇಳಿದನು. ಈ ನಿತ್ಯಜೀವವು ಆತನ ಮಗನಲ್ಲಿದೆ. (ಯೇಸು)
1 యోహాను 5 : 12 (ERVTE)
ಯಾವನಲ್ಲಿ ಆ ಮಗನಿರುತ್ತಾನೋ ಅವನಲ್ಲಿ ಆ ಜೀವವಿದೆ. ಆದರೆ ಯಾವನಲ್ಲಿ ದೇವರ ಮಗನು ಇರುವುದಿಲ್ಲವೋ ಅವನಲ್ಲಿ ಆ ಜೀವವಿಲ್ಲ.
1 యోహాను 5 : 13 (ERVTE)
{#1ಈಗ ನಮಗೆ ನಿತ್ಯಜೀವವಿದೆ } ದೇವರ ಮಗನಲ್ಲಿ ನಂಬಿಕೆಯಿಟ್ಟಿರುವ ನಿಮಗೆ ನಾನು ಈ ಪತ್ರವನ್ನು ಬರೆಯುತ್ತಿದ್ದೇನೆ. ಈಗ ನಿಮಗೆ ನಿತ್ಯಜೀವವಿದೆ ಎಂಬುದು ನಿಮಗೆ ಗೊತ್ತಾಗುವಂತೆ ನಾನು ಈ ಪತ್ರ ಬರೆಯುತ್ತಿದ್ದೇನೆ.
1 యోహాను 5 : 14 (ERVTE)
ನಾವು ಯಾವ ಸಂದೇಹಗಳೂ ಇಲ್ಲದೆ ದೇವರ ಬಳಿಗೆ ಬರಲು ಸಾಧ್ಯವಿದೆ. ಇದರ ಅರ್ಥವೇನೆಂದರೆ (ದೇವರ ಚಿತ್ತಕ್ಕನುಸಾರವಾಗಿ) ನಮಗೆ ಬೇಕಾದವುಗಳಿಗಾಗಿ ದೇವರನ್ನು ಕೇಳಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆ.
1 యోహాను 5 : 15 (ERVTE)
ನಾವು ದೇವರನ್ನು ಬೇಡಿಕೊಂಡಾಗಲೆಲ್ಲಾ ಆತನು ನಮ್ಮ ಬೇಡಿಕೆಗಳನ್ನು ಕೇಳುವುದರಿಂದ ಆತನಲ್ಲಿ ಬೇಡಿಕೊಂಡದ್ದನ್ನು ಆತನು ನಮಗೆ ದಯಪಾಲಿಸುತ್ತಾನೆಂಬುದು ನಮಗೆ ತಿಳಿದಿದೆ.
1 యోహాను 5 : 16 (ERVTE)
ಕ್ರಿಸ್ತನಲ್ಲಿ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಪಾಪ ಮಾಡುವುದನ್ನು (ನಿತ್ಯವಾದ ಮರಣಕ್ಕೆ ನಡೆಸುವ ಪಾಪವನ್ನಲ್ಲ) ಕಂಡ ವ್ಯಕ್ತಿಯು ತನ್ನ ಆ ಸಹೋದರನಿಗಾಗಿ ಅಥವಾ ಆ ಸಹೋದರಿಗಾಗಿ ಪ್ರಾರ್ಥಿಸಬೇಕು. ಆಗ ದೇವರು ಆ ಸಹೋದರನಿಗೆ ಅಥವಾ ಆ ಸಹೋದರಿಗೆ ಜೀವವನ್ನು ದಯಪಾಲಿಸುತ್ತಾನೆ. ಶಾಶ್ವತವಾದ ಮರಣದ ಕಡೆಗೆ ನಡೆಸದಿರುವ ಪಾಪವನ್ನು ಮಾಡುವವರ ಬಗ್ಗೆ ನಾನು ಹೇಳುತ್ತಿದ್ದೇನೆ. ಮರಣದ ಕಡೆಗೆ ನಡೆಸುವ ಪಾಪವಿದೆ. ಈ ಪಾಪ ಮಾಡುವವರಿಗಾಗಿ ಪ್ರಾರ್ಥಿಸಬೇಕೆಂದು ನಾನು ಹೇಳುತ್ತಿಲ್ಲ.
1 యోహాను 5 : 17 (ERVTE)
ನೀತಿಗೆ ವಿರುದ್ಧವಾದುದೆಲ್ಲಾ ಪಾಪವಾಗಿದೆ. ಆದರೆ ಶಾಶ್ವತ ಮರಣದ ಕಡೆಗೆ ಕೊಂಡೊಯ್ಯದಿರುವ ಪಾಪವೂ ಇದೆ.
1 యోహాను 5 : 18 (ERVTE)
ದೇವರಿಂದ ಹೊಸದಾಗಿ ಹುಟ್ಟಿದವನು ಪಾಪದಲ್ಲೇ ಮುಂದುವರಿಯುವುದಿಲ್ಲವೆಂದು ನಮಗೆ ತಿಳಿದಿದೆ. ದೇವರ ಮಗನಾದ ಯೇಸು ಅವನನ್ನು ಸುರಕ್ಷಿತವಾಗಿ ಕಾಪಾಡುತ್ತಾನೆ. ಕೆಡುಕನು ಅವನಿಗೆ ಕೇಡುಮಾಡಲಾಗುವುದಿಲ್ಲ.
1 యోహాను 5 : 19 (ERVTE)
ನಾವು ದೇವರಿಗೆ ಸೇರಿದವರೆಂಬುದು ನಮಗೆ ತಿಳಿದಿದೆ. ಆದರೆ ಈ ಲೋಕವು ಕೆಡುಕನ ವಶದಲ್ಲಿದೆ.
1 యోహాను 5 : 20 (ERVTE)
ದೇವರ ಮಗನು ಬಂದಿದ್ದಾನೆಂಬುದು ನಮಗೆ ತಿಳಿದಿದೆ. ದೇವರ ಮಗನು ನಮಗೆ ತಿಳುವಳಿಕೆಯನ್ನು ದಯಪಾಲಿಸಿರುವನು. ಈಗ ನಾವು ದೇವರನ್ನು ತಿಳಿದುಕೊಳ್ಳಬಲ್ಲೆವು. ಸತ್ಯವಾಗಿರುವಾತನು ದೇವರೇ. ಸತ್ಯ ದೇವರಲ್ಲಿಯೂ ಮತ್ತು ಆತನ ಮಗನಾದ ಯೇಸು ಕ್ರಿಸ್ತನಲ್ಲಿಯೂ ನಾವು ನೆಲೆಸಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.
1 యోహాను 5 : 21 (ERVTE)
ಆದ್ದರಿಂದ ಪ್ರಿಯ ಮಕ್ಕಳೇ, ನೀವು ಸುಳ್ಳುದೇವರುಗಳಿಂದ ದೂರವಾಗಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21