రాజులు మొదటి గ్రంథము 4 : 1 (ERVTE)
{#1ಸೊಲೊಮೋನನ ರಾಜ್ಯ } ರಾಜನಾದ ಸೊಲೊಮೋನನು ಇಸ್ರೇಲಿನ ಜನತೆಯನ್ನೆಲ್ಲ ಆಳಿದನು.
రాజులు మొదటి గ్రంథము 4 : 2 (ERVTE)
ಅವನಿಗೆ ಆಳಲು ನೆರವಾದ ಅವನ ಮುಖ್ಯಾಧಿಕಾರಿಗಳ ಹೆಸರುಗಳು ಹೀಗಿವೆ: ಚಾದೋಕನ ಮಗನಾದ ಅಜರ್ಯನು ಯಾಜಕನಾಗಿದ್ದನು.
రాజులు మొదటి గ్రంథము 4 : 3 (ERVTE)
ಶೀಷನ ಮಕ್ಕಳಾದ ಎಲೀಹೋರೆಫ್ ಮತ್ತು ಅಹೀಯಾಹು; ಇವರಿಬ್ಬರೂ ನ್ಯಾಯಾಲಯದಲ್ಲಿ ನಡೆದ ಸಂಗತಿಗಳ ಕುರಿತಾಗಿ ಟಿಪ್ಪಣಿ ಬರೆಯುವ ಉದ್ಯೋಗವನ್ನು ಹೊಂದಿದ್ದರು. ಅಹೀಲೂದನ ಮಗನಾದ ಯೆಹೋಷಾಫಾಟನು ಜನರ ಇತಿಹಾಸದ ಕುರಿತು ಟಿಪ್ಪಣಿ ಬರೆದನು.
రాజులు మొదటి గ్రంథము 4 : 4 (ERVTE)
ಯೆಹೋಯಾದಾವನ ಮಗನಾದ ಬೆನಾಯ; ಬೆನಾಯನು ಸೇನಾಧಿಪತಿಯಾಗಿದ್ದನು. ಚಾದೋಕ ಮತ್ತು ಎಬ್ಯಾತಾರರು; ಚಾದೋಕ ಮತ್ತು ಎಬ್ಯಾತಾರರು ಯಾಜಕರಾಗಿದ್ದರು.
రాజులు మొదటి గ్రంథము 4 : 5 (ERVTE)
ನಾತಾನನ ಮಗನಾದ ಅಜರ್ಯ; ಅಜರ್ಯನು ಜಿಲ್ಲಾ ಅಧಿಕಾರಿಗಳ ಮೇಲ್ವಿಚಾರಕನಾಗಿದ್ದನು. ನಾತಾನನ ಮಗನಾದ ಚಾಬೂದ; ಚಾಬೂದನು ರಾಜನಾದ ಸೊಲೊಮೋನನಿಗೆ ಯಾಜಕನೂ ಸಲಹೆಗಾರನೂ ಆಗಿದ್ದನು.
రాజులు మొదటి గ్రంథము 4 : 6 (ERVTE)
ಅಹೀಷಾರ್; ಅಹೀಷಾರನು ರಾಜನ ಅರಮನೆಯ ಪ್ರತಿಯೊಂದರಲ್ಲೂ ಜವಾಬ್ದಾರನಾಗಿದ್ದನು. ಅಬ್ದನ ಮಗನಾದ ಅದೋನೀರಾಮ; ಅದೋನೀರಾಮನು ಗುಲಾಮರ ಮೇಲ್ವಿಚಾರಕನಾಗಿದ್ದನು.
రాజులు మొదటి గ్రంథము 4 : 7 (ERVTE)
ಇಸ್ರೇಲರನ್ನು ಹನ್ನೆರಡು ವಿಭಾಗ ಮಾಡಿ ಅವುಗಳನ್ನು ಜಿಲ್ಲೆಗಳೆಂದು ಕರೆದರು. ಪ್ರತಿಯೊಂದು ಜಿಲ್ಲೆಯನ್ನು ಆಳಲು ಸೊಲೊಮೋನನು ರಾಜ್ಯಪಾಲರನ್ನು ನೇಮಿಸಿದನು. ಈ ರಾಜ್ಯಪಾಲರು ತಮ್ಮ ಜಿಲ್ಲೆಗಳಿಂದ ಆಹಾರಪದಾರ್ಥಗಳನ್ನು ಸಂಗ್ರಹಿಸಿ ರಾಜನಿಗೂ ಅವನ ಕುಟುಂಬಕ್ಕೂ ಕೊಡಬೇಕೆಂದು ಆಜ್ಞಾಪಿಸಿದನು. ಪ್ರತಿಯೊಬ್ಬ ರಾಜ್ಯಪಾಲನು ವರ್ಷಕ್ಕೆ ಒಂದು ತಿಂಗಳು ರಾಜನಿಗೆ ಆಹಾರಪದಾರ್ಥಗಳನ್ನು ಕೊಡುವ ಜವಾಬ್ದಾರಿಯನ್ನು ಹೊಂದಿದ್ದನು.
రాజులు మొదటి గ్రంథము 4 : 8 (ERVTE)
ಹನ್ನೆರಡು ರಾಜ್ಯಪಾಲರುಗಳ ಹೆಸರುಗಳು ಹೀಗಿವೆ: ಎಫ್ರಾಯೀಮ್ ಬೆಟ್ಟಪ್ರದೇಶಕ್ಕೆ ಬೆನ್-ಹೂರನು ರಾಜ್ಯಪಾಲನಾಗಿದ್ದನು.
రాజులు మొదటి గ్రంథము 4 : 9 (ERVTE)
ಮಾಕಚ್, ಶಾಲೀಮ್, ಬೇತ್‌ಷ್‌ಮೆಷ್, ಏಲೋನ್, ಬೇತ್‌ಹಾನಾನ್‌ಗಳಿಗೆ ಬೆನ್‌ದೆಕರನು ರಾಜ್ಯಪಾಲನಾಗಿದ್ದನು.
రాజులు మొదటి గ్రంథము 4 : 10 (ERVTE)
ಅರುಬ್ಬೋತ್, ಸೋಕೋ, ಹೇಫರ್‌ಗಳಿಗೆ ಬೆನ್‌ಹೆಸೆದನು ರಾಜ್ಯಪಾಲನಾಗಿದ್ದನು.
రాజులు మొదటి గ్రంథము 4 : 11 (ERVTE)
ನಾಫೋತ್ ದೋರ್‌ಗೆ ಬೆನ್‌ಅಬೀನಾದ್ವಾನು ರಾಜ್ಯಪಾಲನಾಗಿದ್ದನು. ಅವನು ಸೊಲೊಮೋನನ ಮಗಳಾದ ಟಾಫತಳನ್ನು ಮದುವೆಯಾಗಿದ್ದನು.
రాజులు మొదటి గ్రంథము 4 : 12 (ERVTE)
ತಾಣಕ್, ಮೆಗಿದ್ದೋ ಮತ್ತು ಚಾರೆತಾನಿನ ಅಂಚಿನಲ್ಲಿದ್ದ ಬೇತ್‌ಷೆಯಾನಿನ ಎಲ್ಲ ಪ್ರದೇಶಕ್ಕೆ ಅಹೀಲೂದನ ಮಗನಾದ ಬಾಣಾ ರಾಜ್ಯಪಾಲನಾಗಿದ್ದನು. ಇದು ಇಜ್ರೇಲಿನ ತಳದಲ್ಲಿ ಬೇತ್‌ಷೆಯಾನಿನಿಂದ ಅಬೇಲ್ ಮೆಹೋಲವರೆಗಿರುವ, ಯೊಕ್ಮೆಯಾನಿನ ಆಚೆಗಿರುವ ಪ್ರದೇಶ.
రాజులు మొదటి గ్రంథము 4 : 13 (ERVTE)
ರಾಮೋತ್ ಗಿಲ್ಯಾದಿಗೆ ಬೆನ್‌ಗೆಬೆರನು ರಾಜ್ಯಪಾಲನಾಗಿದ್ದನು. ಗಿಲ್ಯಾದಿನ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ ಮತ್ತು ಪಟ್ಟಣಗಳೆಲ್ಲಕ್ಕೂ ಅವನು ರಾಜ್ಯಪಾಲನಾಗಿದ್ದನು. ಅವನು ಬಾಷಾನಿನ ಅರ್ಗೋಬ್ ಜಿಲ್ಲೆಗೂ ರಾಜ್ಯಪಾಲನಾಗಿದ್ದನು. ಈ ಪ್ರದೇಶದಲ್ಲಿ ಗೋಡೆಗಳಿಂದ ಸುತ್ತುವರಿದ ಅರವತ್ತು ನಗರಗಳಿದ್ದವು. ಈ ನಗರಗಳ ದ್ವಾರದಲ್ಲಿ ಹಿತ್ತಾಳೆಯ ಸಲಾಕೆಗಳುಳ್ಳ ಬಾಗಿಲುಗಳಿದ್ದವು.
రాజులు మొదటి గ్రంథము 4 : 14 (ERVTE)
ಮಹನಯಿಮಿಗೆ ಇದ್ದೋವಿನ ಮಗನಾದ ಅಹೀನಾದ್ವಾನು ರಾಜ್ಯಪಾಲನಾಗಿದ್ದನು.
రాజులు మొదటి గ్రంథము 4 : 15 (ERVTE)
ನಫ್ತಾಲಿಗೆ ಅಹೀಮಾಚನು ರಾಜ್ಯಪಾಲನಾಗಿದ್ದನು. ಸೊಲೊಮೋನನ ಮಗಳಾದ ಬಾಸೆಮತಳನ್ನು ಇವನು ಮದುವೆಯಾಗಿದ್ದನು.
రాజులు మొదటి గ్రంథము 4 : 16 (ERVTE)
ಆಶೇರಿಗೂ ಅಲೋತಿಗೂ ಹೂಷೈಯನ ಮಗ ಬಾಣನು ರಾಜ್ಯಪಾಲನಾಗಿದ್ದನು.
రాజులు మొదటి గ్రంథము 4 : 17 (ERVTE)
ಇಸ್ಸಾಕಾರಿಗೆ ಫಾರೂಹನ ಮಗನಾದ ಯೆಹೋಷಾಫಾಟನು ರಾಜ್ಯಪಾಲನಾಗಿದ್ದನು.
రాజులు మొదటి గ్రంథము 4 : 18 (ERVTE)
ಬೆನ್ಯಾಮೀನಿಗೆ ಏಲನ ಮಗನಾದ ಶಿಮ್ಮಿಯು ರಾಜ್ಯಪಾಲನಾಗಿದ್ದನು.
రాజులు మొదటి గ్రంథము 4 : 19 (ERVTE)
ಊರಿಯ ಮಗನಾದ ಗೆಬೆರನು ಗಿಲ್ಯಾದಿನ ರಾಜ್ಯಪಾಲನಾಗಿದ್ದನು. ಅಮೋರಿಯರ ರಾಜನಾದ ಸೀಹೋನನು ಮತ್ತು ಬಾಷಾನಿನ ರಾಜನಾದ ಓಗನು ವಾಸವಾಗಿದ್ದ ರಾಜ್ಯವೇ ಗಿಲ್ಯಾದ್. ಆದರೆ ಆ ಜಿಲ್ಲೆಗೆ ಗೆಬೆರ್ ಒಬ್ಬನೇ ರಾಜ್ಯಪಾಲನಾಗಿದ್ದನು.
రాజులు మొదటి గ్రంథము 4 : 20 (ERVTE)
రాజులు మొదటి గ్రంథము 4 : 21 (ERVTE)
ಯೆಹೂದದಲ್ಲಿ ಮತ್ತು ಇಸ್ರೇಲಿನಲ್ಲಿ ಅನೇಕ ಜನರಿದ್ದರು. ಅಲ್ಲಿನ ಜನಸಂಖ್ಯೆಯು ಸಮುದ್ರತೀರದ ಮರಳಿನ ಕಣಗಳಷ್ಟಿತ್ತು. ಜನರು ಸಂತುಷ್ಟರಾಗಿ ಜೀವಿಸುತ್ತಿದ್ದರು. ಅವರು ತಿಂದು ಕುಡಿದು ಸಂತೋಷಿಸುತ್ತಿದ್ದರು.
రాజులు మొదటి గ్రంథము 4 : 22 (ERVTE)
ಸೊಲೊಮೋನನು ಯೂಫ್ರೇಟೀಸ್ ನದಿಯಿಂದ ಮೊದಲುಗೊಂಡು ಫಿಲಿಷ್ಟಿಯರ ದೇಶದವರೆಗಿನ ರಾಜ್ಯಗಳನ್ನೆಲ್ಲ ಆಳುತ್ತಿದ್ದನು. ಅವನ ರಾಜ್ಯಾಧಿಕಾರವು ಈಜಿಪ್ಟಿನ ಗಡಿಯವರೆಗೆ ವಿಸ್ತರಿಸಿತ್ತು. ಈ ದೇಶಗಳು ಸೊಲೊಮೋನನಿಗೆ ಕಪ್ಪಕಾಣಿಕೆಯನ್ನು ಕೊಡುತ್ತ ಅವನ ಜೀವಮಾನ ಪೂರ್ತಿ ಅವರು ಅವನಿಗೆ ಆಧೀನರಾಗಿದ್ದರು.
రాజులు మొదటి గ్రంథము 4 : 23 (ERVTE)
(22-23)ಪ್ರತಿದಿನವೂ ಸೊಲೊಮೋನನಿಗೆ ಮತ್ತು ಅವನ ಪಂಕ್ತಿಯಲ್ಲಿ ಊಟಮಾಡುವವರಿಗೆ ಬೇಕಾದ ಆಹಾರಪದಾರ್ಥಗಳು ಹೀಗಿವೆ: ನೂರೈವತ್ತು ಬುಷೆಲ್ಸ್[* ನೂರೈವತ್ತು ಬುಷೆಲ್ಸ್ ಅಥವಾ 6,600 ಲೀಟರ್, ಅಕ್ಷರಶಃ, 30 ಕೋರ್ಸ್. ] ಉತ್ತಮವಾದ ಗೋಧಿಯ ಹಿಟ್ಟು; ಮುನ್ನೂರು ಬುಷೆಲ್ಸ್ [† ಮುನ್ನೂರು ಬುಷೆಲ್ಸ್ ಅಥವಾ 13,200 ಲೀಟರ್, ಅಕ್ಷರಶಃ, 60 ಕೋರ್ಸ್. ] ಹಿಟ್ಟು; ಚೆನ್ನಾಗಿ ಮೇಯಿಸಿದ ಹತ್ತು ಹಸುಗಳು; ಹೊಲಗಳಲ್ಲಿ ಮೇಯಿಸಿದ ಇಪ್ಪತ್ತು ಹಸುಗಳು; ನೂರು ಕುರಿಗಳು; ಇವುಗಳಲ್ಲದೆ ದುಪ್ಪಿ, ಜಿಂಕೆ, ಸಾರಂಗ ಮತ್ತು ಕೊಬ್ಬಿದ ಕೋಳಿಗಳು.
రాజులు మొదటి గ్రంథము 4 : 24 (ERVTE)
ಸೊಲೊಮೋನನು ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರದೇಶವನ್ನೆಲ್ಲ ಆಳಿದನು. ಈ ದೇಶವು ತಿಫ್ಸಹುದಿಂದ ಗಾಜದವರೆಗಿತ್ತು. ಸೊಲೊಮೋನನ ರಾಜ್ಯದಲ್ಲೆಲ್ಲಾ ಶಾಂತಿ ನೆಲೆಸಿತ್ತು.
రాజులు మొదటి గ్రంథము 4 : 25 (ERVTE)
ಸೊಲೊಮೋನನ ಆಳ್ವಿಕೆಯಲ್ಲಿ ಯೆಹೂದದ ಮತ್ತು ಇಸ್ರೇಲಿನ ಜನರೆಲ್ಲರೂ ದಾನ್‌ನಿಂದ ಬೇರ್ಷೆಬದವರೆಗೆ ಸುರಕ್ಷಿತವಾಗಿದ್ದರು; ಶಾಂತಿಯಿಂದ ಜೀವಿಸುತ್ತಿದ್ದರು. ಜನರು ತಮ್ಮ ಅಂಜೂರ ಗಿಡಗಳ ಮತ್ತು ದ್ರಾಕ್ಷಾಲತೆಗಳ ನೆರಳಿನಲ್ಲಿ ಸಮಾಧಾನದಿಂದ ಕುಳಿತಿರುತ್ತಿದ್ದರು.
రాజులు మొదటి గ్రంథము 4 : 26 (ERVTE)
ಸೊಲೊಮೋನನು ತನ್ನ ರಥಗಳಿಗೆ ಬೇಕಾಗಿದ್ದ ನಾಲ್ಕು ಸಾವಿರ ಕುದುರೆಗಳಿಗೆ ಬೇಕಾಗುವಷ್ಟು ಸ್ಥಳ ಪಡೆದಿದ್ದನು. ಅವನಲ್ಲಿ ಹನ್ನೆರಡು ಸಾವಿರ ರಾಹುತರಿದ್ದರು.
రాజులు మొదటి గ్రంథము 4 : 27 (ERVTE)
ರಾಜನಾದ ಸೊಲೊಮೋನನಿಗೆ ಪ್ರತಿ ತಿಂಗಳಿಗೆ ಬೇಕಾದ ವಸ್ತುಗಳನ್ನು ಅವನ ಹನ್ನೆರಡು ಮಂದಿ ರಾಜ್ಯಪಾಲರಲ್ಲಿ ಒಬ್ಬರು ಸರದಿಯ ಪ್ರಕಾರ ಕೊಡುತ್ತಿದ್ದರು. ರಾಜನಿಗೂ ಅವನ ಪಂಕ್ತಿಯಲ್ಲಿ ಊಟಮಾಡುವ ಪ್ರತಿಯೊಬ್ಬರಿಗೂ ಆಹಾರಪದಾರ್ಥಗಳು ಯಥೇಚ್ಛವಾಗಿರುತ್ತಿದ್ದವು.
రాజులు మొదటి గ్రంథము 4 : 28 (ERVTE)
ರಾಜನ ರಥಗಳ ಕುದುರೆಗಳಿಗೆ ಮತ್ತು ಸವಾರಿಯ ಕುದುರೆಗಳಿಗೆ ಬೇಕಾದ ಹುಲ್ಲನ್ನು ಮತ್ತು ಬಾರ್ಲಿಯನ್ನು ಈ ರಾಜ್ಯಪಾಲರುಗಳು ಆಯಾಸ್ಥಳಗಳಿಂದ ತಂದುಕೊಡುತ್ತಿದ್ದರು.
రాజులు మొదటి గ్రంథము 4 : 29 (ERVTE)
{#1ಸೊಲೊಮೋನನ ಜ್ಞಾನ } ದೇವರು ಸೊಲೊಮೋನನಿಗೆ ಜ್ಞಾನವಿವೇಕಗಳನ್ನು ಅನುಗ್ರಹಿಸಿದನು. ಸೊಲೊಮೋನನು ಅನೇಕಾನೇಕ ಸಂಗತಿಗಳನ್ನು ಅರ್ಥಮಾಡಿಕೊಳ್ಳುತ್ತಿದ್ದನು. ಯಾರೂ ಊಹಿಸಿಕೊಳ್ಳಲಾರದಷ್ಟು ಜ್ಞಾನವನ್ನು ಅವನು ಹೊಂದಿದ್ದನು.
రాజులు మొదటి గ్రంథము 4 : 30 (ERVTE)
ಅವನ ಜ್ಞಾನವು ಈಜಿಪ್ಟಿನ ಗಂಡಸರೆಲ್ಲರ ಜ್ಞಾನಕ್ಕಿಂತಲೂ ಹೆಚ್ಚಿನದಾಗಿತ್ತು. ಸೊಲೊಮೋನನ ಜ್ಞಾನವು ಪೂರ್ವದಿಕ್ಕಿನ ಜನರೆಲ್ಲರ ಜ್ಞಾನಕ್ಕಿಂತ ವಿಶಾಲವಾಗಿತ್ತು.
రాజులు మొదటి గ్రంథము 4 : 31 (ERVTE)
ಪ್ರಪಂಚದಲ್ಲಿನ ಯಾವುದೇ ವ್ಯಕ್ತಿಯ ಜ್ಞಾನಕ್ಕಿಂತಲೂ ಹೆಚ್ಚಿನ ಜ್ಞಾನವು ಅವನಲ್ಲಿತ್ತು. ಅವನು ಜೆರಹನ ಮಗನಾದ ಏತಾನನಿಗಿಂತಲೂ ಜ್ಞಾನಿಯಾಗಿದ್ದನು. ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದರಿಗಿಂತ ಅವನು ಜ್ಞಾನಿಯಾಗಿದ್ದನು. ರಾಜನಾದ ಸೊಲೊಮೋನನು ಇಸ್ರೇಲ್ ಮತ್ತು ಯೆಹೂದಗಳ ಸುತ್ತಮುತ್ತಲಿನ ಪ್ರದೇಶಗಳಲ್ಲೆಲ್ಲಾ ಪ್ರಸಿದ್ಧನಾಗಿದ್ದನು.
రాజులు మొదటి గ్రంథము 4 : 32 (ERVTE)
ರಾಜನಾದ ಸೊಲೊಮೋನನು ತನ್ನ ಜೀವಿತದ ಅವದಿಯಲ್ಲಿ ಮೂರುಸಾವಿರ ಜ್ಞಾನೋಪದೇಶಗಳನ್ನೂ ಒಂದು ಸಾವಿರದ ಐದು ಹಾಡುಗಳನ್ನೂ ಬರೆದನು.
రాజులు మొదటి గ్రంథము 4 : 33 (ERVTE)
ಸೊಲೊಮೋನನು ಪ್ರಕೃತಿಯ ಬಗ್ಗೆಯೂ ಹೆಚ್ಚಾಗಿ ತಿಳಿದುಕೊಂಡನು. ಸೊಲೊಮೋನನು ಲೆಬನೋನಿನ ದೇವದಾರು ವೃಕ್ಷಗಳಿಂದ ಮೊದಲುಗೊಂಡು ಗೋಡೆಗಳಲ್ಲಿ ಬೆಳೆಯುವ ಗಿಡಗಳವರೆಗೆ, ವಿವಿಧ ರೀತಿಯ ಸಸ್ಯಗಳ ಬಗ್ಗೆ ಪ್ರಸ್ತಾಪಿಸಿದನು. ರಾಜನಾದ ಸೊಲೊಮೋನನು ಪ್ರಾಣಿಗಳ, ಪಕ್ಷಿಗಳ ಮತ್ತು ಹರಿದಾಡುವ ಜಂತುಗಳ ಬಗ್ಗೆಯೂ ಪ್ರಸ್ತಾಪಿಸಿದನು.
రాజులు మొదటి గ్రంథము 4 : 34 (ERVTE)
ರಾಜನಾದ ಸೊಲೊಮೋನನ ಜ್ಞಾನೋಕ್ತಿಗಳನ್ನು ಕೇಳಲು ಎಲ್ಲಾ ದೇಶಗಳ ಜನರೂ ಬರುತ್ತಿದ್ದರು. ಎಲ್ಲಾ ದೇಶದ ರಾಜರುಗಳು ತಮ್ಮ ದೇಶದ ಜ್ಞಾನಿಗಳನ್ನು ರಾಜನಾದ ಸೊಲೊಮೋನನ ಬಳಿಗೆ ಕಳುಹಿಸುತ್ತಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34