సమూయేలు మొదటి గ్రంథము 28 : 1 (ERVTE)
{#1ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು }
సమూయేలు మొదటి గ్రంథము 28 : 2 (ERVTE)
ತರುವಾಯ, ಫಿಲಿಷ್ಟಿಯರು ಇಸ್ರೇಲರ ವಿರುದ್ಧ ಹೋರಾಡಲು ತಮ್ಮ ಸೈನ್ಯವನ್ನೆಲ್ಲ ಒಟ್ಟುಗೂಡಿಸಿದರು. ಆಕೀಷನು, “ನೀನು ಮತ್ತು ನಿನ್ನ ಜನರು ಇಸ್ರೇಲರ ವಿರುದ್ಧ ಹೋರಾಡುವುದಕ್ಕಾಗಿ ನನ್ನ ಜೊತೆಗೂಡಬೇಕೆಂಬುದನ್ನು ನೀನು ಅರ್ಥಮಾಡಿಕೊಂಡಿರುವೆಯಾ?” ಎಂದು ದಾವೀದನನ್ನು ಕೇಳಿದನು.
సమూయేలు మొదటి గ్రంథము 28 : 3 (ERVTE)
ದಾವೀದನು, “ಹೌದು! ಆಗ ನಾನು ಮಾಡುವುದನ್ನು ಸ್ವತಃ ನೀವೇ ನೋಡುವಿರಿ” ಎಂದನು. ಆಕೀಷನು, “ಸರಿ, ನಾನು ನಿನ್ನನ್ನು ಅಂಗರಕ್ಷಕನನ್ನಾಗಿ ಮಾಡಿಕೊಳ್ಳುತ್ತೇನೆ. ನೀನು ನನ್ನನ್ನು ಯುದ್ಧಕಾಲದಲ್ಲೆಲ್ಲಾ ರಕ್ಷಿಸುವೆ” ಎಂದನು. {#1ಸೌಲನು ಮತ್ತು ಏಂದೋರಿನ ಯಕ್ಷಿಣಿ }
సమూయేలు మొదటి గ్రంథము 28 : 4 (ERVTE)
ಸಮುವೇಲನು ಮರಣಹೊಂದಿದನು. ಸಮುವೇಲನ ಮರಣಕ್ಕಾಗಿ ಇಸ್ರೇಲರೆಲ್ಲಾ ತಮ್ಮ ಸಂತಾಪವನ್ನು ಸೂಚಿಸಿದರು. ಅವರು ಸಮುವೇಲನನ್ನು ಅವನ ಊರಾದ ರಾಮದಲ್ಲಿ ಸಮಾಧಿಮಾಡಿದರು. ಸೌಲನು ಈ ಮೊದಲು, ಸತ್ತವರ ಆತ್ಮದೊಂದಿಗೆ ಮಾತನಾಡುವವರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರದಿಂದ ಇಸ್ರೇಲಿನಿಂದ ಓಡಿಸಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಸಿದ್ಧರಾದರು. ಅವರೆಲ್ಲ ಶೂನೇಮಿಗೆ ಬಂದು ಆ ಸ್ಥಳದಲ್ಲಿಯೇ ಪಾಳೆಯಮಾಡಿಕೊಂಡರು. ಸೌಲನು ಇಸ್ರೇಲರನ್ನೆಲ್ಲ ಒಟ್ಟುಗೂಡಿಸಿಕೊಂಡು ಬಂದು ಗಿಲ್ಬೋವದಲ್ಲಿ ಪಾಳೆಯ ಮಾಡಿಕೊಂಡನು.
సమూయేలు మొదటి గ్రంథము 28 : 5 (ERVTE)
ಸೌಲನು ಫಿಲಿಷ್ಟಿಯರ ಸೈನ್ಯವನ್ನು ನೋಡಿ ಹೆದರಿದನು. ಅವನ ಹೃದಯವು ಭಯದಿಂದ ಬಡಿದುಕೊಳ್ಳತೊಡಗಿತು.
సమూయేలు మొదటి గ్రంథము 28 : 6 (ERVTE)
ಸೌಲನು ಯೆಹೋವನಿಗೆ ಪ್ರಾರ್ಥನೆ ಮಾಡಿದನು. ಆದರೆ ಯೆಹೋವನು ಅವನಿಗೆ ಉತ್ತರ ನೀಡಲಿಲ್ಲ. ದೇವರು ಕನಸುಗಳಲ್ಲಿಯೂ ಸೌಲನೊಡನೆ ಮಾತನಾಡಲಿಲ್ಲ. ದೇವರು ಅವನಿಗೆ ಊರೀಮಿನಿಂದಾಗಲಿ ಪ್ರವಾದಿಗಳಿಂದಾಗಲಿ ಉತ್ತರಕೊಡಲಿಲ್ಲ.
సమూయేలు మొదటి గ్రంథము 28 : 7 (ERVTE)
ಕಡೆಯದಾಗಿ, ಸೌಲನು ತನ್ನ ಸೇನಾಧಿಪತಿಗಳಿಗೆ, “ಸತ್ತವರ ಆತ್ಮಗಳೊಂದಿಗೆ ಮಾತನಾಡಬಲ್ಲ ಒಬ್ಬ ಮಾಂತ್ರಿಕ ಹೆಂಗಸನ್ನು ಕಂಡುಹಿಡಿಯಿರಿ. ಈ ಯುದ್ಧದಲ್ಲಿ ಏನಾಗುವುದೆಂಬುದನ್ನು ನಾನು ಹೋಗಿ ಅವಳನ್ನು ಕೇಳುತ್ತೇನೆ” ಎಂದು ಹೇಳಿದನು.
సమూయేలు మొదటి గ్రంథము 28 : 8 (ERVTE)
ಅವನ ಅಧಿಕಾರಿಗಳು, “ಏಂದೋರಿನಲ್ಲಿ ಒಬ್ಬ ಬೇತಾಳಿಕಳಿದ್ದಾಳೆ” ಎಂದು ಉತ್ತರಿಸಿದರು.
సమూయేలు మొదటి గ్రంథము 28 : 9 (ERVTE)
ಯಾರಿಗೂ ತನ್ನ ಗುರುತು ಸಿಕ್ಕದಂತೆ ಸೌಲನು ವೇಷವನ್ನು ಬದಲಾಯಿಸಿಕೊಂಡನು. ಸೌಲನು ತನ್ನ ಜನರಿಬ್ಬರೊಡನೆ ಅದೇ ರಾತ್ರಿಯಲ್ಲೇ ಆ ಬೇತಾಳಿಕಳನ್ನು ನೋಡಲು ಹೋದನು. ಸೌಲನು ಅವಳಿಗೆ, “ಬೇತಾಳದ ಮೂಲಕ ನನ್ನ ಭವಿಷ್ಯವನ್ನು ನನಗೆ ತೋರಿಸು, ನಾನು ಹೆಸರಿಸುವ ವ್ಯಕ್ತಿಯನ್ನು ಕರೆ” ಎಂದು ಕೇಳಿದನು.
సమూయేలు మొదటి గ్రంథము 28 : 10 (ERVTE)
ಆದರೆ ಆ ಬೇತಾಳಿಕಳು ಸೌಲನಿಗೆ, “ಸೌಲನು ಏನು ಮಾಡಿದನೆಂಬುದು ನಿನಗೆ ನಿಜವಾಗಿಯೂ ತಿಳಿದಿದೆ. ಅವನು ಮಾಂತ್ರಿಕರನ್ನೂ ಜ್ಯೋತಿಷಿಗಳನ್ನೂ ಬಲಾತ್ಕಾರವಾಗಿ ದೇಶದಿಂದ ಹೊರಗಟ್ಟಿದನು. ನೀನು ನನ್ನನ್ನು ಬಲೆಗೆ ಬೀಳಿಸಿ ಕೊಲ್ಲಲು ಪ್ರಯತ್ನಿಸುತ್ತಿರುವೆ” ಎಂದಳು.
సమూయేలు మొదటి గ్రంథము 28 : 11 (ERVTE)
ಸೌಲನು ಯೆಹೋವನ ಹೆಸರಿನಲ್ಲಿ ಆ ಬೇತಾಳಿಕಳಿಗೆ ವಾಗ್ದಾನಮಾಡಿ, “ಯೆಹೋವನಾಣೆ, ಈ ಕಾರ್ಯವನ್ನು ಮಾಡಿದ್ದಕ್ಕಾಗಿ ನಿನಗೆ ದಂಡನೆಯಾಗುವುದಿಲ್ಲ” ಎಂದು ಹೇಳಿದನು.
సమూయేలు మొదటి గ్రంథము 28 : 12 (ERVTE)
ಅವಳು, “ನಿನಗಾಗಿ ನಾನು ಯಾರನ್ನು ಬರಮಾಡಬೇಕು?” ಎಂದು ಕೇಳಿದಳು. ಸೌಲನು, “ಸಮುವೇಲನನ್ನು ಬರಮಾಡು” ಎಂದು ಉತ್ತರಿಸಿದನು.
సమూయేలు మొదటి గ్రంథము 28 : 13 (ERVTE)
ಅಂತೆಯೇ ಆಯಿತು. ಆ ಹೆಂಗಸು ಸಮುವೇಲನನ್ನು ಕಂಡ ಕೊಡಲೇ ಗಟ್ಟಿಯಾಗಿ ಅರಚಿದಳು. ಅವಳು ಸೌಲನಿಗೆ, “ನೀನು ನನ್ನನ್ನು ವಂಚಿಸಿದೆ! ನೀನೇ ಸೌಲನು” ಎಂದಳು.
సమూయేలు మొదటి గ్రంథము 28 : 14 (ERVTE)
ರಾಜನು ಆ ಹೆಂಗಸಿಗೆ, “ಹೆದರದಿರು! ನಿನಗೇನು ಕಾಣಿಸುತ್ತಿದೆ?” ಎಂದು ಕೇಳಿದನು. ಆ ಹೆಂಗಸು, “ಒಂದು ಆತ್ಮವು ಭೂಮಿಯೊಳಗಿಂದ[* ಭೂಮಿಯೊಳಗಿಂದ ಅಥವಾ “ಶಿಯೋಲ್.” ] ಮೇಲಕ್ಕೆ ಬರುತ್ತಿರುವುದು ನನಗೆ ಕಾಣುತ್ತಿದೆ” ಎಂದು ಉತ್ತರಕೊಟ್ಟಳು. ಸೌಲನು, “ಅವನ ರೂಪ ಹೇಗಿದೆ?” ಎಂದು ಕೇಳಿದನು. ಆ ಹೆಂಗಸು, “ಅವನು ನಿಲುವಂಗಿಯನ್ನು ಧರಿಸಿಕೊಂಡಿರುವ ಒಬ್ಬ ಮುದುಕನಂತಿದ್ದಾನೆ” ಎಂದು ಹೇಳಿದಳು. ಅವನೇ ಸಮುವೇಲನೆಂಬುದನ್ನು ಸೌಲನು ತಿಳಿದುಕೊಂಡು ಸಾಷ್ಟಾಂಗನಮಸ್ಕಾರ ಮಾಡಿದನು.
సమూయేలు మొదటి గ్రంథము 28 : 15 (ERVTE)
ಸಮುವೇಲನು, “ನನಗೆ ತೊಂದರೆಯನ್ನೇಕೆ ಕೊಡುತ್ತಿರುವೆ? ನೀನು ನನ್ನನ್ನು ನೆಲದ ಮೇಲಕ್ಕೆ ಬರಮಾಡಿದ್ದೇಕೆ?” ಎಂದು ಸೌಲನನ್ನು ಕೇಳಿದನು.
సమూయేలు మొదటి గ్రంథము 28 : 16 (ERVTE)
ಸೌಲನು, “ನಾನು ತೊಂದರೆಯಲ್ಲಿದ್ದೇನೆ! ಫಿಲಿಷ್ಟಿಯರು ನನ್ನ ವಿರುದ್ಧ ಹೋರಾಡಲು ಬರುತ್ತಿದ್ದಾರೆ; ದೇವರು ನನ್ನನ್ನು ತ್ಯಜಿಸಿದ್ದಾನೆ. ದೇವರು ನನಗೆ ಉತ್ತರವನ್ನೇ ಕೊಡುತ್ತಿಲ್ಲ; ಆತನು ಪ್ರವಾದಿಗಳಿಂದಾಗಲಿ ಕನಸುಗಳಿಂದಾಗಲೀ ನನಗೆ ಉತ್ತರಿಸುತ್ತಿಲ್ಲ. ಆದ ಕಾರಣವೇ ನಾನು ನಿನ್ನನ್ನು ಕರೆದೆನು. ನಾನು ಮಾಡಬೇಕಾದದ್ದನ್ನು ನನಗೆ ತಿಳಿಸು!” ಎಂದನು. ಸಮುವೇಲನು, “ಯೆಹೋವನು ನಿನ್ನನ್ನು ತ್ಯಜಿಸಿದ್ದಾನೆ. ಈಗ ಆತನು ನಿನ್ನ ವಿರೋಧಿಯಾಗಿದ್ದಾನೆ. ಆದ್ದರಿಂದ ನನ್ನನ್ನೇಕೆ ಕರೆಯುವೆ?
సమూయేలు మొదటి గ్రంథము 28 : 17 (ERVTE)
ಯೆಹೋವನು ನಿನಗೆ ಹೇಳಿದ್ದಂತೆಯೇ ಮಾಡಿದನು. ಆತನು ಅವುಗಳ ಬಗ್ಗೆ ನನ್ನ ಮೂಲಕವಾಗಿ ನಿನಗೆ ತಿಳಿಸಿದನು. ಯೆಹೋವನು ರಾಜ್ಯಾಧಿಕಾರವನ್ನು ನಿನ್ನ ಕೈಗಳಿಂದ ಕಿತ್ತುಕೊಂಡು ನಿನ್ನ ನೆರೆಯವರಲ್ಲಿ ಒಬ್ಬನಿಗೆ ಕೊಟ್ಟಿದ್ದಾನೆ. ದಾವೀದನೇ ಆ ನೆರೆಯವನು.
సమూయేలు మొదటి గ్రంథము 28 : 18 (ERVTE)
ನೀನು ಯೆಹೋವನಿಗೆ ವಿಧೇಯನಾಗಲಿಲ್ಲ. ನೀನು ಅಮಾಲೇಕ್ಯರನ್ನು ನಾಶಗೊಳಿಸಲಿಲ್ಲ; ಯೆಹೋವನು ಅವರ ಬಗ್ಗೆ ಎಷ್ಟು ಕೋಪಗೊಂಡಿದ್ದನೆಂಬುದನ್ನು ಅವರಿಗೆ ತಿಳಿಯಪಡಿಸಿಲ್ಲ. ಆದ್ದರಿಂದಲೇ ಯೆಹೋವನು ಇಂದು ನಿನಗೆ ಹೀಗೆ ಮಾಡಿದ್ದಾನೆ.
సమూయేలు మొదటి గ్రంథము 28 : 19 (ERVTE)
ಯೆಹೋವನು ನಿನ್ನನ್ನು ಮತ್ತು ಇಸ್ರೇಲರನ್ನು ಫಿಲಿಷ್ಟಿಯರ ವಶಕ್ಕೆ ಒಪ್ಪಿಸುತ್ತಾನೆ. ಫಿಲಿಷ್ಟಿಯರು ಇಸ್ರೇಲ್ ಸೈನ್ಯವನ್ನು ಸೋಲಿಸುವಂತೆ ಯೆಹೋವನು ಮಾಡುತ್ತಾನೆ. ಮಾರನೆಯ ದಿನ, ನೀನು ಮತ್ತು ನಿನ್ನ ಮಕ್ಕಳು ನನ್ನೊಡನೆ ಇಲ್ಲಿರುತ್ತೀರಿ!” ಎಂದು ಹೇಳಿದನು.
సమూయేలు మొదటి గ్రంథము 28 : 20 (ERVTE)
సమూయేలు మొదటి గ్రంథము 28 : 21 (ERVTE)
ಆ ಕೂಡಲೇ ಸೌಲನು ನೆಲದ ಮೇಲೆ ಕುಸಿದು ಬಿದ್ದನು. ಸಮುವೇಲನು ಹೇಳಿದ ಮಾತುಗಳನ್ನು ಕೇಳಿ ಸೌಲನು ಭಯಗೊಂಡನು. ಸೌಲನು ಅಂದು ಹಗಲು ಮತ್ತು ರಾತ್ರಿ ಏನನ್ನೂ ತಿಂದಿರಲಿಲ್ಲ; ಆದ್ದರಿಂದ ಅವನು ಬಹಳ ಬಲಹೀನನಾಗಿದ್ದನು. ಆ ಹೆಂಗಸು ಸೌಲನ ಬಳಿಗೆ ಬಂದಳು. ಸೌಲನು ನಿಜವಾಗಿಯೂ ಭಯಗೊಂಡಿರುವುದನ್ನು ಅವಳು ನೋಡಿ, “ಇಲ್ಲಿ ನೋಡು, ನಾನು ನಿನ್ನ ಸೇವಕಿ. ನಾನು ನಿನಗೆ ವಿಧೇಯಳಾಗಿದ್ದೇನೆ. ನಾನು ನನ್ನ ಜೀವವನ್ನೇ ಕಡೆಗಣಿಸಿ ನೀನು ಹೇಳಿದ್ದನ್ನು ಮಾಡಿದೆ.
సమూయేలు మొదటి గ్రంథము 28 : 22 (ERVTE)
ಈಗ ದಯವಿಟ್ಟು ನನ್ನ ಮಾತನ್ನು ಆಲಿಸು. ನಾನು ನಿನಗೆ ಸ್ವಲ್ಪ ಆಹಾರವನ್ನು ಕೊಡುತ್ತೇನೆ. ನೀನು ತಿನ್ನಲೇಬೇಕು. ಆಗ ನಿನ್ನ ಪ್ರಯಾಣವನ್ನು ಮುಂದುವರಿಸಲು ನಿನಗೆ ಸಾಕಷ್ಟು ಶಕ್ತಿಯಿರುವುದು” ಎಂದು ಹೇಳಿದಳು.
సమూయేలు మొదటి గ్రంథము 28 : 23 (ERVTE)
ಆದರೆ ಸೌಲನು ನಿರಾಕರಿಸಿ, “ನಾನು ತಿನ್ನುವುದಿಲ್ಲ” ಅಂದನು. ಊಟಮಾಡುವಂತೆ ಸೌಲನ ಅಧಿಕಾರಿಗಳೂ ಬೇಡಿಕೊಂಡರು. ಕೊನೆಗೆ ಸೌಲನು ಅವರ ಮಾತಿಗೆ ಕಿವಿಗೊಟ್ಟನು. ಅವನು ನೆಲದಿಂದ ಮೇಲಕ್ಕೆದ್ದು ಮಂಚದ ಮೇಲೆ ಕುಳಿತನು.
సమూయేలు మొదటి గ్రంథము 28 : 24 (ERVTE)
ಆ ಹೆಂಗಸಿನ ಮನೆಯಲ್ಲಿ ಒಂದು ಕೊಬ್ಬಿದ ಕರು ಇತ್ತು. ಅವಳು ಬೇಗನೆ ಅದನ್ನು ಕೊಯ್ದಳು. ಅವಳು ಸ್ವಲ್ಪ ಹಿಟ್ಟನ್ನು ತೆಗೆದುಕೊಂಡು ಅದನ್ನು ತನ್ನ ಕೈಗಳಿಂದಲೇ ನಾದಿದಳು. ನಂತರ ಅವಳು ಕೆಲವು ರೊಟ್ಟಿಗಳನ್ನು ಸುಟ್ಟಳು.
సమూయేలు మొదటి గ్రంథము 28 : 25 (ERVTE)
ಆ ಹೆಂಗಸು ಸೌಲನ ಮತ್ತು ಅವನ ಸೇನಾಧಿಕಾರಿಗಳ ಮುಂದೆ ಆಹಾರವನ್ನಿಟ್ಟಳು. ಸೌಲನು ಮತ್ತು ಅವನ ಅಧಿಕಾರಿಗಳು ಊಟಮಾಡಿದರು. ನಂತರ ಆ ರಾತ್ರಿಯೇ ಅವರು ಅಲ್ಲಿಂದ ಹೊರಟುಹೋದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25