1 థెస్సలొనీకయులకు 1 : 1 (ERVTE)
1 థెస్సలొనీకయులకు 1 : 2 (ERVTE)
ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ. {#1ಥೆಸಲೋನಿಕದವರ ಜೀವನ ಮತ್ತು ನಂಬಿಕೆ } ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಂಡು ನಿಮ್ಮೆಲ್ಲರ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ.
1 థెస్సలొనీకయులకు 1 : 3 (ERVTE)
ನಮ್ಮ ತಂದೆಯಾದ ದೇವರಿಗೆ ಪ್ರಾರ್ಥನೆ ಮಾಡುವಾಗ ನಿಮ್ಮ ನಂಬಿಕೆಯ ಮತ್ತು ಪ್ರೀತಿಯ ಫಲವಾಗಿ ಮಾಡಿದ ಕಾರ್ಯಗಳಿಗಾಗಿಯೂ ನಮ್ಮ ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಿಮಗಿರುವ ನಿರೀಕ್ಷೆಯಿಂದ ನೀವು ದೃಢವಾಗಿರುವುದಕ್ಕಾಗಿಯೂ ನಾವು ಆತನಿಗೆ ಯಾವಾಗಲೂ ಕೃತಜ್ಞತಾಸ್ತುತಿ ಮಾಡುತ್ತೇವೆ.
1 థెస్సలొనీకయులకు 1 : 4 (ERVTE)
ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಪ್ರೀತಿಸುತ್ತಾನೆ. ಆತನು ನಿಮ್ಮನ್ನು ತನ್ನವರನ್ನಾಗಿ ಆರಿಸಿಕೊಂಡಿದ್ದಾನೆಂಬುದೂ ನಮಗೆ ತಿಳಿದಿದೆ.
1 థెస్సలొనీకయులకు 1 : 5 (ERVTE)
ನಿಮಗೆ ಸುವಾರ್ತೆಯನ್ನು ಶಕ್ತಿಯೊಡನೆ ತಂದಿದ್ದೇವೆ. ಕೇವಲ ನುಡಿಗಳನ್ನು ಬಳಸದೆ ಅದನ್ನು ಪವಿತ್ರಾತ್ಮನೊಡನೆಯೂ ಮತ್ತು ಅದು ಸತ್ಯವೆಂಬ ನಿಶ್ಚಿತ ಜ್ಞಾನದೊಡನೆಯೂ ತಂದಿದ್ದೇವೆ. ಇದಲ್ಲದೆ ನಾವು ನಿಮ್ಮೊಡನೆ ಇದ್ದಾಗ ನಿಮಗೋಸ್ಕರ ಹೇಗೆ ಜೀವಿಸಿದ್ದೆವು ಎಂಬುದು ನಿಮಗೆ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ಹಾಗೆ ಜೀವಿಸಿದೆವು.
1 థెస్సలొనీకయులకు 1 : 6 (ERVTE)
ನೀವು ನಮ್ಮನ್ನೂ ಪ್ರಭುವನ್ನೂ ಅನುಸರಿಸಿದಿರಿ; ಬಹಳ ಹಿಂಸೆಯನ್ನು ಅನುಭವಿಸಿದಿರಿ; ನಮ್ಮ ಉಪದೇಶವನ್ನು ನೀವು ಸಂತಸದಿಂದ ಒಪ್ಪಿಕೊಂಡಿರಿ. ಪವಿತ್ರಾತ್ಮನೇ ನಿಮಗೆ ಆ ಸಂತಸವನ್ನು ನೀಡಿದನು.
1 థెస్సలొనీకయులకు 1 : 7 (ERVTE)
ಮಕೆದೋನಿಯ ಮತ್ತು ಅಖಾಯದಲ್ಲಿದ್ದ ನಂಬಿಗಸ್ತರಿಗೆಲ್ಲಾ ನೀವು ಮಾದರಿಯಾದಿರಿ.
1 థెస్సలొనీకయులకు 1 : 8 (ERVTE)
ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.
1 థెస్సలొనీకయులకు 1 : 9 (ERVTE)
ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.
1 థెస్సలొనీకయులకు 1 : 10 (ERVTE)
ದೇವಕುಮಾರನು ಪರಲೋಕದಿಂದ ಬರುವುದನ್ನು ಎದುರುನೋಡುವುದಕ್ಕಾಗಿ ನೀವು ಹಾಗೆ ಮಾಡಿದಿರಿ. ದೇವರೇ ಆ ಕುಮಾರನನ್ನು ಸತ್ತವರೊಳಗಿಂದ ಜೀವಂತವಾಗಿ ಮೇಲಕ್ಕೆಬ್ಬಿಸಿದನು. ಆತನೇ ಯೇಸು. ಮುಂದೆ ಬರುವ ದೇವರ ಕೋಪದ ತೀರ್ಪಿನಿಂದ ನಮ್ಮನ್ನು ರಕ್ಷಿಸುವವನು ಆತನೇ.

1 2 3 4 5 6 7 8 9 10