1 థెస్సలొనీకయులకు 4 : 1 (ERVTE)
{#1ದೇವರನ್ನು ಹರ್ಷಗೊಳಿಸುವ ಜೀವನ } ಸಹೋದರ ಸಹೋದರಿಯರೇ, ಈಗ ನಿಮಗೆ ಇತರ ಕೆಲವು ವಿಚಾರಗಳನ್ನು ತಿಳಿಸುತ್ತೇನೆ. ದೇವರನ್ನು ಮೆಚ್ಚಿಸಲು ಹೇಗೆ ಜೀವಿಸಬೇಕೆಂದು ನಿಮಗೆ ಕಲಿಸಿದ್ದೇವೆ. ನೀವು ಅದೇ ರೀತಿಯಲ್ಲಿ ಜೀವಿಸುತ್ತಿರುವಿರಿ. ಅದೇ ರೀತಿಯಲ್ಲಿ ಇನ್ನೂ ಹೆಚ್ಚು ಸಮರ್ಪಕವಾಗಿ ಜೀವಿಸಬೇಕೆಂದು ನಾವು ನಿಮ್ಮನ್ನು ಕ್ರಿಸ್ತನಲ್ಲಿ ಕೇಳಿಕೊಳ್ಳುತ್ತೇವೆ ಮತ್ತು ಪ್ರೋತ್ಸಾಹಿಸುತ್ತೇವೆ.
1 థెస్సలొనీకయులకు 4 : 2 (ERVTE)
ನೀವು ಯಾವ ಕಾರ್ಯಗಳನ್ನು ಮಾಡಬೇಕೆಂದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ಆ ಸಂಗತಿಗಳನ್ನು ನಿಮಗೆ ಹೇಳಿದೆವು.
1 థెస్సలొనీకయులకు 4 : 3 (ERVTE)
ನೀವು ಪವಿತ್ರರಾಗಿರಬೇಕೆಂಬುದು ದೇವರ ಚಿತ್ತವಾಗಿದೆ. ಆದುದರಿಂದ ನೀವು ಲೈಂಗಿಕ ಪಾಪಗಳಿಂದ ದೂರವಿರಿ.
1 థెస్సలొనీకయులకు 4 : 4 (ERVTE)
ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಸ್ವಂತ ದೇಹಗಳನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬೇಕೆಂಬುದು ದೇವರ ಅಪೇಕ್ಷೆ. ನಿಮ್ಮ ದೇಹವನ್ನು ಪವಿತ್ರವಾದ ಮಾರ್ಗದಲ್ಲಿ ಬಳಸಿದರೆ, ದೇವರಿಗೆ ಗೌರವವನ್ನು ನೀಡಿದಂತಾಗುವುದು.[* ಅಥವಾ “ನಮ್ಮಲ್ಲಿ ಪ್ರತಿಯೊಬ್ಬರಿಗೂ ಪರಿಶುದ್ಧವಾದ ಮತ್ತು ಗೌರವಾನ್ವಿತವಾದ ರೀತಿಯಲ್ಲಿ ತನ್ನ ಸ್ವಂತ ಹೆಂಡತಿಯನ್ನು ಪಡೆದುಕೊಳ್ಳಲು ಗೊತ್ತಿದೆ.” ]
1 థెస్సలొనీకయులకు 4 : 5 (ERVTE)
ನಿಮ್ಮ ದೇಹವನ್ನು ಲೈಂಗಿಕ ಪಾಪಗಳಿಗಾಗಿ ಬಳಸಬೇಡಿ. ದೇವರನ್ನು ತಿಳಿಯದ ಜನರು ತಮ್ಮ ದೇಹಗಳನ್ನು ಅದಕ್ಕೆ ಬಳಸುತ್ತಾರೆ.
1 థెస్సలొనీకయులకు 4 : 6 (ERVTE)
ಈ ವಿಷಯದಲ್ಲಿ ನಿಮ್ಮಲ್ಲಿ ಯಾರೂ ಕ್ರಿಸ್ತನಲ್ಲಿ ಸಹೋದರನಾದವನನ್ನು ವಂಚಿಸಿ ಕೇಡುಮಾಡಬಾರದು. ನಾವು ಈಗಾಗಲೇ ನಿಮಗೆ ಹೇಳಿದಂತೆ ಮತ್ತು ಎಚ್ಚರಿಕೆ ನೀಡಿದಂತೆ ಇವೆಲ್ಲವುಗಳ ವಿಷಯದಲ್ಲಿ ದೇವರು ದಂಡಿಸುತ್ತಾನೆ.
1 థెస్సలొనీకయులకు 4 : 7 (ERVTE)
ದೇವರು ನಮ್ಮನ್ನು ಪರಿಶುದ್ಧರಾಗಿ ಜೀವಿಸುವುದಕ್ಕೆ ಕರೆದಿದ್ದಾನೆ. ನಾವು ಪಾಪದಲ್ಲಿ ಜೀವಿಸಲು ಆತನು ಇಷ್ಟಪಡುವುದಿಲ್ಲ.
1 థెస్సలొనీకయులకు 4 : 8 (ERVTE)
ಆದುದರಿಂದ ಈ ಉಪದೇಶವನ್ನು ಅನುಸರಿಸದವನು ಅವಿಧೇಯನಾಗಿರುವುದು ದೇವರಿಗೇ ಹೊರತು ಮಾನವನಿಗಲ್ಲ. ನಮಗೆ ತನ್ನ ಪವಿತ್ರಾತ್ಮನನ್ನು ನೀಡಿದಾತನು ದೇವರೇ.
1 థెస్సలొనీకయులకు 4 : 9 (ERVTE)
ಕ್ರಿಸ್ತನಲ್ಲಿ ಸಹೋದರ ಸಹೋದರಿಯರನ್ನು ಹೇಗೆ ಪ್ರೀತಿಸಬೇಕೆಂಬುದರ ಬಗ್ಗೆ ನಾವು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಒಬ್ಬರನ್ನೊಬ್ಬರು ಹೇಗೆ ಪ್ರೀತಿಸಬೇಕೆಂಬುದನ್ನು ಈಗಾಗಲೇ ದೇವರು ನಿಮಗೆ ಕಲಿಸಿದ್ದಾನೆ.
1 థెస్సలొనీకయులకు 4 : 10 (ERVTE)
ಮಕೆದೋನಿಯದಲ್ಲಿರುವ ಸಹೋದರ ಸಹೋದರಿಯರನ್ನೆಲ್ಲ ನೀವು ನಿಜವಾಗಿಯೂ ಪ್ರೀತಿಸುತ್ತಿದ್ದೀರಿ. ಅವರನ್ನು ಇನ್ನೂ ಹೆಚ್ಚೆಚ್ಚಾಗಿ ನೀವು ಪ್ರೀತಿಸಬೇಕೆಂದು ನಾವು ನಿಮ್ಮನ್ನು ಪ್ರೋತ್ಸಾಹಿಸುತ್ತೇವೆ.
1 థెస్సలొనీకయులకు 4 : 11 (ERVTE)
ಶಾಂತಿಯಿಂದ ಜೀವಿಸಲು ನಿಮ್ಮಿಂದಾದಷ್ಟು ಪ್ರಯತ್ನಿಸಿರಿ. ನಿಮ್ಮ ಸ್ವಂತ ವ್ಯವಹಾರದ ಮೇಲ್ವಿಚಾರಣೆಯನ್ನು ನೋಡಿಕೊಳ್ಳಿ. ನಿಮ್ಮ ಕೈಯಾರೆ ಕೆಲಸ ಮಾಡಬೇಕೆಂದು ನಾವು ಈಗಾಗಲೇ ನಿಮಗೆ ಹೇಳಿದ್ದೇವೆ.
1 థెస్సలొనీకయులకు 4 : 12 (ERVTE)
ನೀವು ಹೀಗೆ ಮಾಡಿದರೆ, ವಿಶ್ವಾಸಿಗಳಲ್ಲದವರು ನಿಮ್ಮ ಜೀವತದ ರೀತಿಯನ್ನು ಕಂಡು ನಿಮ್ಮನ್ನು ಗೌರವಿಸುತ್ತಾರೆ. ಅಲ್ಲದೆ ನಿಮ್ಮ ಅಗತ್ಯತೆಗಳ ಪೂರೈಕೆಗಾಗಿ ನೀವು ಬೇರೆಯವರನ್ನು ಅವಲಂಬಿಸಿಕೊಳ್ಳುವ ಅವಶ್ಯಕತೆಯೂ ಇರುವುದಿಲ್ಲ.
1 థెస్సలొనీకయులకు 4 : 13 (ERVTE)
{#1ಪ್ರಭುವಿನ ಬರುವಿಕೆ } ಸಹೋದರ ಸಹೋದರಿಯರೇ, ಸತ್ತುಹೋದ ಜನರ ಬಗ್ಗೆ ನೀವು ತಿಳಿದುಕೊಳ್ಳಬೇಕೆಂಬುದು ನಮ್ಮ ಅಪೇಕ್ಷೆ. ನಿರೀಕ್ಷೆಯಿಲ್ಲದ ಜನರಂತೆ ನೀವು ದುಃಖದಿಂದಿರುವುದು ನಮಗೆ ಇಷ್ಟವಿಲ್ಲ.
1 థెస్సలొనీకయులకు 4 : 14 (ERVTE)
ಯೇಸು ಸತ್ತುಹೋದನೆಂದು ನಾವು ನಂಬುತ್ತೇವೆ. ಆದರೆ ಯೇಸು ಮತ್ತೆ ಜೀವಂತವಾಗಿ ಎದ್ದುಬಂದನೆಂಬುದನ್ನೂ ನಾವು ನಂಬುತ್ತೇವೆ. ಹಾಗೆಯೇ ಯೇಸುವಿನಲ್ಲಿ ವಿಶ್ವಾಸವಿಟ್ಟು ಸತ್ತುಹೋದವರನ್ನು ದೇವರು ಆತನ ಜೊತೆಯಲ್ಲಿ ಕರೆದುಕೊಂಡು ಬರುವನು.
1 థెస్సలొనీకయులకు 4 : 15 (ERVTE)
ಈಗ ನಾವು ನಿಮಗೆ ಹೇಳುತ್ತಿರುವುದು ಪ್ರಭುವಿನ ಸ್ವಂತ ಸಂದೇಶವನ್ನೇ. ಪ್ರಭುವು ಮತ್ತೆ ಬಂದಾಗ ಈಗ ಜೀವಿಸುತ್ತಿರುವ ನಾವು ಇನ್ನೂ ಜೀವದಿಂದ ಇದ್ದರೆ ನಾವು ಪ್ರಭುವಿನ ಜೊತೆಯಲ್ಲಿರುತ್ತೇವೆ. ಆದರೂ ಸತ್ತುಹೋದ ಇತರರಿಗಿಂತಲೂ ನಾವು ಮುಂದಿನವರಾಗುವುದಿಲ್ಲ.
1 థెస్సలొనీకయులకు 4 : 16 (ERVTE)
ಪ್ರಭುವು ತಾನೇ ಪರಲೋಕದಿಂದ ಇಳಿದುಬರುವನು. ಆಗ ಪ್ರಧಾನ ದೇವದೂತನು ದೇವರ ತುತೂರಿ ಧ್ವನಿಯೊಡನೆ ಆಜ್ಞಾಘೋಷ ಮಾಡುವನು. ಕೂಡಲೇ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದುಬರುವರು.
1 థెస్సలొనీకయులకు 4 : 17 (ERVTE)
ಅನಂತರ, ಇನ್ನೂ ಜೀವದಿಂದುಳಿದಿರುವ ನಾವು ಸತ್ತವರೊಡನೆ ಒಂದುಗೂಡುವೆವು. ಪ್ರಭುವನ್ನು ಅಂತರಿಕ್ಷದಲ್ಲಿ ಎದುರುಗೊಳ್ಳಲು ನಾವು ಮೇಘಗಳ ನಡುವೆ ಎತ್ತಲ್ಪಡುವೆವು. ಹೀಗೆ ನಾವು ಯಾವಾಗಲೂ ಪ್ರಭುವಿನೊಂದಿಗೆ ಇರುವೆವು.
1 థెస్సలొనీకయులకు 4 : 18 (ERVTE)
ಆದಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.

1 2 3 4 5 6 7 8 9 10 11 12 13 14 15 16 17 18