1 తిమోతికి 4 : 1 (ERVTE)
{#1ಸುಳ್ಳುಬೋಧಕರ ಬಗ್ಗೆ ಎಚ್ಚರಿಕೆ } ಮುಂದಿನ ದಿನಗಳಲ್ಲಿ ಕೆಲವು ಜನರು ಸತ್ಯ ಬೋಧನೆಯನ್ನು ನಂಬುವುದಿಲ್ಲವೆಂದು ಪವಿತ್ರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ. ಆ ಜನರು ಸುಳ್ಳಾಡುವ ದುರಾತ್ಮಗಳಿಗೆ ವಿಧೇಯರಾಗುವರು; ದೆವ್ವಗಳ ಬೋಧನೆಯನ್ನು ಅನುಸರಿಸುವರು.
1 తిమోతికి 4 : 2 (ERVTE)
ಆ ಬೋಧನೆಗಳು ಸುಳ್ಳು ಹೇಳುವ ಮತ್ತು ವಂಚಿಸುವ ಜನರ ಮೂಲಕ ಬರುತ್ತವೆ. ಅವರು ಸರಿತಪ್ಪುಗಳ ಭೇದವನ್ನು ಗುರುತಿಸುವುದಿಲ್ಲ. ಕಾದ ಕಬ್ಬಿಣದಿಂದ ಸುಟ್ಟು ಬೂದಿಯಾಗುವಂತೆ ಅವರ ವಿವೇಕವು ನಾಶಗೊಂಡಿದೆ.
1 తిమోతికి 4 : 3 (ERVTE)
ಜನರು ಮದುವೆಮಾಡಿಕೊಳ್ಳಬಾರದೆಂದೂ ಕೆಲವು ಆಹಾರಪದಾರ್ಥಗಳನ್ನು ತಿನ್ನಬಾರದೆಂದೂ ಅವರು ಹೇಳುತ್ತಾರೆ. ಆದರೆ ನಂಬಿಕೆಯುಳ್ಳವರು ಮತ್ತು ಸತ್ಯವನ್ನು ತಿಳಿದಿರುವವರು ಕೃತಜ್ಞತಾಸ್ತುತಿ ಮಾಡಿ ಆ ಆಹಾರಪದಾರ್ಥಗಳನ್ನು ತಿನ್ನಲಿ. ಏಕೆಂದರೆ ಅವುಗಳನ್ನು ನಿರ್ಮಿಸಿದಾತನು ದೇವರೇ.
1 తిమోతికి 4 : 4 (ERVTE)
ಆತನು ನಿರ್ಮಿಸಿದ ಪ್ರತಿಯೊಂದೂ ಉತ್ತಮವಾಗಿರುತ್ತದೆ. ಆತನಿಗೆ ಕೃತಜ್ಞತಾಸ್ತುತಿ ಮಾಡಿ ತೆಗೆದುಕೊಳ್ಳುವ ಯಾವುದನ್ನೇ ಆಗಲಿ ನಿಷಿದ್ಧವೆಂದು ತಿರಸ್ಕರಿಸಬಾರದು.
1 తిమోతికి 4 : 5 (ERVTE)
ಏಕೆಂದರೆ ದೇವರ ವಾಕ್ಯದಿಂದ ಮತ್ತು ಪ್ರಾರ್ಥನೆಯಿಂದ ಅದು ಪವಿತ್ರವಾಗಿದೆ.
1 తిమోతికి 4 : 6 (ERVTE)
{#1ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರು } ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.
1 తిమోతికి 4 : 7 (ERVTE)
ದೇವರ ಸತ್ಯಕ್ಕೆ ಹೊಂದಿಕೆಯಾಗದ ಕ್ಷುಲ್ಲಕ ಕಥೆಗಳನ್ನು ಜನರು ಹೇಳುತ್ತಾರೆ. ಆ ಕಥೆಗಳ ಬೋಧನೆಯನ್ನು ಅನುಸರಿಸಬೇಡ. ದೇವರಿಗೆ ನಿಜವಾದ ಸೇವೆ ಮಾಡಲು ನಿನಗೆ ನೀನೇ ಬೋಧಿಸಿಕೊ.
1 తిమోతికి 4 : 8 (ERVTE)
ನೀನು ದೇಹವನ್ನು ಪಳಗಿಸಿಕೊಂಡರೆ ನಿನಗೆ ಕೆಲವು ರೀತಿಯಲ್ಲಿ ಸಹಾಯಕವಾಗುವುದು. ಆದರೆ ದೇವರ ಸೇವೆಯು ನಿನಗೆ ಎಲ್ಲಾ ರೀತಿಯಲ್ಲಿಯೂ ಸಹಾಯಕವಾಗುವುದು. ದೇವರ ಸೇವೆಯು ಇಹಪರಗಳೆರಡರಲ್ಲೂ ನಿನಗೆ ಆಶೀರ್ವಾದವನ್ನು ಉಂಟು ಮಾಡುವುದು.
1 తిమోతికి 4 : 9 (ERVTE)
ಈ ಸಂಗತಿಯು ನಂಬತಕ್ಕದ್ದೂ ಸರ್ವಾಂಗಿಕಾರಕ್ಕೆ ಯೋಗ್ಯವಾದದ್ದೂ ಆಗಿದೆ.
1 తిమోతికి 4 : 10 (ERVTE)
ಆದಕಾರಣವೇ, ನಾವು ಜೀವಸ್ವರೂಪನಾದ ದೇವರ ಮೇಲೆ ನಿರೀಕ್ಷೆಯಿಟ್ಟು ದುಡಿಯುತ್ತಿದ್ದೇವೆ ಮತ್ತು ಹೋರಾಡುತ್ತಿದ್ದೇವೆ. ಆತನು ಎಲ್ಲಾ ಜನರಿಗೆ ರಕ್ಷಕನಾಗಿದ್ದಾನೆ. ತನ್ನಲ್ಲಿ ನಂಬಿಕೆಯಿಡುವ ಜನರಿಗೆಲ್ಲಾ ಆತನು ವಿಶೇಷವಾದ ರೀತಿಯಲ್ಲಿ ರಕ್ಷಕನಾಗಿದ್ದಾನೆ.
1 తిమోతికి 4 : 11 (ERVTE)
ಇವುಗಳನ್ನು ಆಜ್ಞಾಪಿಸು ಮತ್ತು ಬೋಧಿಸು.
1 తిమోతికి 4 : 12 (ERVTE)
ನೀನು ಯೌವನಸ್ಥನಾಗಿರುವುದರಿಂದ ನಿನ್ನನ್ನು ಪ್ರಮುಖನಲ್ಲವೆಂದು ಪರಿಗಣಿಸಿ ಅಸಡ್ಡೆಮಾಡಲು ಯಾರಿಗೂ ಅವಕಾಶಕೊಡದಿರು. ವಿಶ್ವಾಸಿಗಳು ಹೇಗೆ ಜೀವಿಸಬೇಕೆಂಬುದಕ್ಕೆ ನೀನೇ ಅವರಿಗೆ ಮಾದರಿಯಾಗಿರು. ನಡೆನುಡಿಗಳಲ್ಲಿ, ಪ್ರೀತಿಯಲ್ಲಿ, ನಂಬಿಕೆಯಲ್ಲಿ ಮತ್ತು ಪರಿಶುದ್ಧ ಜೀವನದಲ್ಲಿ ನೀನೇ ಅವರಿಗೆ ಮಾದರಿಯಾಗಿರು.
1 తిమోతికి 4 : 13 (ERVTE)
ದೇವರ ವಾಕ್ಯವನ್ನು ಜನರಿಗೆ ಓದಿಹೇಳಿ ಅವರನ್ನು ಬಲಪಡಿಸು ಮತ್ತು ಅವರಿಗೆ ಬೋಧಿಸು. ನಾನು ಬರುವತನಕ ಈ ಕಾರ್ಯಗಳನ್ನು ಮಾಡುತ್ತಿರು.
1 తిమోతికి 4 : 14 (ERVTE)
ನಿನ್ನಲ್ಲಿರುವ ವರವನ್ನು ಜ್ಞಾಪಿಸಿಕೊಳ್ಳುತ್ತಿರು. ಸಭೆಯ ಹಿರಿಯರು ಪ್ರವಾದನೆಗಳೊಂದಿಗೆ ತಮ್ಮ ಕೈಗಳನ್ನು ನಿನ್ನ ಮೇಲಿಟ್ಟಾಗ ಆ ವರವು ನಿನಗೆ ಕೊಡಲ್ಪಟ್ಟಿತು.
1 తిమోతికి 4 : 15 (ERVTE)
ಈ ಕಾರ್ಯಗಳನ್ನು ಮಾಡುತ್ತಲೇ ಇರು. ಈ ಕಾರ್ಯಗಳನ್ನು ಮಾಡಲು ನಿನ್ನ ಜೀವನವನ್ನು ಮುಡಿಪಾಗಿಡು. ಆಗ ನಿನ್ನ ಕಾರ್ಯವು ಅಭಿವೃದ್ಧಿಗೊಳ್ಳುತ್ತಿರುವುದನ್ನು ಜನರೆಲ್ಲರೂ ನೋಡುವರು.
1 తిమోతికి 4 : 16 (ERVTE)
ನಿನ್ನ ಜೀವನದಲ್ಲಿಯೂ ನಿನ್ನ ಬೋಧನೆಯಲ್ಲಿಯೂ ಎಚ್ಚರಿಕೆಯಿಂದಿರು. ಯೋಗ್ಯವಾದ ರೀತಿಯಲ್ಲಿ ಜೀವಿಸುತ್ತಾ ಬೋಧಿಸು. ಆಗ ನೀನು, ನಿನ್ನನ್ನೂ ನಿನ್ನ ಬೋಧನೆ ಕೇಳುವವರನ್ನೂ ರಕ್ಷಿಸುವೆ.

1 2 3 4 5 6 7 8 9 10 11 12 13 14 15 16