దినవృత్తాంతములు రెండవ గ్రంథము 35 : 1 (ERVTE)
{#1ಯೋಷೀಯನು ಪಸ್ಕಹಬ್ಬವನ್ನು ಆಚರಿಸಿದ್ದು } ಅರಸನಾದ ಯೋಷೀಯನು ಯೆಹೋವನಿಗೆ ಪಸ್ಕಹಬ್ಬವನ್ನು ಜೆರುಸಲೇಮಿನಲ್ಲಿ ಆಚರಿಸಿದನು. ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯು ವಧಿಸಲ್ಪಟ್ಟಿತು.
దినవృత్తాంతములు రెండవ గ్రంథము 35 : 2 (ERVTE)
ದೇವಾಲಯದಲ್ಲಿ ಸೇವೆ ಮಾಡುತ್ತಿದ್ದ ಯಾಜಕರನ್ನು ಯೋಷೀಯನು ಪ್ರೋತ್ಸಾಹಿಸಿ ವಿವಿಧ ಕೆಲಸಕಾರ್ಯಗಳಿಗೆ ಯಾಜಕರನ್ನು ಆರಿಸಿದನು.
దినవృత్తాంతములు రెండవ గ్రంథము 35 : 3 (ERVTE)
ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.
దినవృత్తాంతములు రెండవ గ్రంథము 35 : 4 (ERVTE)
ನಿಮ್ಮ ನಿಮ್ಮ ವಂಶಕ್ರಮದ ಮೇರೆಗೆ ದೇವಾಲಯದೊಳಗೆ ಸೇವೆಮಾಡಲು ನಿಮ್ಮನ್ನು ಸಿದ್ಧಮಾಡಿಕೊಳ್ಳಿರಿ. ಅರಸನಾದ ದಾವೀದನೂ ಅವನ ಮಗನಾದ ಸೊಲೊಮೋನನೂ ನಿಮಗೆ ಕೊಟ್ಟ ಸೇವಾ ಜವಾಬ್ದಾರಿಕೆಗಳನ್ನು ನಡಿಸಿರಿ.
దినవృత్తాంతములు రెండవ గ్రంథము 35 : 5 (ERVTE)
ಪವಿತ್ರಸ್ಥಳದಲ್ಲಿ ಲೇವಿಯರೊಂದಿಗೆ ನಿಲ್ಲಿರಿ ಮತ್ತು ಬೇರೆ ಕುಲಗಳ ಜನರಿಗೂ ಸಹಾಯ ಮಾಡುವುದಕ್ಕಾಗಿ ಹೀಗೆ ಮಾಡಿರಿ.
దినవృత్తాంతములు రెండవ గ్రంథము 35 : 6 (ERVTE)
ಪಸ್ಕದ ಕುರಿಮರಿಯನ್ನು ವಧಿಸಿ ಯೆಹೋವನಿಗಾಗಿ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ನಿಮ್ಮ ಸೋದರರಾದ ಇಸ್ರೇಲರಿಗೆ ಕುರಿಮರಿಯನ್ನು ಸಿದ್ಧಮಾಡಿರಿ. ಯೆಹೋವನು ನಮಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿರಿ. ಆತನು ಮೋಶೆಯ ಮೂಲಕ ನಮಗೆ ಈ ವಿಧಿನಿಯಮಗಳನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು.
దినవృత్తాంతములు రెండవ గ్రంథము 35 : 7 (ERVTE)
ಇಸ್ರೇಲರಿಗೆ ಅರಸನಾದ ಯೋಷೀಯನು ಪಸ್ಕಹಬ್ಬದ ಯಜ್ಞಗಳಿಗಾಗಿ ಮೂವತ್ತು ಸಾವಿರ ಕುರಿಮರಿಗಳನ್ನು ಕೊಟ್ಟನು. ಇದರ ಮೇಲೆ ಮೂರು ಸಾವಿರ ಪಶುಗಳನ್ನು ಅವನು ಜನರಿಗೆ ಕೊಟ್ಟನು. ಈ ಪ್ರಾಣಿಗಳೆಲ್ಲಾ ಅರಸನಾದ ಯೋಷೀಯನದೇ ಆಗಿದ್ದವು.
దినవృత్తాంతములు రెండవ గ్రంథము 35 : 8 (ERVTE)
ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.
దినవృత్తాంతములు రెండవ గ్రంథము 35 : 9 (ERVTE)
ಕೋನನ್ಯ, ಸೆಮಾಯ, ನೆತನೇಲ್ ಮತ್ತು ಇವರ ಸಹೋದರರು ಮತ್ತು ಹಷಲ್ಯ, ಯೆಗೀಯೇಲ್, ಯೋಜಾಬಾದ್ ಇವರು ಐನೂರು ಕುರಿಗಳನ್ನು ಆಡುಗಳನ್ನು ಮತ್ತು ಐನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಕ್ಕಾಗಿ ಲೇವಿಯರಿಗೆ ಕೊಟ್ಟರು. ಇವರು ಲೇವಿಯರ ನಾಯಕರಾಗಿದ್ದರು.
దినవృత్తాంతములు రెండవ గ్రంథము 35 : 10 (ERVTE)
ಪಸ್ಕಹಬ್ಬದ ಆಚರಣೆಗಳಿಗೆ ಎಲ್ಲವೂ ಸಿದ್ಧವಾದಾಗ ಯಾಜಕರೂ ಲೇವಿಯರೂ ತಮ್ಮ ನೇಮಿತ ಸ್ಥಳಗಳಲ್ಲಿ ನಿಂತರು. ಇದು ಅರಸನ ಆಜ್ಞೆಯಾಗಿತ್ತು.
దినవృత్తాంతములు రెండవ గ్రంథము 35 : 11 (ERVTE)
ಪಸ್ಕದ ಪಶುಗಳನ್ನು ವಧಿಸಿದ ಬಳಿಕ ಲೇವಿಯರು ಅದರ ಚರ್ಮ ಸುಲಿದು ಅದರ ರಕ್ತವನ್ನು ಯಾಜಕರಿಗೆ ಕೊಟ್ಟರು. ಆ ರಕ್ತವನ್ನು ಯಾಜಕರು ವೇದಿಕೆಯ ಮೇಲೆ ಚಿಮಿಕಿಸಿದರು.
దినవృత్తాంతములు రెండవ గ్రంథము 35 : 12 (ERVTE)
ಆಮೇಲೆ ಬೇರೆಬೇರೆ ಕುಲಗಳವರಿಗೆ ಸರ್ವಾಂಗಹೋಮವನ್ನರ್ಪಿಸಲು ಪಶುಗಳನ್ನು ಕೊಟ್ಟರು. ಈ ಸರ್ವಾಂಗಹೋಮವು ಮೋಶೆಯ ಕಟ್ಟಳೆಗನುಸಾರವಾಗಿ ನಡೆಯಿತು.
దినవృత్తాంతములు రెండవ గ్రంథము 35 : 13 (ERVTE)
ಲೇವಿಯರು ಪಸ್ಕದ ಪಶುಗಳ ಮಾಂಸವನ್ನು ಕಟ್ಟಳೆಯ ಪ್ರಕಾರ ಬೆಂಕಿಯಲ್ಲಿ ಸುಟ್ಟರು. ಪರಿಶುದ್ಧ ಯಜ್ಞದ ಮಾಂಸವನ್ನು ಪಾತ್ರೆಗಳಲ್ಲಿ ಮತ್ತು ಹಂಡೆಗಳಲ್ಲಿ ಬೇಯಿಸಿದರು. ಆಮೇಲೆ ಅವುಗಳನ್ನು ಜನರಿಗೆ ಹಂಚಿದರು.
దినవృత్తాంతములు రెండవ గ్రంథము 35 : 14 (ERVTE)
ಬಳಿಕ ಲೇವಿಯರು ತಮಗಾಗಿಯೂ ಆರೋನನ ಸಂತತಿಯವರಾದ ಯಾಜಕರಿಗಾಗಿಯೂ ಮಾಂಸವನ್ನು ಸಿದ್ಧಮಾಡಿದರು. ಆ ಯಾಜಕರು ರಾತ್ರಿ ತನಕವೂ ಕೆಲಸದಲ್ಲಿ ನಿರತರಾಗಿದ್ದರು; ಸರ್ವಾಂಗಹೋಮಗಳನ್ನೂ ಪಶುಗಳ ಕೊಬ್ಬನ್ನೂ ಹೋಮಮಾಡುತ್ತಾ ಇದ್ದರು.
దినవృత్తాంతములు రెండవ గ్రంథము 35 : 15 (ERVTE)
ಆಸಾಫನ ಕುಟುಂಬದವರಾದ ಲೇವಿಗಾಯಕರು ದಾವೀದನಿಂದ ನೇಮಕಗೊಂಡಿದ್ದ ಸ್ಥಳದಲ್ಲಿ ನಿಂತುಕೊಂಡರು. ಅವರು ಯಾರೆಂದರೆ: ಆಸಾಫ್, ಹೇಮಾನ್ ಮತ್ತು ಅರಸನ ಪ್ರವಾದಿಯಾಗಿದ್ದ ಯೆದೂತೂನ್. ದ್ವಾರಪಾಲಕರು ತಮ್ಮತಮ್ಮ ಸ್ಥಳಗಳಲ್ಲಿಯೇ ನಿಂತಿದ್ದರು. ಅವರು ತಮ್ಮ ಸ್ಥಳಗಳನ್ನು ಬಿಟ್ಟುಹೋಗುವ ಅಗತ್ಯವಿರಲಿಲ್ಲ ಯಾಕಂದೆರ ಪಸ್ಕದ ಯಜ್ಞಗಳನ್ನು ಅವರ ಸೋದರರಾದ ಲೇವಿಯರು ಅವರಿಗಾಗಿ ಮಾಡಿದರು.
దినవృత్తాంతములు రెండవ గ్రంథము 35 : 16 (ERVTE)
ಹೀಗೆ ಅರಸನಾದ ಯೋಷೀಯನ ಆಜ್ಞೆಗನುಸಾರವಾಗಿ ಪಸ್ಕಹಬ್ಬದ ಪ್ರತಿಯೊಂದು ವಿಷಯವು ನಡೆಯಿತು. ಸರ್ವಾಂಗಹೋಮವನ್ನು ಯಜ್ಞವೇದಿಕೆಯಲ್ಲಿ ಸಮರ್ಪಿಸಿದರು.
దినవృత్తాంతములు రెండవ గ్రంథము 35 : 17 (ERVTE)
ಇಸ್ರೇಲಿನ ಜನರೂ ಅಲ್ಲಿ ಸೇರಿಬಂದವರೂ ಪಸ್ಕಹಬ್ಬವನ್ನು ಮತ್ತು ಹುಳಿ ಇಲ್ಲದ ರೊಟ್ಟಿಯ ಹಬ್ಬವನ್ನು ಏಳು ದಿನಗಳವರೆಗೆ ಆಚರಿಸಿದರು.
దినవృత్తాంతములు రెండవ గ్రంథము 35 : 18 (ERVTE)
ಪ್ರವಾದಿಯಾದ ಸಮುವೇಲನ ಕಾಲದಿಂದ ಈ ರೀತಿಯಾಗಿ ಪಸ್ಕಹಬ್ಬವನ್ನು ಎಂದೂ ಆಚರಿಸಿರಲಿಲ್ಲ. ಇಸ್ರೇಲರ ಅರಸರಲ್ಲಿ ಯಾರೂ ಈ ರೀತಿಯಾಗಿ ಹಬ್ಬ ಆಚರಿಸಿರಲಿಲ್ಲ. ಅರಸನಾದ ಯೋಷೀಯ, ಯಾಜಕರು, ಲೇವಿಯರು, ಯೆಹೂದದ ಜನರು, ಇಸ್ರೇಲಿನಿಂದ ಬಂದ ಜನರು ಮತ್ತು ಜೆರುಸಲೇಮಿನ ಜನರು ವಿಶೇಷ ರೀತಿಯಲ್ಲಿ ಪಸ್ಕಹಬ್ಬವನ್ನು ಆಚರಿಸಿದರು.
దినవృత్తాంతములు రెండవ గ్రంథము 35 : 19 (ERVTE)
ಇದು ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ನಡೆಯಿತು.
దినవృత్తాంతములు రెండవ గ్రంథము 35 : 20 (ERVTE)
{#1ಯೋಷೀಯನ ಮರಣ } ದೇವಾಲಯಕ್ಕಾಗಿ ಎಲ್ಲಾ ಒಳ್ಳೆಯ ಕಾರ್ಯಗಳನ್ನು ಯೋಷೀಯನು ಮಾಡಿದನು. ಸ್ವಲ್ಪಕಾಲವಾದ ಬಳಿಕ ಈಜಿಪ್ಟಿನ ಅರಸನಾದ ನೆಕೋ ಯೂಫ್ರೇಟೀಸ್ ನದಿಯ ಬಳಿಯಲ್ಲಿದ್ದ ಕರ್ಕೆಮೀಷ್ ಪಟ್ಟಣದ ಮೇಲೆ ಯುದ್ಧಮಾಡಲು ಹೊರಟನು. ಅರಸನಾದ ಯೋಷೀಯನು ನೆಕೋನ ಮೇಲೆ ಯುದ್ಧಮಾಡಲು ಹೊರಟನು.
దినవృత్తాంతములు రెండవ గ్రంథము 35 : 21 (ERVTE)
ಆದರೆ ನೆಕೋ ಯೋಷೀಯನಿಗೆ ಸಂದೇಶವನ್ನು ಕಳುಹಿಸಿ ಅದರಲ್ಲಿ, “ಅರಸನಾದ ಯೋಷೀಯನೇ, ನಾನು ನಿನಗೆ ವಿರುದ್ಧವಾಗಿ ಬರಲಿಲ್ಲ. ಆದ್ದರಿಂದ ನೀನು ಯುದ್ಧಕ್ಕೆ ಕೈಹಾಕಬೇಡ. ನಾನು ನನ್ನ ವೈರಿಗಳ ಮೇಲೆ ಯುದ್ಧಮಾಡಲು ಬಂದಿದ್ದೇನೆ. ಬೇಗನೆ ಯುದ್ಧಮಾಡಲು ದೇವರು ನನ್ನನ್ನು ಅವಸರಪಡಿಸುತ್ತಿದ್ದಾನೆ. ದೇವರು ನಿನ್ನೊಂದಿಗಿದ್ದಾನೆ. ಆದ್ದರಿಂದ ನನಗೆ ತೊಂದರೆ ಕೊಡಬೇಡ. ನೀನು ನನ್ನ ಮೇಲೆ ಯುದ್ಧ ಮಾಡಿದರೆ ದೇವರು ನಿನ್ನನ್ನು ನಾಶಮಾಡುವನು” ಎಂದು ಹೇಳಿದನು.
దినవృత్తాంతములు రెండవ గ్రంథము 35 : 22 (ERVTE)
ಆದರೆ ಅರಸನಾದ ಯೋಷೀಯನು ಹಿಂದಕ್ಕೆ ಹೋಗಲಿಲ್ಲ. ಅವನು ನೆಕೋನನ್ನು ಎದುರಿಸಲು ನಿರ್ಧರಿಸಿದನು. ತನ್ನ ವೇಷ ಬದಲಾಯಿಸಿ ಯುದ್ಧಕ್ಕೆ ಹೋದನು. ದೇವರ ಅಪ್ಪಣೆಯ ಬಗ್ಗೆ ನೆಕೋ ಹೇಳಿದ್ದನ್ನು ಕೇಳಲು ಯೋಷೀಯನು ನಿರಾಕರಿಸಿ ಮೆಗಿದ್ದೋ ಕಣಿವೆಯಲ್ಲಿ ಯುದ್ಧಕ್ಕೆ ಹೊರಟನು.
దినవృత్తాంతములు రెండవ గ్రంథము 35 : 23 (ERVTE)
ರಣರಂಗದಲ್ಲಿ ಅರಸನಾದ ಯೋಷೀಯನಿಗೆ ಬಾಣಗಳು ತಾಗಿದ್ದವು. ಆಗ ತನ್ನ ಸೇವಕರಿಗೆ, “ನನ್ನನ್ನು ಇಲ್ಲಿಂದ ಕೊಂಡೊಯ್ಯಿರಿ. ನಾನು ತೀವ್ರವಾಗಿ ಗಾಯಗೊಂಡಿದ್ದೇನೆ” ಅಂದನು.
దినవృత్తాంతములు రెండవ గ్రంథము 35 : 24 (ERVTE)
ಆಗ ಸೇವಕರು ಯೋಷೀಯನನ್ನು ಅವನಿದ್ದ ರಥದಿಂದ ತೆಗೆದು ಅವನ ಜೊತೆಯಲ್ಲಿ ತಂದಿದ್ದ ಇನ್ನೊಂದು ರಥದಲ್ಲಿ ಹಾಕಿ ರಣರಂಗದಿಂದ ನೇರವಾಗಿ ಜೆರುಸಲೇಮಿಗೆ ಕೊಂಡೊಯ್ದರು. ಅಲ್ಲಿ ಅವನು ಸತ್ತನು. ಅವನ ಪೂರ್ವಿಕರ ಬಳಿಯಲ್ಲಿ ಅವನನ್ನು ಸಮಾಧಿಮಾಡಿದರು. ಅವನು ಸತ್ತದ್ದನ್ನು ಕೇಳಿ ಯೆಹೂದದ ಮತ್ತು ಜೆರುಸಲೇಮಿನ ಜನರು ತುಂಬಾ ಶೋಕಿಸಿದರು.
దినవృత్తాంతములు రెండవ గ్రంథము 35 : 25 (ERVTE)
ಯೆರೆಮೀಯನು ಅವನ ಬಗ್ಗೆ ಶೋಕಗೀತೆಗಳನ್ನು ರಚಿಸಿ ಹಾಡಿದನು. ಆ ಗೀತೆಗಳನ್ನು ಗಂಡಸರು ಹೆಂಗಸರು ಈಗಲೂ ಹಾಡುತ್ತಾರೆ. ಯೋಷೀಯನ ಕುರಿತು ದುಃಖದ ಹಾಡನ್ನು ಹಾಡುವದು ಅವರಿಗೆ ರೂಢಿಯಾಗಿದೆ. ಆ ಗೀತೆಗಳನ್ನು [BKS]ಮರಣದ ಹಾಡಿನ[BKE] ಪುಸ್ತಕದಲ್ಲಿ ಬರೆಯಲಾಗಿದೆ.
దినవృత్తాంతములు రెండవ గ్రంథము 35 : 26 (ERVTE)
దినవృత్తాంతములు రెండవ గ్రంథము 35 : 27 (ERVTE)
(26-27)ಯೋಷೀಯನು ಅರಸನಾಗಿದ್ದಾಗ ಮಾಡಿದ ಇತರ ಕಾರ್ಯಗಳನ್ನೂ ಅವನ ಆಳ್ವಿಕೆಯ ಪ್ರಾರಂಭದಿಂದ ಕೊನೆಯ ತನಕದ ವಿಷಯಗಳನ್ನೂ [BKS]ಇಸ್ರೇಲಿನ ಮತ್ತು ಯೆಹೂದದ ಅರಸರ ಗ್ರಂಥದಲ್ಲಿ[BKE] ಬರೆಯಲಾಗಿದೆ. ದೇವರ ಮೇಲೆ ಯೋಷೀಯನಿಗಿದ್ದ ಭಕ್ತಿಯನ್ನೂ ಅವನು ಯೆಹೋವನಿಗೆ ಹೇಗೆ ವಿಧೇಯನಾಗಿದ್ದನೆಂಬುದನ್ನೂ ಆ ಗ್ರಂಥದಲ್ಲಿ ವಿವರಿಸಿದೆ.
❮
❯