2 కొరింథీయులకు 10 : 1 (ERVTE)
{#1ತನ್ನ ಸೇವೆಯ ಕುರಿತು ಪೌಲನ ಪ್ರತಿವಾದ } ಪೌಲನಾದ ನಾನು ಕ್ರಿಸ್ತನ ಮೃದುಸ್ವಭಾವದಿಂದಲೂ ಕನಿಕರದಿಂದಲೂ ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ. ನಾನು ನಿಮ್ಮೊಂದಿಗಿರುವಾಗ ದೀನನಾಗಿರುತ್ತೇನೆಂದೂ, ನಿಮ್ಮಿಂದ ದೂರದಲ್ಲಿರುವಾಗ ಧೀರನಾಗಿರುತ್ತೇನೆಂದೂ ಕೆಲವರು ಹೇಳುತ್ತಾರೆ.
2 కొరింథీయులకు 10 : 2 (ERVTE)
ನಾವು ಲೌಕಿಕರಂತೆ ಜೀವಿಸುತ್ತೇವೆಂದು ಕೆಲವರು ಯೋಚಿಸುತ್ತಾರೆ. ನಾನು ಬಂದಾಗ ಅವರ ವಿರೋಧವಾಗಿ ಬಹು ದಿಟ್ಟತನದಿಂದಿರಬೇಕೆಂದು ಯೋಚಿಸಿಕೊಂಡಿದ್ದೇನೆ. ಆದರೆ ನಿಮಗೂ ಅದೇ ದಿಟ್ಟತನವನ್ನು ಉಪಯೋಗಿಸುವ ಅಗತ್ಯತೆ ಇಲ್ಲದಿರಲಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ.
2 కొరింథీయులకు 10 : 3 (ERVTE)
ನಾವು ಪ್ರಪಂಚದಲ್ಲಿ ಜೀವಿಸುತ್ತಿದ್ದೇವೆ. ಆದರೆ ಪ್ರಪಂಚದವರು ಹೊಡೆದಾಡುವ ರೀತಿಯಲ್ಲಿ ನಾವು ಹೊಡೆದಾಡುವುದಿಲ್ಲ.
2 కొరింథీయులకు 10 : 4 (ERVTE)
ಪ್ರಪಂಚದವರು ಉಪಯೋಗಿಸುವ ಆಯುಧಗಳಿಗೆ ತದ್ವಿರುದ್ಧವಾದ ಆಯುಧಗಳೊಂದಿಗೆ ನಾವು ಹೋರಾಡುತ್ತೇವೆ. ನಮ್ಮ ಆಯುಧಗಳು ದೇವರ ಶಕ್ತಿಯನ್ನು ಹೊಂದಿವೆ. ಅವು ಶತ್ರುವಿನ ಬಲವಾದ ಕೋಟೆಗಳನ್ನು ನಾಶ ಮಾಡಬಲ್ಲವು. ನಾವು ಜನರ ವಾದಗಳನ್ನು ನಾಶಮಾಡುತ್ತೇವೆ.
2 కొరింథీయులకు 10 : 5 (ERVTE)
ದೇವರ ಜ್ಞಾನಕ್ಕೆ ವಿರೋಧವಾಗಿ ಎದ್ದೇಳುವ ಪ್ರತಿಯೊಂದು ಗರ್ವದ ಸಂಗತಿಯನ್ನು ನಾಶಮಾಡುತ್ತೇವೆ; ಪ್ರತಿಯೊಂದು ಯೋಚನೆಯನ್ನು ಸ್ವಾಧೀನಪಡಿಸಿಕೊಂಡು ಅವುಗಳನ್ನು ಪರಿವರ್ತಿಸಿ ಕ್ರಿಸ್ತನಿಗೆ ವಿಧೇಯರಾಗುವಂತೆ ಮಾಡುತ್ತೇವೆ.
2 కొరింథీయులకు 10 : 6 (ERVTE)
ನಿಮ್ಮಲ್ಲಿ ಕ್ರಿಸ್ತನಿಗೆ ವಿಧೇಯರಾಗದಿರುವ ಯಾರನ್ನೇ ಆಗಲಿ ಶಿಕ್ಷಿಸಲು ಸಿದ್ಧರಾಗಿದ್ದೇವೆ. ಆದರೆ ಮೊಟ್ಟಮೊದಲನೆಯದಾಗಿ, ನೀವು ಪೂರ್ಣ ವಿಧೇಯರಾಗಬೇಕೆಂದು ಅಪೇಕ್ಷಿಸುತ್ತೇವೆ.
2 కొరింథీయులకు 10 : 7 (ERVTE)
ನಿಮ್ಮ ಮುಂದಿರುವ ನಿಜಾಂಶಗಳನ್ನು ನೀವು ಗಮನಿಸಬೇಕು. ಒಬ್ಬ ವ್ಯಕ್ತಿಯು ತಾನು ನಿಜವಾಗಿಯೂ ಕ್ರಿಸ್ತನವನೆಂದು ತಿಳಿದುಕೊಂಡಿದ್ದರೆ ಅವನಂತೆಯೇ ನಾವೂ ಕ್ರಿಸ್ತನವರೆಂಬುದನ್ನು ಅವನು ತಿಳಿದುಕೊಳ್ಳಬೇಕು.
2 కొరింథీయులకు 10 : 8 (ERVTE)
ಪ್ರಭುವು ನಮಗೆ ಕೊಟ್ಟಿರುವ ಅಧಿಕಾರದ ಬಗ್ಗೆ ನಾವು ಹೆಚ್ಚು ಹೆಮ್ಮೆಪಡುತ್ತೇವೆ ಎಂಬುದೇನೋ ಸತ್ಯ. ಆದರೆ ಆತನು ನಮಗೆ ಈ ಅಧಿಕಾರವನ್ನು ಕೊಟ್ಟಿರುವುದು ನಿಮ್ಮನ್ನು ಬಲಪಡಿಸುವುದಕ್ಕಾಗಿಯೇ ಹೊರತು ನಿಮಗೆ ನೋವನ್ನು ಉಂಟುಮಾಡುವುದಕ್ಕಾಗಿಯಲ್ಲ. ಆದ್ದರಿಂದ ಅದರ ಬಗ್ಗೆ ಹೆಮ್ಮೆಪಡುವುದರಲ್ಲಿ ನಾನು ನಾಚಿಕೊಳ್ಳುವುದಿಲ್ಲ.
2 కొరింథీయులకు 10 : 9 (ERVTE)
ನನ್ನ ಪತ್ರಗಳ ಮೂಲಕ ನಿಮ್ಮನ್ನು ಭಯಪಡಿಸಲು ಪ್ರಯತ್ನಿಸುತ್ತಿದ್ದೇನೆಂದು ನೀವು ಯೋಚಿಸಬೇಕೆಂಬುದು ನನ್ನ ಅಪೇಕ್ಷೆಯಲ್ಲ.
2 కొరింథీయులకు 10 : 10 (ERVTE)
“ಪೌಲನ ಪತ್ರಗಳು ಬಲಯುತವಾಗಿವೆ ಮತ್ತು ಪ್ರಾಮುಖ್ಯವಾಗಿವೆ, ಆದರೆ ಅವನು ನಮ್ಮೊಂದಿಗಿರುವಾಗ ಬಲಹೀನನಾಗಿರುತ್ತಾನೆ, ಅವನ ಮಾತುಗಳು ನಿಸ್ಸಾರವಾಗಿರುತ್ತವೆ” ಎಂದು ಕೆಲವರು ಹೇಳುತ್ತಾರೆ.
2 కొరింథీయులకు 10 : 11 (ERVTE)
ಆ ಜನರಿಗೆ ಈ ವಿಷಯ ತಿಳಿದಿರಬೇಕು. ಅದೇನೆಂದರೆ, ಈಗ ನಾವು ನಿಮ್ಮೊಂದಿಗಿಲ್ಲ. ಆದ್ದರಿಂದ ಈ ಸಂಗತಿಗಳನ್ನು ಪತ್ರಗಳ ಮೂಲಕ ಹೇಳುತ್ತಿದ್ದೇವೆ. ಆದರೆ ನಾವು ನಿಮ್ಮೊಂದಿಗಿರುವಾಗ ನಮ್ಮ ಪತ್ರಗಳಲ್ಲಿ ತೋರಿದ ಅಧಿಕಾರವನ್ನೇ ತೋರಿಸುತ್ತೇವೆ.
2 కొరింథీయులకు 10 : 12 (ERVTE)
2 కొరింథీయులకు 10 : 13 (ERVTE)
ತಾವು ಬಹಳ ಪ್ರಾಮುಖ್ಯವಾದವರೆಂದು ಯೋಚಿಸುವ ಆ ಜನರ ಗುಂಪಿನೊಡನೆ ಸೇರಿಕೊಳ್ಳಲು ನಮಗೆ ಧೈರ್ಯಸಾಲದು. ನಾವು ನಮ್ಮನ್ನು ಅವರೊಂದಿಗೆ ಹೋಲಿಸಿಕೊಳ್ಳುವುದಿಲ್ಲ. ಅವರು ತಮ್ಮನ್ನು ಇತರರೊಂದಿಗೆ ಹೋಲಿಸಿಕೊಳ್ಳುತ್ತಾರೆ; ತಮ್ಮನ್ನು ತಾವೇ ಮೌಲ್ಯಮಾಪನ ಮಾಡಿಕೊಳ್ಳುತ್ತಾರೆ. ಅವರಿಗೆ ಏನೂ ಗೊತ್ತಿಲ್ಲವೆಂದು ಇದೇ ತೋರಿಸುತ್ತದೆ. ಆದರೆ ನಾವು ನಮಗೆ ಕೊಡಲ್ಪಟ್ಟಿರುವ ಕೆಲಸದ ಮೇರೆಯನ್ನು ಮೀರಿ ನಮ್ಮನ್ನು ಹೊಗಳಿಕೊಳ್ಳದೆ ದೇವರು ನಮಗೆ ಕೊಟ್ಟಿರುವ ಕೆಲಸದ ಮೇರೆಯೊಳಗೆ ಹೆಮ್ಮೆಪಡುತ್ತೇವೆ. ಆದರೆ ನಮ್ಮ ಈ ಕೆಲಸವು ನಿಮ್ಮ ಮಧ್ಯ ನಾವು ಮಾಡುವ ಈ ಸೇವೆಯನ್ನು ಒಳಗೊಂಡಿದೆ.
2 కొరింథీయులకు 10 : 14 (ERVTE)
ನಾವು ಬಹಳವಾಗಿ ಹೊಗಳಿಕೊಳ್ಳುವುದಿಲ್ಲ. ನಾವು ನಿಮ್ಮಲ್ಲಿಗೆ ಈಗಾಗಲೇ ಬಂದಿಲ್ಲದಿದ್ದರೆ ಬಹಳವಾಗಿ ಹೊಗಳಿಕೊಳ್ಳುತ್ತಿದ್ದೆವು. ಆದರೆ ನಾವು ನಿಮ್ಮಲ್ಲಿಗೆ ಬಂದಿದ್ದೇವೆ. ಕ್ರಿಸ್ತನ ಸುವಾರ್ತೆಯೊಂದಿಗೆ ನಾವು ಬಂದೆವು.
2 కొరింథీయులకు 10 : 15 (ERVTE)
ನಾವು ಹೊಗಳಿಕೊಳ್ಳುವುದನ್ನು ನಮ್ಮ ಕೆಲಸದ ಮೇರೆಗೆ ಸೀಮಿತಗೊಳಿಸುತ್ತೇವೆ. ಇತರರು ಮಾಡಿದ ಕೆಲಸದ ಬಗ್ಗೆ ನಾವು ನಮ್ಮನ್ನು ಹೊಗಳಿಕೊಳ್ಳುವುದಿಲ್ಲ. ನಿಮ್ಮ ನಂಬಿಕೆಯು ವೃದ್ಧಿಯಾಗುತ್ತಾ ಬಂದಂತೆ ನಮ್ಮ ಕೆಲಸವು ಮತ್ತಷ್ಟು ವಿಶಾಲವಾಗಿ ಬೆಳೆಯಲು ನೀವು ಸಹಾಯ ಮಾಡುತ್ತೀರೆಂಬ ನಿರೀಕ್ಷೆ ನಮಗಿದೆ.
2 కొరింథీయులకు 10 : 16 (ERVTE)
ನಿಮ್ಮ ಪಟ್ಟಣಕ್ಕೆ ದೂರವಾಗಿರುವ ಸ್ಥಳಗಳಲ್ಲಿಯೂ ಸುವಾರ್ತೆಯನ್ನು ತಿಳಿಸಬೇಕೆಂಬ ಅಪೇಕ್ಷೆ ನಮಗುಂಟು. ಮತ್ತೊಬ್ಬ ವ್ಯಕ್ತಿಯ ಪ್ರದೇಶದಲ್ಲಿ ಈಗಾಗಲೇ ಮಾಡಲ್ಪಟ್ಟಿರುವ ಕೆಲಸದ ಬಗ್ಗೆ ಹೊಗಳಿಕೊಳ್ಳಬೇಕೆಂಬ ಅಪೇಕ್ಷೆ ನಮಗಿಲ್ಲ.
2 కొరింథీయులకు 10 : 17 (ERVTE)
ಆದರೆ “ಹೊಗಳಿಕೊಳ್ಳುವವನು ಪ್ರಭುವಿನಲ್ಲಿಯೇ ಹೊಗಳಿಕೊಳ್ಳಬೇಕು”[✡ ಉಲ್ಲೇಖನ: ಯೆರೆಮೀಯ 9: 24 ]
2 కొరింథీయులకు 10 : 18 (ERVTE)
ಒಬ್ಬನು ತನ್ನನ್ನು ಒಳ್ಳೆಯವನೆಂದು ಹೇಳಿಕೊಂಡ ಮಾತ್ರಕ್ಕೆ ಅವನು ಸ್ವೀಕೃತನೆಂದಲ್ಲ. ಪ್ರಭುವು ಯಾರನ್ನು ಒಳ್ಳೆಯವನೆಂದು ಯೋಚಿಸುತ್ತಾನೊ ಅವನೇ ಸ್ವೀಕೃತನಾಗಿದ್ದಾನೆ.
❮
❯
1
2
3
4
5
6
7
8
9
10
11
12
13
14
15
16
17
18