2 కొరింథీయులకు 2 : 1 (ERVTE)
ಆದ್ದರಿಂದ ನಾನು ನಿಮಗೆ ನೀಡಲಿರುವ ಮುಂದಿನ ಸಂದರ್ಶನವು ನಿಮಗೆ ದುಃಖವನ್ನು ಉಂಟುಮಾಡುವ ಸಂದರ್ಶನವಾಗಿರಬಾರದೆಂದು ನಿರ್ಧರಿಸಿದೆನು.
2 కొరింథీయులకు 2 : 2 (ERVTE)
ನಾನು ನಿಮ್ಮನ್ನು ದುಃಖಗೊಳಿಸಿದರೆ, ನನ್ನನ್ನು ಸಂತೋಷಗೊಳಿಸುವವರು ಯಾರು? ನನ್ನಿಂದ ದುಃಖಿತರಾದ ನೀವು ಮಾತ್ರ ನನ್ನನ್ನು ಸಂತೋಷಪಡಿಸಬಲ್ಲಿರಿ.
2 కొరింథీయులకు 2 : 3 (ERVTE)
ನಾನು ನಿಮ್ಮ ಬಳಿಗೆ ಬಂದಾಗ, ನನ್ನನ್ನು ಸಂತೋಷಗೊಳಿಸಬೇಕಾದ ಜನರಿಂದಲೇ ನನಗೆ ದುಃಖವಾಗಬಾರದೆಂಬ ಉದ್ದೇಶದಿಂದ ನಾನು ನಿಮಗೆ ಈ ಪತ್ರವನ್ನು ಬರೆದೆನು. ನೀವೆಲ್ಲರೂ ನನ್ನ ಆನಂದದಲ್ಲಿ ಪಾಲುಗಾರರಾಗುತ್ತೀರಿ ಎಂಬ ಭರವಸೆ ನನಗಿತ್ತು.
2 కొరింథీయులకు 2 : 4 (ERVTE)
ನಾನು ಮೊದಲೊಮ್ಮೆ ನಿಮಗೆ ಬರೆದಾಗ, ನನ್ನ ಹೃದಯವು ಬಹಳ ಗಲಿಬಿಲಿಗೊಂಡಿತ್ತು ಮತ್ತು ದುಃಖಗೊಂಡಿತ್ತು. ನಾನು ಕಣ್ಣೀರಿಡುತ್ತಾ ನಿಮಗೆ ಬರೆದದ್ದು ನಿಮ್ಮನ್ನು ದುಃಖಗೊಳಿಸುವುದಕ್ಕಲ್ಲ, ನಿಮ್ಮನ್ನು ಎಷ್ಟು ಪ್ರೀತಿಸುತ್ತೇನೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದಷ್ಟೆ.
2 కొరింథీయులకు 2 : 5 (ERVTE)
{#1ತಪ್ಪು ಮಾಡಿದ ಆ ವ್ಯಕ್ತಿಯನ್ನು ಕ್ಷಮಿಸಿರಿ } ನಿಮ್ಮ ಸಭೆಯ ಒಬ್ಬನು ದುಃಖವನ್ನು ಉಂಟುಮಾಡಿದ್ದು ನನಗಲ್ಲ. ಒಂದಲ್ಲ ಒಂದು ರೀತಿಯಲ್ಲಿ ಅವನು ನಿಮ್ಮೊಲ್ಲರಿಗೂ ದುಃಖವನ್ನು ಉಂಟುಮಾಡಿದ್ದಾನೆ. (ಅದು ತನ್ನ ವಾಸ್ತವ ಸ್ಥಿತಿಗಿಂತ ಹೆಚ್ಚು ಕೆಟ್ಟದ್ದಾಗಿ ಕಾಣುವಂತೆ ಮಾಡಲು ನನಗೆ ಇಷ್ಟವಿಲ್ಲ.)
2 కొరింథీయులకు 2 : 6 (ERVTE)
ನಿಮ್ಮ ಸಭೆಯ ಬಹುಮಂದಿ ಅವನಿಗೆ ವಿಧಿಸಿರುವ ಶಿಕ್ಷೆಯೇ ಸಾಕಾಗಿದೆ.
2 కొరింథీయులకు 2 : 7 (ERVTE)
ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ.
2 కొరింథీయులకు 2 : 8 (ERVTE)
ಆದ್ದರಿಂದ ನೀವು ಅವನನ್ನು ಪ್ರೀತಿಸುತ್ತೀರೆಂಬುದನ್ನು ಅವನಿಗೆ ತೋರಿಸಿಕೊಡಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
2 కొరింథీయులకు 2 : 9 (ERVTE)
ನೀವು ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿದ್ದೀರೋ ಇಲ್ಲವೋ ಎಂಬುದನ್ನು ಪರೀಕ್ಷಿಸಿ ತಿಳಿದುಕೊಳ್ಳಲು ನಿಮಗೆ ಬರೆದೆನು.
2 కొరింథీయులకు 2 : 10 (ERVTE)
ನೀವು ಒಬ್ಬ ವ್ಯಕ್ತಿಯನ್ನು ಕ್ಷಮಿಸಿದರೆ, ನಾನೂ ಆ ವ್ಯಕ್ತಿಯನ್ನು ಕ್ಷಮಿಸುತ್ತೇನೆ. ನಾನು ಕ್ಷಮಿಸಿದ್ದನ್ನು ನಿಮಗೋಸ್ಕರವಾಗಿಯೇ ಕ್ಷಮಿಸಿದ್ದೇನೆ. ನಾನು ಕ್ಷಮಿಸಬೇಕಾದದ್ದನ್ನೆಲ್ಲ ಕ್ಷಮಿಸಿದ್ದೇನೆ ಮತ್ತು ಕ್ರಿಸ್ತನೇ ನನ್ನೊಂದಿಗೆ ಇದ್ದನು.
2 కొరింథీయులకు 2 : 11 (ERVTE)
ಸೈತಾನನು ನಮ್ಮಿಂದ ಯಾವುದನ್ನೂ ಕಸಿದುಕೊಳ್ಳಬಾರದೆಂದು ನಾನು ಹೀಗೆ ಮಾಡಿದೆನು. ಸೈತಾನನ ಯೋಜನೆಗಳು ಯಾವುವೆಂದು ನಮಗೆ ಚೆನ್ನಾಗಿ ತಿಳಿದಿವೆ.
2 కొరింథీయులకు 2 : 12 (ERVTE)
{#1ತ್ರೋವದಲ್ಲಿ ಪೌಲನ ಉದ್ವೇಗ } ನಾನು ಕ್ರಿಸ್ತನ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ತ್ರೋವಕ್ಕೆ ಹೋದೆನು. ಪ್ರಭುವು ಅಲ್ಲಿ ನನಗೆ ಒಳ್ಳೆಯ ಅವಕಾಶವನ್ನು ಕೊಟ್ಟನು.
2 కొరింథీయులకు 2 : 13 (ERVTE)
ಆದರೆ ನನ್ನ ಸಹೋದರನಾದ ತೀತನನ್ನು ನಾನು ಅಲ್ಲಿ ಕಾಣಲಿಲ್ಲವಾದ್ದರಿಂದ ನನಗೆ ಸಮಾಧಾನವಿರಲಿಲ್ಲ. ಆದ್ದರಿಂದ ನಾನು ಅವರನ್ನು ವಂದಿಸಿ ಮಕೆದೋನಿಯಕ್ಕೆ ಹೊರಟೆನು.
2 కొరింథీయులకు 2 : 14 (ERVTE)
ದೇವರಿಗೆ ಸ್ತೋತ್ರವಾಗಲಿ. ದೇವರು ನಮ್ಮನ್ನು ಕ್ರಿಸ್ತನ ಮೂಲಕ ಯಾವಾಗಲೂ ವಿಜಯೋತ್ಸವದತ್ತ ನಡೆಸುತ್ತಿದ್ದಾನೆ. ದೇವರು ತನ್ನ ಜ್ಞಾನವೆಂಬ ಪರಿಮಳವನ್ನು ಎಲ್ಲಾ ಕಡೆಗಳಲ್ಲಿಯೂ ಹರಡಲು ನಮ್ಮನ್ನು ಉಪಯೋಗಿಸುತ್ತಿದ್ದಾನೆ.
2 కొరింథీయులకు 2 : 15 (ERVTE)
ರಕ್ಷಣಾಮಾರ್ಗದಲ್ಲಿರುವವರ ಮತ್ತು ನಾಶನಮಾರ್ಗದಲ್ಲಿರುವವರ ಮಧ್ಯದಲ್ಲಿ ನಾವು ಕ್ರಿಸ್ತನ ಪರಿಮಳವಾಗಿದ್ದೇವೆ. ದೇವರಿಗೆ ಇದೇ ನಮ್ಮ ಕಾಣಿಕೆ.
2 కొరింథీయులకు 2 : 16 (ERVTE)
ನಾಶನಮಾರ್ಗದಲ್ಲಿರುವ ಜನರಿಗೆ ಮರಣವನ್ನು ಉಂಟುಮಾಡುವ ಮರಣದ ವಾಸನೆಯಾಗಿದ್ದೇವೆ. ಆದರೆ ರಕ್ಷಣಾಮಾರ್ಗದಲ್ಲಿರುವ ಜನರಿಗೆ ಜೀವವನ್ನು ಉಂಟುಮಾಡುವ ಜೀವದ ವಾಸನೆಯಾಗಿದ್ದೇವೆ. ಹೀಗಿರಲಾಗಿ, ಈ ಕಾರ್ಯವನ್ನು ಮಾಡಲು ಯಾರು ಯೋಗ್ಯರಾಗಿದ್ದಾರೆ?
2 కొరింథీయులకు 2 : 17 (ERVTE)
ಇತರ ಅನೇಕರು ಮಾಡುವಂತೆ ನಾವು ದೇವರ ವಾಕ್ಯವನ್ನು ಕಲಬೆರಕೆ ಮಾಡುವುದಿಲ್ಲ. ಆದರೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸನ್ನಿಧಾನದಲ್ಲಿ ಸತ್ಯವನ್ನು ಹೇಳುತ್ತೇವೆ. ದೇವರಿಂದ ಕಳುಹಿಸಲ್ಪಟ್ಟ ಜನರಂತೆ ನಾವು ಮಾತಾಡುತ್ತೇವೆ.
❮
❯
1
2
3
4
5
6
7
8
9
10
11
12
13
14
15
16
17