2 కొరింథీయులకు 4 : 1 (ERVTE)
{#1ಮಡಕೆಗಳಲ್ಲಿರುವ ಆತ್ಮಿಕ ಭಂಡಾರ } ದೇವರು ತನ್ನ ಕೃಪೆಯಿಂದ ಈ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.
2 కొరింథీయులకు 4 : 2 (ERVTE)
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
2 కొరింథీయులకు 4 : 3 (ERVTE)
ನಾವು ಬೋಧಿಸುವ ಸುವಾರ್ತೆಯು ಮರೆಯಾಗಿರಬಹುದು. ಆದರೆ ನಾಶನದ ಮಾರ್ಗದಲ್ಲಿರುವವರಿಗೆ ಮಾತ್ರ ಅದು ಮರೆಯಾಗಿದೆ.
2 కొరింథీయులకు 4 : 4 (ERVTE)
ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.
2 కొరింథీయులకు 4 : 5 (ERVTE)
ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.
2 కొరింథీయులకు 4 : 6 (ERVTE)
“ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ಈ ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.
2 కొరింథీయులకు 4 : 7 (ERVTE)
ನಮಗೆ ಈ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೋ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಈ ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.
2 కొరింథీయులకు 4 : 8 (ERVTE)
ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೋ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.
2 కొరింథీయులకు 4 : 9 (ERVTE)
ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ.
2 కొరింథీయులకు 4 : 10 (ERVTE)
ನಮ್ಮ ದೇಹಗಳಲ್ಲಿ ಯೇಸುವಿನ ಜೀವವು ತೋರಿಬರಲೆಂದು ಆತನ ಮರಣಾವಸ್ಥೆಯನ್ನು ಅನುಭವಿಸುತ್ತಿದ್ದೇವೆ.
2 కొరింథీయులకు 4 : 11 (ERVTE)
ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.
2 కొరింథీయులకు 4 : 12 (ERVTE)
ಆದ್ದರಿಂದ ಮರಣವು ನಮ್ಮಲ್ಲಿ ಕಾರ್ಯಮಾಡುತ್ತಿದೆ, ಆದರೆ ನಿಮ್ಮಲ್ಲಿ ಜೀವವು ಕಾರ್ಯಮಾಡುತ್ತಿದೆ.
2 కొరింథీయులకు 4 : 13 (ERVTE)
“ನಾನು ನಂಬಿದ್ದರಿಂದಲೇ ಮಾತಾಡಿದೆನು.” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನಮ್ಮ ನಂಬಿಕೆಯು ಸಹ ಅದೇ ರೀತಿಯಲ್ಲಿದೆ. ನಾವು ನಂಬುವುದರಿಂದಲೇ ಮಾತಾಡುತ್ತೇವೆ.
2 కొరింథీయులకు 4 : 14 (ERVTE)
ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.
2 కొరింథీయులకు 4 : 15 (ERVTE)
ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.
2 కొరింథీయులకు 4 : 16 (ERVTE)
{#1ನಂಬಿಕೆಯ ಜೀವನ } ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.
2 కొరింథీయులకు 4 : 17 (ERVTE)
ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಆ ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.
2 కొరింథీయులకు 4 : 18 (ERVTE)
ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.

1 2 3 4 5 6 7 8 9 10 11 12 13 14 15 16 17 18