రాజులు రెండవ గ్రంథము 22 : 1 (ERVTE)
{#1ಯೋಷೀಯನು ಯೆಹೂದದಲ್ಲಿ ತನ್ನ ಆಳ್ವಿಕೆಯನ್ನು ಆರಂಭಿಸುವನು } ಯೋಷೀಯನು ಆಳಲಾರಂಭಿಸಿದಾಗ ಅವನಿಗೆ ಎಂಟು ವರ್ಷ ವಯಸ್ಸಾಗಿತ್ತು. ಅವನು ಮೂವತ್ತೊಂದು ವರ್ಷ ಜೆರುಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಯದೀದಾ. ಇವಳು ಬೊಚ್ಕತ್ ಎಂಬ ಸ್ಥಳದ ಅದಾಯ ಎಂಬವನ ಮಗಳು.
రాజులు రెండవ గ్రంథము 22 : 2 (ERVTE)
ಯೆಹೋವನು ಯೋಗ್ಯವೆಂದು ಹೇಳಿದ ಕಾರ್ಯಗಳನ್ನು ಯೋಷೀಯನು ಮಾಡಿದನು. ಯೋಷೀಯನು ತನ್ನ ಪೂರ್ವಿಕನಾದ ದಾವೀದನಂತೆ ದೇವರನ್ನು ಅನುಸರಿಸಿದನು. ಯೋಷೀಯನು ದೇವರ ಬೋಧನೆಗಳಲ್ಲಿ ಯಾವುದೇ ಬದಲಾವಣೆ ಮಾಡದೆ ಅವುಗಳನ್ನು ಅನುಸರಿಸಿದನು.
రాజులు రెండవ గ్రంథము 22 : 3 (ERVTE)
{#1ಯೋಷೀಯನು ದೇವಾಲಯದ ದುರಸ್ತಿಗೆ ಆಜ್ಞಾಪಿಸುವನು } ಯೋಷೀಯನು ರಾಜನಾಗಿದ್ದ ಹದಿನೆಂಟನೆಯ ವರ್ಷದಲ್ಲಿ ಅಚೆಲ್ಯನ ಮಗನೂ ಮೆಷುಲ್ಲಾಮನ ಮೊಮ್ಮಗನೂ ಕಾರ್ಯದರ್ಶಿಯೂ ಆದ ಶಾಫಾನನನ್ನು ದೇವಾಲಯಕ್ಕೆ ಕಳುಹಿಸಿದನು.
రాజులు రెండవ గ్రంథము 22 : 4 (ERVTE)
ಯೋಷೀಯನು, “ಮಹಾಯಾಜಕನಾದ ಹಿಲ್ಕೀಯನ ಬಳಿಗೆ ಹೋಗು. ದ್ವಾರಪಾಲಕರು ಜನರಿಂದ ಒಟ್ಟುಗೂಡಿಸಿರುವ ಹಣವನ್ನು ಅವನು ಲೆಕ್ಕಿಸಲಿ. ಜನರು ದೇವಾಲಯಕ್ಕೆ ತೆಗೆದುಕೊಂಡು ಬಂದು ಕೊಟ್ಟ ಹಣವೇ ಇದು.
రాజులు రెండవ గ్రంథము 22 : 5 (ERVTE)
ನಂತರ ಯಾಜಕರು ದೇವಾಲಯದಲ್ಲಿ ಕೆಲಸದ ಉಸ್ತುವಾರಿಯನ್ನು ನೋಡಿಕೊಳ್ಳುವ ಮುಖ್ಯಸ್ಥರಿಗೆ ಕೊಡಲಿ. ಯಾಜಕರು ದೇವಾಲಯವನ್ನು ದುರಸ್ತಿ ಮಾಡುವ ಕೆಲಸಗಾರರಿಗೆ ಈ ಹಣವನ್ನು ವಿನಿಯೋಗಿಸಲಿ.
రాజులు రెండవ గ్రంథము 22 : 6 (ERVTE)
ಅಲ್ಲಿ ಬಡಗಿಗಳು, ಶಿಲ್ಪಿಗಳು ಮತ್ತು ಕಲ್ಲುಕುಟಿಕರಿದ್ದಾರೆ. ಮರವನ್ನು ಕೊಳ್ಳಲು ಮತ್ತು ಕಲ್ಲುಗಳನ್ನು ಕೆತ್ತಿಸಲು ಈ ಹಣವನ್ನು ಬಳಸಿ.
రాజులు రెండవ గ్రంథము 22 : 7 (ERVTE)
ನೀವು ಕೆಲಸಗಾರರಿಗೆ ಕೊಡುವ ಹಣವನ್ನು ಲೆಕ್ಕಹಾಕಬೇಡಿ. ಯಾಕೆಂದರೆ ಆ ಕೆಲಸಗಾರರು ನಂಬಿಗಸ್ತರಾಗಿದ್ದಾರೆ” ಎಂದು ಹೇಳಿದನು.
రాజులు రెండవ గ్రంథము 22 : 8 (ERVTE)
{#1ದೇವಾಲಯದಲ್ಲಿ ಧರ್ಮಶಾಸ್ತ್ರವು ಸಿಕ್ಕಿತು }
రాజులు రెండవ గ్రంథము 22 : 9 (ERVTE)
ಪ್ರಧಾನಯಾಜಕನಾದ ಹಿಲ್ಕೀಯನು ಕಾರ್ಯದರ್ಶಿಯಾದ ಶಾಫಾನನಿಗೆ, “ದೇವಾಲಯದಲ್ಲಿ ನನಗೆ [BKS]ಧರ್ಮಶಾಸ್ತ್ರವು[BKE] ಸಿಕ್ಕಿತು” ಎಂದು ಹೇಳಿದನು. ಹಿಲ್ಕೀಯನು ಅದನ್ನು ಶಾಫಾನನಿಗೆ ನೀಡಿದನು. ಶಾಫಾನನು ಅದನ್ನು ಓದಿದನು. ಕಾರ್ಯದರ್ಶಿಯಾದ ಶಾಫಾನನು ರಾಜನಾದ ಯೋಷಿಯನ ಬಳಿಗೆ ಬಂದು ಅವನಿಗೆ, “ನಿನ್ನ ಸೇವಕರು ದೇವಾಲಯದಲ್ಲಿದ್ದ ಹಣವನ್ನು ವ್ಯಯಮಾಡಿದರು. ಅವರು ಆ ಹಣವನ್ನು ದೇವಾಲಯದಲ್ಲಿ ಕೆಲಸ ಮಾಡಿಸುವ ಮೇಲ್ವಿಚಾರಕರಿಗೆ ಒಪ್ಪಿಸಿದರು” ಎಂದು ಹೇಳಿದನು.
రాజులు రెండవ గ్రంథము 22 : 10 (ERVTE)
ನಂತರ ಕಾರ್ಯದರ್ಶಿಯಾದ ಶಾಫಾನನು ರಾಜನಿಗೆ, “ಯಾಜಕನಾದ ಹಿಲ್ಕೀಯನು ನನಗೆ ಒಂದು ಗ್ರಂಥವನ್ನು ಕೊಟ್ಟನು” ಎಂದು ಹೇಳಿದನು. ಶಾಫಾನನು ರಾಜನಿಗೆ ಆ ಗ್ರಂಥವನ್ನು ಓದಿದನು.
రాజులు రెండవ గ్రంథము 22 : 11 (ERVTE)
ರಾಜನು [BKS]ಧರ್ಮಶಾಸ್ತ್ರದ[BKE] ವಾಕ್ಯಗಳನ್ನು ಕೇಳಿದಾಗ, ಗಲಿಬಿಲಿಗೊಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
రాజులు రెండవ గ్రంథము 22 : 12 (ERVTE)
ಅನಂತರ ರಾಜನು ಯಾಜಕನಾದ ಹಿಲ್ಕೀಯನಿಗೆ, ಶಾಫಾನನ ಮಗನಾದ ಅಹೀಕಾಮನಿಗೆ, ಮೀಕಾಯನ ಮಗನಾದ ಅಕ್ಬೋರನಿಗೆ, ಕಾರ್ಯದರ್ಶಿಯಾದ ಶಾಫಾನನಿಗೆ ಮತ್ತು ರಾಜಸೇವಕನಾದ ಅಸಾಯನಿಗೆ ಒಂದು ಆಜ್ಞೆಯನ್ನು ನೀಡಿದನು.
రాజులు రెండవ గ్రంథము 22 : 13 (ERVTE)
ರಾಜನಾದ ಯೋಷೀಯನು, “ಈಗ ನಾವು ಏನು ಮಾಡಬೇಕೆಂದು ಯೆಹೋವನನ್ನು ಕೇಳಿ. ನನಗಾಗಿ, ಜನರಿಗಾಗಿ ಮತ್ತು ಎಲ್ಲಾ ಯೆಹೂದಕ್ಕಾಗಿ ಯೆಹೋವನನ್ನು ಕೇಳಿ. ಈಗ ಸಿಕ್ಕಿರುವ ಈ ಗ್ರಂಥದ ವಾಕ್ಯಗಳನ್ನು ಕುರಿತಾಗಿಯೂ ಕೇಳಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಏಕೆಂದರೆ ನಮ್ಮ ಪೂರ್ವಿಕರು ಈ ಗ್ರಂಥದ ವಾಕ್ಯಗಳಿಗೆ ಕಿವಿಗೊಡಲಿಲ್ಲ; ಅವುಗಳನ್ನು ಕೈಕೊಂಡು ನಡೆಯಲಿಲ್ಲ” ಎಂದು ಹೇಳಿದನು.
రాజులు రెండవ గ్రంథము 22 : 14 (ERVTE)
{#1ಯೋಷೀಯನು ತನ್ನ ಜನರನ್ನು ಪ್ರವಾದಿಯಾದ ಹುಲ್ದಳ ಬಳಿಗೆ ಕಳುಹಿಸಿದನು }
రాజులు రెండవ గ్రంథము 22 : 15 (ERVTE)
ಆದ್ದರಿಂದ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಎಂಬವರು ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋದರು. ಹುಲ್ದಳು ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ಶಲ್ಲೂಮನ ಹೆಂಡತಿ. ಅವನು ಯಾಜಕರ ವಸ್ತ್ರಗಳಿಗೆ ಮೇಲ್ವಿಚಾರಕನಾಗಿದ್ದನು. ಹುಲ್ದಳು ಜೆರುಸಲೇಮಿನ ಎರಡನೆಯ ಭಾಗದಲ್ಲಿ[* ಎರಡನೆಯ ಭಾಗ ಜೆರುಸಲೇಮನ್ನು ನಾಲ್ಕು ಭಾಗಗಳನ್ನಾಗಿ ವಿಂಗಡಿಸಲಾಗಿತ್ತು. ] ವಾಸಿಸುತ್ತಿದ್ದಳು. ಅವರು ಹೋಗಿ ಹುಲ್ದಳ ಜೊತೆಯಲ್ಲಿ ಮಾತನಾಡಿದರು. ಆಗ ಹುಲ್ದಳು ಅವರಿಗೆ, “ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನ ಬಳಿಗೆ ಹೋಗಿ
రాజులు రెండవ గ్రంథము 22 : 16 (ERVTE)
ಇಸ್ರೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ: ‘ಈ ದೇಶದ ಮೇಲೆ ಮತ್ತು ಇಲ್ಲಿ ವಾಸಮಾಡುತ್ತಿರುವ ಜನರ ಮೇಲೆ ನಾನು ಕೇಡುಗಳನ್ನು ಬರಮಾಡುವೆನು. ಯೆಹೂದದ ರಾಜನು ಓದಿದ ಗ್ರಂಥದಲ್ಲಿ ಈ ಕೇಡುಗಳನ್ನು ತಿಳಿಸಲಾಗಿದೆ.
రాజులు రెండవ గ్రంథము 22 : 17 (ERVTE)
ಯೆಹೂದದ ರಾಜರು ನನ್ನನ್ನು ತ್ಯಜಿಸಿದರು ಮತ್ತು ಇತರ ದೇವರುಗಳಿಗೆ ಧೂಪವನ್ನು ಸುಟ್ಟರು. ಅವರು ನನ್ನಲ್ಲಿ ಹೆಚ್ಚು ಕೋಪವನ್ನು ಉಂಟುಮಾಡಿದರು. ಅವರು ಅನೇಕ ವಿಗ್ರಹಗಳನ್ನು ನಿರ್ಮಿಸಿದರು. ಆದಕಾರಣವೇ ನಾನು ನನ್ನ ಕೋಪವನ್ನು ಈ ಸ್ಥಳದ ವಿರುದ್ಧ ತೋರ್ಪಡಿಸುತ್ತೇನೆ. ನನ್ನ ಕೋಪವು ಆರಿಹೋಗದ ಬೆಂಕಿಯಂತಿರುತ್ತದೆ!’
రాజులు రెండవ గ్రంథము 22 : 18 (ERVTE)
(18-19)“ಯೆಹೂದದ ರಾಜನಾದ ಯೋಷೀಯನು ಯೆಹೋವನ ಸಲಹೆಯನ್ನು ಕೇಳಲು ನಿಮ್ಮನ್ನು ಕಳುಹಿಸಿದನು. ಯೋಷೀಯನಿಗೆ ಈ ಸಂಗತಿಗಳನ್ನು ಹೇಳಿ: ‘ನೀನು ಕೇಳುವ ಈ ಮಾತುಗಳನ್ನು ಇಸ್ರೇಲರ ದೇವರಾದ ಯೆಹೋವನು ಹೇಳಿದನು. ಈ ದೇಶವನ್ನು ಮತ್ತು ಇಲ್ಲಿ ವಾಸಿಸುವ ಜನರನ್ನು ಕುರಿತು ನಾನು ಹೇಳಿದ ಸಂಗತಿಗಳನ್ನು ನೀನು ಕೇಳಿರುವೆ. ನಿನ್ನ ಹೃದಯವು ಮೃದುವಾಗಿರುವುದರಿಂದ, ನೀನು ಅವುಗಳನ್ನು ಕೇಳಿದಾಗ ದೈನ್ಯತೆಯುಳ್ಳವನಾದೆ. ಈ ಸ್ಥಳಕ್ಕೆ (ಜೆರುಸಲೇಮಿಗೆ) ಆ ಭೀಕರ ಸಂಗತಿಗಳಾಗುತ್ತವೆಯೆಂದು ನಾನು ಹೇಳಿದೆ. ಆಗ ನೀನು ದುಃಖದಿಂದ ನಿನ್ನ ಬಟ್ಟೆಗಳನ್ನು ಹರಿದುಕೊಂಡು ಅಳಲಾರಂಭಿಸಿದೆ. ಆದಕಾರಣವೇ ನಾನು ನಿನಗೆ ಕಿವಿಗೊಟ್ಟೆನು.’ ಯೆಹೋವನು ಹೇಳುವುದೇನೆಂದರೆ:
రాజులు రెండవ గ్రంథము 22 : 19 (ERVTE)
రాజులు రెండవ గ్రంథము 22 : 20 (ERVTE)
‘ನೀನು ನಿನ್ನ ಪೂರ್ವಿಕರ ಜೊತೆ ಸೇರುವಂತೆ ನಾನು ಮಾಡುತ್ತೇನೆ. ನೀನು ಶಾಂತಿಯಿಂದ ಸತ್ತು ನಿನ್ನ ಸಮಾಧಿಯನ್ನು ಸೇರುವೆ. ಈ ದೇಶದ (ಜೆರುಸಲೇಮಿನ) ಮೇಲೆ ನಾನು ತರಲಿರುವ ಕೇಡುಗಳನ್ನು ನಿನ್ನ ಕಣ್ಣುಗಳು ನೋಡುವುದಿಲ್ಲ’ ಎಂಬುದೇ” ಎಂದು ಹೇಳಿದಳು. ನಂತರ ಯಾಜಕನಾದ ಹಿಲ್ಕೀಯ, ಅಹೀಕಾಮ್, ಅಕ್ಬೋರ್, ಶಾಫಾನ್ ಮತ್ತು ಅಸಾಯ ಹಿಂತಿರುಗಿ ಬಂದು ರಾಜನಿಗೆ ತಿಳಿಸಿದರು.

1 2 3 4 5 6 7 8 9 10 11 12 13 14 15 16 17 18 19 20