సమూయేలు రెండవ గ్రంథము 23 : 1 (ERVTE)
{#1ದಾವೀದನ ಕೊನೆಯ ಮಾತುಗಳು } ಇವು ಇಷಯನ ಮಗನಾದ ದಾವೀದನ ಕೊನೆಯ ಮಾತುಗಳು: “ದಾವೀದನು ಈ ಹಾಡನ್ನು ಹಾಡಿದನು. ದೇವರಿಂದ ಉನ್ನತಿಗೇರಿಸಲ್ಪಟ್ಟವನ ಸಂದೇಶವಿದು. ಯಾಕೋಬನ ದೇವರಿಂದ ಆರಿಸಲ್ಪಟ್ಟ ರಾಜನೇ ಅವನು. ಅವನು ಇಸ್ರೇಲಿನ ಒಳ್ಳೆಯ ಹಾಡುಗಾರ.
సమూయేలు రెండవ గ్రంథము 23 : 2 (ERVTE)
ಯೆಹೋವನ ಆತ್ಮವು ನನ್ನ ಮೂಲಕ ಮಾತನಾಡಿತು. ಆತನ ನುಡಿಗಳು ನನ್ನ ನಾಲಿಗೆಯ ಮೇಲಿವೆ.
సమూయేలు రెండవ గ్రంథము 23 : 3 (ERVTE)
ಇಸ್ರೇಲಿನ ದೇವರು ಮಾತನಾಡಿದನು. ಇಸ್ರೇಲಿನ ಬಂಡೆಯಾದಾತನು ನನಗೆ ತಿಳಿಸಿದನು. ‘ದೇವರಲ್ಲಿ ಭಯಭಕ್ತಿಯನ್ನಿಟ್ಟು ಜನರನ್ನು ನ್ಯಾಯವಾಗಿ ಆಳುವ ವ್ಯಕ್ತಿಯು
సమూయేలు రెండవ గ్రంథము 23 : 4 (ERVTE)
ಹೊತ್ತಾರೆಯ ಬೆಳಕಿನ ಕಿರಣಗಳಂತೆಯೂ ಮೋಡಗಳೇ ಇಲ್ಲದ ಮುಂಜಾನೆಯಂತೆಯೂ ಮಳೆ ಬಿದ್ದನಂತರ ಬರುವ ಸೂರ್ಯನ ಬೆಳಕಿನಂತೆಯೂ ಗರಿಕೆಯನ್ನು ನೆಲದಿಂದ ಮೂಡಿಸುವ ಮಳೆಯಂತೆಯೂ ಇದ್ದಾನೆ.’
సమూయేలు రెండవ గ్రంథము 23 : 5 (ERVTE)
“ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.
సమూయేలు రెండవ గ్రంథము 23 : 6 (ERVTE)
“ಆದರೆ ಕೆಟ್ಟಜನರೆಲ್ಲರೂ ಮುಳ್ಳುಗಳಂತಿದ್ದಾರೆ. ಜನರು ಮುಳ್ಳುಗಳನ್ನು ಹಿಡಿದುಕೊಳ್ಳುವುದಿಲ್ಲ; ಅವರು ಅವುಗಳನ್ನು ಎಸೆದುಬಿಡುವರು.
సమూయేలు రెండవ గ్రంథము 23 : 7 (ERVTE)
ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!”
సమూయేలు రెండవ గ్రంథము 23 : 8 (ERVTE)
{#1ದಾವೀದನ ಶೂರ ಸೈನಿಕರು }
సమూయేలు రెండవ గ్రంథము 23 : 9 (ERVTE)
ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು. ಎರಡನೆಯವನು ಅಹೋಹ್ಯನಾದ ದೋದೋ ಎಂಬವನ ಮಗನಾದ ಎಲ್ಲಾಜಾರ. ದಾವೀದನು ಫಿಲಿಷ್ಟಿಯರನ್ನು ಎದುರಿಸಿದ ಸಮಯದಲ್ಲಿ ಅವನೊಂದಿಗಿದ್ದ ಮೂರು ಮಂದಿ ವೀರರಲ್ಲಿ ಎಲ್ಲಾಜಾರನು ಒಬ್ಬನಾಗಿದ್ದನು. ಫಿಲಿಷ್ಟಿಯರು ಯುದ್ಧಕ್ಕೆ ಕೂಡಿಬಂದಾಗ, ಇಸ್ರೇಲ್ ಸೈನಿಕರು ಓಡಿಹೋಗಿದ್ದರು.
సమూయేలు రెండవ గ్రంథము 23 : 10 (ERVTE)
ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು.
సమూయేలు రెండవ గ్రంథము 23 : 11 (ERVTE)
ಮೂರನೆಯವನು, ಹರಾರ್ಯನಾದ ಅಗೇಯನ ಮಗನಾದ ಶಮ್ಮ. ಫಿಲಿಷ್ಟಿಯರು ದೊಡ್ಡಗುಂಪಾಗಿ ಬಂದು ಅಲಸಂದಿಯ ಹೊಲದಲ್ಲಿ ಹೋರಾಡಿದರು. ಇಸ್ರೇಲರು ಫಿಲಿಷ್ಟಿಯರಿಂದ ಓಡಿಹೋದರು.
సమూయేలు రెండవ గ్రంథము 23 : 12 (ERVTE)
ಆದರೆ ಶಮ್ಮನು ಹೊಲದ ಮಧ್ಯಭಾಗದಲ್ಲಿ ನಿಂತು ಅದನ್ನು ಉಳಿಸಿಕೊಂಡನು. ಅವನು ಫಿಲಿಷ್ಟಿಯರನ್ನು ಕೊಂದನು. ಆ ಸಮಯದಲ್ಲಿ ಯೆಹೋವನು ಮಹಾವಿಜಯವನ್ನು ಕೊಟ್ಟನು.
సమూయేలు రెండవ గ్రంథము 23 : 13 (ERVTE)
సమూయేలు రెండవ గ్రంథము 23 : 14 (ERVTE)
ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ[* ಮೂವತ್ತು ಮಂದಿ ಶೂರರು ಪ್ರಖ್ಯಾತರಾಗಿದ್ದ ಹಾಗೂ ಬಹಳ ಧೈರ್ಯಶಾಲಿಗಳಾಗಿದ್ದ ಈ ಸೈನಿಕರು ದಾವೀದನ ಗುಂಪಿನವರು. ] ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು. ಆ ಸಮಯದಲ್ಲಿ ದಾವೀದನು ಕೋಟೆಯಲ್ಲಿದ್ದನು. ಫಿಲಿಷ್ಟಿಯ ಸೈನಿಕರಲ್ಲಿ ಕೆಲವರು ಬೆತ್ಲೆಹೇಮಿನಲ್ಲಿದ್ದರು.
సమూయేలు రెండవ గ్రంథము 23 : 15 (ERVTE)
ದಾವೀದನಿಗೆ ತನ್ನ ಸ್ವಸ್ಥಳದ ನೀರನ್ನು ಕುಡಿಯಲು ಅತಿಯಾಸೆಯಾಯಿತು. ದಾವೀದನು “ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ಯಾರಾದರೂ ನೀರನ್ನು ನನಗೆ ತಂದುಕೊಟ್ಟರೆ ಎಷ್ಟು ಚೆನ್ನಾಗಿರುವುದು” ಎಂದು ಹೇಳಿದನು.
సమూయేలు రెండవ గ్రంథము 23 : 16 (ERVTE)
ಆದರೆ ಈ ಮೂವರು ಪರಾಕ್ರಮಿಗಳು ಫಿಲಿಷ್ಟಿಯ ಸೈನ್ಯದಲ್ಲಿ ನುಗ್ಗಿಹೋಗಿ, ಬೆತ್ಲೆಹೇಮ್ ನಗರದ್ವಾರದ ಬಾವಿಯಿಂದ ನೀರನ್ನು ತಂದುಕೊಟ್ಟರು. ಆದರೆ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಆ ನೀರನ್ನು ಅವನು ಯೆಹೋವನ ಸನ್ನಿಧಿಯಲ್ಲಿ ಸುರಿದು,
సమూయేలు రెండవ గ్రంథము 23 : 17 (ERVTE)
“ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು.
సమూయేలు రెండవ గ్రంథము 23 : 18 (ERVTE)
ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು.
సమూయేలు రెండవ గ్రంథము 23 : 19 (ERVTE)
ಅಬೀಷೈಯನು ಈ ಮೂವರಿಗಿಂತಲೂ ಹೆಚ್ಚು ಗೌರವಕ್ಕೆ ಪಾತ್ರನಾದನು. ಅವನು ಈ ಮೂವರಿಗೆ ನಾಯಕನಾದನು. ಆದರೆ ಅವನು ಈ ಮೂವರಲ್ಲಿ ಒಬ್ಬನಾಗಿರಲಿಲ್ಲ.
సమూయేలు రెండవ గ్రంథము 23 : 20 (ERVTE)
ಯೆಹೋಯಾದಾವನ ಮಗನಾದ ಬೆನಾಯನು ಅವರಲ್ಲಿ ಒಬ್ಬನು. ಅವನು ಬಲಿಷ್ಠ ವ್ಯಕ್ತಿಯಾಗಿದ್ದನು. ಅವನು ಕಬ್ಜಯೇಲಿನವನಾಗಿದ್ದನು. ಬೆನಾಯನು ಅನೇಕ ಸಾಹಸಕಾರ್ಯಗಳನ್ನು ಮಾಡಿದನು. ಬೆನಾಯನು ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಬೆನಾಯನು ಮಂಜುಸುರಿಯುವಾಗ ಒಂದು ತಗ್ಗಿನಲ್ಲಿ ಇಳಿದು ಸಿಂಹವನ್ನು ಕೊಂದನು.
సమూయేలు రెండవ గ్రంథము 23 : 21 (ERVTE)
ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಆ ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.
సమూయేలు రెండవ గ్రంథము 23 : 22 (ERVTE)
ಯೆಹೋಯಾದಾವನ ಮಗನಾದ ಬೆನಾಯನು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದನು. ಬೆನಾಯನು ಆ ಮೂವರು ಪರಾಕ್ರಮಿಗಳಷ್ಟೇ ಪ್ರಸಿದ್ಧನಾಗಿದ್ದನು.
సమూయేలు రెండవ గ్రంథము 23 : 23 (ERVTE)
ಬೆನಾಯನು ಮೂವತ್ತು ಮಂದಿ ಪರಾಕ್ರಮಿಗಳಿಗಿಂತ ಹೆಚ್ಚು ಗೌರವಕ್ಕೆ ಪಾತ್ರನಾದರೂ ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ತನ್ನ ಅಂಗರಕ್ಷಕ ಪಡೆಯ ನಾಯಕನನ್ನಾಗಿ ಬೆನಾಯನನ್ನು ನೇಮಿಸಿದನು.
సమూయేలు రెండవ గ్రంథము 23 : 24 (ERVTE)
{#1ಮೂವತ್ತು ಮಂದಿ ಪರಾಕ್ರಮಿಗಳು } ಯೋವಾಬನ ಸೋದರನಾದ ಅಸಾಹೇಲನು ಮೂವತ್ತು ಮಂದಿ ಪರಾಕ್ರಮಿಗಳಲ್ಲಿ ಒಬ್ಬನಾಗಿದ್ದನು. ಮೂವತ್ತು ಮಂದಿ ಪರಾಕ್ರಮಿಗಳ ಗುಂಪಿನಲ್ಲಿದ್ದ ಇತರ ಜನರೆಂದರೆ: ಬೆತ್ಲೆಹೇಮಿನ ದೋದೋವಿನ ಮಗನಾದ ಎಲ್ಹಾನಾನನು.
సమూయేలు రెండవ గ్రంథము 23 : 25 (ERVTE)
ಹೆರೋದಿನವರಾದ ಶಮ್ಮ, ಎಲೀಕರು,
సమూయేలు రెండవ గ్రంథము 23 : 26 (ERVTE)
ಪೆಲೆಟಿನವನಾದ ಹೆಲೆಚ್, ತೆಕೋವದ ಇಕ್ಕೇಷನ ಮಗನಾದ ಈರಾ,
సమూయేలు రెండవ గ్రంథము 23 : 27 (ERVTE)
ಅಣತೋತಿನವನಾದ ಅಬೀಯೆಜೆರ್, ಹುಷಾ ಊರಿನವನಾದ ಮೆಬುನ್ನೈ
సమూయేలు రెండవ గ్రంథము 23 : 28 (ERVTE)
ಅಹೋಹಿನವನಾದ ಚಲ್ಮೋನ್, ನೆಟೋಫದವನಾದ ಮಹರೈ,
సమూయేలు రెండవ గ్రంథము 23 : 29 (ERVTE)
ನೆಟೋಫದವನಾದ ಬಾಣನ ಮಗ ಹೇಲೆದ್, ಬೆನ್ಯಾಮೀನ್ ಕುಟುಂಬದ ಗಿಬೆಯದ ರೀಬೈ ಎಂಬವನ ಮಗನಾದ ಇತ್ತೈ,
సమూయేలు రెండవ గ్రంథము 23 : 30 (ERVTE)
ಪಿರಾತೋನ್ಯನಾದ ಬೆನಾಯ, ನಹಲೇಗಾಷಿನವನಾದ ಹಿದ್ದೈ,
సమూయేలు రెండవ గ్రంథము 23 : 31 (ERVTE)
ಅರಾಬಾದ ಅಬೀಅಲ್ಬೋನ್, ಬರ್ಹುಮ್ಯನಾದ ಅಜ್ಮಾವೇತ್,
సమూయేలు రెండవ గ్రంథము 23 : 32 (ERVTE)
ಶಾಲ್ಬೋನ್ಯನಾದ ಎಲೆಯಖ್ಬಾ, ಯಾಷೇನನ ಗಂಡುಮಕ್ಕಳು, ಯೋನಾತಾನ,
సమూయేలు రెండవ గ్రంథము 23 : 33 (ERVTE)
ಹರಾರ್ಯನಾದ ಶಮ್ಮ, ಅರಾರ್ಯನಾದ ಶಾರಾರನ ಮಗ ಅಹೀಯಾಮ್,
సమూయేలు రెండవ గ్రంథము 23 : 34 (ERVTE)
ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,
సమూయేలు రెండవ గ్రంథము 23 : 35 (ERVTE)
ಕರ್ಮೆಲ್ಯನಾದ ಹೆಚ್ರೋ, ಅರ್ಬೀಯನಾದ ಪಾರೈ,
సమూయేలు రెండవ గ్రంథము 23 : 36 (ERVTE)
ಚೋಬದ ನಾತಾನನ ಮಗನಾದ ಇಗಾಲ್, ಗಾದ್ಯನಾದ ಬಾನೀ,
సమూయేలు రెండవ గ్రంథము 23 : 37 (ERVTE)
ಅಮ್ಮೋನಿಯನಾದ ಚೆಲೆಕ್, ಚೆರೂಯಳ ಮಗನಾದ ಯೋವಾಬನ ಸಹಾಯಕನೂ ಬೇರೋತ್ಯನೂ ಆದ ನಹರೈ,
సమూయేలు రెండవ గ్రంథము 23 : 38 (ERVTE)
ಇತ್ರೀಯರಾದ ಈರಾ ಗಾರೇಬರು ಮತ್ತು
సమూయేలు రెండవ గ్రంథము 23 : 39 (ERVTE)
ಹಿತ್ತಿಯನಾದ ಊರೀಯನು. ಹೀಗೆ ಒಟ್ಟು ಮೂವತ್ತೇಳು ಜನರಿದ್ದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39