2 థెస్సలొనీకయులకు 3 : 1 (ERVTE)
{#1ನಮಗೋಸ್ಕರ ಪ್ರಾರ್ಥಿಸಿ } ಸಹೋದರ ಸಹೋದರಿಯರೇ, ನಮಗೋಸ್ಕರ ಪ್ರಾರ್ಥಿಸಿರಿ. ಪ್ರಭುವಿನ ಉಪದೇಶವು ತ್ವರಿತಗತಿಯಲ್ಲಿ ಹಬ್ಬಲೆಂದು ಪ್ರಾರ್ಥಿಸಿ. ನಿಮ್ಮಂತೆಯೇ ಇತರ ಜನರು ಈ ಉಪದೇಶವನ್ನು ಗೌರವಿಸುವಂತೆ ಪ್ರಾರ್ಥಿಸಿ.
2 థెస్సలొనీకయులకు 3 : 2 (ERVTE)
ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)
2 థెస్సలొనీకయులకు 3 : 3 (ERVTE)
ಆದರೆ ಪ್ರಭುವು ನಂಬಿಗಸ್ತನು. ಆತನು ನಿಮ್ಮನ್ನು ಬಲಗೊಳಿಸುವನು ಮತ್ತು ಕೆಡುಕನಿಂದ (ಸೈತಾನನಿಂದ) ನಿಮ್ಮನ್ನು ರಕ್ಷಿಸುವನು.
2 థెస్సలొనీకయులకు 3 : 4 (ERVTE)
ನಾವು ನಿಮಗೆ ತಿಳಿಸಿದ ಸಂಗತಿಗಳನ್ನು ನೀವು ಮಾಡುತ್ತಿದ್ದೀರೆಂಬ ಭರವಸೆಯನ್ನು ಪ್ರಭುವೇ ನಮಗೆ ಕೊಟ್ಟಿದ್ದಾನೆ. ನೀವು ಇನ್ನು ಮುಂದೆಯೂ ಇವುಗಳನ್ನು ಮಾಡುವಿರೆಂದು ನಮಗೆ ತಿಳಿದದೆ.
2 థెస్సలొనీకయులకు 3 : 5 (ERVTE)
ದೇವರ ಪ್ರೀತಿಯ ಕಡೆಗೂ ಮತ್ತು ಕ್ರಿಸ್ತನ ತಾಳ್ಮೆಯ ಕಡೆಗೂ ನಿಮ್ಮ ಹೃದಯಗಳನ್ನು ಪ್ರಭುವೇ ಮುನ್ನಡೆಸಲಿ ಎಂದು ನಾವು ಪ್ರಾರ್ಥಿಸುತ್ತೇವೆ.
2 థెస్సలొనీకయులకు 3 : 6 (ERVTE)
{#1ಪ್ರತಿಯೊಬ್ಬರು ದುಡಿಯಲಿ } ಸಹೋದರ ಸಹೋದರಿಯರೇ, ಕೆಲಸ ಮಾಡದ ವಿಶ್ವಾಸಿಯಿಂದ ನೀವು ದೂರವಿರಬೇಕೆಂದು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಅಧಿಕಾರದಿಂದ ನಿಮಗೆ ಆಜ್ಞಾಪಿಸುತ್ತಿದ್ದೇವೆ. ನಾವು ನೀಡಿದ ಉಪದೇಶವನ್ನು ಅವರು ಅನುಸರಿಸುವುದಿಲ್ಲ.
2 థెస్సలొనీకయులకు 3 : 7 (ERVTE)
ನಾವು ಜೀವಿಸುವಂತೆಯೇ ನೀವೂ ಜೀವಿಸಬೇಕೆಂದು ನಿಮಗೆ ಗೊತ್ತಿದೆ. ನಾವು ನಿಮ್ಮ ಜೊತೆಯಲ್ಲಿದ್ದಾಗ ಸೋಮಾರಿಗಳಾಗಿರಲಿಲ್ಲ;
2 థెస్సలొనీకయులకు 3 : 8 (ERVTE)
ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.
2 థెస్సలొనీకయులకు 3 : 9 (ERVTE)
“ನಮಗೆ ಸಹಾಯ ಮಾಡಿ” ಎಂದು ನಿಮ್ಮನ್ನು ಕೇಳಲು ನಮಗೆ ಹಕ್ಕಿತ್ತು. ಆದರೆ ನಮ್ಮ ಪೋಷಣೆಗೆ ಬೇಕಾದದ್ದನ್ನು ನಾವೇ ದುಡಿದು ಸಂಪಾದಿಸಿದೆವು, ಏಕೆಂದರೆ ನಿಮಗೆ ನಾವು ಮಾದರಿಯಾಗಬೇಕೆಂದಿದ್ದೆವು.
2 థెస్సలొనీకయులకు 3 : 10 (ERVTE)
ನಾವು ನಿಮ್ಮ ಸಂಗಡವಿದ್ದಾಗ, “ಕೆಲಸ ಮಾಡದವನು ಊಟವನ್ನೂ ಮಾಡಕೂಡದು” ಎಂಬ ನಿಯಮವನ್ನು ವಿಧಿಸಿದೆವು.
2 థెస్సలొనీకయులకు 3 : 11 (ERVTE)
ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ ಇತರರ ಜೀವನದಲ್ಲಿ ಆಸಕ್ತರಾಗಿದ್ದಾರೆ ಎಂಬುದನ್ನು ಕೇಳಿದ್ದೇವೆ.
2 థెస్సలొనీకయులకు 3 : 12 (ERVTE)
ತಮ್ಮ ಕೆಲಸವನ್ನು ತಾವು ನೋಡಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುತ್ತಿದ್ದೇವೆ. ಅವರೇ ದುಡಿದು ತಮ್ಮ ಆಹಾರವನ್ನು ಸಂಪಾದಿಸಿಕೊಳ್ಳಬೇಕೆಂದು ಆಜ್ಞಾಪಿಸಿ ಪ್ರಭುವಾದ ಯೇಸು ಕ್ರಿಸ್ತನಲ್ಲಿ ಬೇಡಿಕೊಳ್ಳುತ್ತೇವೆ.
2 థెస్సలొనీకయులకు 3 : 13 (ERVTE)
ಸಹೋದರ ಸಹೋದರಿಯರೇ, ಒಳ್ಳೆಯದನ್ನು ಮಾಡುವುದರಲ್ಲಿ ಎಂದಿಗೂ ಬೇಸರಗೊಳ್ಳಬೇಡಿ.
2 థెస్సలొనీకయులకు 3 : 14 (ERVTE)
ಈ ಪತ್ರದ ಮೂಲಕ ನಿಮಗೆ ತಿಳಿಸಿರುವ ಮಾತುಗಳಿಗೆ ಯಾವನಾದರೂ ವಿಧೇಯನಾಗದಿದ್ದರೆ, ಅವನು ಯಾರೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಅವನ ಸಹವಾಸಮಾಡಬೇಡಿ. ಆಗ ಅವನಿಗೆ ನಾಚಿಕೆ ಆಗಬಹುದು.
2 థెస్సలొనీకయులకు 3 : 15 (ERVTE)
ಆದರೆ ಅವನನ್ನು ವೈರಿಯೆಂದು ಎಣಿಸದೆ ಸಹೋದರನೆಂದು ಎಣಿಸಿಕೊಂಡು ಬುದ್ಧಿ ಹೇಳಿರಿ.
2 థెస్సలొనీకయులకు 3 : 16 (ERVTE)
2 థెస్సలొనీకయులకు 3 : 17 (ERVTE)
ಶಾಂತಿದಾಯಕನಾದ ಪ್ರಭುವು ಎಲ್ಲಾ ಕಾಲಗಳಲ್ಲಿಯೂ ಮತ್ತು ಎಲ್ಲಾ ವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಪ್ರಭುವು ನಿಮ್ಮೆಲ್ಲರೊಂದಿಗಿರಲಿ.
2 థెస్సలొనీకయులకు 3 : 18 (ERVTE)
ಪೌಲನಾದ ನಾನು ಈಗ ನನ್ನ ಕೈಬರಹದಿಂದ ಈ ಪತ್ರವನ್ನು ಮುಕ್ತಾಯಗೊಳಿಸುತ್ತೇನೆ. ನನ್ನ ಪತ್ರಗಳಿಗೆಲ್ಲಾ ಇದೇ ನನ್ನ ಗುರುತು. ಇದೇ ನನ್ನ ಕೈ ಬರಹ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ.
❮
❯
1
2
3
4
5
6
7
8
9
10
11
12
13
14
15
16
17
18