అపొస్తలుల కార్యములు 13 : 1 (ERVTE)
{#1ಬಾರ್ನಬ ಮತ್ತು ಸೌಲರಿಗೆ ವಹಿಸಲಾದ ವಿಶೇಷಕಾರ್ಯ } ಅಂತಿಯೋಕ್ಯದ ಸಭೆಯಲ್ಲಿ ಕೆಲವು ಪ್ರವಾದಿಗಳು ಮತ್ತು ಉಪದೇಶಕರಿದ್ದರು. ಅವರು ಯಾರೆಂದರೆ: ಬಾರ್ನಬ, ಸಿಮೆಯೋನ್ (ಇವನನ್ನು ನೀಗರ್ ಎಂತಲೂ ಕರೆಯುತ್ತಿದ್ದರು.) ಲೂಸಿಯಸ್ (ಸಿರೇನ್ ಪಟ್ಟಣದವನು) ಮೆನಹೇನ (ಹೆರೋದ ರಾಜನೊಂದಿಗೆ ಬೆಳೆದವನು) ಮತ್ತು ಸೌಲ.
అపొస్తలుల కార్యములు 13 : 2 (ERVTE)
ಇವರೆಲ್ಲರು ಪ್ರಭುವಿನ ಸೇವೆ ಮಾಡುತ್ತಿದ್ದರು ಮತ್ತು ಉಪವಾಸ ಮಾಡುತ್ತಿದ್ದರು. ಪವಿತ್ರಾತ್ಮನು ಅವರಿಗೆ, “ನಾನು ವಿಶೇಷವಾದ ಕಾರ್ಯಕ್ಕಾಗಿ ಬಾರ್ನಬ ಮತ್ತು ಸೌಲರನ್ನು ಆರಿಸಿಕೊಂಡಿದ್ದೇನೆ. ಆ ಕಾರ್ಯಕ್ಕಾಗಿ ಅವರನ್ನು ಪ್ರತ್ಯೇಕಿಸಿರಿ” ಎಂದು ಹೇಳಿದನು.
అపొస్తలుల కార్యములు 13 : 3 (ERVTE)
అపొస్తలుల కార్యములు 13 : 4 (ERVTE)
ಆದ್ದರಿಂದ ಸಭೆಯವರು ಉಪವಾಸವಿದ್ದು ಪ್ರಾರ್ಥನೆ ಮಾಡಿದರು. ಅವರು ಬಾರ್ನಬ ಮತ್ತು ಸೌಲರ ಮೇಲೆ ಹಸ್ತಾರ್ಪಣೆ ಮಾಡಿ ಅವರನ್ನು ಕಳುಹಿಸಿಕೊಟ್ಟರು. {ಸೈಪ್ರಸ್ನಲ್ಲಿ ಬಾರ್ನಬ ಮತ್ತು ಸೌಲರು } ಬಾರ್ನಬ ಮತ್ತು ಸೌಲರನ್ನು ಪವಿತ್ರಾತ್ಮನೇ ಕಳುಹಿಸಿಕೊಟ್ಟನು. ಅವರು ಸೆಲೂಸಿಯಾ ಪಟ್ಟಣಕ್ಕೆ ಹೋದರು. ಬಳಿಕ ಅವರು ಸೆಲೂಸಿಯಾದಿಂದ ಸೈಪ್ರಸ್ ದ್ವೀಪಕ್ಕೆ ಹಡಗಿನಲ್ಲಿ ಪ್ರಯಾಣ ಮಾಡಿದರು.
అపొస్తలుల కార్యములు 13 : 5 (ERVTE)
ಬಾರ್ನಬ ಮತ್ತು ಸೌಲರು ಸಲಾಮಿಸ್ ಪಟ್ಟಣಕ್ಕೆ ಬಂದಾಗ ಯೆಹೂದ್ಯರ ಸಭಾಮಂದಿರದಲ್ಲಿ ದೇವರ ಸಂದೇಶವನ್ನು ಸಾರಿದರು. (ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯ ಮಾಡುವುದಕ್ಕಾಗಿ ಅವರೊಂದಿಗಿದ್ದನು.)
అపొస్తలుల కార్యములు 13 : 6 (ERVTE)
ಅವರು ಆ ದ್ವೀಪದಲ್ಲೆಲ್ಲಾ ಪ್ರಯಾಣ ಮಾಡುತ್ತಾ ಪಾಫೋಸ್ ಎಂಬ ಊರಿಗೆ ಹೋದರು. ಮಂತ್ರತಂತ್ರಗಳನ್ನು ಮಾಡುತ್ತಿದ್ದ ಒಬ್ಬ ಯೆಹೂದ್ಯನನ್ನು ಅವರು ಪಾಫೋಸಿನಲ್ಲಿ ಕಂಡರು. ಅವನ ಹೆಸರು “ಬಾರ್ ಯೇಸು.” ಅವನೊಬ್ಬ ಸುಳ್ಳುಪ್ರವಾದಿ.
అపొస్తలుల కార్యములు 13 : 7 (ERVTE)
ಸೆರ್ಗ್ಯಪೌಲನೆಂಬ ರಾಜ್ಯಪಾಲನ ಹತ್ತಿರದಲ್ಲೇ ಅವನು ಯಾವಾಗಲೂ ಇರುತ್ತಿದ್ದನು. ಸೆರ್ಗ್ಯಪೌಲನು ಜ್ಞಾನವಂತನಾಗಿದ್ದನು. ಅವನು ದೇವರ ವಾಕ್ಯವನ್ನು ಕೇಳಲು ಬಾರ್ನಬ ಮತ್ತು ಸೌಲರನ್ನು ಆಮಂತ್ರಿಸಿದನು.
అపొస్తలుల కార్యములు 13 : 8 (ERVTE)
ಆದರೆ ಮಂತ್ರವಾದಿಯಾದ ಎಲಿಮನು ಬಾರ್ನಬ ಮತ್ತು ಸೌಲರಿಗೆ ವಿರೋಧವಾಗಿದ್ದನು. (ಬಾರ್ ಯೇಸುವನ್ನು ಗ್ರೀಕ್ ಭಾಷೆಯಲ್ಲಿ ಎಲಿಮ ಎಂದು ಕರೆಯುತ್ತಿದ್ದರು.) ರಾಜ್ಯಪಾಲನು ಯೇಸುವಿನಲ್ಲಿ ನಂಬಿಕೆ ಇಡದ ಹಾಗೆ ಮಾಡಲು ಎಲಿಮನು ಪ್ರಯತ್ನಿಸಿದನು.
అపొస్తలుల కార్యములు 13 : 9 (ERVTE)
ಆದರೆ ಪೌಲನು (ಸೌಲನ ಮತ್ತೊಂದು ಹೆಸರು ಪೌಲ.) ಪವಿತ್ರಾತ್ಮಭರಿತನಾದನು. ಪೌಲನು ಎಲಿಮನನ್ನು ದಿಟ್ಟಿಸಿ ನೋಡಿ,
అపొస్తలుల కార్యములు 13 : 10 (ERVTE)
ಅವನಿಗೆ, “ನೀನು ಸೈತಾನನ ಮಗ! ಪ್ರತಿಯೊಂದು ಒಳ್ಳೆಯದಕ್ಕೂ ನೀನು ಶತ್ರು! ನೀನು ದುಷ್ಟತಂತ್ರಗಳಿಂದಲೂ ಸುಳ್ಳುಗಳಿಂದಲೂ ತುಂಬಿದವನಾಗಿರುವೆ. ಪ್ರಭುವಿನ ಸತ್ಯಗಳನ್ನು ಸುಳ್ಳುಗಳನ್ನಾಗಿ ಪರಿವರ್ತಿಸಲು ನೀನು ಯಾವಾಗಲೂ ಪ್ರಯತ್ನಿಸುತ್ತಿರುವೆ!
అపొస్తలుల కార్యములు 13 : 11 (ERVTE)
ಇಗೋ, ಪ್ರಭುವು ಕೈ ಎತ್ತಿದ್ದಾನೆ. ನೀನು ಕುರಡನಾಗಿ ಸ್ವಲ್ಪಕಾಲದವರೆಗೆ ಏನನ್ನೂ ನೋಡಲಾರೆ; ಸೂರ್ಯನ ಬೆಳಕನ್ನು ಸಹ ಕಾಣಲಾರೆ” ಎಂದನು. ಆಗ ಎಲಿಮನಿಗೆ ಎಲ್ಲವೂ ಕತ್ತಲಾಯಿತು. ತನ್ನನ್ನು ಯಾರಾದರೂ ಕೈಹಿಡಿದು ನಡೆಸಲೆಂದು ಅವನು ತಡವರಿಸುತ್ತಾ ಸುತ್ತಮುತ್ತ ನಡೆದನು.
అపొస్తలుల కార్యములు 13 : 12 (ERVTE)
ಇದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ನಂಬಿಕೊಂಡನು. ಪ್ರಭುವಿನ ವಿಷಯವಾದ ಉಪದೇಶವನ್ನು ಕೇಳಿ ವಿಸ್ಮಿತನಾದನು.
అపొస్తలుల కార్యములు 13 : 13 (ERVTE)
{ಪೌಲ ಬಾರ್ನಬರು ಸೈಪ್ರಸ್ನಿಂದ ತೆರಳುವರು } ಪೌಲ ಮತ್ತು ಅವನ ಸಂಗಡಿಗರು ಪಾಫೋಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು.
అపొస్తలుల కార్యములు 13 : 14 (ERVTE)
ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
అపొస్తలుల కార్యములు 13 : 15 (ERVTE)
ಮೋಶೆಯ ಧರ್ಮಶಾಸ್ತ್ರವನ್ನು ಮತ್ತು ಪ್ರವಾದಿಗಳ ಗ್ರಂಥಗಳನ್ನು ಓದಲಾಯಿತು. ಬಳಿಕ ಸಭಾಮಂದಿರದ ನಾಯಕರು ಪೌಲ ಬಾರ್ನಬರಿಗೆ, “ಸಹೋದರರೇ, ಇಲ್ಲಿರುವ ಜನರಿಗೆ ಸಹಾಯವಾಗುವಂತೆ ಏನನ್ನಾದರೂ ನೀವು ಹೇಳಬೇಕೆಂದಿದ್ದರೆ, ದಯವಿಟ್ಟು ಹೇಳಿ!” ಎಂಬ ಸಂದೇಶವನ್ನು ಕಳುಹಿಸಿದರು.
అపొస్తలుల కార్యములు 13 : 16 (ERVTE)
ಪೌಲನು ಎದ್ದುನಿಂತುಕೊಂಡು ತನ್ನ ಮಾತುಗಳನ್ನು ಕೇಳಬೇಕೆಂದು ಜನರಿಗೆ ಕೈಸನ್ನೆ ಮಾಡಿ ಹೀಗೆಂದನು: “ನನ್ನ ಯೆಹೂದ್ಯ ಸಹೋದರರೇ, ನಿಜ ದೇವರನ್ನು ಆರಾಧಿಸುವ ಇತರ ಜನರೇ, ದಯವಿಟ್ಟು ನನಗೆ ಕಿವಿಗೊಡಿರಿ!
అపొస్తలుల కార్యములు 13 : 17 (ERVTE)
ಇಸ್ರೇಲರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡನು. ಈಜಿಪ್ಟಿನಲ್ಲಿ ಪ್ರವಾಸಿಗರಾಗಿ ವಾಸಿಸುತ್ತಿದ್ದ ತನ್ನ ಜನರಿಗೆ ದೇವರು ಸಹಾಯಮಾಡಿ ಅಭಿವೃದ್ಧಿಪಡಿಸಿದನು. ದೇವರು ತನ್ನ ಮಹಾಶಕ್ತಿಯಿಂದ ಅವರನ್ನು ಆ ದೇಶದೊಳಗಿಂದ ಬರಮಾಡಿದನು.
అపొస్తలుల కార్యములు 13 : 18 (ERVTE)
ಮರಳುಗಾಡಿನಲ್ಲಿ ನಲವತ್ತು ವರ್ಷಗಳ ಕಾಲ ಅವರನ್ನು ಸಹಿಸಿಕೊಂಡನು.
అపొస్తలుల కార్యములు 13 : 19 (ERVTE)
ಕಾನಾನ್ ನಾಡಿನ ಏಳು ಜನಾಂಗಗಳನ್ನು ನಾಶಮಾಡಿ ತನ್ನ ಜನರಿಗೆ ಆ ನಾಡನ್ನು ಸ್ವಾಸ್ತ್ಯವಾಗಿ ಕೊಟ್ಟನು.
అపొస్తలుల కార్యములు 13 : 20 (ERVTE)
ಇವೆಲ್ಲಾ ಸುಮಾರು ನಾನೂರ ಐವತ್ತು ವರ್ಷಗಳ ಅವಧಿಯಲ್ಲಿ ನಡೆದವು. “ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದವರೆಗೆ ದೇವರು ನಮ್ಮ ಜನರಿಗೆ ನ್ಯಾಯಸ್ಥಾಪಕರನ್ನು ಕೊಟ್ಟನು.
అపొస్తలుల కార్యములు 13 : 21 (ERVTE)
ಬಳಿಕ ಜನರು ತಮಗೆ ರಾಜನು ಬೇಕೆಂದು ಕೇಳಿಕೊಂಡರು. ದೇವರು ಅವರಿಗೆ ಕೀಷನ ಮಗನಾದ ಸೌಲನನ್ನು ಕೊಟ್ಟನು. ಸೌಲನು ಬೆನ್ಯಾಮಿನ್ ಕುಲದವನು. ಅವನು ನಲವತ್ತು ವರ್ಷಗಳ ಕಾಲ ರಾಜನಾಗಿದ್ದನು.
అపొస్తలుల కార్యములు 13 : 22 (ERVTE)
ದೇವರು ಸೌಲನನ್ನು ತೆಗೆದುಹಾಕಿದ ಮೇಲೆ ದಾವೀದನನ್ನು ಅವರ ರಾಜನನ್ನಾಗಿ ಮಾಡಿದನು. ‘ಇಷಯನ ಮಗನಾದ ದಾವೀದನು ನನಗೆ ಮೆಚ್ಚಿಗೆಯಾದವನು. ಅವನು ನನ್ನ ಅಪೇಕ್ಷೆಗೆ ತಕ್ಕಂತೆ ಕಾರ್ಯಗಳನ್ನು ಮಾಡುತ್ತಾನೆ’ ಎಂದು ದೇವರು ದಾವೀದನ ಬಗ್ಗೆ ಹೇಳಿದ್ದಾನೆ.
అపొస్తలుల కార్యములు 13 : 23 (ERVTE)
“ದೇವರು ತನ್ನ ವಾಗ್ದಾನಕ್ಕನುಸಾರವಾಗಿ ದಾವೀದನ ಸಂತಾನದವರಲ್ಲಿ ಒಬ್ಬನನ್ನು ಇಸ್ರೇಲರ ರಕ್ಷಕನನ್ನಾಗಿ ಕಳುಹಿಸಿ ಕೊಟ್ಟಿದ್ದಾನೆ. ಆತನೇ ಯೇಸು.
అపొస్తలుల కార్యములు 13 : 24 (ERVTE)
ಯೇಸು ಬರುವುದಕ್ಕಿಂತ ಮೊದಲು (ಸ್ನಾನಿಕ) ಯೋಹಾನನು ಯೆಹೂದ್ಯ ಜನರಿಗೆಲ್ಲಾ ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ’ ಎಂದು ಬೋಧಿಸಿದನು.
అపొస్తలుల కార్యములు 13 : 25 (ERVTE)
‘ನಾನು ಯಾರೆಂದು ನೀವು ಯೋಚಿಸುತ್ತೀರಿ? ನಾನು ಕ್ರಿಸ್ತನಲ್ಲ. ಆತನು ನನ್ನ ತರುವಾಯ ಬರುತ್ತಾನೆ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ’ ಎಂದು ಯೋಹಾನನು ತನ್ನ ಕಾರ್ಯವನ್ನು ಮಾಡಿ ಪೂರೈಸುತ್ತಿದ್ದಾಗ ಹೇಳಿಕೊಂಡಿದ್ದಾನೆ.
అపొస్తలుల కార్యములు 13 : 26 (ERVTE)
“ನನ್ನ ಸಹೋದರರೇ, ಅಬ್ರಹಾಮನ ಕುಟುಂಬದ ಪುತ್ರರೇ, ನಿಜದೇವರನ್ನು ಆರಾಧಿಸುತ್ತಿರುವ ಯೆಹೂದ್ಯರಲ್ಲದವರೇ, ಕೇಳಿರಿ! ಈ ರಕ್ಷಣೆಯ ಸಂದೇಶವನ್ನು ಕಳುಹಿಸಿರುವುದು ನಮಗಾಗಿಯೇ.
అపొస్తలుల కార్యములు 13 : 27 (ERVTE)
ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!
అపొస్తలుల కార్యములు 13 : 28 (ERVTE)
ಯೇಸು ಸಾಯಲೇಬೇಕೆಂಬುದಕ್ಕೆ ಸರಿಯಾದ ಕಾರಣವನ್ನು ಅವರು ಕಂಡುಹಿಡಿಯಲಾಗದಿದ್ದರೂ ಯೇಸುವನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
అపొస్తలుల కార్యములు 13 : 29 (ERVTE)
“ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ ಯೇಸುವಿಗೆ ಸಂಭವಿಸಬೇಕಾಗಿದ್ದ ಕೆಟ್ಟವುಗಳನ್ನೆಲ್ಲ ಯೆಹೂದ್ಯರು ಆತನಿಗೆ ಮಾಡಿದರು. ಬಳಿಕ ಅವರು ಯೇಸುವನ್ನು ಶಿಲುಬೆಯಿಂದ ಕೆಳಗಿಳಿಸಿ ಸಮಾಧಿಯಲ್ಲಿಟ್ಟರು.
అపొస్తలుల కార్యములు 13 : 30 (ERVTE)
ಆದರೆ ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!
అపొస్తలుల కార్యములు 13 : 31 (ERVTE)
ಇದಾದ ಮೇಲೆ ಗಲಿಲಾಯದಿಂದ ಯೇಸುವಿನೊಂದಿಗೆ ಜೆರುಸಲೇಮಿಗೆ ಬಂದಿದ್ದವರು, ಅನೇಕ ದಿನಗಳವರೆಗೆ ಆತನನ್ನು ನೋಡಿದರು. ಈಗ ಅವರೇ ಜನರಿಗೆ ಸಾಕ್ಷಿಗಳಾಗಿದ್ದಾರೆ.
అపొస్తలుల కార్యములు 13 : 32 (ERVTE)
“ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.
అపొస్తలుల కార్యములు 13 : 33 (ERVTE)
ನಾವು ಅವರ ಸಂತತಿಯವರಾಗಿದ್ದೇವೆ. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸುವುದರ ಮೂಲಕ ಆ ವಾಗ್ದಾನವನ್ನು ನಮಗಾಗಿ ನೆರವೇರಿಸಿದ್ದಾನೆ. ಇದರ ಬಗ್ಗೆ ಎರಡನೆ ಕೀರ್ತನೆಯಲ್ಲಿ ಹೀಗೆಂದು ಬರೆದಿದೆ: ‘ನೀನೇ ನನ್ನ ಮಗನು. ಇಂದೇ ನಾನು ನಿನ್ನನ್ನು ಪಡೆದೆನು.’ --ಕೀರ್ತನೆ. 2:7--
అపొస్తలుల కార్యములు 13 : 34 (ERVTE)
34 ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’ --ಯೆಶಾಯ 55:3--
అపొస్తలుల కార్యములు 13 : 35 (ERVTE)
35 ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಹೀಗೆನ್ನುತ್ತಾನೆ: ‘ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.’ --ಕೀರ್ತನೆ. 16:10--
అపొస్తలుల కార్యములు 13 : 36 (ERVTE)
“ದಾವೀದನು ತನ್ನ ಜೀವಮಾನಕಾಲದಲ್ಲಿ ದೇವರ ಚಿತ್ತಕ್ಕನುಸಾರವಾಗಿ ಬಾಳಿದನು. ಬಳಿಕ ಅವನು ಸತ್ತುಹೋದನು. ದಾವೀದನನ್ನು ಅವನ ಪಿತೃಗಳೊಂದಿಗೆ ಸಮಾಧಿಮಾಡಲಾಯಿತು. ಅವನ ದೇಹ ಸಮಾಧಿಯಲ್ಲಿ ಕೊಳೆತುಹೋಯಿತು!
అపొస్తలుల కార్యములు 13 : 37 (ERVTE)
ಆದರೆ ದೇವರಿಂದ ಜೀವಂತವಾಗಿ ಎಬ್ಬಿಸಲ್ಪಟ್ಟ ಯೇಸುವಿನ ದೇಹ ಸಮಾಧಿಯಲ್ಲಿ ಕೊಳೆಯಲ್ಪಡಲಿಲ್ಲ.
అపొస్తలుల కార్యములు 13 : 38 (ERVTE)
(38-39)ಸಹೋದರರೇ, ಇದು ನಿಮಗೆ ತಿಳಿದಿರಲಿ: ಆತನ ಮೂಲಕವಾಗಿ ನಿಮ್ಮ ಪಾಪಗಳಿಗೆ ಕ್ಷಮೆ ದೊರೆಯುತ್ತದೆ. ಮೋಶೆಯ ಧರ್ಮಶಾಸ್ತ್ರಕ್ಕೆ, ನಿಮ್ಮನ್ನು ನಿಮ್ಮ ಪಾಪಗಳಿಂದ ಬಿಡಿಸಲಾಗಲಿಲ್ಲ. ಆದರೆ ಯೇಸುವಿನಲ್ಲಿ ನಂಬಿಕೆ ಇಡುವ ಪ್ರತಿಯೊಬ್ಬನು ಆತನ ಮೂಲಕವಾಗಿ ತನ್ನ ಎಲ್ಲಾ ಪಾಪಗಳಿಂದ ಬಿಡುಗಡೆಯಾಗುವನು.
అపొస్తలుల కార్యములు 13 : 39 (ERVTE)
అపొస్తలుల కార్యములు 13 : 40 (ERVTE)
ಆದ್ದರಿಂದ ಪ್ರವಾದಿಗಳು ತಿಳಿಸಿರುವ ಈ ಕೆಲವು ಸಂಗತಿಗಳು ನಿಮ್ಮಲ್ಲಿ ನಿಜವಾಗದಂತೆ ಎಚ್ಚರಿಕೆಯಾಗಿರಿ:
అపొస్తలుల కార్యములు 13 : 41 (ERVTE)
‘ಅಪಹಾಸ್ಯ ಮಾಡುವವರೇ, ಆಶ್ಚರ್ಯಪಡುತ್ತಾ ನಾಶವಾಗಿಹೋಗಿರಿ. ನೀವು ನಂಬಲೊಲ್ಲದ ಒಂದು ಕಾರ್ಯವನ್ನು ನಾನು ಮಾಡುವೆನು. ಬೇರೊಬ್ಬನು ನಿಮಗೆ ಅದನ್ನು ವಿವರಿಸಿದರೂ ನೀವು ನಂಬುವುದಿಲ್ಲ!’ ” --ಹಬಕ್ಕೂಕ 1:5--
అపొస్తలుల కార్యములు 13 : 42 (ERVTE)
ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು.
అపొస్తలుల కార్యములు 13 : 43 (ERVTE)
ಸಭೆಯು ಮುಗಿದ ಮೇಲೆ ಅನೇಕ ಯೆಹೂದ್ಯರು ಪೌಲ ಬಾರ್ನಬರನ್ನು ಆ ಸ್ಥಳದಿಂದ ಹಿಂಬಾಲಿಸಿದರು. ಯೆಹೂದ್ಯರ ಧರ್ಮಕ್ಕೆ ಸೇರಿಕೊಂಡಿದ್ದ ಅನೇಕ ಅನ್ಯಮತೀಯರೂ ಆ ಯೆಹೂದ್ಯರೊಂದಿಗಿದ್ದರು. ಮತಾಂತರಗೊಂಡಿದ್ದ ಇವರು ಸಹ ನಿಜದೇವರನ್ನು ಆರಾಧಿಸುತ್ತಿದ್ದರು. ಪೌಲ ಬಾರ್ನಬರು ಅವರೊಂದಿಗೆ ಮಾತಾಡಿ, ದೇವರ ಕೃಪೆಯಲ್ಲೇ ಭರವಸವಿಟ್ಟು ಮುಂದುವರಿಯಬೇಕೆಂದು ಪ್ರೋತ್ಸಾಹಪಡಿಸಿದರು.
అపొస్తలుల కార్యములు 13 : 44 (ERVTE)
ಮುಂದಿನ ಸಬ್ಬತ್ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು.
అపొస్తలుల కార్యములు 13 : 45 (ERVTE)
ಇದನ್ನು ಕಂಡ ಯೆಹೂದ್ಯರಿಗೆ ಬಹಳ ಅಸೂಯೆಯಾಯಿತು. ಅವರು ಪೌಲನ ಮಾತುಗಳನ್ನು ಕಟುವಾಗಿ ದೂಷಿಸಿ ಅವುಗಳಿಗೆ ವಿರೋಧವಾಗಿ ವಾದಿಸಿದರು.
అపొస్తలుల కార్యములు 13 : 46 (ERVTE)
ಆದರೆ ಪೌಲ ಬಾರ್ನಬರು ಬಹು ಧೈರ್ಯದಿಂದ ಮಾತಾಡಿ, “ನಾವು ದೇವರ ಸಂದೇಶವನ್ನು ಯೆಹೂದ್ಯರಾದ ನಿಮಗೆ ಮೊದಲು ಹೇಳಬೇಕು. ಆದರೆ ನೀವು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ಎಣಿಸಿಕೊಂಡು ತಿರಸ್ಕರಿಸುತ್ತಿದ್ದೀರಿ. ಆದ್ದರಿಂದ ನಾವು ಅನ್ಯಧರ್ಮದವರ ಬಳಿಗೆ ಹೋಗುತ್ತೇವೆ!
అపొస్తలుల కార్యములు 13 : 47 (ERVTE)
ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’ ” --ಯೆಶಾಯ 49:6--
అపొస్తలుల కార్యములు 13 : 48 (ERVTE)
అపొస్తలుల కార్యములు 13 : 49 (ERVTE)
ಪೌಲನ ಈ ಮಾತುಗಳನ್ನು ಕೇಳಿದ ಯೆಹೂದ್ಯರಲ್ಲದ ಜನರು ಬಹು ಸಂತೋಷಪಟ್ಟು ಪ್ರಭುವಿನ ಸಂದೇಶಕ್ಕಾಗಿ ಸ್ತುತಿಸಿದರು. ನಿತ್ಯಜೀವವನ್ನು ಹೊಂದಿಕೊಳ್ಳಲು ಆಯ್ಕೆಯಾಗಿದ್ದವರೆಲ್ಲರೂ ನಂಬಿಕೊಂಡರು. ಪ್ರಭುವಿನ ಸಂದೇಶವನ್ನು ಆ ನಾಡಿನಲ್ಲೆಲ್ಲಾ ಸಾರಲಾಯಿತು.
అపొస్తలుల కార్యములు 13 : 50 (ERVTE)
ಆದರೆ ಯೆಹೂದ್ಯರು ಕೆಲವು ಧಾರ್ಮಿಕ ಸ್ತ್ರೀಯರನ್ನೂ ನಗರದ ನಾಯಕರನ್ನೂ ಪ್ರಚೋಧಿಸಿ, ಪೌಲ ಬಾರ್ನಬರ ಮೇಲೆ ಅವರು ಕೋಪಗೊಳ್ಳುವಂತೆಯೂ ಅವರಿಗೆ ವಿರೋಧಿಗಳಾಗುವಂತೆಯೂ ಮಾಡಿ ಪೌಲ ಬಾರ್ನಬರನ್ನು ಪಟ್ಟಣದಿಂದ ಹೊರಗಟ್ಟಿಸಿದರು.
అపొస్తలుల కార్యములు 13 : 51 (ERVTE)
ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ,[* ಕಾಲಿನ ಧೂಳನ್ನು ಝಾಡಿಸಿ ಇದೊಂದು ಎಚ್ಚರಿಕೆ. ಅವರು ಈ ಜನರೊಂದಿಗೆ ಇನ್ನು ಮಾತಾಡುವ ಅಗತ್ಯವಿಲ್ಲ ಎಂಬುದನ್ನು ಇದು ಸೂಚಿಸುತ್ತದೆ. ] ಇಕೋನಿಯಾ ಪಟ್ಟಣಕ್ಕೆ ಹೋದರು.
అపొస్తలుల కార్యములు 13 : 52 (ERVTE)
ಆದರೆ ಯೇಸುವಿನ ಶಿಷ್ಯರು ಸಂತೋಷವಾಗಿದ್ದರು ಮತ್ತು ಪವಿತ್ರಾತ್ಮಭರಿತರಾಗಿದ್ದರು.
❮
❯