అపొస్తలుల కార్యములు 15 : 1 (ERVTE)
{#1ಜೆರುಸಲೇಮಿನಲ್ಲಿ ಸಮ್ಮೇಳನ } ಬಳಿಕ ಕೆಲವು ಜನರು ಜುದೇಯದಿಂದ ಅಂತಿಯೋಕ್ಯಕ್ಕೆ ಬಂದರು. “ನೀವು ಸುನ್ನತಿ ಮಾಡಿಸಿಕೊಳ್ಳದಿದ್ದರೆ ನಿಮಗೆ ರಕ್ಷಣೆಯಾಗುವುದಿಲ್ಲ. ಸುನ್ನತಿ ಮಾಡಿಸಿಕೊಳ್ಳಬೇಕೆಂದು ಮೋಶೆಯೇ ಹೇಳಿದ್ದಾನೆ” ಎಂದು ಅವರು ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಉಪದೇಶಿಸತೊಡಗಿದರು.
అపొస్తలుల కార్యములు 15 : 2 (ERVTE)
ಪೌಲ ಬಾರ್ನಬರು ಈ ಉಪದೇಶಕ್ಕೆ ತಮ್ಮ ವಿರೋಧವನ್ನು ವ್ಯಕ್ತಪಡಿಸಿ ಅವರೊಂದಿಗೆ ವಾದ ಮಾಡಿದರು. ಈ ಸಮಸ್ಯೆಯ ಬಗ್ಗೆ ಅಪೊಸ್ತಲರೊಡನೆ ಮತ್ತು ಹಿರಿಯರೊಡನೆ ಚರ್ಚಿಸಲು ಪೌಲ ಬಾರ್ನಬರನ್ನು ಮತ್ತು ಇತರ ಕೆಲವರನ್ನು ಜೆರುಸಲೇಮಿಗೆ ಕಳುಹಿಸಲು ಸಭೆ ನಿರ್ಧರಿಸಿತು.
అపొస్తలుల కార్యములు 15 : 3 (ERVTE)
ಅಂತೆಯೇ ಸಭೆಯು ಇವರನ್ನು ಕಳುಹಿಸಿತು. ಇವರು ಫೆನಿಷ್ಯ ಮತ್ತು ಸಮಾರ್ಯದ ಮಾರ್ಗವಾಗಿ ಪ್ರಯಾಣಮಾಡಿದರು. ಯೆಹೂದ್ಯರಲ್ಲದ ಜನರು ನಿಜದೇವರ ಕಡೆಗೆ ತಿರುಗಿಕೊಂಡಿದ್ದರ ಬಗ್ಗೆ ಈ ನಾಡುಗಳಲ್ಲಿ ವಿವರಿಸಿದರು. ಇದನ್ನು ಕೇಳಿ ಸಹೋದರರಿಗೂ ಬಹಳ ಸಂತೋಷವಾಯಿತು.
అపొస్తలుల కార్యములు 15 : 4 (ERVTE)
ಪೌಲ ಬಾರ್ನಬರು ಮತ್ತು ಇತರರು ಜೆರುಸಲೇಮನ್ನು ತಲುಪಿದರು. ಅಪೊಸ್ತಲರು, ಹಿರಿಯರು ಮತ್ತು ಸಭೆಯವರು ಇವರನ್ನು ಸ್ವಾಗತಿಸಿದರು. ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಮತ್ತು ಇತರರು ವಿವರಿಸಿದರು.
అపొస్తలుల కార్యములు 15 : 5 (ERVTE)
ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು.
అపొస్తలుల కార్యములు 15 : 6 (ERVTE)
ಬಳಿಕ, ಅಪೊಸ್ತಲರು ಮತ್ತು ಹಿರಿಯರು ಈ ಸಮಸ್ಯೆಯನ್ನು ಪರಿಶೀಲಿಸಲು ಸೇರಿಬಂದರು.
అపొస్తలుల కార్యములు 15 : 7 (ERVTE)
ದೀರ್ಘಚರ್ಚೆಯಾಯಿತು. ಬಳಿಕ ಪೇತ್ರ ಎದ್ದುನಿಂತು ಅವರಿಗೆ, “ನನ್ನ ಸಹೋದರರೇ, ನಿಮಗೇ ತಿಳಿದಿರುವಂತೆ, ಯೆಹೂದ್ಯರಲ್ಲದ ಜನರಿಗೆ ಸುವಾರ್ತೆಯನ್ನು ಬೋಧಿಸುವುದಕ್ಕಾಗಿ ನಿಮ್ಮ ಮಧ್ಯದೊಳಗಿಂದ ದೇವರು ನನ್ನನ್ನು ಬಹುದಿನಗಳ ಹಿಂದೆ ಆರಿಸಿಕೊಂಡನು. ಅವರು ನನ್ನಿಂದ ಸುವಾರ್ತೆಯನ್ನು ಕೇಳಿ ನಂಬಿಕೊಂಡರು.
అపొస్తలుల కార్యములు 15 : 8 (ERVTE)
ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ.
అపొస్తలుల కార్యములు 15 : 9 (ERVTE)
ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು.
అపొస్తలుల కార్యములు 15 : 10 (ERVTE)
ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು[* ಹೊರೆ ಯೆಹೂದ್ಯರ ಧರ್ಮಶಾಸ್ತ್ರ. ] ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಈ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ!
అపొస్తలుల కార్యములు 15 : 11 (ERVTE)
ಆದ್ದರಿಂದ ನಾವಾಗಲಿ ಇವರಾಗಲಿ ರಕ್ಷಣೆ ಹೊಂದುವುದು ಪ್ರಭುವಾದ ಯೇಸುವಿನ ಕೃಪೆಯಿಂದಲೇ ಎಂದು ನಾವು ನಂಬುತ್ತೇವೆ!” ಎಂದನು.
అపొస్తలుల కార్యములు 15 : 12 (ERVTE)
ಆಗ ಇಡೀ ಸಭೆಯು ಮೌನವಾಯಿತು. ಅವರು ಪೌಲ ಬಾರ್ನಬರಿಗೆ ಕಿವಿಗೊಟ್ಟರು. ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ದೇವರು ತಮ್ಮ ಮೂಲಕವಾಗಿ ಮಾಡಿದ ಎಲ್ಲಾ ಅದ್ಭುತಕಾರ್ಯಗಳ ಮತ್ತು ಸೂಚಕಕಾರ್ಯಗಳ ಬಗ್ಗೆ ಪೌಲ ಬಾರ್ನಬರು ಹೇಳಿದರು.
అపొస్తలుల కార్యములు 15 : 13 (ERVTE)
ಬಳಿಕ ಯಾಕೋಬನು, “ನನ್ನ ಸಹೋದರರೇ, ನನಗೆ ಕಿವಿಗೊಡಿರಿ.
అపొస్తలుల కార్యములు 15 : 14 (ERVTE)
ಯೆಹೂದ್ಯರಲ್ಲದ ಜನರಿಗೆ ದೇವರು ತನ್ನ ಪ್ರೀತಿಯನ್ನು ಹೇಗೆ ತೋರಿಸಿದ್ದಾನೆಂದು ಸೀಮೋನನು ನಮಗೆ ತಿಳಿಸಿದ್ದಾನೆ. ಮೊಟ್ಟಮೊದಲ ಬಾರಿಗೆ, ದೇವರು ಯೆಹೂದ್ಯರಲ್ಲದ ಜನರನ್ನು ಸ್ವೀಕರಿಸಿಕೊಂಡನು. ಅವರನ್ನು ತನ್ನ ಜನರನ್ನಾಗಿ ಮಾಡಿಕೊಂಡನು.
అపొస్తలుల కార్యములు 15 : 15 (ERVTE)
ಪ್ರವಾದಿಗಳ ಮಾತುಗಳು ಸಹ ಇದಕ್ಕೆ ಸಾಮರಸ್ಯವಾಗಿವೆ:
అపొస్తలుల కార్యములు 15 : 16 (ERVTE)
‘ಇದಾದನಂತರ ನಾನು ಹಿಂತಿರುಗುವೆನು. ನಾನು ದಾವೀದನ ಮನೆಯನ್ನು ಮತ್ತೆ ಕಟ್ಟುವೆನು. ಅದು ಬಿದ್ದುಹೋಗಿದೆ. ಆದರೆ ಕೆಡವಲ್ಪಟ್ಟ ಅವನ ಮನೆಯ ಚೂರುಗಳನ್ನು ನಾನು ಮತ್ತೆ ಒಂದುಗೂಡಿಸುವೆನು. ನಾನು ಅವನ ಮನೆಯನ್ನು ಹೊಸದು ಮಾಡುವೆನು.
అపొస్తలుల కార్యములు 15 : 17 (ERVTE)
ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಈ ಕಾರ್ಯಗಳನ್ನೆಲ್ಲ ಮಾಡುವವನು ಆತನೇ.’ --ಆಮೋಸ 9:11-12--
అపొస్తలుల కార్యములు 15 : 18 (ERVTE)
‘ಆದಿಯಿಂದಲೂ ಈ ಕಾರ್ಯಗಳನ್ನು ತಿಳಿಯಪಡಿಸಲಾಗಿದೆ.’
అపొస్తలుల కార్యములు 15 : 19 (ERVTE)
“ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.
అపొస్తలుల కార్యములు 15 : 20 (ERVTE)
ಅದಕ್ಕೆ ಬದಲಾಗಿ ನಾವು ಅವರಿಗೆ ಒಂದು ಪತ್ರವನ್ನು ಬರೆದು ಈ ವಿಷಯಗಳನ್ನು ತಿಳಿಸೋಣ: ವಿಗ್ರಹಗಳಿಗೆ ಅರ್ಪಿಸಿದ ಆಹಾರವನ್ನು ತಿನ್ನಬೇಡಿರಿ. (ಈ ಆಹಾರ ಅಶುದ್ಧವಾದದ್ದು.) ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ.
అపొస్తలుల కార్యములు 15 : 21 (ERVTE)
21 ಅವರು ಇವುಗಳನ್ನು ಮಾಡಕೂಡದು. ಏಕೆಂದರೆ ಮೋಶೆಯ ಧರ್ಮಶಾಸ್ತ್ರವನ್ನು ಬೋಧಿಸುವಂಥ ಜನರು ಪ್ರತಿಯೊಂದು ಪಟ್ಟಣದಲ್ಲಿ ಇನ್ನೂ ಇದ್ದಾರೆ. ಅನೇಕ ವರ್ಷಗಳಿಂದ ಪ್ರತಿ ಸಬ್ಬತ್ ದಿನದಲ್ಲಿ ಮೋಶೆಯ ಮಾತುಗಳನ್ನು ಓದಲಾಗುತ್ತಿದೆ” ಎಂದು ಹೇಳಿದನು.
అపొస్తలుల కార్యములు 15 : 22 (ERVTE)
{#1ಯೆಹೂದ್ಯರಲ್ಲದ ವಿಶ್ವಾಸಿಗಳಿಗೆ ಪತ್ರ } ಅಪೊಸ್ತಲರು, ಹಿರಿಯರು ಮತ್ತು ಇಡೀ ಸಭೆಯವರು ಪೌಲ ಬಾರ್ನಬರೊಂದಿಗೆ ಕೆಲವು ಜನರನ್ನು ಅಂತಿಯೋಕ್ಯಕ್ಕೆ ಕಳುಹಿಸಬಯಸಿದರು. ತಮ್ಮವರೇ ಆದ ಕೆಲವರನ್ನು ಆರಿಸಿಕೊಳ್ಳಲು ಸಭೆಯು ನಿರ್ಧರಿಸಿತು. ಅವರು ಯೂದನನ್ನು (ಬಾರ್ಸಬನೆಂದೂ ಕರೆಯುತ್ತಿದ್ದರು) ಮತ್ತು ಸೀಲನನ್ನು ಆರಿಸಿಕೊಂಡರು. ಇವರು ಜೆರುಸಲೇಮಿನ ಸಭೆಯವರಲ್ಲಿ ಪ್ರಮುಖರಾಗಿದ್ದರು.
అపొస్తలుల కార్యములు 15 : 23 (ERVTE)
ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,
అపొస్తలుల కార్యములు 15 : 24 (ERVTE)
24 ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!
అపొస్తలుల కార్యములు 15 : 25 (ERVTE)
ಆದ್ದರಿಂದ ನಾವೆಲ್ಲರೂ ಕೆಲವರನ್ನು ಸರ್ವಾನುಮತದಿಂದ ಆರಿಸಿ ನಿಮ್ಮ ಬಳಿಗೆ ಕಳುಹಿಸಲು ನಿರ್ಧರಿಸಿದೆವು. ನಮ್ಮ ಪ್ರಿಯ ಸಹೋದರರಾದ ಬಾರ್ನಬ ಮತ್ತು ಪೌಲರೊಂದಿಗೆ ಅವರು ಬರುತ್ತಿದ್ದಾರೆ.
అపొస్తలుల కార్యములు 15 : 26 (ERVTE)
ಬಾರ್ನಬನು ಮತ್ತು ಪೌಲನು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಸೇವೆಗಾಗಿ ತಮ್ಮ ಜೀವಿತಗಳನ್ನೇ ಕೊಟ್ಟಿದ್ದಾರೆ.
అపొస్తలుల కార్యములు 15 : 27 (ERVTE)
ಆದ್ದರಿಂದ ನಾವು ಯೂದನನ್ನು ಮತ್ತು ಸೀಲನನ್ನು ಅವರೊಂದಿಗೆ ಕಳುಹಿಸಿದ್ದೇವೆ. ಕೆಳಕಂಡ ಸಂಗತಿಗಳನ್ನೆಲ್ಲ ಅವರು ನಿಮಗೆ ತಿಳಿಸುವರು.
అపొస్తలుల కార్యములు 15 : 28 (ERVTE)
ನಿಮಗೆ ಇನ್ನೂ ಹೆಚ್ಚಿನ ಭಾರಗಳು ಇರಕೂಡದೆಂಬುದು ಪವಿತ್ರಾತ್ಮನ ನಿರ್ಧಾರ. ಅದಕ್ಕೆ ನಾವು ಒಪ್ಪಿಕೊಂಡಿದ್ದೇವೆ. ನೀವು ಈ ನಿಯಮಗಳನ್ನು ಮಾತ್ರ ಅನುಸರಿಸಬೇಕಾಗಿದೆ:
అపొస్తలుల కార్యములు 15 : 29 (ERVTE)
ವಿಗ್ರಹಗಳಿಗೆ ಅರ್ಪಿಸಿರುವ ಆಹಾರವನ್ನು ತಿನ್ನಬೇಡಿ. ರಕ್ತವನ್ನು ತಿನ್ನಬೇಡಿ. ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳ ಮಾಂಸವನ್ನು ತಿನ್ನಬೇಡಿ. ಯಾವುದೇ ಬಗೆಯ ಲೈಂಗಿಕ ಪಾಪವನ್ನು ಮಾಡಬೇಡಿ. ನೀವು ಇವುಗಳಿಂದ ದೂರವಿದ್ದರೆ ನಿಮಗೆ ಒಳ್ಳೆಯದಾಗುವುದು. ನಿಮಗೆ ಶುಭವಾಗಲಿ!
అపొస్తలుల కార్యములు 15 : 30 (ERVTE)
ಆದ್ದರಿಂದ ಪೌಲ ಬಾರ್ನಬರು ಮತ್ತು ಯೂದ ಸೀಲರು ಜೆರುಸಲೇಮಿನಿಂದ ಹೊರಟರು. ಅವರು ಅಂತಿಯೋಕ್ಯಕ್ಕೆ ಹೋಗಿ, ಅಲ್ಲಿ ವಿಶ್ವಾಸಿಗಳ ಸಭೆಸೇರಿಸಿ ಅವರಿಗೆ ಪತ್ರವನ್ನು ಕೊಟ್ಟರು.
అపొస్తలుల కార్యములు 15 : 31 (ERVTE)
ವಿಶ್ವಾಸಿಗಳು ಅದನ್ನು ಓದಿ ಬಹು ಸಂತೋಷಪಟ್ಟರು. ಆ ಪತ್ರವು ಅವರನ್ನು ಸಂತೈಸಿತು.
అపొస్తలుల కార్యములు 15 : 32 (ERVTE)
ಯೂದ ಸೀಲರು ಸಹ ಪ್ರವಾದಿಗಳಾಗಿದ್ದರು. ಅವರು ಅನೇಕ ಸಂಗತಿಗಳನ್ನು ಸಹೋದರರಿಗೆ ತಿಳಿಸಿ ಅವರನ್ನು ಬಲಪಡಿಸಿದರು.
అపొస్తలుల కార్యములు 15 : 33 (ERVTE)
ಯೂದ ಸೀಲರು ಸ್ವಲ್ಪಕಾಲ ಅಲ್ಲಿದ್ದು ಸಹೋದರರಿಂದ ಸಮಾಧಾನವೆಂಬ ಆಶೀರ್ವಾದವನ್ನು ಪಡೆದುಕೊಂಡರು. ಬಳಿಕ ಅವರು ತಮ್ಮನ್ನು ಕಳುಹಿಸಿಕೊಟ್ಟಿದ್ದ ಜೆರುಸಲೇಮಿನ ಸಹೋದರರ ಬಳಿಗೆ ಹಿಂತಿರುಗಿದರು.
అపొస్తలుల కార్యములు 15 : 34 (ERVTE)
[† ಈ ಪುಸ್ತಕದ ಇತ್ತೀಚಿನ ಕೆಲವು ಗ್ರೀಕ್ ಪ್ರತಿಗಳಲ್ಲಿ 34ನೇ ವಚನವನ್ನು ಸೇರಿಸಲಾಗಿದೆ: “ಆದರೆ ಸೀಲನು ಅಲ್ಲೇ ಇರಲು ನಿರ್ಧರಿಸಿದನು.” ]
అపొస్తలుల కార్యములు 15 : 35 (ERVTE)
అపొస్తలుల కార్యములు 15 : 36 (ERVTE)
ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು. {#1ಪೌಲ ಬಾರ್ನಬರು ಬೇರ್ಪಡುವರು }
అపొస్తలుల కార్యములు 15 : 37 (ERVTE)
ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಆ ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು. ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಸಹ ತಮ್ಮೊಂದಿಗೆ ಕರೆದುಕೊಂಡು ಹೋಗಬೇಕೆಂದು ಬಾರ್ನಬನ ಇಷ್ಟವಾಗಿತ್ತು.
అపొస్తలుల కార్యములు 15 : 38 (ERVTE)
ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು.
అపొస్తలుల కార్యములు 15 : 39 (ERVTE)
ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್‌ಗೆ ನೌಕಾಯಾನ ಮಾಡಿದನು.
అపొస్తలుల కార్యములు 15 : 40 (ERVTE)
ಪೌಲನು ತನ್ನೊಂದಿಗೆ ಸೀಲನನ್ನು ಕರೆದುಕೊಂಡು ಹೋದನು. ಅಂತಿಯೋಕ್ಯದ ಸಹೋದರರು ಪೌಲನನ್ನು ಪ್ರಭುವಿನ ಆಶ್ರಯಕ್ಕೆ ಒಪ್ಪಿಸಿ ಕಳುಹಿಸಿಕೊಟ್ಟರು.
అపొస్తలుల కార్యములు 15 : 41 (ERVTE)
ಪೌಲ ಸೀಲರು ಸಿರಿಯಾ ಮತ್ತು ಸಿಲಿಸಿಯ ನಾಡುಗಳಲ್ಲಿ ಹಾದು ಹೋಗುತ್ತಾ ಅಲ್ಲಿದ್ದ ಸಭೆಗಳಿಗೆ ಬಲವಾಗಿ ಬೆಳೆಯಲು ನೆರವು ನೀಡಿದರು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41