అపొస్తలుల కార్యములు 20 : 1 (ERVTE)
{#1ಮಕೆದೋನಿಯಕ್ಕೆ ಮತ್ತು ಗ್ರೀಸಿಗೆ ಪೌಲನ ಪ್ರಯಾಣ } ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು.
అపొస్తలుల కార్యములు 20 : 2 (ERVTE)
ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು.
అపొస్తలుల కార్యములు 20 : 3 (ERVTE)
ಅಲ್ಲಿ ಅವನು ಮೂರು ತಿಂಗಳವರೆಗೆ ಇದ್ದನು. ಅವನು ಸಿರಿಯಕ್ಕೆ ನೌಕಾಯಾನ ಮಾಡಲು ಸಿದ್ಧನಾಗಿದ್ದನು. ಆದರೆ ಕೆಲವು ಯೆಹೂದ್ಯರು ಅವನಿಗೆ ವಿರೋಧವಾಗಿ ಯೋಜನೆ ಮಾಡಿದರು. ಆದ್ದರಿಂದ ಪೌಲನು ಸಿರಿಯಕ್ಕೆ ಮಕೆದೋನಿಯದ ಮೂಲಕ ಹಿಂತಿರುಗಿ ಹೋಗಲು ನಿರ್ಧರಿಸಿದನು.
అపొస్తలుల కార్యములు 20 : 4 (ERVTE)
ಕೆಲವು ಜನರು ಅವನೊಂದಿಗಿದ್ದರು. ಅವರು ಯಾರೆಂದರೆ: ಬೆರೋಯ ಪಟ್ಟಣದ ಪುರ್ರನ ಮಗನಾದ ಸೋಪತ್ರನು, ಥೆಸಲೋನಿಕ ಪಟ್ಟಣದ ಆರಿಸ್ತಾರ್ಕ ಮತ್ತು ಸೆಕುಂದ, ದರ್ಬೆ ಪಟ್ಟಣದ ಗಾಯ ಮತ್ತು ತಿಮೊಥೆಯ, ಅಲ್ಲದೆ ಏಷ್ಯಾದ ತುಖಿಕ ಹಾಗು ತ್ರೊಫಿಮ.
అపొస్తలుల కార్యములు 20 : 5 (ERVTE)
ಇವರು ಪೌಲನಿಗಿಂತ ಮುಂಚಿತವಾಗಿಯೇ ಹೋದರು. ಅವರು ನಮಗಾಗಿ ತ್ರೋವ ಪಟ್ಟಣದಲ್ಲಿ ಕಾಯುತ್ತಿದ್ದರು.
అపొస్తలుల కార్యములు 20 : 6 (ERVTE)
ಯೆಹೂದ್ಯರ ಹುಳಿ ರಹಿತ ರೊಟ್ಟಿ ಹಬ್ಬದ ನಂತರ ನಾವು ಫಿಲಿಪ್ಪಿ ಪಟ್ಟಣದ ಹಡಗಿನಲ್ಲಿ ಹೋದೆವು. ಐದು ದಿನಗಳಾದ ನಂತರ ನಾವು ಇವರನ್ನು ತ್ರೋವದಲ್ಲಿ ಸಂಧಿಸಿದೆವು. ಅಲ್ಲಿ ನಾವು ಏಳು ದಿನ ತಂಗಿದೆವು.
అపొస్తలుల కార్యములు 20 : 7 (ERVTE)
{#1ತ್ರೋವಕ್ಕೆ ಪೌಲನ ಕೊನೆಯ ಭೇಟಿ } ಭಾನುವಾರದಂದು, ನಾವೆಲ್ಲರು ಪ್ರಭುವಿನ ರಾತ್ರಿ ಭೋಜನಕ್ಕೆ ಒಟ್ಟಾಗಿ ಸೇರಿದೆವು. ಸಭೆ ಸೇರಿಬಂದಿದ್ದ ಜನರೊಂದಿಗೆ ಪೌಲನು ಮಾತಾಡಿದನು. ಅವನು ಮರುದಿನ ಅಲ್ಲಿಂದ ಹೊರಡಬೇಕೆಂದು ಅಲೋಚಿಸಿಕೊಂಡಿದ್ದನು. ಪೌಲನು ಮಧ್ಯರಾತ್ರಿಯವರೆಗೂ ಮಾತಾಡುತ್ತಲೇ ಇದ್ದನು.
అపొస్తలుల కార్యములు 20 : 8 (ERVTE)
ನಾವೆಲ್ಲರೂ ಮೇಲಂತಸ್ತಿನ ಕೊಠಡಿಯೊಂದರಲ್ಲಿ ಸೇರಿ ಬಂದಿದ್ದೆವು. ಆ ಕೊಠಡಿಯಲ್ಲಿ ಅನೇಕ ದೀಪಗಳಿದ್ದವು.
అపొస్తలుల కార్యములు 20 : 9 (ERVTE)
ಯುತಿಕ ಎಂಬ ಯುವಕನು ಕಿಟಕಿಯಲ್ಲಿ ಕುಳಿತುಕೊಂಡಿದ್ದನು. ಪೌಲನು ಮಾತಾಡುತ್ತಲೇ ಇದ್ದನು. ಇತ್ತ ಯುವಕನು ಗಾಢವಾಗಿ ನಿದ್ರಿಸುತ್ತಾ ಮೂರನೆ ಅಂತಸ್ತಿನಿಂದ ಕೆಳಗಡೆ ಬಿದ್ದುಬಿಟ್ಟನು. ಜನರು ಕೆಳಗಿಳಿದು ಹೋಗಿ ಅವನನ್ನು ಎತ್ತಿ ನೋಡಿದಾಗ ಅವನು ಸತ್ತಿದ್ದನು.
అపొస్తలుల కార్యములు 20 : 10 (ERVTE)
ಪೌಲನು ಕೆಳಗಿಳಿದು ಅವನ ಬಳಿಗೆ ಹೋಗಿ, ಮೊಣಕಾಲೂರಿ ಅವನನ್ನು ಅಪ್ಪಿಕೊಂಡು, ಅಲ್ಲಿದ್ದ ವಿಶ್ವಾಸಿಗಳಿಗೆ, “ಚಿಂತಿಸಬೇಡಿ. ಇವನು ಮತ್ತೆ ಜೀವಂತನಾದನು” ಎಂದು ಹೇಳಿದನು.
అపొస్తలుల కార్యములు 20 : 11 (ERVTE)
ಪೌಲನು ಮತ್ತೆ ಮೇಲಂತಸ್ತಿಗೆ ಹೋಗಿ ರೊಟ್ಟಿಯನ್ನು ಮುರಿದು ಊಟಮಾಡಿದನು. ಪೌಲನು ಅವರೊಂದಿಗೆ ದೀರ್ಘಕಾಲ ಮಾತಾಡಿದನು. ಅಷ್ಟರಲ್ಲಿಯೇ ಮುಂಜಾನೆಯಾಗಿತ್ತು. ಬಳಿಕ ಪೌಲನು ಹೊರಟುಹೋದನು.
అపొస్తలుల కార్యములు 20 : 12 (ERVTE)
ಜನರು ಜೀವಂತನಾಗಿದ್ದ ಆ ಯುವಕನನ್ನು ಮನೆಗೆ ಕರೆದುಕೊಂಡು ಹೋದರು. ಇದರಿಂದ ಜನರಿಗೆ ಬಹಳ ಆದರಣೆಯಾಯಿತು.
అపొస్తలుల కార్యములు 20 : 13 (ERVTE)
{#1ತ್ರೋವದಿಂದ ಮಿಲೇತಕ್ಕೆ ಪ್ರಯಾಣ } ನಾವು ಪೌಲನಿಗಿಂತ ಮುಂಚಿತವಾಗಿಯೇ ಅಸ್ಸೊಸಿ ಎಂಬ ಪಟ್ಟಣಕ್ಕೆ ನೌಕಾಯಾನ ಮಾಡಿದೆವು. ತಾನು ಭೂಮಾರ್ಗವಾಗಿ ಬರುವುದಾಗಿಯೂ ಅಸ್ಸೊಸಿನಲ್ಲಿ ನಮ್ಮನ್ನು ಸಂಧಿಸಿ ಅಲ್ಲಿಂದ ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡುವುದಾಗಿಯೂ ಪೌಲನು ನಮಗೆ ತಿಳಿಸಿದ್ದನು.
అపొస్తలుల కార్యములు 20 : 14 (ERVTE)
ಅಂತೆಯೇ ನಾವು ಪೌಲನನ್ನು ಅಸ್ಸೊಸಿನಲ್ಲಿ ಸಂಧಿಸಿದೆವು. ಅಲ್ಲಿಂದ ಅವನು ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡಿದನು. ನಾವೆಲ್ಲರೂ ಮಿತಿಲೇನಿ ಪಟ್ಟಣಕ್ಕೆ ಹೋದೆವು.
అపొస్తలుల కార్యములు 20 : 15 (ERVTE)
ಮರುದಿನ ನಾವು ಅಲ್ಲಿಂದ ನೌಕಾಯಾನ ಮಾಡಿ ಖಿಯೋಸ್ ದ್ವೀಪದ ಸಮೀಪದಲ್ಲಿದ್ದ ಸ್ಥಳವೊಂದಕ್ಕೆ ಬಂದೆವು. ಮರುದಿನ ಸಾಮೋಸ್ ದ್ವೀಪಕ್ಕೆ ನೌಕಾಯಾನ ಮಾಡಿದೆವು. ಅದರ ಮೂರನೆಯ ದಿನ ನಾವು ಮಿಲೇತ ಪಟ್ಟಣಕ್ಕೆ ಬಂದೆವು.
అపొస్తలుల కార్యములు 20 : 16 (ERVTE)
ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.
అపొస్తలుల కార్యములు 20 : 17 (ERVTE)
{#1ಎಫೆಸದ ಹಿರಿಯರಿಗೆ ಪೌಲನ ಬುದ್ಧಿಮಾತು }
అపొస్తలుల కార్యములు 20 : 18 (ERVTE)
ಪೌಲನು ಮಿಲೇತದಿಂದ ಒಂದು ಸಂದೇಶವನ್ನು ಎಫೆಸಕ್ಕೆ ಕಳುಹಿಸಿ ಅಲ್ಲಿನ ಸಭೆಯ ಹಿರಿಯರನ್ನು ತನ್ನ ಬಳಿಗೆ ಬರಮಾಡಿಕೊಂಡನು. ಆ ಹಿರಿಯರು ಬಂದಾಗ ಪೌಲನು ಅವರಿಗೆ, “ನಾನು ಏಷ್ಯಾ ಪ್ರಾಂತ್ಯಕ್ಕೆ ಬಂದ ಮೊದಲನೆಯ ದಿನದಿಂದಲೂ ನೀವು ನನ್ನ ಜೀವಿತದ ಬಗ್ಗೆ ತಿಳಿದಿದ್ದೀರಿ. ನಾನು ನಿಮ್ಮೊಂದಿಗೆ ಇದ್ದ ಕಾಲದಲ್ಲೆಲ್ಲಾ ನಾನು ಯಾವ ರೀತಿಯಲ್ಲಿ ಜೀವಿಸಿದೆನೆಂಬುದು ನಿಮಗೆ ಗೊತ್ತಿದೆ.
అపొస్తలుల కార్యములు 20 : 19 (ERVTE)
ಯೆಹೂದ್ಯರು ನನಗೆ ವಿರೋಧವಾಗಿ ಮಾಡಿದ ಒಳಸಂಚುಗಳಿಂದ ನಾನು ಬಹಳ ಕಷ್ಟಪಡಬೇಕಾಯಿತು. ಅನೇಕ ಸಲ ಕಣ್ಣೀರಿಡಬೇಕಾಯಿತು. ಆದರೆ ನಾನು ಯಾವಾಗಲೂ ಪ್ರಭುವಿನ ಸೇವೆ ಮಾಡಿದೆನೆಂಬುದು ನಿಮಗೆ ಗೊತ್ತಿದೆ. ನಾನು ನನ್ನ ಬಗ್ಗೆ ಚಿಂತಿಸದೆ,
అపొస్తలుల కార్యములు 20 : 20 (ERVTE)
ನಿಮಗೆ ಒಳ್ಳೆಯದನ್ನೇ ಯಾವಾಗಲೂ ಮಾಡಿದೆನು. ನಾನು ನಿಮಗೆ ಯೇಸುವಿನ ಕುರಿತಾದ ಸುವಾರ್ತೆಯನ್ನು ಬಹಿರಂಗವಾಗಿ ಜನರೆದುರಿನಲ್ಲಿ ತಿಳಿಸಿದೆನು ಮತ್ತು ನಿಮ್ಮ ಮನೆಗಳಲ್ಲಿಯೂ ಸಹ ಬೋಧಿಸಿದೆನು.
అపొస్తలుల కార్యములు 20 : 21 (ERVTE)
ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.
అపొస్తలుల కార్యములు 20 : 22 (ERVTE)
“ಆದರೆ ಈಗ ನಾನು ಪವಿತ್ರಾತ್ಮನಿಗೆ ವಿಧೇಯನಾಗಿ ಜೆರುಸಲೇಮಿಗೆ ಹೋಗಬೇಕು. ಅಲ್ಲಿ ನನಗೆ ಏನು ಸಂಭವಿಸುವುದೋ ತಿಳಿಯದು.
అపొస్తలుల కార్యములు 20 : 23 (ERVTE)
ಜೆರುಸಲೇಮಿನಲ್ಲಿ ತೊಂದರೆಗಳು ಮತ್ತು ಸೆರೆವಾಸವು ನನಗಾಗಿ ಕಾದಿವೆಯೆಂದು ಪವಿತ್ರಾತ್ಮನು ಪ್ರತಿಯೊಂದು ಪಟ್ಟಣದಲ್ಲಿಯೂ ನನಗೆ ಹೇಳುತ್ತಿರುವುದು ಮಾತ್ರ ಸ್ಪಷ್ಟವಾಗಿದೆ.
అపొస్తలుల కార్యములు 20 : 24 (ERVTE)
ನಾನು ನನ್ನ ಸ್ವಂತ ಪ್ರಾಣದ ಬಗ್ಗೆ ಚಿಂತಿಸುವುದಿಲ್ಲ. ಪ್ರಭುವಾದ ಯೇಸು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಅತ್ಯಂತ ಮುಖ್ಯವಾಗಿದೆ. ದೇವರ ಕೃಪೆಯ ವಿಷಯವಾದ ಸುವಾರ್ತೆಯ ಬಗ್ಗೆ ಸಾಕ್ಷಿ ನೀಡುವುದೇ ನನ್ನ ಕೆಲಸವಾಗಿದೆ. ಆ ಕೆಲಸವನ್ನು ಮಾಡಿ ಪೂರೈಸುವುದೇ ನನ್ನ ಅಪೇಕ್ಷೆಯಾಗಿದೆ.
అపొస్తలుల కార్యములు 20 : 25 (ERVTE)
“ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.
అపొస్తలుల కార్యములు 20 : 26 (ERVTE)
ಆದ್ದರಿಂದ ಇಂದು ನಾನು ನಿಮಗೆ ದೃಢವಾಗಿ ಹೇಳಬಹುದಾದ ಒಂದು ಸಂಗತಿಯೇನೆಂದರೆ, ನಿಮ್ಮಲ್ಲಿ ಯಾರಾದರೂ ರಕ್ಷಣೆ ಹೊಂದಿಲ್ಲದಿದ್ದರೆ ಅದಕ್ಕೆ ನಾನು ಹೊಣೆಯಲ್ಲ.
అపొస్తలుల కార్యములు 20 : 27 (ERVTE)
ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.
అపొస్తలుల కార్యములు 20 : 28 (ERVTE)
ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.
అపొస్తలుల కార్యములు 20 : 29 (ERVTE)
ನಾನು ಹೊರಟುಹೋದ ಮೇಲೆ ಬೇರೆಯವರು ನಿಮ್ಮ ಸಭೆಗೆ ಬರುತ್ತಾರೆಂದು ನನಗೆ ಗೊತ್ತಿದೆ. ಕ್ರೂರವಾದ ತೋಳಗಳಂತಿರುವ ಅವರು ಮಂದೆಯನ್ನು ನಾಶಮಾಡಲು ಪ್ರಯತ್ನಿಸುವರು.
అపొస్తలుల కార్యములు 20 : 30 (ERVTE)
ಅಲ್ಲದೆ, ನಿಮ್ಮ ಸಭೆಯ ಕೆಲವು ಜನರೇ ದುರ್ಬೋಧಕರಾಗಿ ಯೇಸುವಿನ ಶಿಷ್ಯರಲ್ಲಿ ಕೆಲವರನ್ನು ಸತ್ಯದಿಂದ ದೂರಕ್ಕೆ ನಡೆಸುವರು.
అపొస్తలుల కార్యములు 20 : 31 (ERVTE)
ಆದ್ದರಿಂದ ಎಚ್ಚರಿಕೆಯಿಂದಿರಿ! ನಾನು ಮೂರು ವರ್ಷಗಳ ಕಾಲ ನಿಮ್ಮೊಂದಿಗೆ ಇದ್ದೆನು. ಈ ಕಾಲಾವಧಿಯಲ್ಲಿ ನಾನು ನಿಮಗೆ ಹಗಲಿರುಳು ಉಪದೇಶಿಸುತ್ತಾ ನಿಮಗಾಗಿ ಕಣ್ಣೀರಿಡುತ್ತಾ ನಿಮ್ಮನ್ನು ಎಚ್ಚರಿಸಿದ್ದನ್ನು ಮರೆಯದಿರಿ.
అపొస్తలుల కార్యములు 20 : 32 (ERVTE)
“ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು.
అపొస్తలుల కార్యములు 20 : 33 (ERVTE)
ನಾನು ನಿಮ್ಮೊಂದಿಗೆ ಇದ್ದಾಗ, ಯಾರ ಹಣವನ್ನಾಗಲಿ ಒಳ್ಳೆಯ ಬಟ್ಟೆಗಳನ್ನಾಗಲಿ ಎಂದೂ ಬಯಸಲಿಲ್ಲ.
అపొస్తలుల కార్యములు 20 : 34 (ERVTE)
ನಾನು ಯಾವಾಗಲೂ ನನ್ನ ಅಗತ್ಯತೆಗಳನ್ನು ಮತ್ತು ನನ್ನೊಂದಿಗಿರುವವರ ಅಗತ್ಯತೆಗಳನ್ನು ಪೂರೈಸುವುದಕ್ಕಾಗಿ ದುಡಿಯುತ್ತಿದ್ದೆನು ಎಂಬುದು ನಿಮಗೆ ಗೊತ್ತಿದೆ.
అపొస్తలుల కార్యములు 20 : 35 (ERVTE)
ಕಷ್ಟಪಟ್ಟು ದುಡಿದು ದುರ್ಬಲರಿಗೆ ನೆರವಾಗಬೇಕೆಂದು ನಾನೇ ನಿಮಗೆ ಮಾದರಿಯಾಗಿ ತೋರಿಸಿಕೊಟ್ಟಿದ್ದೇನೆ. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದರಲ್ಲೇ ಹೆಚ್ಚು ಸಂತೋಷ’ ಎಂಬ ಯೇಸುವಿನ ಮಾತನ್ನು ನಾವು ಮರೆಯಕೂಡದೆಂದು ನಿಮಗೆ ಉಪದೇಶಿಸಿದೆನು” ಎಂದು ಹೇಳಿದನು.
అపొస్తలుల కార్యములు 20 : 36 (ERVTE)
ಪೌಲನು ಈ ಸಂಗತಿಗಳನ್ನು ಹೇಳಿ ಮುಗಿಸಿದ ಮೇಲೆ ಮೊಣಕಾಲೂರಿ ಅವರೆಲ್ಲರೊಡನೆ ಪ್ರಾರ್ಥಿಸಿದನು.
అపొస్తలుల కార్యములు 20 : 37 (ERVTE)
(37-38)ಅವರೆಲ್ಲರೂ ಬಹಳವಾಗಿ ಅತ್ತರು. “ನೀವು ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲ”ವೆಂದು ಪೌಲನು ಹೇಳಿದ್ದರಿಂದ ಅವರು ಬಹಳ ದುಃಖಗೊಂಡಿದ್ದರು. ಅವರು ಪೌಲನನ್ನು ಅಪ್ಪಿಕೊಂಡು ಮುದ್ದಿಟ್ಟರು. ಅವರು ಹಡಗಿನವರೆಗೂ ಹೋಗಿ ಅವನನ್ನು ಬೀಳ್ಕೊಟ್ಟರು.
అపొస్తలుల కార్యములు 20 : 38 (ERVTE)

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38