అపొస్తలుల కార్యములు 23 : 1 (ERVTE)
ಪೌಲನು ಯೆಹೂದ್ಯರ ನ್ಯಾಯಸಭೆಯನ್ನು ದೃಷ್ಟಿಸಿ ನೋಡಿ, “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಎಂದು ಹೇಳಿದನು.
అపొస్తలుల కార్యములు 23 : 2 (ERVTE)
ಪ್ರಧಾನಯಾಜಕನಾದ ಅನನೀಯನು ಅಲ್ಲಿದ್ದನು. ಪೌಲನು ಹೇಳಿದ್ದನ್ನು ಕೇಳಿದ ಅನನೀಯನು ಪೌಲನ ಪಕ್ಕದಲ್ಲಿ ನಿಂತಿದ್ದವರಿಗೆ ಪೌಲನ ಬಾಯಿಯ ಮೇಲೆ ಹೊಡೆಯಲು ಹೇಳಿದನು.
అపొస్తలుల కార్యములు 23 : 3 (ERVTE)
ಪೌಲನು ಅನನೀಯನಿಗೆ, “ದೇವರು ನಿನ್ನನ್ನು ಸಹ ಹೊಡೆಯುವನು! ಸುಣ್ಣ ಬಳಿದ ಗೋಡೆ ನೀನು! ಮೋಶೆಯ ಧರ್ಮಶಾಸ್ತ್ರಕ್ಕನುಸಾರವಾಗಿ ನ್ಯಾಯತೀರ್ಪು ಮಾಡಲು ಅಲ್ಲಿ ಕುಳಿತುಕೊಂಡು ನನಗೆ ಹೊಡೆಯಲು ಅವರಿಗೆ ಹೇಳುತ್ತಿರುವೆಯಾ! ಮೋಶೆಯ ಧರ್ಮಶಾಸ್ತ್ರಕ್ಕೆ ಅದು ವಿರುದ್ಧವಾದದ್ದು” ಎಂದು ಹೇಳಿದನು.
అపొస్తలుల కార్యములు 23 : 4 (ERVTE)
అపొస్తలుల కార్యములు 23 : 5 (ERVTE)
ಪೌಲನ ಸಮೀಪದಲ್ಲಿ ನಿಂತಿದ್ದ ಜನರು ಅವನಿಗೆ, “ದೇವರ ಪ್ರಧಾನಯಾಜಕನಿಗೆ ನೀನು ಈ ರೀತಿ ಮಾತಾಡಕೂಡದು! ನೀನು ಅವನಿಗೆ ಅವಮಾನ ಮಾಡುತ್ತಿರುವೆ!” ಎಂದು ಹೇಳಿದರು.
అపొస్తలుల కార్యములు 23 : 6 (ERVTE)
ಪೌಲನು, “ಸಹೋದರರೇ, ಈ ಮನುಷ್ಯನು ಪ್ರಧಾನಯಾಜಕನೆಂದು ನನಗೆ ಗೊತ್ತಿರಲ್ಲಿಲ್ಲ. ‘ನಿಮ್ಮ ಜನನಾಯಕರ ಬಗ್ಗೆ ಕೆಟ್ಟಮಾತುಗಳುನ್ನು ಆಡಬಾರದು’[✡ ಉಲ್ಲೇಖನ: ವಿಮೋಚನ. 22: 28 ] ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ” ಎಂದು ಹೇಳಿದನು.
అపొస్తలుల కార్యములు 23 : 7 (ERVTE)
ಸಭೆಯಲ್ಲಿದ್ದ ಜನರಲ್ಲಿ ಕೆಲವರು ಸದ್ದುಕಾಯರಾಗಿದ್ದರು; ಮತ್ತೆ ಕೆಲವರು ಫರಿಸಾಯರಾಗಿದ್ದರು. ಆದ್ದರಿಂದ ಪೌಲನು, “ನನ್ನ ಸಹೋದರರೇ, ನಾನು ಫರಿಸಾಯನು! ನನ್ನ ತಂದೆಯೂ ಫರಿಸಾಯನಾಗಿದ್ದನು! ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!” ಎಂದು ಕೂಗಿ ಹೇಳಿದನು. ಪೌಲನು ಹೀಗೆ ಹೇಳಿದಾಗ, ಫರಿಸಾಯರಿಗೂ ಸದ್ದುಕಾಯರಿಗೂ ದೊಡ್ಡ ವಾಗ್ವಾದವಾಯಿತು. ಸಭೆಯಲ್ಲಿ ಭೇದ ಉಂಟಾಯಿತು.
అపొస్తలుల కార్యములు 23 : 8 (ERVTE)
(ಸತ್ತವರಿಗೆ ಪುನರುತ್ಥಾನವಿಲ್ಲ; ದೇವದೂತರುಗಳಾಗಲಿ ಆತ್ಮಗಳಾಗಲಿ ಇಲ್ಲವೇ ಇಲ್ಲ ಎಂಬುದು ಸದ್ದುಕಾಯರ ನಂಬಿಕೆ. ಫರಿಸಾಯರ ನಂಬಿಕೆ ಇದಕ್ಕೆ ತದ್ವಿರುದ್ಧವಾಗಿದೆ.)
అపొస్తలుల కార్యములు 23 : 9 (ERVTE)
ಈ ಯೆಹೂದ್ಯರೆಲ್ಲರೂ ಹೆಚ್ಚುಹೆಚ್ಚು ಗಟ್ಟಿಯಾಗಿ ಆರ್ಭಟಿಸಿತೊಡಗಿದರು. ಫರಿಸಾಯರ ಗುಂಪಿಗೆ ಸೇರಿದ್ದ ಕೆಲವು ಮಂದಿ ಧರ್ಮೋಪದೇಶಕರು ಎದ್ದುನಿಂತುಕೊಂಡು, “ಈ ಮನುಷ್ಯನಲ್ಲಿ ನಮಗೇನೂ ತಪ್ಪು ಕಂಡುಬರುತ್ತಿಲ್ಲ! ದಮಸ್ಕಕ್ಕೆ ಹೋಗುವ ದಾರಿಯಲ್ಲಿ ದೇವದೂತನಾಗಲಿ ಆತ್ಮವಾಗಲಿ ಅವನೊಂದಿಗೆ ಮಾತಾಡಿದ್ದಿರಬೇಕು!” ಎಂದು ವಾದಿಸಿದರು.
అపొస్తలుల కార్యములు 23 : 10 (ERVTE)
అపొస్తలుల కార్యములు 23 : 11 (ERVTE)
ಈ ವಾಗ್ವಾದವು ಜಗಳವಾಯಿತು. ಯೆಹೂದ್ಯರು ಪೌಲನನ್ನು ತುಂಡುತುಂಡು ಮಾಡುವರೆಂಬ ಭಯದಿಂದ ಸೇನಾಧಿಪತಿಯು ಸಿಪಾಯಿಗಳಿಗೆ, “ಕೆಳಗೆ ಇಳಿದುಹೋಗಿ ಪೌಲನನ್ನು ಯೆಹೂದ್ಯರ ಬಳಿಯಿಂದ ಕೊಂಡೊಯ್ದು ಸೈನ್ಯದ ಕೋಟೆಯೊಳಗೆ ಇರಿಸಿರಿ” ಎಂದು ಆಜ್ಞಾಪಿಸಿದನು.
అపొస్తలుల కార్యములు 23 : 12 (ERVTE)
ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು. {#1ಪೌಲನನ್ನು ಕೊಲ್ಲಲು ಕೆಲವು ಯೆಹೂದ್ಯರ ಸಂಚು } ಮರುದಿನ ಮುಂಜಾನೆ ಯೆಹೂದ್ಯರಲ್ಲಿ ಕೆಲವರು, ತಾವು ಪೌಲನನ್ನು ಕೊಲ್ಲದ ಹೊರತು ಏನನ್ನೂ ತಿನ್ನುವುದಿಲ್ಲ ಮತ್ತು ಏನನ್ನೂ ಕುಡಿಯುವುದಿಲ್ಲ ಎಂಬುದಾಗಿ ಹರಕೆ ಮಾಡಿಕೊಂಡರು.
అపొస్తలుల కార్యములు 23 : 13 (ERVTE)
ಹೀಗೆ ಸುಮಾರು ನಲವತ್ತಕ್ಕಿಂತಲೂ ಹೆಚ್ಚು ಮಂದಿ ಹರಕೆ ಮಾಡಿಕೊಂಡಿದ್ದರು.
అపొస్తలుల కార్యములు 23 : 14 (ERVTE)
ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!
అపొస్తలుల కార్యములు 23 : 15 (ERVTE)
ಆದ್ದರಿಂದ ಈಗ ನೀವು ಮಾಡಬೇಕಾದದ್ದೇನೆಂದರೆ, ಸೇನಾಧಿಪತಿಗೂ ಎಲ್ಲಾ ಯೆಹೂದ್ಯ ನಾಯಕರಿಗೂ ಒಂದು ಸಂದೇಶವನ್ನು ಕಳುಹಿಸಿಕೊಡಿರಿ. ಪೌಲನಿಗೆ ಇನ್ನೂ ಹೆಚ್ಚು ಪ್ರಶ್ನೆಗಳನ್ನು ಕೇಳಬೇಕಾಗಿರುವುದರಿಂದ ಪೌಲನನ್ನು ನಮ್ಮ ಬಳಿಗೆ ಕರೆದುಕೊಂಡು ಬರಬೇಕೆಂದು ಸೇನಾಧಿಪತಿಗೆ ತಿಳಿಸಿರಿ. ಪೌಲನು ಇಲ್ಲಿಗೆ ಬರುತ್ತಿರುವಾಗಲೇ ನಾವು ಮಾರ್ಗದಲ್ಲಿ ಕಾದುಕೊಂಡಿದ್ದು ಅವನನ್ನು ಕೊಲ್ಲುತ್ತೇವೆ” ಎಂದು ಹೇಳಿದರು.
అపొస్తలుల కార్యములు 23 : 16 (ERVTE)
ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.
అపొస్తలుల కార్యములు 23 : 17 (ERVTE)
ಆಗ ಪೌಲನು ಸೇನಾಧಿಕಾರಿಗಳಲ್ಲಿ ಒಬ್ಬನನ್ನು ಕರೆದು, “ಈ ಯೌವನಸ್ಥನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋಗು. ಇವನು ಒಂದು ಸಂದೇಶವನ್ನು ಅವನಿಗೆ ತಿಳಿಸಬೇಕಾಗಿದೆ” ಎಂದು ಹೇಳಿದನು.
అపొస్తలుల కార్యములు 23 : 18 (ERVTE)
ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು.
అపొస్తలుల కార్యములు 23 : 19 (ERVTE)
అపొస్తలుల కార్యములు 23 : 20 (ERVTE)
ಸೇನಾಧಿಪತಿಯು ಆ ಯೌವನಸ್ಥನನ್ನು ಕೈಹಿಡಿದು ಏಕಾಂತವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ, “ನೀನು ಏನು ತಿಳಿಸಬೇಕೆಂದಿರುವೆ?” ಎಂದು ಕೇಳಿದನು. ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.
అపొస్తలుల కార్యములు 23 : 21 (ERVTE)
ಆದರೆ ಅವರನ್ನು ನಂಬಬೇಡ! ಪೌಲನನ್ನು ಕೊಲ್ಲುವುದಕ್ಕಾಗಿ ನಲವತ್ತಕ್ಕಿಂತಲೂ ಹೆಚ್ಚು ಮಂದಿ ಯೆಹೂದ್ಯರು ಅಡಗಿಕೊಂಡು ಕಾಯುತ್ತಿದ್ದಾರೆ. ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂದು ಅವರೆಲ್ಲರೂ ಹರಕೆ ಮಾಡಿಕೊಂಡಿದ್ದಾರೆ! ಈಗ ಅವರು ನಿನ್ನ ಒಪ್ಪಿಗೆಗಾಗಿ ಕಾಯುತ್ತಿದ್ದಾರೆ” ಎಂದು ಹೇಳಿದನು.
అపొస్తలుల కార్యములు 23 : 22 (ERVTE)
అపొస్తలుల కార్యములు 23 : 23 (ERVTE)
ಸೇನಾಧಿಪತಿಯು ಯೌವನಸ್ಥನಿಗೆ, “ಅವರ ಯೋಜನೆಯ ಬಗ್ಗೆ ನೀನು ನನಗೆ ಹೇಳಿರುವುದಾಗಿ ಯಾರಿಗೂ ತಿಳಿಸಬೇಡ” ಎಂದು ಹೇಳಿ ಅವನನ್ನು ಕಳುಹಿಸಿಬಿಟ್ಟನು. {#1ಪೌಲನನ್ನು ಸೆಜರೇಯಕ್ಕೆ ಕಳುಹಿಸಲಾಯಿತು } ಬಳಿಕ ಸೇನಾಧಿಪತಿಯು ಇಬ್ಬರು ಸೇನಾಧಿಕಾರಿಗಳನ್ನು ಕರೆದು ಅವರಿಗೆ, “ಸೆಜರೇಯಕ್ಕೆ ಕಳುಹಿಸಿಕೊಡಲು ಇನ್ನೂರು ಮಂದಿ ಸೈನಿಕರನ್ನು ಸಿದ್ಧಪಡಿಸು. ಅಲ್ಲದೆ ಎಪ್ಪತ್ತು ಮಂದಿಯ ಅಶ್ವದಳವನ್ನೂ ಇನ್ನೂರು ಮಂದಿ ಭಲ್ಲೆಯವರನ್ನೂ ಸಿದ್ಧಪಡಿಸು. ಈ ರಾತ್ರಿ ಒಂಭತ್ತು ಗಂಟೆಗೆ ಇಲ್ಲಿಂದ ಹೊರಡಲು ನೀವು ಸಿದ್ಧರಾಗಿರಬೇಕು.
అపొస్తలుల కార్యములు 23 : 24 (ERVTE)
ಪೌಲನ ಪ್ರಯಾಣಕ್ಕಾಗಿ ಕೆಲವು ಕುದುರೆಗಳನ್ನು ತೆಗೆದುಕೊ. ರಾಜ್ಯಪಾಲನಾದ ಫೇಲಿಕ್ಸನ ಬಳಿಗೆ ಅವನನ್ನು ಸುರಕ್ಷಿತವಾಗಿ ಕೊಂಡೊಯ್ಯಲೇಬೇಕು” ಎಂದು ಹೇಳಿದನು.
అపొస్తలుల కార్యములు 23 : 25 (ERVTE)
ಸೇನಾಧಿಪತಿಯು ಒಂದು ಪತ್ರವನ್ನೂ ಬರೆದನು. ಅದರಲ್ಲಿ ಹೀಗೆ ತಿಳಿಸಲಾಗಿತ್ತು:
అపొస్తలుల కార్యములు 23 : 26 (ERVTE)
ಕ್ಲಾಡಿಯ ಲೂಸಿಯನಿಂದ ಮಹಾರಾಜಶ್ರೀಗಳಾದ ರಾಜ್ಯಪಾಲ ಫೇಲಿಕ್ಸನಿಗೆ, ವಂದನೆಗಳು.
అపొస్తలుల కార్యములు 23 : 27 (ERVTE)
27 ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲುವುದರಲ್ಲಿದ್ದರು. ಆದರೆ ಇವನು ರೋಮ್‌ನ ಪ್ರಜೆಯೆಂಬುದು ನನಗೆ ತಿಳಿಯಿತು. ಆದ್ದರಿಂದ ನಾನು ಸೈನಿಕರೊಂದಿಗೆ ಹೋಗಿ ಇವನನ್ನು ಕಾಪಾಡಿದೆನು.
అపొస్తలుల కార్యములు 23 : 28 (ERVTE)
ಅವರು ಇವನ ಮೇಲೆ ಹೊರಿಸುತ್ತಿರುವ ಆಪಾದನೆಗಳಿಗೆ ಕಾರಣವನ್ನು ತಿಳಿದುಕೊಳ್ಳಲು ನಾನು ನ್ಯಾಯಸಭೆಯ ಮುಂದೆ ನಿಲ್ಲಿಸಿದೆ.
అపొస్తలుల కార్యములు 23 : 29 (ERVTE)
ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.
అపొస్తలుల కార్యములు 23 : 30 (ERVTE)
ಆದರೆ ಯೆಹೂದ್ಯರಲ್ಲಿ ಕೆಲವರು ಪೌಲನನ್ನು ಕೊಲ್ಲಲು ಯೋಜನೆ ಮಾಡುತ್ತಿರುವುದು ನನಗೆ ತಿಳಿಯಿತು. ಆದ್ದರಿಂದ ನಾನು ಅವನನ್ನು ನಿನ್ನ ಬಳಿಗೆ ಕಳುಹಿಸಿದ್ದೇನೆ. ಅಲ್ಲದೆ ಅವನ ಮೇಲಿರುವ ದೂರುಗಳನ್ನು ನಿನಗೆ ತಿಳಿಸಬೇಕೆಂದು ನಾನು ಆಪಾದಕರಿಗೂ ಸಹ ತಿಳಿಸಿದ್ದೇನೆ.
అపొస్తలుల కార్యములు 23 : 31 (ERVTE)
ಸೇನಾಧಿಪತಿಯ ಆಜ್ಞೆಗನುಸಾರವಾಗಿ ಸೈನಿಕರು ಕಾರ್ಯವೆಸಗಿದರು. ಆ ರಾತ್ರಿ ಸೈನಿಕರು ಪೌಲನನ್ನು ಅಂತಿಪತ್ರಿಯ ಎಂಬ ಪಟ್ಟಣಕ್ಕೆ ಕರೆದುಕೊಂಡು ಹೋದರು.
అపొస్తలుల కార్యములు 23 : 32 (ERVTE)
ಮರುದಿನ ಅಶ್ವದಳದವರು ಪೌಲನೊಂದಿಗೆ ಸೆಜರೇಯ ಪಟ್ಟಣಕ್ಕೆ ಹೋದರು. ಆದರೆ ಉಳಿದ ಸೈನಿಕರು ಮತ್ತು ಭರ್ಜಿದಾರರು ಜೆರುಸಲೇಮಿನ ಸೈನ್ಯದ ಕೋಟೆಗೆ ಹಿಂತಿರುಗಿದರು.
అపొస్తలుల కార్యములు 23 : 33 (ERVTE)
ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.
అపొస్తలుల కార్యములు 23 : 34 (ERVTE)
ರಾಜ್ಯಪಾಲನು ಪತ್ರವನ್ನು ಓದಿದನು. ಬಳಿಕ ಅವನು ಪೌಲನಿಗೆ, “ನೀನು ಯಾವ ದೇಶದವನು?” ಎಂದು ಕೇಳಿದಾಗ, ಸಿಲಿಸಿಯದವನೆಂಬುದು ತಿಳಿಯಿತು.
అపొస్తలుల కార్యములు 23 : 35 (ERVTE)
ರಾಜ್ಯಪಾಲನು, “ನಿನಗೆ ವಿರೋಧವಾಗಿರುವ ಯೆಹೂದ್ಯರು ಇಲ್ಲಿಗೆ ಬಂದಾಗ, ನಾನು ನಿನ್ನ ವಿಚಾರಣೆ ಮಾಡುತ್ತೇನೆ” ಎಂದು ಹೇಳಿದನು. ಬಳಿಕ ರಾಜ್ಯಪಾಲನು ಪೌಲನನ್ನು ಅರಮನೆಯೊಳಗೆ ಇರಿಸಬೇಕೆಂದು ಆಜ್ಞಾಪಿಸಿದನು. (ಈ ಕಟ್ಟಡವನ್ನು ಹೆರೋದನು ಕಟ್ಟಿಸಿದ್ದನು.)

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35