అపొస్తలుల కార్యములు 24 : 1 (ERVTE)
{#1ಪೌಲನ ಮೇಲೆ ಯೆಹೂದ್ಯರ ದೋಷಾರೋಪಣೆ } ಐದು ದಿನಗಳ ನಂತರ, ಪ್ರಧಾನಯಾಜಕ ಅನನೀಯನು ಯೆಹೂದ್ಯರ ಹಿರೀನಾಯಕರಲ್ಲಿ ಕೆಲವರನ್ನು ಮತ್ತು ತೆರ್ತುಲ್ಲ ಎಂಬ ವಕೀಲನನ್ನು ಕರೆದುಕೊಂಡು ರಾಜ್ಯಪಾಲನ ಎದುರಿನಲ್ಲಿ ಪೌಲನ ಮೇಲೆ ದೋಷಾರೋಪಣೆ ಮಾಡಲು ಸೆಜರೇಯ ಪಟ್ಟಣಕ್ಕೆ ಹೋದನು.
అపొస్తలుల కార్యములు 24 : 2 (ERVTE)
ಪೌಲನನ್ನು ಸಭೆಗೆ ಕರೆಸಲಾಯಿತು. ಆಗ ತೆರ್ತುಲ್ಲನು ತನ್ನ ಆಪಾದನೆಗಳನ್ನು ಹೊರಿಸಲಾರಂಭಿಸಿದನು: “ಮಹಾರಾಜಶ್ರೀಗಳಾದ ಫೇಲಿಕ್ಸನೇ, ನಿನ್ನ ದೆಸೆಯಿಂದಾಗಿ ನಮ್ಮ ಜನರು ಶಾಂತಿಯಿಂದ ಜೀವಿಸುತ್ತಿದ್ದಾರೆ. ನಿನ್ನ ವಿವೇಕದ ಸಹಾಯದಿಂದ ನಮ್ಮ ದೇಶದ ಅನೇಕ ದೋಷಗಳನ್ನು ಸರಿಪಡಿಸಿ ಸುಧಾರಣೆಗಳನ್ನು ಮಾಡಲಾಗಿದೆ.
అపొస్తలుల కార్యములు 24 : 3 (ERVTE)
ನಾವು ಇವುಗಳನ್ನು ಬಹು ಕೃತಜ್ಞತೆಯಿಂದ ಎಲ್ಲಾ ಸ್ಥಳಗಳಲ್ಲಿ ಯಾವಾಗಲೂ ಒಪ್ಪಿಕೊಳ್ಳುತ್ತೇವೆ.
అపొస్తలుల కార్యములు 24 : 4 (ERVTE)
ಆದರೆ ನಾನು ನಿನ್ನ ಸಮಯವನ್ನು ಇನ್ನೂ ಹೆಚ್ಚಿಗೆ ತೆಗೆದುಕೊಳ್ಳಬಯಸದೆ, ಕೆಲವೇ ಮಾತುಗಳಲ್ಲಿ ಹೇಳುವೆ. ದಯವಿಟ್ಟು ತಾಳ್ಮೆಯಿಂದಿರು.
అపొస్తలుల కార్యములు 24 : 5 (ERVTE)
ಈ ಮನುಷ್ಯನು (ಪೌಲನು) ಗಲಭೆ ಮಾಡುತ್ತಿದ್ದಾನೆ. ಯೆಹೂದ್ಯರು ಜಗತ್ತಿನಲ್ಲಿ ಎಲ್ಲೇ ಇರಲಿ, ಅಲ್ಲೆಲ್ಲಾ ಇವನು ಗಲಭೆಯನ್ನು ಎಬ್ಬಿಸುತ್ತಾನೆ. ಇವನು ‘ನಜರೇನ’ ಪಂಗಡದ ನಾಯಕನಾಗಿದ್ದಾನೆ.
అపొస్తలుల కార్యములు 24 : 6 (ERVTE)
ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು.
అపొస్తలుల కార్యములు 24 : 7 (ERVTE)
[* ಕೆಲವು ಗ್ರೀಕ್ ಪ್ರತಿಗಳಲ್ಲಿ 7ನೇ ವಚನವನ್ನು ಸೇರಿಸಲಾಗಿದೆ: “ಆದರೆ ಅಧಿಕಾರಿಯಾದ ಲೂಸಿಯನು ಬಂದು ಹೆಚ್ಚು ಬಲಪ್ರಯೋಗ ಮಾಡಿ ಅವನನ್ನು ನಮ್ಮ ಬಳಿಯಿಂದ ಕೊಂಡೊಯ್ದನು, ಮತ್ತು ನಿನ್ನ ಬಳಿಗೆ ಬಂದು ನಮ್ಮ ಮೇಲೆ ದೂರು ಹೇಳುವಂತೆ ಲೂಸಿಯನು ತನ್ನ ಜನರಿಗೆ ಆಜ್ಞಾಪಿಸಿದ್ದಾನೆ.” ]
అపొస్తలుల కార్యములు 24 : 8 (ERVTE)
ಸ್ವತಃ ನೀನೇ ಇವನಿಗೆ ಕೆಲವು ಪ್ರಶ್ನೆಗಳನ್ನು ಕೇಳು. ಆಗ ಈ ಸಂಗತಿಗಳೆಲ್ಲಾ ಸತ್ಯವಾಗಿವೆಯೋ ಇಲ್ಲವೋ ಎಂದು ನಿರ್ಣಯಿಸಲು ನಿನಗೆ ಸಾಧ್ಯವಾಗುವುದು.”
అపొస్తలుల కార్యములు 24 : 9 (ERVTE)
ಉಳಿದ ಯೆಹೂದ್ಯರು, “ಈ ಸಂಗತಿಗಳು ನಿಜವಾಗಿಯೂ ಸತ್ಯವಾದುವುಗಳು!” ಎಂದರು.
అపొస్తలుల కార్యములు 24 : 10 (ERVTE)
{#1ಫೇಲಿಕ್ಸನ ಎದುರು ಪೌಲನ ಪ್ರತಿಪಾದನೆ } ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.
అపొస్తలుల కార్యములు 24 : 11 (ERVTE)
ನಾನು ಆರಾಧನೆಗೋಸ್ಕರ ಜೆರುಸಲೇಮಿಗೆ ಹೋದದ್ದು ಕೇವಲ ಹನ್ನೆರಡು ದಿನಗಳ ಹಿಂದೆಯಷ್ಟೆ. ಅದು ಸತ್ಯವೆಂದು ಸ್ವತಃ ನೀನೇ ತಿಳಿದುಕೊಳ್ಳಬಲ್ಲೆ.
అపొస్తలుల కార్యములు 24 : 12 (ERVTE)
ನಾನು ದೇವಾಲಯದಲ್ಲಾಗಲಿ ಸಭಾಮಂದಿರಗಳಲ್ಲಾಗಲಿ ಪಟ್ಟಣದಲ್ಲಾಗಲಿ ಯಾರೊಂದಿಗಾದರೂ ವಾದ ಮಾಡುತ್ತಿರುವುದನ್ನು, ಇಲ್ಲವೆ ಜನರ ಗುಂಪು ಕೂಡಿಸುವುದನ್ನು ಇವರು ನೋಡಿಲ್ಲ.
అపొస్తలుల కార్యములు 24 : 13 (ERVTE)
ಈಗ ನನಗೆ ವಿರೋಧವಾಗಿ ಹೇಳುತ್ತಿರುವ ಸಂಗತಿಗಳನ್ನು ಈ ಯೆಹೂದ್ಯರು ನಿರೂಪಿಸಲಾರರು.
అపొస్తలుల కార్యములు 24 : 14 (ERVTE)
“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.
అపొస్తలుల కార్యములు 24 : 15 (ERVTE)
ಈ ಯೆಹೂದ್ಯರಿಗೆ ದೇವರಲ್ಲಿ ಯಾವ ನಿರೀಕ್ಷೆಯಿದೆಯೋ ಅದೇ ನಿರೀಕ್ಷೆ ನನಗೂ ಇದೆ. ನೀತಿವಂತರಿಗೂ ಅನೀತಿವಂತರಿಗೂ ಪುನರುತ್ಥಾನವಾಗುತ್ತದೆ ಎಂಬುದೇ ಆ ನಿರೀಕ್ಷೆ.
అపొస్తలుల కార్యములు 24 : 16 (ERVTE)
ಈ ಕಾರಣದಿಂದ ನಾನು ಯಾವುದನ್ನು ಸರಿಯಾದದ್ದು ಎಂದು ನಂಬಿದ್ದೇನೋ ಅದನ್ನು ದೇವರ ಮುಂದೆಯೂ ಮನುಷ್ಯರ ಮುಂದೆಯೂ ಮಾಡಲು ಯಾವಾಗಲು ಪ್ರಯತ್ನಿಸುತ್ತಿದ್ದೇನೆ.
అపొస్తలుల కార్యములు 24 : 17 (ERVTE)
“ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.
అపొస్తలుల కార్యములు 24 : 18 (ERVTE)
ನಾನು ಈ ಕಾರ್ಯದಲ್ಲಿ ನಿರತನಾಗಿದ್ದಾಗ ಕೆಲವು ಮಂದಿ ಯೆಹೂದ್ಯರು ನನ್ನನ್ನು ದೇವಾಲಯದಲ್ಲಿ ಕಂಡರು. ನಾನು ಶುದ್ಧಾಚಾರದ ವಿಧಿಯನ್ನು ಮುಗಿಸಿದ್ದೆನು. ನಾನು ಯಾವ ಗಲಭೆಯನ್ನೂ ಮಾಡಿರಲಿಲ್ಲ. ನನ್ನ ಸುತ್ತಲೂ ಯಾವ ಜನರೂ ಇರಲಿಲ್ಲ.
అపొస్తలుల కార్యములు 24 : 19 (ERVTE)
ಆದರೆ ಏಷ್ಯಾದ ಕೆಲವು ಮಂದಿ ಯೆಹೂದ್ಯರು ಅಲ್ಲಿದ್ದರು. ಅವರು ಈಗ ನಿನ್ನೆದುರಿನಲ್ಲಿ ಇರಬೇಕಿತ್ತು. ನಾನು ನಿಜವಾಗಿ ಏನಾದರೂ ತಪ್ಪು ಮಾಡಿದ್ದರೆ ಏಷ್ಯಾದ ಆ ಯೆಹೂದ್ಯರೇ ನನ್ನ ಮೇಲೆ ದೋಷಾರೋಪಣೆ ಮಾಡಬೇಕಿತ್ತು.
అపొస్తలుల కార్యములు 24 : 20 (ERVTE)
ನಾನು ಜೆರುಸಲೇಮಿನಲ್ಲಿ ಯೆಹೂದ್ಯ ನ್ಯಾಯಸಭೆಯ ಮುಂದೆ ನಿಂತಿದ್ದಾಗ, ನನ್ನಲ್ಲಿ ಅವರಿಗೆ ಯಾವ ಅಪರಾಧಗಳು ಕಂಡುಬಂದವೆಂದು ಇಲ್ಲಿರುವ ಈ ಯೆಹೂದ್ಯರನ್ನೇ ಕೇಳು.
అపొస్తలుల కార్యములు 24 : 21 (ERVTE)
ನಾನು ಅವರ ಮುಂದೆ ನಿಂತಿದ್ದಾಗ, ‘ಸತ್ತವರು ಪುನರುತ್ಥಾನ ಹೊಂದುತ್ತಾರೆಂದು ನಾನು ನಂಬುವುದರಿಂದ ಇಲ್ಲಿ ನ್ಯಾಯವಿಚಾರಣೆಗೆ ಗುರಿಯಾಗಿದ್ದೇನೆ!’ ಎಂಬ ಒಂದೇ ಒಂದು ಸಂಗತಿಯನ್ನು ನಾನು ಕೂಗಿ ಹೇಳಿದೆ.”
అపొస్తలుల కార్యములు 24 : 22 (ERVTE)
ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.
అపొస్తలుల కార్యములు 24 : 23 (ERVTE)
ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.
అపొస్తలుల కార్యములు 24 : 24 (ERVTE)
{#1ಫೇಲಿಕ್ಸ ಮತ್ತು ಅವನ ಪತ್ನಿಯ ಮುಂದೆ ಪೌಲನು } ಕೆಲವು ದಿನಗಳಾದ ಮೇಲೆ ಫೇಲಿಕ್ಸನು ತನ್ನ ಹೆಂಡತಿಯಾದ ದ್ರೂಸಿಲ್ಲಳೊಂದಿಗೆ ಬಂದನು. ಆಕೆ ಯೆಹೂದ್ಯಳು. ಫೇಲಿಕ್ಸನು ಪೌಲನನ್ನು ಕರೆಯಿಸಿದನು. ಕ್ರಿಸ್ತನಾದ ಯೇಸುವಿನಲ್ಲಿ ನಂಬಿಕೆ ಇಡುವುದರ ಬಗ್ಗೆ ಪೌಲನು ಹೇಳಿದ್ದನ್ನು ಅವನು ಆಲಿಸಿದನು.
అపొస్తలుల కార్యములు 24 : 25 (ERVTE)
ಆದರೆ ನೀತಿಯಬಾಳ್ವೆ, ಇಂದ್ರಿಯನಿಗ್ರಹ ಮತ್ತು ಮುಂದೆ ಬರಲಿರುವ ನ್ಯಾಯತೀರ್ಪುಗಳ ಬಗ್ಗೆ ಪೌಲನು ಮಾತಾಡಿದಾಗ ಅವನು ಭಯಗೊಂಡು, “ಈಗ ನೀನು ಹೋಗು! ನನಗೆ ಹೆಚ್ಚು ಸಮಯವಿರುವಾಗ ನಿನ್ನನ್ನು ಕರೆಯಿಸುತ್ತೇನೆ” ಎಂದು ಹೇಳಿದನು.
అపొస్తలుల కార్యములు 24 : 26 (ERVTE)
ಆದರೆ ಪೌಲನು ಲಂಚ ಕೊಡಬಹುದೆಂದು ಅವನು ನಿರೀಕ್ಷಿಸಿಕೊಂಡಿದ್ದರಿಂದ ಅವನು ಅನೇಕ ಸಲ ಪೌಲನನ್ನು ಕರೆಯಿಸಿ ಅವನೊಂದಿಗೆ ಮಾತಾಡಿದನು.
అపొస్తలుల కార్యములు 24 : 27 (ERVTE)
ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27