అపొస్తలుల కార్యములు 4 : 1 (ERVTE)
{#1ನ್ಯಾಯಸಭೆಯ ಮುಂದೆ ಪೇತ್ರ ಮತ್ತು ಯೋಹಾನ } ಪೇತ್ರ ಮತ್ತು ಯೋಹಾನ ಜನರೊಂದಿಗೆ ಮಾತಾಡುತ್ತಿದ್ದಾಗ, ಕೆಲವು ಜನರು ಅವರ ಬಳಿಗೆ ಬಂದರು. ಅಲ್ಲಿ ಕೆಲವು ಯೆಹೂದ್ಯ ಯಾಜಕರಿದ್ದರು. ಕೆಲವು ಸದ್ದುಕಾಯರಿದ್ದರು ಮತ್ತು ದೇವಾಲಯ ಕಾಯುವ ಸಿಪಾಯಿಗಳ ಅಧಿಪತಿಯೂ ಇದ್ದನು.
అపొస్తలుల కార్యములు 4 : 2 (ERVTE)
ಈ ಇಬ್ಬರು ಅಪೊಸ್ತಲರು ಜನರಿಗೆ ಉಪದೇಶ ಮಾಡುತ್ತಿರುವುದನ್ನು ಕಂಡು ಅವರು ಸಿಟ್ಟುಗೊಂಡರು. ಯೇಸುವಿನ ಶಕ್ತಿಯ ಮೂಲಕವಾಗಿ ಜನರು ಪುನರುತ್ಥಾನ ಹೊಂದುತ್ತಾರೆ ಎಂದು ಪೇತ್ರ ಮತ್ತು ಯೋಹಾನ ಬೋಧಿಸುತ್ತಿದ್ದರು.
అపొస్తలుల కార్యములు 4 : 3 (ERVTE)
ಯೆಹೂದ್ಯ ನಾಯಕರು ಪೇತ್ರ ಮತ್ತು ಯೋಹಾನರನ್ನು ಬಂಧಿಸಿ ಸೆರೆಮನೆಗೆ ಹಾಕಿದರು. ಆಗಲೇ ಕತ್ತಲಾಗಿತ್ತು. ಆದ್ದರಿಂದ ಅವರು ಪೇತ್ರ ಮತ್ತು ಯೋಹಾನರನ್ನು ಮರುದಿನದವರೆಗೆ ಸೆರೆಯಲ್ಲಿಟ್ಟರು.
అపొస్తలుల కార్యములు 4 : 4 (ERVTE)
ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.
అపొస్తలుల కార్యములు 4 : 5 (ERVTE)
ಮರುದಿನ ಯೆಹೂದ್ಯನಾಯಕರು, ಯೆಹೂದ್ಯರ ಹಿರಿಯನಾಯಕರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಲ್ಲಿ ಸಭೆಸೇರಿದರು.
అపొస్తలుల కార్యములు 4 : 6 (ERVTE)
ಅಲ್ಲಿ ಅನ್ನನು (ಪ್ರಧಾನ ಯಾಜಕ), ಕಾಯಫ, ಯೋಹಾನ ಮತ್ತು ಅಲೆಕ್ಸಾಂಡರ್ ಇದ್ದರು. ಪ್ರಧಾನಯಾಜಕನ ಕುಟುಂಬಕ್ಕೆ ಸೇರಿದ ಪ್ರತಿಯೊಬ್ಬರು ಅಲ್ಲಿದ್ದರು.
అపొస్తలుల కార్యములు 4 : 7 (ERVTE)
ಅವರು ಪೇತ್ರ ಯೋಹಾನರನ್ನು ಅಲ್ಲಿದ್ದ ಎಲ್ಲಾ ಜನರ ಮುಂದೆ ನಿಲ್ಲಿಸಿದರು. ಯೆಹೂದ್ಯನಾಯಕರು ಅವರನ್ನು “ನೀವು ಈ ಕುಂಟನನ್ನು ಹೇಗೆ ಗುಣಪಡಿಸಿದಿರಿ? ನೀವು ಯಾವ ಶಕ್ತಿಯನ್ನು ಉಪಯೋಗಿಸಿದಿರಿ? ಇದನ್ನು ಯಾರ ಅಧಿಕಾರದಿಂದ ಮಾಡಿದಿರಿ?” ಎಂದು ಅನೇಕ ಸಲ ಕೇಳಿದರು.
అపొస్తలుల కార్యములు 4 : 8 (ERVTE)
ಆಗ ಪೇತ್ರನು ಪವಿತ್ರಾತ್ಮಭರಿತನಾದನು. ಅವನು ಅವರಿಗೆ, “ಜನನಾಯಕರೇ ಮತ್ತು ಹಿರಿಯನಾಯಕರೇ,
అపొస్తలుల కార్యములు 4 : 9 (ERVTE)
ಈ ಕುಂಟನಿಗಾದ ಒಳ್ಳೆಯದರ ಬಗ್ಗೆ ನೀವು ನಮ್ಮನ್ನು ಕೇಳುತ್ತಿದ್ದೀರಿ.
అపొస్తలుల కార్యములు 4 : 10 (ERVTE)
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
అపొస్తలుల కార్యములు 4 : 11 (ERVTE)
‘ಕಟ್ಟುವವರಾದ ನೀವು ಬೇಡವೆಂದು ಬಿಟ್ಟ ಕಲ್ಲೇ (ಯೇಸು) ಮುಖ್ಯವಾದ ಮೂಲೆಗಲ್ಲಾಯಿತು.’ --ಕೀರ್ತನೆ. 118:22--
అపొస్తలుల కార్యములు 4 : 12 (ERVTE)
12 ರಕ್ಷಣೆಯು ಯೇಸುವಿನಿಂದಲ್ಲದೆ ಬೇರೆ ಯಾರಲ್ಲಿಯೂ ಸಿಕ್ಕುವುದಿಲ್ಲ. ಆತನ ಹೆಸರಿನಿಂದಲೇ ಹೊರತು ಆಕಾಶದ ಕೆಳಗೆ ಮನುಷ್ಯರೊಳಗೆ ಕೊಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವುದಿಲ್ಲ” ಎಂದು ಹೇಳಿದನು.
అపొస్తలుల కార్యములు 4 : 13 (ERVTE)
ಪೇತ್ರ ಮತ್ತು ಯೋಹಾನರಿಗೆ ವಿಶೇಷವಾದ ಯಾವ ತರಬೇತಿಯಾಗಲಿ ವಿದ್ಯೆಯಾಗಲಿ ಇಲ್ಲವೆಂಬುದು ಯೆಹೂದ್ಯನಾಯಕರಿಗೆ ಗೊತ್ತಿತ್ತು. ಅಲ್ಲದೆ ಅವರು ಹೆದರದೆ ಮಾತಾಡುವುದನ್ನು ಸಹ ನಾಯಕರು ಗಮನಿಸಿದರು. ಆದ್ದರಿಂದ ಆ ನಾಯಕರಿಗೆ ಬಹಳ ಆಶ್ಚರ್ಯವಾಯಿತು. ಪೇತ್ರ ಮತ್ತು ಯೋಹಾನರು ಯೋಸುವಿನೊಂದಿಗೆ ಇದ್ದರೆಂಬುದನ್ನು ಅವರು ಆ ಬಳಿಕ ಗ್ರಹಿಸಿಕೊಂಡರು.
అపొస్తలుల కార్యములు 4 : 14 (ERVTE)
ಈ ಇಬ್ಬರು ಅಪೊಸ್ತಲರ ಪಕ್ಕದಲ್ಲೇ ನಿಂತುಕೊಂಡಿದ್ದ ಕುಂಟನನ್ನು ಅವರು ನೋಡಿದರು. ಅವನಿಗೆ ಗುಣವಾಗಿರುವುದನ್ನು ಅವರು ಕಂಡರು. ಆದ್ದರಿಂದ ಅಪೊಸ್ತಲರ ಮಾತಿಗೆ ವಿರುದ್ಧವಾಗಿ ಅವರೇನೂ ಹೇಳಲಾಗಲಿಲ್ಲ.
అపొస్తలుల కార్యములు 4 : 15 (ERVTE)
ಯೆಹೂದ್ಯನಾಯಕರು ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಿ,
అపొస్తలుల కార్యములు 4 : 16 (ERVTE)
“ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು.
అపొస్తలుల కార్యములు 4 : 17 (ERVTE)
ಆದರೆ ಈ ಮನುಷ್ಯನ (ಯೇಸುವಿನ) ಬಗ್ಗೆ ಜನರಿಗೆ ಹೇಳದಂತೆ ನಾವು ಅವರನ್ನು ಬೆದರಿಸಬೇಕು. ಆಗ ಈ ಸಮಾಚಾರ ಜನರ ಮಧ್ಯದಲ್ಲಿ ಹರಡುವುದಿಲ್ಲ” ಎಂದು ಅವರು ಮಾತಾಡಿಕೊಂಡರು.
అపొస్తలుల కార్యములు 4 : 18 (ERVTE)
ಆದ್ದರಿಂದ ಯೆಹೂದ್ಯನಾಯಕರು ಪೇತ್ರ ಮತ್ತು ಯೋಹಾನರನ್ನು ಮತ್ತೆ ಒಳಗೆ ಕರೆಸಿ, ಯೇಸುವಿನ ಹೆಸರಿನಲ್ಲಿ ಏನೂ ಹೇಳಬಾರದೆಂದೂ, ಏನೂ ಬೋಧಿಸಬಾರದೆಂದೂ ಎಚ್ಚರಿಕೆ ಕೊಟ್ಟರು.
అపొస్తలుల కార్యములు 4 : 19 (ERVTE)
ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.
అపొస్తలుల కార్యములు 4 : 20 (ERVTE)
ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.
అపొస్తలుల కార్యములు 4 : 21 (ERVTE)
అపొస్తలుల కార్యములు 4 : 22 (ERVTE)
(21-22)ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು. {#1ಪೇತ್ರ ಮತ್ತು ಯೋಹಾನರು ಹಿಂತಿರುಗಿದರು }
అపొస్తలుల కార్యములు 4 : 23 (ERVTE)
ಪೇತ್ರ ಮತ್ತು ಯೋಹಾನರು ಯೆಹೂದ್ಯನಾಯಕರ ಸಭೆಯಿಂದ ಹೊರಟು ತಮ್ಮ ಸಮುದಾಯಕ್ಕೆ ಹೋದರು. ಮಹಾಯಾಜಕರು ಮತ್ತು ಯೆಹೂದ್ಯರ ಹಿರಿಯ ನಾಯಕರು ತಮಗೆ ಹೇಳಿದ ಪ್ರತಿಯೊಂದನ್ನು ಅವರು ತಮ್ಮ ಸಮುದಾಯದವರಿಗೆ ತಿಳಿಸಿದರು.
అపొస్తలుల కార్యములు 4 : 24 (ERVTE)
ಇದನ್ನು ಕೇಳಿದಾಗ ವಿಶ್ವಾಸಿಗಳು ಏಕಮನಸ್ಸಿನಿಂದ ದೇವರಲ್ಲಿ ಪ್ರಾರ್ಥಿಸಿದರು: ಅವರೆಲ್ಲರಲ್ಲಿ ಒಂದೇ ಮನಸ್ಸಿತ್ತು. “ಒಡೆಯನೇ, ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಲೋಕದಲ್ಲಿರುವ ಪ್ರತಿಯೊಂದನ್ನೂ ನಿರ್ಮಿಸಿದಾತನು ನೀನೇ.
అపొస్తలుల కార్యములు 4 : 25 (ERVTE)
ನಮ್ಮ ಪಿತೃವಾದ ದಾವೀದನು ನಿನ್ನ ಸೇವಕನಾಗಿದ್ದನು. ಅವನು ಪವಿತ್ರಾತ್ಮನ ಸಹಾಯದಿಂದ ಈ ಮಾತುಗಳನ್ನು ಬರೆದನು: ‘ಜನಾಂಗಗಳು ಕೂಗಾಡುವುದೇಕೆ? ಈ ಲೋಕದ ಜನರು ದೇವರಿಗೆ ವಿರೋಧವಾಗಿ ಕಾರ್ಯಗಳನ್ನು ಯೋಚಿಸುತ್ತಿರುವುದೇಕೆ? ಇದರಿಂದ ಪ್ರಯೋಜನವೇನೂ ಇಲ್ಲ!
అపొస్తలుల కార్యములు 4 : 26 (ERVTE)
‘ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ; ಪ್ರಭುವಿಗೂ ಆತನ ಕ್ರಿಸ್ತನಿಗೂ ವಿರೋಧವಾಗಿ ಅಧಿಪತಿಗಳೆಲ್ಲರೂ ಒಟ್ಟಾಗಿ ಸೇರಿದ್ದಾರೆ.’ --ಕೀರ್ತನೆ. 2:1-2--
అపొస్తలుల కార్యములు 4 : 27 (ERVTE)
27 ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ.
అపొస్తలుల కార్యములు 4 : 28 (ERVTE)
ಯೇಸುವಿನ ವಿರುದ್ಧ ಒಟ್ಟಾಗಿ ಬಂದ ಈ ಜನರು ನಿನ್ನ ಯೋಜನೆ ನೆರವೇರುವಂತೆ ಮಾಡಿದರು. ನಿನ್ನ ಶಕ್ತಿಯಿಂದಲೂ ನಿನ್ನ ಚಿತ್ತದಿಂದಲೂ ಇದು ನೆರವೇರಿತು.
అపొస్తలుల కార్యములు 4 : 29 (ERVTE)
ಪ್ರಭುವೇ, ಈಗ ಅವರು ಹೇಳುತ್ತಿರುವುದನ್ನು ಕೇಳು. ಅವರು ನಮ್ಮನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ! ಪ್ರಭುವೇ ನಾವು ನಿನ್ನ ಸೇವಕರು. ನಿನ್ನ ವಾಕ್ಯವನ್ನು ಭಯವಿಲ್ಲದೆ ಹೇಳಲು ನೀನೇ ಸಹಾಯ ಮಾಡು.
అపొస్తలుల కార్యములు 4 : 30 (ERVTE)
ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು.
అపొస్తలుల కార్యములు 4 : 31 (ERVTE)
అపొస్తలుల కార్యములు 4 : 32 (ERVTE)
ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು. {#1ವಿಶ್ವಾಸಿಗಳ ಅನ್ಯೋನ್ಯ ಜೀವನ } ವಿಶ್ವಾಸಿಗಳ ಹೃದಯವೂ ಪ್ರಾಣವೂ ಒಂದೇ ಆಗಿತ್ತು. ಸಮುದಾಯದಲ್ಲಿದ್ದ ಯಾವನಾಗಲಿ ತನ್ನಲ್ಲಿರುವವುಗಳನ್ನು ತನ್ನದೆಂದು ಹೇಳುತ್ತಿರಲಿಲ್ಲ. ಬದಲಾಗಿ, ಅವರು ಪ್ರತಿಯೊಂದನ್ನು ಹಂಚಿಕೊಳ್ಳುತ್ತಿದ್ದರು.
అపొస్తలుల కార్యములు 4 : 33 (ERVTE)
ಪ್ರಭುವಾದ ಯೇಸು ನಿಜವಾಗಿಯೂ ಸತ್ತವರೊಳಗಿಂದ ಜೀವಂತವಾಗಿ ಎದ್ದುಬಂದನೆಂದು ಅಪೊಸ್ತಲರು ಬಹುಬಲವಾಗಿ ಜನರಿಗೆ ಹೇಳುತ್ತಿದ್ದರು. ದೇವರು ವಿಶ್ವಾಸಿಗಳೆಲ್ಲರನ್ನು ಬಹಳವಾಗಿ ಆಶೀರ್ವದಿಸಿದನು.
అపొస్తలుల కార్యములు 4 : 34 (ERVTE)
ಅವರೆಲ್ಲರ ಅವಶ್ಯಕತೆಗಳನ್ನು ಪೂರೈಸಲಾಗುತ್ತಿತ್ತು. ಜಮೀನುಗಳನ್ನು ಮತ್ತು ಮನೆಗಳನ್ನು ಹೊಂದಿದ್ದ ಪ್ರತಿಯೊಬ್ಬರು ಅವುಗಳನ್ನು ಮಾರಿ,
అపొస్తలుల కార్యములు 4 : 35 (ERVTE)
ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಡುತ್ತಿದ್ದರು. ಬಳಿಕ ಅದನ್ನು ಪ್ರತಿಯೊಬ್ಬರಿಗೂ ಅವರವರ ಅಗತ್ಯತೆಗಳಿಗನುಸಾರವಾಗಿ ಹಂಚಲಾಗುತ್ತಿತ್ತು.
అపొస్తలుల కార్యములు 4 : 36 (ERVTE)
ಆ ವಿಶ್ವಾಸಿಗಳಲ್ಲಿ ಯೋಸೇಫ ಎಂಬವನೂ ಇದ್ದನು. ಅಪೊಸ್ತಲರು ಅವನನ್ನು ಬಾರ್ನಬ ಎಂದು ಕರೆಯುತ್ತಿದ್ದರು. (ಬಾರ್ನಬ ಅಂದರೆ “ಧೈರ್ಯದಾಯಕ.”) ಸೈಪ್ರಸ್‌ನಲ್ಲಿ ಹುಟ್ಟಿದ ಇವನು ಲೇವಿಯನಾಗಿದ್ದನು.[* ಲೇವಿಯ ಲೇವಿ ಕುಲದವನು. ಈ ಕುಲದವರು ದೇವಾಲಯದಲ್ಲಿ ಯಾಜಕರಿಗೆ ಸಹಾಯಕರಾಗಿದ್ದರು. ]
అపొస్తలుల కార్యములు 4 : 37 (ERVTE)
ಯೋಸೇಫನಿಗೆ ಒಂದು ಹೊಲವಿತ್ತು. ಅವನು ಅದನ್ನು ಮಾರಿ ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಟ್ಟನು.
❮
❯