అపొస్తలుల కార్యములు 9 : 1 (ERVTE)
{#1ಸೌಲನು ಮಾರ್ಪಾಟಾದನು } ಪ್ರಭುವಿನ ಶಿಷ್ಯರನ್ನು ಹೆದರಿಸಲು ಮತ್ತು ಕೊಲ್ಲಲು ಸೌಲನು ಜೆರುಸಲೇಮಿನಲ್ಲಿ ಇನ್ನೂ ಪ್ರಯತ್ನಿಸುತ್ತಿದ್ದನು. ಆದ್ದರಿಂದ ಅವನು ಪ್ರಧಾನಯಾಜಕನ ಬಳಿಗೆ ಹೋಗಿ,
అపొస్తలుల కార్యములు 9 : 2 (ERVTE)
ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.
అపొస్తలుల కార్యములు 9 : 3 (ERVTE)
ಅಂತೆಯೇ ಸೌಲನು ದಮಸ್ಕಕ್ಕೆ ಹೊರಟನು. ಅವನು ಪಟ್ಟಣದ ಸಮೀಪಕ್ಕೆ ಬಂದಾಗ, ಬಹು ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಇದ್ದಕ್ಕಿದ್ದಂತೆ ಅವನ ಸುತ್ತಲೂ ಹೊಳೆಯಿತು.
అపొస్తలుల కార్యములు 9 : 4 (ERVTE)
ಸೌಲನು ನೆಲಕ್ಕೆ ಬಿದ್ದನು. “ಸೌಲನೇ, ಸೌಲನೇ, ನೀನು ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿಯೊಂದು ಅವನಿಗೆ ಕೇಳಿಸಿತು.
అపొస్తలుల కార్యములు 9 : 5 (ERVTE)
ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!
అపొస్తలుల కార్యములు 9 : 6 (ERVTE)
ಈಗ ಎದ್ದು ಪಟ್ಟಣದೊಳಗೆ ಹೋಗು. ನೀನು ಏನು ಮಾಡಬೇಕೆಂಬುದನ್ನು ಅಲ್ಲಿಯ ಒಬ್ಬನು ನಿನಗೆ ತಿಳಿಸುವನು” ಎಂದಿತು.
అపొస్తలుల కార్యములు 9 : 7 (ERVTE)
ಸೌಲನೊಂದಿಗೆ ಪ್ರಯಾಣ ಮಾಡುತ್ತಿದ್ದವರು ಅಲ್ಲೇ ನಿಂತಿದ್ದರು. ಅವರು ಏನೂ ಮಾತಾಡಲಿಲ್ಲ. ಆ ಜನರು ವಾಣಿಯನ್ನು ಕೇಳಿದರು. ಆದರೆ ಅವರು ಯಾರನ್ನೂ ನೋಡಲಿಲ್ಲ.
అపొస్తలుల కార్యములు 9 : 8 (ERVTE)
ಸೌಲನು ನೆಲದ ಮೇಲಿಂದ ಎದ್ದು ಕಣ್ಣುಗಳನ್ನು ತೆರೆದನು. ಆದರೆ ಅವನಿಗೆ ಏನೂ ಕಾಣಲಿಲ್ಲ. ಆದ್ದರಿಂದ ಸೌಲನೊಂದಿಗಿದ್ದ ಜನರು ಅವನನ್ನು ಕೈಹಿಡಿದು ದಮಸ್ಕಕ್ಕೆ ಕರೆದೊಯ್ದರು.
అపొస్తలుల కార్యములు 9 : 9 (ERVTE)
ಮೂರು ದಿನಗಳವರೆಗೆ ಸೌಲನಿಗೆ ಏನೂ ಕಾಣಲಿಲ್ಲ. ಅವನು ಊಟವನ್ನೂ ಮಾಡಲಿಲ್ಲ ನೀರನ್ನೂ ಕುಡಿಯಲಿಲ್ಲ.
అపొస్తలుల కార్యములు 9 : 10 (ERVTE)
అపొస్తలుల కార్యములు 9 : 11 (ERVTE)
ದಮಸ್ಕದಲ್ಲಿ ಯೇಸುವಿನ ಶಿಷ್ಯನೊಬ್ಬನಿದ್ದನು. ಅವನ ಹೆಸರು ಅನನೀಯ. ಪ್ರಭುವು ಅನನೀಯನನ್ನು ದರ್ಶನದಲ್ಲಿ “ಅನನೀಯನೇ” ಎಂದು ಕರೆದನು. ಅನನೀಯನು, “ಪ್ರಭುವೇ, ಇಗೋ ಇದ್ದೇನೆ” ಎಂದು ಉತ್ತರಕೊಟ್ಟನು. ಪ್ರಭುವು ಅನನೀಯನಿಗೆ, “ಎದ್ದು, ‘ನೇರಬೀದಿ’ ಎಂಬ ಬೀದಿಗೆ ಹೋಗು. ಅಲ್ಲಿರುವ ಯೂದನ[* ಯೂದ ಇವನು ಅಪೊಸ್ತಲ ಯೂದನಲ್ಲ. ] ಮನೆಯನ್ನು ಕಂಡುಕೊಂಡು ತಾರ್ಸಸ್ ಪಟ್ಟಣದ ಸೌಲನ ಬಗ್ಗೆ ವಿಚಾರಿಸು. ಈಗ ಅವನು ಅಲ್ಲಿ ಪ್ರಾರ್ಥಿಸುತ್ತಿದ್ದಾನೆ.
అపొస్తలుల కార్యములు 9 : 12 (ERVTE)
ಸೌಲನು ಒಂದು ದರ್ಶನವನ್ನು ಕಂಡಿದ್ದಾನೆ. ಅನನೀಯನೆಂಬ ಒಬ್ಬನು ಅವನ ಬಳಿಗೆ ಬಂದು ತನ್ನ ಕೈಗಳನ್ನು ಅವನ ಮೇಲಿಡುವನು. ಆಗ ಅವನಿಗೆ ಮತ್ತೆ ದೃಷ್ಟಿಬರುವುದು. ಇದೇ ಆ ದರ್ಶನ” ಎಂದು ಹೇಳಿದನು.
అపొస్తలుల కార్యములు 9 : 13 (ERVTE)
ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.
అపొస్తలుల కార్యములు 9 : 14 (ERVTE)
ಈಗ ಅವನು ದಮಸ್ಕಕ್ಕೂ ಬಂದಿದ್ದಾನೆ. ನಿನ್ನಲ್ಲಿ ನಂಬಿಕೆ ಇಡುವ[† ನಿನ್ನಲ್ಲಿ ನಂಬಿಕೆ ಇಡುವ ಅಕ್ಷರಶಃ, “ನಿನ್ನ ಹೆಸರನ್ನು ಹೇಳುವವರು.” ] ಜನರೆಲ್ಲರನ್ನು ಬಂಧಿಸುವ ಅಧಿಕಾರವನ್ನು ಮಹಾಯಾಜಕರು ಅವನಿಗೆ ಕೊಟ್ಟಿದ್ದಾರೆ” ಎಂದು ಹೇಳಿದನು.
అపొస్తలుల కార్యములు 9 : 15 (ERVTE)
ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.
అపొస్తలుల కార్యములు 9 : 16 (ERVTE)
ಅವನು ನನ್ನ ಹೆಸರಿನ ನಿಮಿತ್ತ ಅನುಭವಿಸಬೇಕಾಗಿರುವ ಹಿಂಸೆಯನ್ನು ನಾನೇ ಅವನಿಗೆ ತೋರಿಸಿಕೊಡುವೆನು” ಎಂದು ಹೇಳಿದನು.
అపొస్తలుల కార్యములు 9 : 17 (ERVTE)
ಆದ್ದರಿಂದ ಅನನೀಯನು ಅಲ್ಲಿಂದ ಹೊರಟು ಯೂದನ ಮನೆಗೆ ಹೋದನು. ಅವನು ಸೌಲನ ಮೇಲೆ ತನ್ನ ಕೈಗಳನ್ನಿಟ್ಟು, “ಸೌಲನೇ, ನನ್ನ ಸಹೋದರನೇ, ಪ್ರಭುವಾದ ಯೇಸು ನನ್ನನ್ನು ಕಳುಹಿಸಿದ್ದಾನೆ. ನೀನು ಇಲ್ಲಿಗೆ ಬರುವಾಗ ದಾರಿಯಲ್ಲಿ ಕಂಡದ್ದು ಆತನನ್ನೇ. ನೀನು ಮತ್ತೆ ದೃಷ್ಟಿಪಡೆಯಬೇಕೆಂತಲೂ ಪವಿತ್ರಾತ್ಮಭರಿತನಾಗಬೇಕೆಂತಲೂ ಯೇಸು ನನ್ನನ್ನು ಕಳುಹಿಸಿದನು” ಎಂದು ಹೇಳಿದನು.
అపొస్తలుల కార్యములు 9 : 18 (ERVTE)
ಇದ್ದಕ್ಕಿದ್ದಂತೆ, ಮೀನಿನ ಪರೆಯಂತಿದ್ದ ಏನೋ ಒಂದು ಸೌಲನ ಕಣ್ಣುಗಳಿಂದ ಕಳಚಿಬಿದ್ದಿತು. ಸೌಲನಿಗೆ ಮತ್ತೆ ಕಣ್ಣುಕಾಣತೊಡಗಿತು! ಸೌಲನು ಮೇಲೆದ್ದು, ದೀಕ್ಷಾಸ್ನಾನ ಮಾಡಿಸಿಕೊಂಡನು.
అపొస్తలుల కార్యములు 9 : 19 (ERVTE)
ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು. {#1ಸೌಲನು ದಮಸ್ಕದಲ್ಲಿ ಬೋಧಿಸುವನು } ಸೌಲನು ದಮಸ್ಕದಲ್ಲಿ ಯೇಸುವಿನ ಶಿಷ್ಯರೊಂದಿಗೆ ಕೆಲವು ದಿನಗಳವರೆಗೆ ಇದ್ದನು.
అపొస్తలుల కార్యములు 9 : 20 (ERVTE)
ಅವನು ತಡಮಾಡದೆ ಸಭಾಮಂದಿರಗಳಿಗೆ ಹೋಗಿ “ಯೇಸುವೇ ದೇವಕುಮಾರ”ನೆಂದು ಬೋಧಿಸತೊಡಗಿದನು.
అపొస్తలుల కార్యములు 9 : 21 (ERVTE)
అపొస్తలుల కార్యములు 9 : 22 (ERVTE)
ಸೌಲನ ಮಾತನ್ನು ಕೇಳಿದ ಜನರೆಲ್ಲರೂ ವಿಸ್ಮಯಗೊಂಡು, “ಜೆರುಸಲೇಮಿನಲ್ಲಿದ್ದವನು ಈ ಮನುಷ್ಯನೇ. ಈ ಹೆಸರಿನಲ್ಲಿ (ಯೇಸುವಿನ) ನಂಬಿಕೆ ಇಡುವ ಜನರನ್ನು ನಾಶಮಾಡಲು ಇವನು ಪ್ರಯತ್ನಿಸುತ್ತಿದ್ದನು! ಯೇಸುವಿನ ಶಿಷ್ಯರನ್ನು ಬಂಧಿಸಿ ಜೆರುಸಲೇಮಿನಲ್ಲಿರುವ ಮಹಾಯಾಜಕರ ಬಳಿಗೆ ಕೊಂಡೊಯ್ಯಲು ಇವನು ಇಲ್ಲಿಗೂ ಬಂದಿದ್ದಾನೆ” ಎಂದು ಹೇಳಿದರು.
అపొస్తలుల కార్యములు 9 : 23 (ERVTE)
ಆದರೆ ಸೌಲನು ಹೆಚ್ಚುಹೆಚ್ಚು ಪ್ರಬಲವಾಗಿ ಯೇಸುವೇ ಕ್ರಿಸ್ತನೆಂದು ನಿರೂಪಿಸಿದನು. ಅವನ ಆಧಾರಗಳು ಬಹು ಬಲವಾಗಿದ್ದ ಕಾರಣ ದಮಸ್ಕದ ಯೆಹೂದ್ಯರು ಅವನೊಂದಿಗೆ ವಾದ ಮಾಡಲಿಲ್ಲ. {#1ಸೌಲನು ಯೆಹೂದ್ಯರಿಂದ ತಪ್ಪಿಸಿಕೊಳ್ಳುವನು } ಅನೇಕ ದಿನಗಳಾದ ಮೇಲೆ, ಯೆಹೂದ್ಯರು ಸೌಲನನ್ನು ಕೊಲ್ಲಲು ಸಂಚುಮಾಡಿದರು.
అపొస్తలుల కార్యములు 9 : 24 (ERVTE)
ಯೆಹೂದ್ಯರು ಸೌಲನಿಗಾಗಿ ಎದುರುನೋಡುತ್ತಾ ನಗರದ ದ್ವಾರಗಳನ್ನು ಹಗಲಿರುಳು ಕಾಯುತ್ತಿದ್ದರು. ಆದರೆ ಅವರ ಯೋಜನೆ ಸೌಲನಿಗೆ ತಿಳಿಯಿತು.
అపొస్తలుల కార్యములు 9 : 25 (ERVTE)
ಒಂದು ರಾತ್ರಿ, ಸೌಲನ ಕೆಲವು ಶಿಷ್ಯರು ಅವನನ್ನು ಪಟ್ಟಣದಿಂದ ಹೊರಗೆ ಕಳುಹಿಸುವುದಕ್ಕಾಗಿ ಅವನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ, ನಗರದ ಕೋಟೆಯ ಸಂದಿನ ಮೂಲಕ ಅವನನ್ನು ಕೆಳಗಿಳಿಸಿದರು.
అపొస్తలుల కార్యములు 9 : 26 (ERVTE)
{#1ಜೆರುಸಲೇಮಿನಲ್ಲಿ ಸೌಲನು } ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.
అపొస్తలుల కార్యములు 9 : 27 (ERVTE)
ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.
అపొస్తలుల కార్యములు 9 : 28 (ERVTE)
ಅಂದಿನಿಂದ ಸೌಲನು ವಿಶ್ವಾಸಿಗಳೊಂದಿಗೆ ಇದ್ದನು. ಅವನು ಪ್ರಭುವಿನ ವಿಷಯವನ್ನು ಜೆರುಸಲೇಮಿನಲ್ಲಿ ನಿರ್ಭಯವಾಗಿ ಬೋಧಿಸಿದನು.
అపొస్తలుల కార్యములు 9 : 29 (ERVTE)
ಗ್ರೀಕ್ ಮಾತಾಡುತ್ತಿದ್ದ ಯೆಹೂದ್ಯರೊಂದಿಗೆ ಸೌಲನು ಪದೇಪದೇ ವಾದಮಾಡಿದನು. ಆದರೆ ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.
అపొస్తలుల కార్యములు 9 : 30 (ERVTE)
ಇದರ ಬಗ್ಗೆ ಸಹೋದರರಿಗೆ ತಿಳಿದಾಗ ಅವರು ಸೌಲನನ್ನು ಸೆಜರೇಯ ಪಟ್ಟಣಕ್ಕೆ ಕೊಂಡೊಯ್ದು ಅಲ್ಲಿಂದ ತಾರ್ಸಸ್ ಪಟ್ಟಣಕ್ಕೆ ಕಳುಹಿಸಿದರು.
అపొస్తలుల కార్యములు 9 : 31 (ERVTE)
అపొస్తలుల కార్యములు 9 : 32 (ERVTE)
ಇಂತಿರಲು, ಜುದೇಯ, ಗಲಿಲಾಯ ಮತ್ತು ಸಮಾರ್ಯ ಪ್ರದೇಶಗಳಲ್ಲಿ ಇದ್ದ ಸಭೆಗಳಲ್ಲಿ ಶಾಂತಿ ನೆಲೆಸಿತು. ಪವಿತ್ರಾತ್ಮನ ಸಹಾಯದಿಂದ ಸಭೆಗಳು ಬಲವಾಗತೊಡಗಿದವು. ವಿಶ್ವಾಸಿಗಳು ತಾವು ಪ್ರಭುವನ್ನು ಗೌರವಿಸುವುದಾಗಿ ತಮ್ಮ ಜೀವಿತಗಳ ಮೂಲಕ ತೋರಿಸಿಕೊಟ್ಟರು. ಇದರಿಂದ ವಿಶ್ವಾಸಿಗಳ ಸಭೆಯು ಹೆಚ್ಚುಹೆಚ್ಚು ಬೆಳೆಯತೊಡಗಿತು. {#1ಲುದ್ದ ಮತ್ತು ಜೊಪ್ಪದಲ್ಲಿ ಪೇತ್ರನು } ಜೆರುಸಲೇಮಿನ ಸುತ್ತಮುತ್ತಲ್ಲಿದ್ದ ಊರುಗಳಲ್ಲೆಲ್ಲಾ ಪೇತ್ರನು ಪ್ರಯಾಣ ಮಾಡುತ್ತಿರುವಾಗ ಲುದ್ದ ಎಂಬ ಊರಲ್ಲಿ ವಾಸವಾಗಿರುವ ವಿಶ್ವಾಸಿಗಳನ್ನು ಭೇಟಿಯಾಗಲು ಅಲ್ಲಿಗೆ ಹೋದನು.
అపొస్తలుల కార్యములు 9 : 33 (ERVTE)
ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು.
అపొస్తలుల కార్యములు 9 : 34 (ERVTE)
ಪೇತ್ರನು ಅವನಿಗೆ, “ಐನೇಯಾ, ಯೇಸು ಕ್ರಿಸ್ತನು ನಿನ್ನನ್ನು ಗುಣಪಡಿಸುತ್ತಾನೆ. ಎದ್ದು ನಿನ್ನ ಹಾಸಿಗೆಯನ್ನು ಎತ್ತಿಡು!” ಎಂದು ಹೇಳಿದನು. ಆ ಕೂಡಲೇ ಐನೇಯನು ಎದ್ದುನಿಂತನು.
అపొస్తలుల కార్యములు 9 : 35 (ERVTE)
ಲುದ್ದದಲ್ಲಿ ಮತ್ತು ಸಾರೋನಿನ ಬಯಲಿನಲ್ಲಿ ವಾಸವಾಗಿದ್ದ ಜನರೆಲ್ಲರು ಅವನನ್ನು ಕಂಡು ಪ್ರಭು ಯೇಸುವಿನಲ್ಲಿ ನಂಬಿಕೆ ಇಟ್ಟರು.
అపొస్తలుల కార్యములు 9 : 36 (ERVTE)
ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು.
అపొస్తలుల కార్యములు 9 : 37 (ERVTE)
ಪೇತ್ರನು ಲುದ್ದದಲ್ಲಿದ್ದಾಗ ಆಕೆಯು ಕಾಯಿಲೆಯಿಂದ ಸತ್ತುಹೋದಳು. ಜನರು ಆಕೆಯ ದೇಹವನ್ನು ತೊಳೆದು ಮೇಲ್ಮಾಳಿಗೆಯ ಒಂದು ಕೋಣೆಯಲ್ಲಿಟ್ಟರು.
అపొస్తలుల కార్యములు 9 : 38 (ERVTE)
ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು.
అపొస్తలుల కార్యములు 9 : 39 (ERVTE)
ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.
అపొస్తలుల కార్యములు 9 : 40 (ERVTE)
ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು.
అపొస్తలుల కార్యములు 9 : 41 (ERVTE)
ಅವನು ಕೈನೀಡಿ, ಎದ್ದುನಿಲ್ಲಲು ಆಕೆಗೆ ಸಹಾಯ ಮಾಡಿದನು. ಬಳಿಕ ಅವನು ವಿಶ್ವಾಸಿಗಳನ್ನು ಮತ್ತು ವಿಧವೆಯರನ್ನು ಕೋಣೆಯೊಳಗೆ ಕರೆದು ಅವರಿಗೆ ತಬಿಥಳನ್ನು ತೋರಿಸಿದನು. ಆಕೆ ಜೀವಂತವಾಗಿದ್ದಳು.
అపొస్తలుల కార్యములు 9 : 42 (ERVTE)
ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.
అపొస్తలుల కార్యములు 9 : 43 (ERVTE)
ಪೇತ್ರನು ಅನೇಕ ದಿನಗಳವರೆಗೆ ಜೊಪ್ಪದಲ್ಲಿದ್ದನು. ಚರ್ಮಕಾರನಾದ ಸಿಮೋನನ ಮನೆಯಲ್ಲಿ ಅವನು ಇಳಿದುಕೊಂಡಿದ್ದನು.
❮
❯