ఆమోసు 3 : 1 (ERVTE)
{#1ಇಸ್ರೇಲಿಗೆ ಎಚ್ಚರಿಕೆಯ ಮಾತು } ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.
ఆమోసు 3 : 2 (ERVTE)
“ಈ ಭೂಮುಖದಲ್ಲಿ ಅನೇಕ ಕುಟುಂಬಗಳಿವೆ. ಅವರೆಲ್ಲರಲ್ಲಿ ನಿಮ್ಮನ್ನು ಮಾತ್ರವೇ ನಾನು ವಿಶೇಷ ರೀತಿಯಲ್ಲಿ ಬಲ್ಲೆನು. ಆದರೆ ನೀವು ನನಗೆ ವಿರುದ್ಧವಾದಿರಿ. ಆದ್ದರಿಂದ ನಾನು ನೀವು ಮಾಡಿದ ಪಾಪಗಳಿಗೆ ನಿಮ್ಮೆಲ್ಲರನ್ನು ಶಿಕ್ಷಿಸುವೆನು.”
ఆమోసు 3 : 3 (ERVTE)
{#1ಇಸ್ರೇಲಿನ ಶಿಕ್ಷೆಯ ಕಾರಣ } ಇಬ್ಬರು ಒಟ್ಟಾಗಿ ನಡೆಯಬೇಕಾದರೆ ಅದಕ್ಕೆ ಅವರಿಬ್ಬರೂ ಒಪ್ಪಿಕೊಂಡಿರಲೇಬೇಕು.
ఆమోసు 3 : 4 (ERVTE)
ಅಡವಿಯಲ್ಲಿರುವ ಸಿಂಹವು ಪ್ರಾಣಿಯನ್ನು ಹಿಡಿದ ನಂತರವೇ ಗರ್ಜಿಸುವದು. ಪ್ರಾಯದ ಸಿಂಹವು ತನ್ನ ಗವಿಯಲ್ಲಿ ಗರ್ಜಿಸಿದರೆ ಅದು ಒಂದು ಪ್ರಾಣಿಯನ್ನು ಹಿಡಿಯಿತು ಎಂದು ಅರ್ಥ.
ఆమోసు 3 : 5 (ERVTE)
ಬಲೆಯಲ್ಲಿ ಆಹಾರ ಹಾಕದಿದ್ದರೆ ಪಕ್ಷಿಯು ಬಲೆಯೊಳಗೆ ಸಿಕ್ಕಿಹಾಕಿಕೊಳ್ಳುವುದಿಲ್ಲ. ಏನೂ ಸಿಕ್ಕಿಕೊಳ್ಳದೆ ಬೋನು ಮುಚ್ಚಿಕೊಳ್ಳುವುದೇ?
ఆమోసు 3 : 6 (ERVTE)
ತುತ್ತೂರಿಯ ಎಚ್ಚರಿಕೆಯ ಶಬ್ಧವನ್ನು ಕೇಳಿದ ಜನರು ಖಂಡಿತವಾಗಿ ಹೆದರಿ ನಡುಗುವರು. ಒಂದು ಗಂಡಾಂತರವು ಪಟ್ಟಣಕ್ಕೆ ಬಂದಿರುವುದಾದರೆ ಅದನ್ನು ಬರಮಾಡಿದಾತನು ಯೆಹೋವನೇ.
ఆమోసు 3 : 7 (ERVTE)
ನನ್ನ ಒಡೆಯನಾದ ಯೆಹೋವನು ಒಂದು ಕಾರ್ಯವನ್ನು ಮಾಡಲು ನಿರ್ಧರಿಸಬಹುದು. ಆದರೆ ಆತನು ಹಾಗೆ ಮಾಡುವ ಮುಂಚಿತವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ಮುಂತಿಳಿಸುವನು.
ఆమోసు 3 : 8 (ERVTE)
ಸಿಂಹವು ಗರ್ಜಿಸಿದಾಗ ಜನರಿಗೆ ಭಯವಾಗುವುದು. ಯೆಹೋವನು ಮಾತನಾಡಿದಾಗ ಪ್ರವಾದಿಗಳು ಪ್ರವಾದಿಸುವರು.
ఆమోసు 3 : 10 (ERVTE)
(9-10)ಅಷ್ಡೋದ್ ಮತ್ತು ಈಜಿಪ್ಟಿನ ಉನ್ನತ ಬುರುಜುಗಳ ಬಳಿಗೆ ಹೋಗಿ ಈ ಸಂದೇಶವನ್ನು ಸಾರಿರಿ, “ಸಮಾರ್ಯದ ಪರ್ವತಗಳ ಬಳಿಗೆ ಬನ್ನಿರಿ. ಅಲ್ಲಿ ಒಂದು ದೊಡ್ಡ ಗಲಿಬಿಲಿಯನ್ನು ನೋಡುವಿರಿ. ಯಾಕೆಂದರೆ ಜನರಿಗೆ ಸರಿಯಾಗಿ ಜೀವಿಸುವ ರೀತಿ ಗೊತ್ತಿಲ್ಲ. ಅವರು ಜನರೊಂದಿಗೆ ಕ್ರೂರವಾಗಿ ವರ್ತಿಸುವರು. ಬೇರೆ ಜನರಿಂದ ವಸ್ತುಗಳನ್ನು ತೆಗೆದುಕೊಂಡು ಅವುಗಳನ್ನು ಉನ್ನತ ಬುರುಜುಗಳಲ್ಲಿ ಅಡಗಿಸಿಡುವರು. ಯುದ್ಧದಲ್ಲಿ ಸೂರೆ ಮಾಡಿದ ವಸ್ತುಗಳಿಂದ ಅವರ ಖಜಾನೆಯು ತುಂಬಿರುವದು.”
ఆమోసు 3 : 12 (ERVTE)
ಆದ್ದರಿಂದ ಯೆಹೋವನು ಹೇಳುವುದೇನೆಂದರೆ, “ಆ ದೇಶಕ್ಕೆ ಒಬ್ಬ ಶತ್ರುವು ಬರುವನು. ಅವನು ನಿಮ್ಮ ಬಲವನ್ನೇ ಮುರಿಯುವನು. ನೀವು ಉನ್ನತ ಬುರುಜುಗಳಲ್ಲಿ ಅಡಿಗಿಸಿಟ್ಟಿದ್ದ ವಸ್ತುಗಳನ್ನು ಕಿತ್ತುಕೊಳ್ಳುವನು.” ಯೆಹೋವನು ಹೇಳುವುದೇನೆಂದರೆ, “ಒಂದುವೇಳೆ ಸಿಂಹವು ಒಂದು ಕುರಿಮರಿಯ ಮೇಲೆ ಎರಗಿದರೆ ಕುರುಬನು ಅದನ್ನು ರಕ್ಷಿಸಲು ಪ್ರಯತ್ನಿಸಾನು. ಆದರೆ ಕುರುಬನು ಆ ಕುರಿಮರಿಯ ಒಂದು ಭಾಗವನ್ನು ಮಾತ್ರ ಕಾಪಾಡಿಯಾನು. ಸಿಂಹದ ಬಾಯಿಂದ ಕುರಿಯ ಎರಡು ಕಾಲುಗಳನ್ನೊ ಕಿವಿಯ ಒಂದು ಭಾಗವನ್ನೋ ಎಳೆದು ರಕ್ಷಿಸಿಯಾನು. ಅದೇ ರೀತಿಯಲ್ಲಿ ಬಹುತೇಕ ಇಸ್ರೇಲರು ರಕ್ಷಿಸಲ್ಪಡುವದಿಲ್ಲ. ಸಮಾರ್ಯದಲ್ಲಿರುವ ಜನರು ತಮ್ಮ ಹಾಸಿಗೆಯ ಒಂದು ಮೂಲೆಯನ್ನಾಗಲಿ ಅಥವಾ ಮಂಚದ ಮೇಲಿನ ಬಟ್ಟೆಯ ಒಂದು ತುಂಡನ್ನಾಗಲಿ ಉಳಿಸಿಕೊಳ್ಳುವರು.”
ఆమోసు 3 : 13 (ERVTE)
ಸರ್ವಶಕ್ತನೂ ನನ್ನ ಒಡೆಯನೂ ಆಗಿರುವ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, “ಯಾಕೋಬನ ಕುಟುಂಬದವರಿಗೆ ಈ ವಿಷಯವನ್ನು ತಿಳಿಸು.
ఆమోసు 3 : 14 (ERVTE)
ಇಸ್ರೇಲು ಪಾಪಮಾಡಿದೆ. ಅದಕ್ಕಾಗಿ ನಾನು ಅದನ್ನು ಶಿಕ್ಷಿಸುವೆನು. ಬೇತೇಲಿನಲ್ಲಿರುವ ವೇದಿಕೆಗಳನ್ನೂ ನಾನು ನಾಶಮಾಡುವೆನು. ವೇದಿಕೆಯ ಕೊಂಬುಗಳು ಮುರಿಯಲ್ಪಟ್ಟು ನೆಲದ ಮೇಲೆ ಬೀಳುವವು.
ఆమోసు 3 : 15 (ERVTE)
ಬೇಸಿಗೆ ಕಾಲದ ಅರಮನೆಯೊಂದಿಗೆ ಚಳಿಗಾಲದ ಅರಮನೆಯನ್ನೂ ನಾಶಮಾಡುವೆನು. ದಂತದ ಭವನಗಳನ್ನು ನಾಶಮಾಡುವೆನು, ಇತರ ಎಷ್ಟೋ ಮನೆಗಳು ನಾಶವಾಗುವವು.” ಇವು ಯೆಹೋವನ ನುಡಿಗಳು.
❮
❯
1
2
3
4
5
6
7
8
9
10
11
12
13
14
15