ఆమోసు 6 : 1 (ERVTE)
{#1ಇಸ್ರೇಲರ ಸುಭಿಕ್ಷೆ ತೆಗೆಯಲ್ಪಡುವದು } ಚೀಯೋನಿನಲ್ಲಿ ಸುಖದಿಂದಿರುವ ಜನರಿಗೂ ಸಮಾರ್ಯದ ಪರ್ವತಗಳ ಮೇಲೆ ಸುರಕ್ಷಿತರಾಗಿರುವ ಜನರಿಗೂ ಕೇಡು ಸಂಭವಿಸುವದು. ನೀವು ವಿಶೇಷವಾದ ದೇಶದ ವಿಶೇಷ ನಾಯಕರು. ಇಸ್ರೇಲಿನ ಮನೆತನವು ಸಲಹೆಗಾಗಿ ನಿಮ್ಮ ಹತ್ತಿರ ಬರುತ್ತದೆ.
ఆమోసు 6 : 2 (ERVTE)
ಹೋಗಿ ಕಲ್ನೆಯ ಕಡೆಗೆ ದಿಟ್ಟಿಸಿರಿ. ಅಲ್ಲಿಂದ ದೊಡ್ಡ ಪಟ್ಟಣವಾದ ಹಾಮಾತಿಗೆ ಹೋಗಿರಿ. ಫಿಲಿಷ್ಟಿಯರ ಗತ್ ಪಟ್ಟಣಕ್ಕೆ ಹೋಗಿರಿ. ಆ ಜನಾಂಗಗಳಿಗಿಂತ ನೀವು ಉತ್ತಮರೋ? ಇಲ್ಲ. ಅವರ ರಾಜ್ಯವು ನಿಮಗಿಂತ ವಿಸ್ತಾರವಾಗಿದೆ.
ఆమోసు 6 : 3 (ERVTE)
ಶಿಕ್ಷಿಸಲ್ಪಡುವ ದಿವಸದ ಕಡೆಗೆ ನೀವು ಧಾವಿಸುತ್ತಿದ್ದೀರಿ. ಅಕ್ರಮ ಆಳ್ವಿಕೆಯನ್ನು ನೀವು ಹತ್ತಿರಕ್ಕೆ ಬರಮಾಡಿಕೊಳ್ಳುತ್ತಾ ಇದ್ದೀರಿ.
ఆమోసు 6 : 4 (ERVTE)
ಆದರೆ ಈಗ ನೀವು ಸುಖದ ಜೀವಿತದಲ್ಲಿ ಆನಂದಿಸುತ್ತಿದ್ದೀರಿ, ದಂತದ ಮಂಚದಲ್ಲಿ ಮಲಗುವಿರಿ; ಸುಖಾಸನಗಳ ಮೇಲೆ ಬಿದ್ದುಕೊಳ್ಳುವಿರಿ. ಹಿಂಡಿನಿಂದ ಎಳೇ ಕುರಿಮರಿಯನ್ನೂ ಹಟ್ಟಿಯಿಂದ ಎಳೇ ಕರುವನ್ನೂ ಭಕ್ಷಿಸುತ್ತೀರಿ.
ఆమోసు 6 : 5 (ERVTE)
ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ.
ఆమోసు 6 : 6 (ERVTE)
ಅಂದವಾದ ಪಾತ್ರೆಗಳಲ್ಲಿ ದ್ರಾಕ್ಷಾರಸ ಕುಡಿಯುವಿರಿ. ಉತ್ತಮವಾದ ಸುಗಂಧತೈಲವನ್ನು ಉಪಯೋಗಿಸುವಿರಿ. ಯೋಸೇಫನ ಕುಟುಂಬದ ನಾಶನದ ಬಗ್ಗೆಯೂ ನೀವು ಬೇಸರಗೊಳ್ಳಲಿಲ್ಲ.
ఆమోసు 6 : 7 (ERVTE)
ಈಗ ಆ ಜನರು ತಮ್ಮ ಸುಖಾಸನಗಳಲ್ಲಿ ಕಾಲನ್ನು ನೇರವಾಗಿ ಚಾಚಿಕೊಂಡು ಮಲಗಿದ್ದಾರೆ. ಆದರೆ ಅವರ ಸುಖದ ಸಮಯಗಳು ಅಂತ್ಯವಾಗುವವು. ಅವರು ಕೈದಿಗಳಂತೆ ಸೆರೆಹಿಡಿಯಲ್ಪಟ್ಟು ಪರದೇಶಕ್ಕೆ ಒಯ್ಯಲ್ಪಡುವರು. ಅವರಲ್ಲಿ ಕೆಲವರು ಸೆರೆ ಒಯ್ಯಲ್ಪಡುವವರಲ್ಲಿ ಮೊದಲಿಗರಾಗುವರು.
ఆమోసు 6 : 8 (ERVTE)
ನನ್ನ ಒಡೆಯನಾದ ಯೆಹೋವನು ತನ್ನ ಹೆಸರಿನ ಮೇಲೆ ಆಣೆಯಿಟ್ಟು ಈ ಮಾತುಗಳನ್ನು ನುಡಿದಿದ್ದಾನೆ. ಸರ್ವಶಕ್ತನಾದ ಯೆಹೋವನ ನುಡಿಗಳಿವು: “ಯಾಕೋಬನು ಹೆಚ್ಚಳಪಡುವಂಥವುಗಳನ್ನು ನಾನು ದ್ವೇಷಿಸುತ್ತೇನೆ. ಅವನ ಬಲವಾದ ಬುರುಜುಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಶತ್ರುಗಳು ಬಂದು ಪಟ್ಟಣವನ್ನೂ ಪಟ್ಟಣದಲ್ಲಿರುವದೆಲ್ಲವನ್ನೂ ಸೂರೆಮಾಡುವಂತೆ ಮಾಡುವೆನು.”
ఆమోసు 6 : 9 (ERVTE)
{#1ಸ್ವಲ್ಪ ಮಂದಿ ಇಸ್ರೇಲರು ಬದುಕಿಕೊಳ್ಳುವರು } ಆ ಸಮಯದಲ್ಲಿ ಒಂದು ಮನೆಯಲ್ಲಿ ಹತ್ತು ಮಂದಿ ಇದ್ದರೂ ಅವರು ಸಾಯುವರು.
ఆమోసు 6 : 10 (ERVTE)
ಒಬ್ಬ ವ್ಯಕ್ತಿಯು ಸತ್ತಾಗ ಅವನ ಸಂಬಂಧಿಕರಲ್ಲಿ ಒಬ್ಬನು ಬಂದು ಶವವನ್ನು ಸುಡಲು ತೆಗೆದುಕೊಂಡು ಹೋಗುವನು. ಸಂಬಂಧಿಕನು ಬಂದು ಎಲುಬುಗಳನ್ನು ಕೊಂಡೊಯ್ಯುವನು. ಮನೆಯೊಳಗೆ ಅವಿತುಕೊಂಡಿರುವವರನ್ನು ಕರೆಯುವನು. “ಇನ್ನೂ ಸತ್ತ ಹೆಣಗಳು ಒಳಗಿವೆಯೋ?” ಎಂದು ವಿಚಾರಿಸುವನು. ಒಳಗಿದ್ದವರು “ಇಲ್ಲ” ಎಂದು ಉತ್ತರಿಸುವರು. ಆಗ ಆ ಸಂಬಂಧಿಕನು ಅವರನ್ನು ತಡೆದು, “ಯೆಹೋವನ ನಾಮವನ್ನು ನಾವು ಉಚ್ಚರಿಸಬಾರದು” ಎಂದು ಹೇಳುವನು.
ఆమోసు 6 : 11 (ERVTE)
ನೋಡು, ಯೆಹೋವನು ಆಜ್ಞೆಯನ್ನು ಕೊಡುವನು. ಆಗ ಭವ್ಯಭವನಗಳು ಒಡೆದು ಚೂರುಚೂರಾಗಿ ಬೀಳುವವು. ಮತ್ತು ಸಣ್ಣ ಮನೆಗಳು ಚಿಂದಿಚಿಂದಿಯಾಗಿ ಚೂರಾಗುವವು.
ఆమోసు 6 : 12 (ERVTE)
ಕುದುರೆಗಳು ಬಂಡೆಗಳ ಮೇಲೆ ಓಡುವವೋ? ಇಲ್ಲ! ಬಂಡೆಗಳನ್ನು ಊಳಲು ನಿಮ್ಮ ಹಸುಗಳನ್ನು ಉಪಯೋಗಿಸುವಿರೋ? ಇಲ್ಲ! ಆದರೆ ನೀವು ಎಲ್ಲವನ್ನು ತಿರುವುಮುರುವು ಮಾಡುತ್ತೀರಿ. ಒಳ್ಳೆಯತನವನ್ನು ನೀವು ವಿಷವಾಗಿ ಮಾಡಿದ್ದೀರಿ. ನ್ಯಾಯವನ್ನು ಕಹಿಯಾದ ವಿಷವನ್ನಾಗಿ ಮಾಡಿದ್ದೀರಿ.
ఆమోసు 6 : 13 (ERVTE)
ಲೊ ಡೆಬಾರಿನಲ್ಲಿ ನೀವು ಸಂತೋಷವಾಗಿದ್ದೀರಿ. “ಕರ್ನಯಿಮನ್ನು ನಾವು ನಮ್ಮ ಬಲದಿಂದಲೇ ಗೆದ್ದಿದ್ದೇವೆ” ಎಂದು ನೀವು ಹೇಳುತ್ತೀರಿ.
ఆమోసు 6 : 14 (ERVTE)
“ಆದರೆ ಇಸ್ರೇಲೇ, ನಿನಗೆ ವಿರುದ್ಧವಾಗಿ ಒಂದು ಜನಾಂಗವನ್ನು ಎಬ್ಬಿಸುವೆನು. ಆ ಜನಾಂಗವು ನಿನ್ನ ದೇಶದಲ್ಲಿ ಪೂರ್ತಿ ಸಂಕಟವನ್ನುಂಟು ಮಾಡುವದು; ಅದು ಲೆಬೋಹಮಾತಿನಿಂದ ಹಿಡಿದು ಅರಾಬಾ ಹಳ್ಳದ ತನಕ ಸಂಕಟವನ್ನುಂಟು ಮಾಡುವದು.” ಸರ್ವಶಕ್ತನಾದ ಯೆಹೋವನು ಇದನ್ನು ಹೇಳಿದ್ದಾನೆ.

1 2 3 4 5 6 7 8 9 10 11 12 13 14