కొలొస్సయులకు 3 : 1 (ERVTE)
{#1ಕ್ರಿಸ್ತನಲ್ಲಿ ನಿಮ್ಮ ಹೊಸಜೀವನ } ನೀವು ಕ್ರಿಸ್ತನ ಜೊತೆಯಲ್ಲಿ ಜೀವಂತವಾಗಿ ಎದ್ದುಬಂದಿರುವುದರಿಂದ ಪರಲೋಕದವುಗಳನ್ನು ಪಡೆಯಲು ಪ್ರಯತ್ನಿಸಿರಿ. ಕ್ರಿಸ್ತ ಯೇಸು ಪರಲೋಕದಲ್ಲಿ ದೇವರ ಬಲಗಡೆ ಆಸನಾರೂಢನಾಗಿದ್ದಾನೆ.
కొలొస్సయులకు 3 : 2 (ERVTE)
ಪರಲೋಕದವುಗಳನ್ನು ಮಾತ್ರ ಆಲೋಚಿಸಿ, ಭೂಲೋಕದವುಗಳನ್ನು ಆಲೋಚಿಸಬೇಡಿ.
కొలొస్సయులకు 3 : 3 (ERVTE)
ನಿಮ್ಮ ಹಳೆಯ ಸ್ವಭಾವ ಸತ್ತುಹೋಗಿದೆ, ನಿಮ್ಮ ಹೊಸ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿದೆ.
కొలొస్సయులకు 3 : 4 (ERVTE)
ಕ್ರಿಸ್ತನೇ ನಿಮ್ಮ ಜೀವ, ಆತನು ಮರಳಿ ಪ್ರತ್ಯಕ್ಷನಾದಾಗ, ನೀವೂ ಆತನ ಪ್ರಭಾವದೊಂದಿಗೆ ಪ್ರತ್ಯಕ್ಷರಾಗುವಿರಿ.
కొలొస్సయులకు 3 : 5 (ERVTE)
ಆದ್ದರಿಂದ ದುಷ್ಕೃತ್ಯಗಳಾದ ಲೈಂಗಿಕ ಪಾಪ, ದುರಾಚಾರ, ಕಾಮಾಭಿಲಾಷೆ, ದುರಾಶೆ ಮತ್ತು ಸ್ವಾರ್ಥತೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ. ಸ್ವಾರ್ಥವು ವಿಗ್ರಹಾರಾಧನೆಗೆ ಸಮವಾಗಿದೆ.
కొలొస్సయులకు 3 : 6 (ERVTE)
ಇವು ದೇವರನ್ನು ಕೋಪಗೊಳಿಸುತ್ತವೆ.
కొలొస్సయులకు 3 : 7 (ERVTE)
ಪೂರ್ವಕಾಲದ ನಿಮ್ಮ ದುಷ್ಟಜೀವನದಲ್ಲಿ ಈ ಕಾರ್ಯಗಳನ್ನೆಲ್ಲ ನೀವು ಮಾಡಿರುವಿರಿ.
కొలొస్సయులకు 3 : 8 (ERVTE)
ಈಗಲಾದರೋ ಕೋಪ, ಕ್ರೋಧ, ಮತ್ಸರ, ಚುಚ್ಚು ಮಾತು ಮತ್ತು ದುರ್ಭಾಷೆಗಳನ್ನು ನಿಮ್ಮ ಜೀವಿತದಿಂದ ತೆಗೆದುಹಾಕಿರಿ.
కొలొస్సయులకు 3 : 9 (ERVTE)
ಒಬ್ಬರಿಗೊಬ್ಬರು ಸುಳ್ಳು ಹೇಳಬೇಡಿ. ಏಕೆಂದರೆ ನೀವು ನಿಮ್ಮ ಹಳೆಯ ಪಾಪಪೂರಿತ ಜೀವನವನ್ನು ಮತ್ತು ನಿಮ್ಮ ಮೊದಲಿನ ಕಾರ್ಯಗಳನ್ನು ಬಿಟ್ಟುಬಿಟ್ಟಿದ್ದೀರಿ.
కొలొస్సయులకు 3 : 10 (ERVTE)
ನೀವು ಹೊಸ ಜೀವನವನ್ನು ಆರಂಭಿಸಿರುವಿರಿ. ಈ ಹೊಸ ಜೀವನದಲ್ಲಿ ನೀವು ನಿಮ್ಮನ್ನು ಸೃಷ್ಟಿಸಿದಾತನ ಹೋಲಿಕೆಯ ಮೇರೆಗೆ ನೂತನರಾಗುತ್ತಿದ್ದೀರಿ. ದೇವರ ಬಗ್ಗೆ ನಿಜವಾದ ತಿಳುವಳಿಕೆಯನ್ನು ಈ ಹೊಸ ಜೀವನ ಕೊಡುತ್ತದೆ.
కొలొస్సయులకు 3 : 11 (ERVTE)
ಈ ಹೊಸ ಜೀವನದಲ್ಲಿ ಗ್ರೀಕರ ಮತ್ತು ಯೆಹೂದ್ಯರ ಮಧ್ಯದಲ್ಲಾಗಲಿ, ಸುನ್ನತಿಯನ್ನು ಮಾಡಿಸಿಕೊಂಡಿರುವ ಮತ್ತು ಮಾಡಿಸಿಕೊಂಡಿಲ್ಲದ ಜನರ ಮಧ್ಯದಲ್ಲಾಗಲಿ ಪರದೇಶದವರ ಅಥವಾ ಅನಾಗರೀಕರ ಮಧ್ಯದಲ್ಲಾಗಲಿ, ಗುಲಾಮರ ಅಥವಾ ಸ್ವತಂತ್ರರಾದ ಜನರ ಮಧ್ಯದಲ್ಲಾಗಲಿ ಯಾವ ಭೇದವೂ ಇಲ್ಲ. ಎಲ್ಲಾ ವಿಶ್ವಾಸಿಗಳಲ್ಲಿಯೂ ಕ್ರಿಸ್ತನಿದ್ದಾನೆ. ಅವರಿಗೆ ಕ್ರಿಸ್ತನೊಬ್ಬನೇ ಅಗತ್ಯ.
కొలొస్సయులకు 3 : 12 (ERVTE)
{#1ಇತರರೊಂದಿಗೆ ನಿಮ್ಮ ಹೊಸ ಜೀವನ } ದೇವರು ನಿಮ್ಮನ್ನು ಆರಿಸಿಕೊಂಡಿದ್ದಾನೆ ಮತ್ತು ನಿಮ್ಮನ್ನು ತನ್ನ ಪವಿತ್ರ ಜನರನ್ನಾಗಿಸಿದ್ದಾನೆ. ಆತನು ನಿಮ್ಮನ್ನು ಪ್ರೀತಿಸುತ್ತಾನೆ. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
కొలొస్సయులకు 3 : 13 (ERVTE)
ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ. ಬೇರೆಯವರ ಮೇಲೆ ಹೇಳುವಂಥ ದೂರುಗಳು ನಿಮ್ಮಲ್ಲಿದ್ದರೂ ಕ್ಷಮಿಸಿಬಿಡಿರಿ. ಪ್ರಭುವು ನಿಮ್ಮನ್ನು ಕ್ಷಮಿಸಿದ್ದರಿಂದ ನೀವೂ ಇತರರನ್ನು ಕ್ಷಮಿಸಿರಿ.
కొలొస్సయులకు 3 : 14 (ERVTE)
ಎಲ್ಲಕ್ಕಿಂತ ಹೆಚ್ಚಾಗಿ ನಿಮ್ಮಲ್ಲಿ ಪ್ರೀತಿಯಿರಲಿ. ಪ್ರೀತಿಯು ನಿಮ್ಮನ್ನೆಲ್ಲರನ್ನೂ ಸಂಪೂರ್ಣವಾದ ಒಗ್ಗಟ್ಟಿನಲ್ಲಿರಿಸುವುದು.
కొలొస్సయులకు 3 : 15 (ERVTE)
ಕ್ರಿಸ್ತನು ನೀಡುವ ಶಾಂತಿಯು ನಿಮ್ಮ ಆಲೋಚನಗಳನ್ನೆಲ್ಲ ತನ್ನ ಹತೋಟಿಯಲ್ಲಿಟ್ಟುಕೊಂಡಿರಲಿ. ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರಾದ್ದರಿಂದ ಶಾಂತಿಯಿಂದಿರಲು ಕರೆಯಲ್ಪಟ್ಟಿದ್ದೀರಿ. ಯಾವಾಗಲು ಕೃತಜ್ಞರಾಗಿರಿ.
కొలొస్సయులకు 3 : 16 (ERVTE)
ಕ್ರಿಸ್ತನ ಉಪದೇಶವು ನಿಮ್ಮ ಅಂತರಂಗದಲ್ಲಿ ಸಮೃದ್ಧವಾಗಿ ನೆಲಸಿರಲಿ. ನೀವು ದೇವರಿಂದ ಕಲಿತುಕೊಂಡದ್ದನ್ನು ಉಪದೇಶಿಸುವುದಕ್ಕೂ ಒಬ್ಬರನ್ನೊಬ್ಬರು ಬಲಪಡಿಸುವುದಕ್ಕೂ ಉಪಯೋಗಿಸಿರಿ. ನಿಮ್ಮ ಹೃದಯದಲ್ಲಿ ದೇವರಿಗೆ ಕೃತಜ್ಞರಾಗಿದ್ದು ಹಾಡುಗಳನ್ನು, ಕೀರ್ತನೆಗಳನ್ನು, ಸಂಗೀತಗಳನ್ನು ಹಾಡಿರಿ.
కొలొస్సయులకు 3 : 17 (ERVTE)
ನೀವು ನುಡಿಯಿಂದಾಗಲಿ, ನಡೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಿಮ್ಮ ಪ್ರಭುವಾದ ಯೇಸುವಿಗಾಗಿ ಮಾಡಿರಿ. ನೀವು ಏನು ಮಾಡಿದರೂ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.
కొలొస్సయులకు 3 : 18 (ERVTE)
{#1ಮನೆಯವರೊಂದಿಗೆ ನಿಮ್ಮ ಹೊಸ ಜೀವನ }
కొలొస్సయులకు 3 : 19 (ERVTE)
ಸ್ತ್ರೀಯರೇ, ನಿಮ್ಮ ಗಂಡಂದಿರಿಗೆ ವಿಧೇಯರಾಗಿರಿ. ಇದು ಪ್ರಭುವಿನಲ್ಲಿ ನೀವು ಮಾಡುವ ಯೋಗ್ಯ ಕಾರ್ಯವಾಗಿದೆ.
కొలొస్సయులకు 3 : 20 (ERVTE)
ಪುರುಷರೇ, ನಿಮ್ಮ ಪತ್ನಿಯರನ್ನು ಪ್ರೀತಿಸಿ, ಅವರೊಡನೆ ಸಾತ್ವಿಕರಾಗಿರಿ.
కొలొస్సయులకు 3 : 21 (ERVTE)
ಮಕ್ಕಳೇ, ನಿಮ್ಮ ತಂದೆತಾಯಿಗಳಿಗೆ ಎಲ್ಲಾ ವಿಷಯಗಳಲ್ಲಿಯೂ ವಿಧೇಯರಾಗಿರಿ. ಇದು ಪ್ರಭುವಿಗೆ ಸಂತೋಷವನ್ನು ಉಂಟುಮಾಡುವುದು.
కొలొస్సయులకు 3 : 22 (ERVTE)
ತಂದೆಗಳೇ, ನಿಮ್ಮ ಮಕ್ಕಳಿಗೆ ಕಿರುಕುಳ ಕೊಡಬೇಡಿ. ಇಲ್ಲವಾದರೆ ಅವರು ಕುಂದಿಹೋಗುವರು. ಸೇವಕರೇ, ಎಲ್ಲಾ ಕಾರ್ಯಗಳಲ್ಲಿಯೂ ನಿಮ್ಮ ಯಜಮಾನರಿಗೆ ವಿಧೇಯರಾಗಿರಿ. ಅವರ ಮೆಚ್ಚಿಕೆಯನ್ನು ಗಳಿಸುವುದಕ್ಕಾಗಿ ಅವರ ಕಣ್ಣೆದುರಿನಲ್ಲಿ ಮಾತ್ರ ಸೇವೆ ಮಾಡದಿರಿ. ನೀವು ಪ್ರಭುವಿಗೆ ಭಯಪಡುವುದರಿಂದ ನಿಮ್ಮ ಯಜಮಾನರಿಗೆ ಯಥಾರ್ಥವಾಗಿ ಸೇವೆ ಮಾಡಿರಿ.
కొలొస్సయులకు 3 : 23 (ERVTE)
ಎಲ್ಲಾ ಕಾರ್ಯಗಳನ್ನು ನಿಮ್ಮಿಂದಾದಷ್ಟು ಅತ್ಯುತ್ತಮವಾಗಿಯೇ ಮಾಡಿರಿ. ಯಾವುದೇ ಕಾರ್ಯವನ್ನಾಗಲಿ ಜನರಿಗಾಗಿ ಮಾಡದೆ ಪ್ರಭುವಿಗಾಗಿ ಮಾಡಿರಿ.
కొలొస్సయులకు 3 : 24 (ERVTE)
ಪ್ರಭುವಿನಿಂದಲೇ ನಿಮಗೆ ಪ್ರತಿಫಲ ದೊರೆಯುತ್ತದೆ ಎಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡಿರಿ. ಆತನು ತನ್ನ ಜನರಿಗೆ ಮಾಡಿದ ವಾಗ್ದಾನವು ನಿಮ್ಮ ನೆನಪಿನಲ್ಲಿರಲಿ.
కొలొస్సయులకు 3 : 25 (ERVTE)
ಅನ್ಯಾಯ ಮಾಡುವವನು ಅದಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ಪ್ರಭುವಿನಲ್ಲಿ ಪಕ್ಷಪಾತವಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25