కొలొస్సయులకు 4 : 1 (ERVTE)
కొలొస్సయులకు 4 : 2 (ERVTE)
ಯಜಮಾನರೇ, ನಿಮ್ಮ ಸೇವಕರಿಗೆ ನ್ಯಾಯವಾದದ್ದನ್ನೂ ಸರಿಯಾದದ್ದನ್ನೂ ಮಾಡಿರಿ. ಪರಲೋಕದಲ್ಲಿ ನಿಮಗೂ ಒಬ್ಬ ಯಜಮಾನನಿದ್ದಾನೆ ಎಂಬುದು ನಿಮ್ಮ ಜ್ಞಾಪಕದಲ್ಲಿರಲಿ. {#1ಕ್ರೈಸ್ತರು ಮಾಡತಕ್ಕ ಕಾರ್ಯಗಳು } ಪ್ರಾರ್ಥನೆಯನ್ನು ತಪ್ಪದೆ ಮಾಡಿರಿ, ನೀವು ಪ್ರಾರ್ಥಿಸುವಾಗ, ಯಾವಾಗಲೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.
కొలొస్సయులకు 4 : 3 (ERVTE)
ನಮಗಾಗಿಯೂ ನೀವು ಪ್ರಾರ್ಥಿಸಿ. ಜನರಿಗೆ ದೇವರ ಸಂದೇಶವನ್ನು ತಿಳಿಸಲು ಅನುಕೂಲವಾದ ಸಂದರ್ಭವನ್ನು ಆತನು ನಿಮಗೆ ದಯಪಾಲಿಸುವಂತೆ ಪ್ರಾರ್ಥಿಸಿರಿ. ದೇವರು ಕ್ರಿಸ್ತನ ಬಗ್ಗೆ ತಿಳಿಸಿರುವ ರಹಸ್ಯಸತ್ಯವನ್ನು ನಾವು ಬೋಧಿಸಲಾಗುವಂತೆ ಪ್ರಾರ್ಥಿಸಿರಿ. ನಾನು ಈ ಸತ್ಯವನ್ನು ಬೋಧಿಸಿದರಿಂದಲೇ ಈಗ ಸೆರೆಮನೆಯಲ್ಲಿದ್ದೇನೆ.
కొలొస్సయులకు 4 : 4 (ERVTE)
ಈ ಸತ್ಯವನ್ನು ನಾನು ಜನರಿಗೆ ಸ್ಪಷ್ಟವಾಗಿಯೂ ಸರಳವಾಗಿಯೂ ತಿಳಿಸಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.
కొలొస్సయులకు 4 : 5 (ERVTE)
ಅವಿಶ್ವಾಸಿಗಳೊಂದಿಗೆ ವ್ಯವಹರಿಸುವಾಗ ಜ್ಞಾನವುಳ್ಳವರಾಗಿರಿ. ನಿಮ್ಮ ಸಮಯವನ್ನು ಅತ್ಯುತ್ತಮವಾದ ರೀತಿಯಲ್ಲಿ ಬಳಸಿರಿ.
కొలొస్సయులకు 4 : 6 (ERVTE)
ನೀವು ಮಾತನಾಡುವಾಗಲೆಲ್ಲಾ ದಯೆಯುಳ್ಳವರಾಗಿಯೂ ಜ್ಞಾನವುಳ್ಳವರಾಗಿಯೂ ಮಾತನಾಡಿರಿ. ಆಗ ಪ್ರತಿಯೊಬ್ಬರಿಗೂ ಯೋಗ್ಯವಾದ ರೀತಿಯಲ್ಲಿ ಉತ್ತರಿಸಲು ಶಕ್ತರಾಗುವಿರಿ.
కొలొస్సయులకు 4 : 7 (ERVTE)
{#1ಪೌಲನೊಂದಿಗಿರುವ ಜನರನ್ನು ಕುರಿತ ಸುದ್ಧಿ } ತುಖಿಕನು ಕ್ರಿಸ್ತನಲ್ಲಿ ನನ್ನ ಪ್ರೀತಿಯ ಸಹೋದರನಾಗಿದ್ದಾನೆ. ನನ್ನೊಡನೆ ಅವನೂ ಪ್ರಭುವಿನಲ್ಲಿ ನಂಬಿಗಸ್ತನಾದ ಸೇವಕನೂ ದಾಸನೂ ಆಗಿದ್ದಾನೆ. ನನಗೆ ಸಂಭವಿಸುತ್ತಿರುವುದನ್ನೆಲ್ಲ ಅವನು ನಿಮಗೆ ತಿಳಿಸುತ್ತಾನೆ.
కొలొస్సయులకు 4 : 8 (ERVTE)
ಆದಕಾರಣವೇ ನಾನು ಅವನನ್ನು ಕಳುಹಿಸುತ್ತಿದ್ದೇನೆ. ನಾವು ಹೇಗಿರುವೆವು ಎಂಬುದನ್ನು ನೀವು ತಿಳಿದುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ನಿಮ್ಮನ್ನು ಪ್ರೋತ್ಸಾಹಿಸಲು ನಾನು ಅವನನ್ನು ಒನೇಸಿಮನ ಜೊತೆಯಲ್ಲಿ ಕಳುಹಿಸುತ್ತಿದ್ದೇನೆ.
కొలొస్సయులకు 4 : 9 (ERVTE)
ಒನೇಸಿಮನು ಕ್ರಿಸ್ತನಲ್ಲಿ ನಂಬಿಗಸ್ತನಾದ ಪ್ರೀತಿಯ ಸಹೋದರನಾಗಿದ್ದಾನೆ. ಅವನು ನಿಮ್ಮ ಊರಿನವನೇ. ಇಲ್ಲಿ ಸಂಭವಿಸಿದ್ದೆಲ್ಲವನ್ನು ಅವರು ನಿಮಗೆ ತಿಳಿಸುತ್ತಾರೆ.
కొలొస్సయులకు 4 : 10 (ERVTE)
ಅರಿಸ್ತಾರ್ಕನು ವಂದನೆ ತಿಳಿಸಿದ್ದಾನೆ. ಅವನೂ ನನ್ನೊಡನೆ ಸೆರೆಯಲ್ಲಿದ್ದಾನೆ. ಬಾರ್ನಬನಿಗೆ ಸೋದರ ಬಾಂಧ್ಯವ್ಯವುಳ್ಳ ಮಾರ್ಕನೂ ವಂದನೆಯನ್ನು ಹೇಳುತ್ತಾನೆ. (ಮಾರ್ಕನ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ಈಗಾಗಲೇ ಹೇಳಿದ್ದೇನೆ. ಅವನು ಬಂದರೆ ಅವನನ್ನು ಸ್ವಾಗತಿಸಿರಿ.)
కొలొస్సయులకు 4 : 11 (ERVTE)
ಯೇಸುವು (ಯುಸ್ತನೆಂದೂ ಅವನನ್ನು ಕರೆಯುತ್ತಾರೆ.) ಸಹ ವಂದನೆಯನ್ನು ಹೇಳುತ್ತಾನೆ. ಯೆಹೂದ್ಯರಲ್ಲಿ ವಿಶ್ವಾಸಿಗಳಾಗಿರುವ ಇವರು ಮಾತ್ರವೇ ದೇವರ ರಾಜ್ಯಕ್ಕಾಗಿ ನನ್ನ ಜೊತೆ ಕೆಲಸ ಮಾಡುತ್ತಿದ್ದಾರೆ. ಇವರೇ ನನಗೆ ಆದರಣೆಯಾಗಿದ್ದಾರೆ.
కొలొస్సయులకు 4 : 12 (ERVTE)
ಎಪಫ್ರನು ಸಹ ವಂದನೆ ತಿಳಿಸಿದ್ದಾನೆ. ಅವನು ಯೇಸು ಕ್ರಿಸ್ತನ ಸೇವಕನು. ಅವನು ನಿಮ್ಮವರಲ್ಲಿ ಒಬ್ಬನಾಗಿದ್ದಾನೆ. ಅವನು ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತಾನೆ. ನೀವು ಆತ್ಮಿಕತೆಯಲ್ಲಿ ಬೆಳೆಯುತ್ತಾ ಸಂಪೂರ್ಣತೆಯನ್ನು ಮುಟ್ಟಬೇಕೆಂತಲೂ ದೇವರ ಚಿತ್ತವನ್ನು ಪೂರ್ಣವಾಗಿ ತಿಳಿದುಕೊಂಡು ದೃಢವಾಗಿರಬೇಕೆಂತಲೂ ಪ್ರಾರ್ಥಿಸುತ್ತಾನೆ.
కొలొస్సయులకు 4 : 13 (ERVTE)
ಅವನು ನಿಮಗೋಸ್ಕರ, ಲವೊದಿಕೀಯ ಮತ್ತು ಹಿರೆಯಾ ಪೊಲಿಯದ ಜನರಿಗೋಸ್ಕರ ಬಹಳ ಪ್ರಯಾಸಪಟ್ಟು ಕೆಲಸ ಮಾಡಿದನೆಂಬುದು ನನಗೆ ತಿಳಿದಿದೆ.
కొలొస్సయులకు 4 : 14 (ERVTE)
ದೇಮನು ಮತ್ತು ಪ್ರೀತಿಯ ಸ್ನೇಹಿತನಾದ ವೈದ್ಯ ಲೂಕನು ವಂದನೆಗಳನ್ನು ಹೇಳುತ್ತಾರೆ.
కొలొస్సయులకు 4 : 15 (ERVTE)
ಲವೊದಿಕೀಯದಲ್ಲಿರುವ ಸಹೋದರ ಸಹೋದರಿಯರಿಗೆ ವಂದನೆಗಳನ್ನು ತಿಳಿಸಿರಿ. ನುಂಫಳಿಗೂ ಅವಳ ಮನೆಯಲ್ಲಿ ಸೇರುವ ಸಭೆಯವರಿಗೂ ವಂದನೆಗಳನ್ನು ತಿಳಿಸಿರಿ.
కొలొస్సయులకు 4 : 16 (ERVTE)
ಈ ಪತ್ರವನ್ನು ಓದಿದ ನಂತರ ಲವೊದಿಕೀಯದ ಸಭೆಯವರಿಗೂ ಓದಲು ಕೊಡಿರಿ. ನಾನು ಲವೊದಿಕೀಯದವರಿಗೆ ಬರೆದಿರುವ ಪತ್ರವನ್ನು ನೀವೂ ಓದಿರಿ.
కొలొస్సయులకు 4 : 17 (ERVTE)
ಅರ್ಖಿಪ್ಪನಿಗೆ, “ಪ್ರಭುವು ನಿನಗೆ ವಹಿಸಿರುವ ಸೇವೆಯನ್ನು ಖಂಡಿತವಾಗಿ ನೆರವೇರಿಸಬೇಕು” ಎಂದು ತಿಳಿಸಿರಿ.
కొలొస్సయులకు 4 : 18 (ERVTE)
ನಿಮಗೆ ನನ್ನ ವಂದನೆಗಳು. *ಪೌಲನೆಂಬ* ನಾನು ನನ್ನ ಸ್ವಂತ ಕೈಯಿಂದ ಇದನ್ನು ಬರೆದಿದ್ದೇನೆ. ಸೆರೆಮನೆಯಲ್ಲಿರುವ ನನ್ನನ್ನು ಜ್ಞಾಪಿಸಿಕೊಳ್ಳಿರಿ. ದೇವರ ಕೃಪೆಯು ನಿಮ್ಮೊಂದಿಗಿರಲಿ.
❮
❯
1
2
3
4
5
6
7
8
9
10
11
12
13
14
15
16
17
18