దానియేలు 12 : 1 (ERVTE)
“ದರ್ಶನದಲ್ಲಿ ಕಾಣಿಸಿಕೊಂಡ ಮನುಷ್ಯನು, ದಾನಿಯೇಲನೇ, ಆಗ ದೇವದೂತನಾದ ಮಿಕಾಯೇಲನು ಏಳುವನು. ಮಿಕಾಯೇಲನು ಯೆಹೂದ್ಯರಾದ ನಿಮ್ಮ ಹಿತಾಸಕ್ತಿಗಳನ್ನು ನೋಡಿಕೊಳ್ಳುವನು. ಮಹಾಸಂಕಟದ ಕಾಲ ಬರುವದು. ಭೂಮಿಯ ಮೇಲೆ ರಾಷ್ಟ್ರಗಳು ಹುಟ್ಟಿದಂದಿನಿಂದ ಸಂಭವಿಸದಂತಹ ಸಂಕಟಗಳು ಸಂಭವಿಸುವವು. ಆದರೆ ದಾನಿಯೇಲನೇ, ನಿಮ್ಮ ಜನಗಳಲ್ಲಿ ಯಾರ ಹೆಸರುಗಳು [+ ‘ಜೀವಬಾಧ್ಯರ] ಗ್ರಂಥದಲ್ಲಿ’ ಬರೆಯಲ್ಪಟ್ಟಿದೆಯೋ ಅವರೆಲ್ಲರನ್ನು ರಕ್ಷಿಸಲಾಗುವುದು.
దానియేలు 12 : 2 (ERVTE)
ಮರಣಹೊಂದಿದ, ಸಮಾಧಿಗಳಲ್ಲಿ ದೀರ್ಘನಿದ್ರೆ ಮಾಡುತ್ತಿದ್ದವರಲ್ಲಿ ಅನೇಕರು ಎಚ್ಚೆತ್ತುಕೊಳ್ಳುವರು. ಕೆಲವರು ಎಚ್ಚೆತ್ತು ನಿತ್ಯಜೀವವನ್ನು ಅನುಭವಿಸುವರು. ಕೆಲವರು ಎಚ್ಚೆತ್ತು ನಿತ್ಯನಿಂದನೆಗಳನ್ನೂ ತಿರಸ್ಕಾರಗಳನ್ನೂ ಅನುಭವಿಸುವರು.
దానియేలు 12 : 3 (ERVTE)
ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.
దానియేలు 12 : 5 (ERVTE)
“ದಾನಿಯೇಲನೇ, ನೀನು ಈ ಸಂದೇಶವನ್ನು ರಹಸ್ಯವಾಗಿಡು. ಇದನ್ನು ಬರೆದ ಪುಸ್ತಕಕ್ಕೆ ಮುದ್ರೆಹಾಕು. ಅಂತ್ಯಕಾಲದವರೆಗೆ ನೀನು ಇದನ್ನು ರಹಸ್ಯವಾಗಿ ಇಡಬೇಕು. ನಿಜವಾದ ಜ್ಞಾನಕ್ಕಾಗಿ ಬಹುಜನರು ಅತ್ತಿತ್ತ ಸಂಚರಿಸುವರು. ನಿಜವಾದ ಜ್ಞಾನ ಬೆಳೆಯುವದು.” ಆಗ, ದಾನಿಯೇಲನೆಂಬ ನಾನು, ಮತ್ತಿಬ್ಬರನ್ನು ಕಂಡೆನು. ಅವರೊಳಗೆ ಒಬ್ಬನು ನದಿಯ ಈಚೆ ದಡದಲ್ಲಿಯೂ ಇನ್ನೊಬ್ಬನು ಆಚೆ ದಡದಲ್ಲಿಯೂ ನಿಂತಿದ್ದರು.
దానియేలు 12 : 6 (ERVTE)
ನಾರುಮಡಿಯನ್ನು ಧರಿಸಿದ್ದವನೊಬ್ಬನು ನದಿಯಲ್ಲಿ ನೀರಿನ ಮೇಲೆ ನಿಂತಿದ್ದನು. ಅವರಿಬ್ಬರಲ್ಲಿ ಒಬ್ಬನು, “ಆ ಅದ್ಭುತ ಘಟನೆಗಳು ಸಂಭವಿಸುವದಕ್ಕೆ ಇನ್ನು ಎಷ್ಟು ಕಾಲ ಬೇಕು?” ಎಂದು ಅವನನ್ನು ಕೇಳಿದನು.
దానియేలు 12 : 8 (ERVTE)
ನಾರುಮಡಿಯನ್ನು ಧರಿಸಿ ನೀರಿನ ಮೇಲೆ ನಿಂತುಕೊಂಡಿದ್ದ ಮನುಷ್ಯನು ತನ್ನ ಎರಡೂ ಕೈಗಳನ್ನು ಆಕಾಶದ ಕಡೆಗೆ ಎತ್ತಿದನು. ಅವನು ಶಾಶ್ವತವಾದ ದೇವರ ಮೇಲೆ ಆಣೆಮಾಡಿ, “ಮೂರುವರೆ ವರ್ಷ ಕಳೆಯಬೇಕು. ದೇವರ ಭಕ್ತರ ಬಲವು ಸಂಪೂರ್ಣವಾಗಿ ಮುರಿದುಹೋಗುವದು. ಆಮೇಲೆ ಎಲ್ಲಾ ಸಂಗತಿಗಳು ಜರುಗುವವು” ಎಂದು ಹೇಳಿದನು.
దానియేలు 12 : 9 (ERVTE)
ನಾನು ಉತ್ತರವನ್ನು ಕೇಳಿದೆ, ಆದರೆ ನನಗೆ ಅದು ಅರ್ಥವಾಗಲಿಲ್ಲ. ಆದ್ದರಿಂದ ನಾನು, “ಸ್ವಾಮೀ, ಈ ಎಲ್ಲಾ ಸಂಗತಿಗಳು ಜರುಗಿದ ಮೇಲೆ ಏನು ಸಂಭವಿಸುವದು?” ಎಂದು ಕೇಳಿದೆ. ಅದಕ್ಕೆ ಆತನು, “ದಾನಿಯೇಲನೇ, ನಿನ್ನ ಜೀವನ ಸಾಗಲಿ. ಈ ಸಂದೇಶವು ರಹಸ್ಯವಾದದ್ದು. ಅಂತ್ಯಕಾಲ ಬರುವವರೆಗೆ ಇದು ರಹಸ್ಯವಾಗಿ ಉಳಿಯುವದು.
దానియేలు 12 : 10 (ERVTE)
ಅನೇಕ ಜನರು ಶುದ್ಧೀಕರಿಸಲ್ಪಡುವರು; ಅವರು ತಮ್ಮನ್ನು ತಾವು ಶುಭ್ರಗೊಳಿಸಿಕೊಳ್ಳುವರು. ಆದರೆ ದುಷ್ಟರು ದುಷ್ಟರಾಗಿಯೇ ಉಳಿಯುವರು. ಆ ದುಷ್ಟರು ಈ ಸಂಗತಿಗಳನ್ನು ಅರಿತುಕೊಳ್ಳುವದಿಲ್ಲ. ಜ್ಞಾನಿಗಳು ಇವೆಲ್ಲವನ್ನು ಅರಿತುಕೊಳ್ಳುತ್ತಾರೆ.
దానియేలు 12 : 11 (ERVTE)
“ನಿತ್ಯಹೋಮವು ನಿಲ್ಲಿಸಲ್ಪಟ್ಟು ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಒಂದು ಸಾವಿರದ ಇನ್ನೂರ ತೊಂಭತ್ತು ದಿನಗಳು ಕಳೆಯಬೇಕು.
దానియేలు 12 : 12 (ERVTE)
ಕಾದುಕೊಂಡು ಒಂದು ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯವರೆಗೆ ತಾಳಿರುವವನು ಧನ್ಯನು.
దానియేలు 12 : 13 (ERVTE)
“ದಾನಿಯೇಲನೇ, ನೀನು ಹೋಗಿ ಕೊನೆಯವರೆಗೆ ನಿನ್ನ ಜೀವನವನ್ನು ಸಾಗಿಸು. ನೀನು ದೀರ್ಘನಿದ್ರೆಯನ್ನು ಪಡೆಯುವೆ. ಅಂತ್ಯಕಾಲದಲ್ಲಿ, ನೀನು ದೀರ್ಘನಿದ್ರೆಯಿಂದ ಎಚ್ಚೆತ್ತು ನಿನ್ನ ಸ್ವಾಸ್ತ್ಯವನ್ನು ಪಡೆಯುವೆ” ಎಂದು ಉತ್ತರಿಸಿದನು.
❮
❯
1
2
3
4
5
6
7
8
9
10
11
12
13