ద్వితీయోపదేశకాండమ 1 : 1 (ERVTE)
{#1ಇಸ್ರೇಲರಿಗೆ ಮೋಶೆಯ ಸಂದೇಶ }
ద్వితీయోపదేశకాండమ 1 : 2 (ERVTE)
ಇಸ್ರೇಲರಿಗೆ ಮೋಶೆಯು ಈ ಆಜ್ಞೆಗಳನ್ನು ಕೊಟ್ಟನು. ಆಗ ಅವರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿರುವ ಅಡವಿಯಲ್ಲಿ ಪಾಳೆಯ ಮಾಡಿಕೊಂಡಿದ್ದರು. ಇದು ಸೂಫಿಗೆ ಎದುರಾಗಿ, ಪಾರಾನಿನ ಮರುಭೂಮಿಗೂ ತೋಫೆಲ್, ಲಾಬಾನ್, ಹಚೇರೋತ್ ಮತ್ತು ದೀಜಾಹಾಬ್ ಪಟ್ಟಣಗಳ ನಡುವೆ ಇತ್ತು. ಹೋರೇಬ್ (ಸೀನಾಯಿ) ಬೆಟ್ಟದಿಂದ ಸೇಯೀರ್ ಬೆಟ್ಟದ ಮಾರ್ಗವಾಗಿ ಕಾದೇಶ್‌ಬರ್ನೇಯಕ್ಕೆ ತಲುಪಲು ಹನ್ನೊಂದು ದಿವಸದ ಪ್ರಯಾಣ ಮಾಡಬೇಕಾಗುತ್ತದೆ.
ద్వితీయోపదేశకాండమ 1 : 3 (ERVTE)
ಆದರೆ ಇಸ್ರೇಲರು ಈಜಿಪ್ಟನ್ನು ಬಿಟ್ಟು ಈ ಸ್ಥಳಕ್ಕೆ ಬರಲು ನಲವತ್ತು ವರ್ಷಗಳು ಹಿಡಿದವು. ನಲವತ್ತನೆ ವರ್ಷದ ಹನ್ನೊಂದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಮೋಶೆಯು ಜನರೊಂದಿಗೆ ಮಾತಾಡಿ ಯೆಹೋವನು ಆಜ್ಞಾಪಿಸಿದ ಸಮಸ್ತ ವಿಷಯಗಳನ್ನು ತಿಳಿಸಿದನು.
ద్వితీయోపదేశకాండమ 1 : 4 (ERVTE)
ಸೀಹೋನನನ್ನು ಮತ್ತು ಓಗನನ್ನು ದೇವರಾದ ಯೆಹೋವನು ಸೋಲಿಸಿದ ಬಳಿಕ ನಡೆದ ಸಂಗತಿಯಿದು. (ಸೀಹೋನನು ಅಮೋರಿಯರ ರಾಜನಾಗಿದ್ದನು. ಅವನು ಹೆಷ್ಬೋನಿನಲ್ಲಿ ವಾಸಿಸುತ್ತಿದ್ದನು. ಓಗನು ಬಾಷಾನಿನ ಅರಸನು. ಇವನು ಅಷ್ಟಾರೋತ್ ಮತ್ತು ಎದ್ರೈ ಎಂಬಲ್ಲಿ ವಾಸವಾಗಿದ್ದನು.)
ద్వితీయోపదేశకాండమ 1 : 5 (ERVTE)
ಇಸ್ರೇಲರು ಜೋರ್ಡನ್ ನದಿಯ ಪೂರ್ವದಿಕ್ಕಿನಲ್ಲಿ ಮೋವಾಬ್ಯರ ಸ್ಥಳದಲ್ಲಿ ಪಾಳೆಯ ಮಾಡಿಕೊಂಡಿದ್ದರು. ದೇವರು ತಿಳಿಸಿದ ಕಟ್ಟಳೆಗಳನ್ನು ಮೋಶೆಯು ವಿವರಿಸುತ್ತಾ ಹೀಗೆಂದನು:
ద్వితీయోపదేశకాండమ 1 : 6 (ERVTE)
“ನಮ್ಮ ದೇವರಾದ ಯೆಹೋವನು ಹೋರೇಬ್ ಬೆಟ್ಟದಲ್ಲಿ ನಮ್ಮೊಂದಿಗೆ ಮಾತಾಡಿದನು. ಆತನು ಹೇಳಿದ್ದೇನೆಂದರೆ: ‘ನೀವು ಈ ಪ್ರದೇಶಕ್ಕೆ ಬಂದು ಬಹಳ ಕಾಲವಾಯಿತು.
ద్వితీయోపదేశకాండమ 1 : 7 (ERVTE)
ಅಮೋರಿಯರು ವಾಸಿಸುವ ಬೆಟ್ಟಪ್ರಾಂತ್ಯಗಳಿಗೆ ಹೋಗಿರಿ, ಅದರ ಸುತ್ತಲೂ ಇರುವ ಜೋರ್ಡನಿನ ಬಯಲು ಪ್ರದೇಶಕ್ಕೆ, ಬೆಟ್ಟಪ್ರದೇಶಕ್ಕೆ, ಪಶ್ಚಿಮದ ಇಳಕಲುಪ್ರದೇಶಕ್ಕೆ, ನೆಗೆವ್ ಮತ್ತು ಸಮುದ್ರ ಕರಾವಳಿ ಪ್ರದೇಶಗಳಿಗೆ ಹೋಗಿರಿ. ಕಾನಾನ್ ಮತ್ತು ಲೆಬನೋನ್ ಪ್ರದೇಶಗಳ ಮೂಲಕ ಯೂಫ್ರೇಟೀಸ್ ಮಹಾನದಿಯವರೆಗೂ ಹೋಗಿರಿ.
ద్వితీయోపదేశకాండమ 1 : 8 (ERVTE)
ನಾನು ನಿಮಗೆ ಆ ಪ್ರಾಂತ್ಯವನ್ನೆಲ್ಲಾ ಕೊಡುವೆನು. ಅಲ್ಲಿಗೆ ಹೋಗಿ ಅದನ್ನು ತೆಗೆದುಕೊಳ್ಳಿರಿ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮತ್ತು ಅವರ ಸಂತತಿಯವರಿಗೆ ಆ ಪ್ರದೇಶವನ್ನು ಕೊಡುವೆನು ಎಂದು ನಾನು ವಾಗ್ದಾನ ಮಾಡಿದ್ದೇನೆ.’ ”
ద్వితీయోపదేశకాండమ 1 : 9 (ERVTE)
{#1ಮೋಶೆಯಿಂದ ನಾಯಕರ ಆಯ್ಕೆ } “ಆ ಸಮಯದಲ್ಲಿ ನಾನು ನಿಮಗೆ, ‘ನಿಮ್ಮನ್ನು ಪರಾಂಬರಿಸಲು ನನಗೆ ಸಾಧ್ಯವಿಲ್ಲ’ ಎಂದು ಹೇಳಿದೆನು.
ద్వితీయోపదేశకాండమ 1 : 10 (ERVTE)
ಈಗ ನಿಮ್ಮ ಜನಸಂಖ್ಯೆಯು ಇನ್ನೂ ಅಧಿಕವಾಗಿರುತ್ತದೆ. ದೇವರಾದ ಯೆಹೋವನು ನಿಮ್ಮನ್ನು ವೃದ್ಧಿಪಡಿಸುತ್ತಿರುವುದರಿಂದ ನೀವು ಈಗ ಆಕಾಶದ ನಕ್ಷತ್ರಗಳಷ್ಟು ಇರುವಿರಿ.
ద్వితీయోపదేశకాండమ 1 : 11 (ERVTE)
ನಮ್ಮ ಪೂರ್ವಿಕರ ದೇವರಾದ ಯೆಹೋವನು ಈಗ ಇರುವುದಕ್ಕಿಂತ ಸಾವಿರಪಟ್ಟು ಅಧಿಕವಾಗಿ ನಿಮ್ಮ ಜನಸಂಖ್ಯೆಯನ್ನು ಹೆಚ್ಚಿಸಲಿ. ತನ್ನ ವಾಗ್ದಾನಕ್ಕನುಸಾರವಾಗಿ ನಿಮ್ಮನ್ನು ಆಶೀರ್ವದಿಸಲಿ.
ద్వితీయోపదేశకాండమ 1 : 12 (ERVTE)
ಆದರೆ ನಾನೇ ಸ್ವತಃ ನಿಮ್ಮನ್ನು ಪರಾಂಬರಿಸುವುದಕ್ಕಾಗಲಿ ನಿಮ್ಮ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವುದಕ್ಕಾಗಲಿ ಸಾಧ್ಯವಾಗಲಿಲ್ಲ.
ద్వితీయోపదేశకాండమ 1 : 13 (ERVTE)
ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು.
ద్వితీయోపదేశకాండమ 1 : 14 (ERVTE)
ద్వితీయోపదేశకాండమ 1 : 15 (ERVTE)
“ಆಗ ನೀವು, ‘ಇದು ಒಳ್ಳೆಯ ಆಲೋಚನೆ’ ಎಂದು ಹೇಳಿದಿರಿ.
ద్వితీయోపదేశకాండమ 1 : 16 (ERVTE)
“ಆದ್ದರಿಂದ, ನಿಮ್ಮ ಕುಲಗಳಿಂದ ನೀವು ಆರಿಸಿಕೊಂಡ ಬುದ್ಧಿವಂತರಾದ ಮತ್ತು ಅನುಭವಸ್ಥರಾದ ಜನರನ್ನು ನಾನು ನೇಮಿಸಿದೆನು. ಈ ರೀತಿಯಾಗಿ ಅವರನ್ನು ಸಾವಿರ ಜನರ ಮೇಲೆಯೂ, ನೂರು ಜನರ ಮೇಲೆಯೂ, ಐವತ್ತು ಜನರ ಮೇಲೆಯೂ ಮತ್ತು ಹತ್ತು ಜನರ ಮೇಲೆಯೂ ನಾಯಕರನ್ನಾಗಿ ನೇಮಿಸಿದೆನು. ಅಲ್ಲದೆ ನಿಮ್ಮನಿಮ್ಮ ಕುಲಗಳಿಗೆ ಪ್ರಧಾನರನ್ನೂ ನೇಮಿಸಿದೆನು. “ನಿಮ್ಮ ನ್ಯಾಯಗಳನ್ನು ತೀರಿಸುವ, ಆ ನಾಯಕರುಗಳಿಗೆ ಹೇಳಿದ್ದೇನೆಂದರೆ: ‘ನಿಮ್ಮ ಅಧೀನದಲ್ಲಿರುವ ಜನರ ದೂರುಗಳನ್ನು ಚೆನ್ನಾಗಿ ಕೇಳಿಕೊಂಡು ಪಕ್ಷಪಾತವಿಲ್ಲದೆ ನ್ಯಾಯತೀರಿಸಬೇಕು. ಅವರಿಬ್ಬರೂ ಇಸ್ರೇಲರೇ ಆಗಿರಬಹುದು ಅಥವಾ ಒಬ್ಬನು ಇಸ್ರೇಲನೂ ಮತ್ತೊಬ್ಬನು ಪರದೇಶಿಯೂ ಆಗಿರಬಹುದು. ನೀವು ಪ್ರತಿಯೊಂದು ದೂರನ್ನು ನ್ಯಾಯವಾಗಿ ಬಗೆಹರಿಸಿ ತೀರ್ಪು ನೀಡಬೇಕು.
ద్వితీయోపదేశకాండమ 1 : 17 (ERVTE)
ನ್ಯಾಯತೀರಿಸುವಾಗ ಒಬ್ಬನು ಇನ್ನೊಬ್ಬನಿಗಿಂತ ವಿಶೇಷ ವ್ಯಕ್ತಿಯಾಗಿದ್ದಾನೆ ಎಂಬುದನ್ನು ಲೆಕ್ಕಿಸದೆ ಇಬ್ಬರೂ ಸಮಾನರೆಂದು ಪರಿಗಣಿಸಿ ಸರಿಯಾದ ತೀರ್ಪು ಕೊಡಬೇಕು. ನೀವು ಯಾರಿಗೂ ಭಯಪಡಬೇಡಿರಿ. ಯಾಕೆಂದರೆ ನಿಮ್ಮ ತೀರ್ಪು ದೇವರಿಂದ ಬಂದ ತೀರ್ಪಾಗಿರುತ್ತದೆ. ನಿಮಗೆ ಬಗೆಹರಿಸಲು ಕಷ್ಟವಾಗುವ ದೂರುಗಳಿದ್ದಲ್ಲಿ ಅವುಗಳನ್ನು ನನ್ನ ಬಳಿಗೆ ತನ್ನಿರಿ. ಅವುಗಳಿಗೆ ನಾನು ನ್ಯಾಯತೀರ್ಪು ನೀಡುವೆನು.’
ద్వితీయోపదేశకాండమ 1 : 18 (ERVTE)
ಅದೇ ಸಮಯದಲ್ಲಿ, ನೀವು ಮಾಡತಕ್ಕ ಬೇರೆ ಎಲ್ಲಾ ಸಂಗತಿಗಳನ್ನೂ ನಾನು ನಿಮಗೆ ತಿಳಿಸಿದೆನು.
ద్వితీయోపదేశకాండమ 1 : 19 (ERVTE)
{#1ಕಾನಾನ್ ದೇಶಕ್ಕೆ ಗೂಢಚಾರರನ್ನು ಕಳುಹಿಸಿದ್ದು } “ಬಳಿಕ ನಾವು ನಮ್ಮ ದೇವರಾದ ಯೆಹೋವನ ಆಜ್ಞಾನುಸಾರವಾಗಿ ಹೋರೇಬ್ ಬೆಟ್ಟಪ್ರದೇಶವನ್ನು ಬಿಟ್ಟು ಅಮೋರಿಯರ ಗುಡ್ಡಗಾಡು ಪ್ರದೇಶದಲ್ಲಿ ಪ್ರಯಾಣಮಾಡುತ್ತಾ ನೀವು ನೋಡಿದ ಅತ್ಯಂತ ಭಯಂಕರವಾದ ಮತ್ತು ವಿಶಾಲವಾದ ಮರುಭೂಮಿಯನ್ನು ದಾಟಿ ಕಾದೇಶ್‌ಬರ್ನೇಯಕ್ಕೆ ಬಂದೆವು.
ద్వితీయోపదేశకాండమ 1 : 20 (ERVTE)
ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನೀವೀಗ ಅಮೋರಿಯರ ಬೆಟ್ಟಪ್ರದೇಶಕ್ಕೆ ಬಂದಿರುವಿರಿ. ನಮ್ಮ ದೇವರಾದ ಯೆಹೋವನು ಈ ದೇಶವನ್ನು ನಮಗೆ ಕೊಡುವನು.
ద్వితీయోపదేశకాండమ 1 : 21 (ERVTE)
ದೇಶ ನಿಮ್ಮೆದುರಿಗೇ ಇದೆ, ಎದ್ದು ವಶಪಡಿಸಿಕೊಳ್ಳಿರಿ. ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಹೀಗೆಯೇ ಆಜ್ಞಾಪಿಸಿದ್ದಾನೆ. ಆದ್ದರಿಂದ ಭಯಪಡಬೇಡಿ; ಯಾವುದಕ್ಕೂ ಹೆದರಬೇಡಿ!’
ద్వితీయోపదేశకాండమ 1 : 22 (ERVTE)
ద్వితీయోపదేశకాండమ 1 : 23 (ERVTE)
“ಆದರೆ ನೀವೆಲ್ಲಾ ನನ್ನ ಬಳಿಗೆ ಬಂದು, ‘ಆ ದೇಶವನ್ನು ಸಂಚರಿಸಿ ಅದರ ಬಲವುಳ್ಳ ಮತ್ತು ಬಲಹೀನ ಸ್ಥಳಗಳನ್ನು ನೋಡಿಕೊಂಡು ನಾವು ಯಾವ ಮಾರ್ಗವಾಗಿ ಹೋಗಬೇಕು ಮತ್ತು ಯಾವಯಾವ ಪಟ್ಟಣಗಳನ್ನು ದಾಟಬೇಕು ಎಂಬುದನ್ನು ನಮಗೆ ತಿಳಿಸಲು ನಮ್ಮಲ್ಲಿ ಕೆಲವರನ್ನು ಕಳುಹಿಸಿ’ ಎಂದು ಹೇಳಿದಿರಿ. “ಇದು ಒಂದು ಒಳ್ಳೆಯ ಆಲೋಚನೆ ಎಂದುಕೊಂಡು ನಿಮ್ಮ ಕುಲಗಳಿಂದ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.
ద్వితీయోపదేశకాండమ 1 : 24 (ERVTE)
ಅವರು ಹೊರಟುಹೋಗಿ ಬೆಟ್ಟಪ್ರದೇಶಗಳನ್ನು ದಾಟಿ ಎಷ್ಕೋಲ್ ಕಣಿವೆಯನ್ನೆಲ್ಲಾ ಸಂಚರಿಸಿ ವಿಷಯಗಳನ್ನು ಸಂಗ್ರಹಿಸಿದರು.
ద్వితీయోపదేశకాండమ 1 : 25 (ERVTE)
ಅಲ್ಲಿ ಬೆಳೆಯುವ ಹಣ್ಣುಗಳನ್ನು ಕಿತ್ತು ನಮ್ಮ ಬಳಿಗೆ ತಂದರು. ಅವರು ಆ ದೇಶದ ವಿಷಯವಾಗಿ ತಿಳಿಸಿದರು. ‘ನಮ್ಮ ದೇವರಾದ ಯೆಹೋವನು ನಮಗೆ ಒಳ್ಳೆಯ ದೇಶವನ್ನು ಕೊಡುತ್ತಿದ್ದಾನೆ!’ ಅಂದರು.
ద్వితీయోపదేశకాండమ 1 : 26 (ERVTE)
“ಆದರೆ ನೀವು ದೇಶದೊಳಗೆ ಪ್ರವೇಶಿಸಿ ಸ್ವಾಧೀನ ಮಾಡಿಕೊಳ್ಳಲಿಲ್ಲ; ನಿಮ್ಮ ದೇವರಾದ ಯೆಹೋವನ ಮಾತನ್ನು ಕೇಳಲಿಲ್ಲ.
ద్వితీయోపదేశకాండమ 1 : 27 (ERVTE)
ನಿಮ್ಮನಿಮ್ಮ ಗುಡಾರಗಳಲ್ಲಿ ಯೆಹೋವನ ವಿರುದ್ಧವಾಗಿ ಗುಣುಗುಟ್ಟಿದಿರಿ, ‘ನಮ್ಮ ಯೆಹೋವನು ನಮ್ಮನ್ನು ದ್ವೇಷಿಸುತ್ತಾನೆ! ನಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ಅಮೋರಿಯರಿಂದ ನಾಶಪಡಿಸುತ್ತಿದ್ದಾನೆ!
ద్వితీయోపదేశకాండమ 1 : 28 (ERVTE)
ನಾವೀಗ ಎಲ್ಲಿಗೆ ಹೋಗೋಣ? ನಮ್ಮ ಸಹೋದರರು ತಮ್ಮ ವರದಿಯಿಂದ ನಮ್ಮನ್ನು ಹೆದರಿಸಿದ್ದಾರೆ. ಅಲ್ಲಿಯ ಜನರು ದೃಢಕಾಯರೂ ಬಲಶಾಲಿಗಳೂ ಎತ್ತರವಾದ ಪುರುಷರೂ ಆಗಿದ್ದಾರೆ. ಅವರ ಪಟ್ಟಣಗಳು ದೊಡ್ಡವುಗಳಾಗಿದ್ದು ಅವುಗಳ ಗೋಡೆಗಳು ಆಕಾಶಕ್ಕೆ ಮುಟ್ಟುವಷ್ಟು ಎತ್ತರವಾಗಿವೆ. ನಾವು ಅಲ್ಲಿ ಅನಾಕ್ಯರೆಂಬ ಮಹಾಶರೀರಗಳನ್ನು ನೋಡಿದೆವು!’ ಎಂದು ಅವರು ಹೇಳಿದಾಗ ನಾವು ಭಯದಿಂದ ತತ್ತರಿಸಿದೆವು.
ద్వితీయోపదేశకాండమ 1 : 29 (ERVTE)
“ಆಗ ನಾನು, ‘ನೀವು ಕಳವಳಗೊಳ್ಳಬೇಡಿರಿ! ಆ ಜನರಿಗೆ ಭಯಪಡಬೇಡಿರಿ!
ద్వితీయోపదేశకాండమ 1 : 30 (ERVTE)
ನಿಮ್ಮ ದೇವರಾದ ಯೆಹೋವನು ನಿಮ್ಮ ಮುಂದೆ ಹೋಗಿ ಅವರೊಂದಿಗೆ ಯುದ್ಧಮಾಡುವನು. ಈಜಿಪ್ಟ್‌ನಲ್ಲಿ ಆತನು ಮಾಡಿದಂತೆಯೇ ಇಲ್ಲಿಯೂ ಮಾಡುವನು.
ద్వితీయోపదేశకాండమ 1 : 31 (ERVTE)
ಅಡವಿಗಳಲ್ಲಿಯೂ ಮರುಭೂಮಿಗಳಲ್ಲಿಯೂ ಮನುಷ್ಯನು ತನ್ನ ಮಗುವನ್ನು ಹೊತ್ತುಕೊಂಡು ತರುವಂತೆ ದೇವರಾದ ಯೆಹೋವನು ನಿಮ್ಮನ್ನು ಹೊತ್ತುಕೊಂಡು ತಂದಿದ್ದಾನೆ. ಈ ಸ್ಥಳಕ್ಕೆ ಸುರಕ್ಷಿತವಾಗಿ ನಿಮ್ಮನ್ನು ತಂದು ಮುಟ್ಟಿಸಿದ್ದಾನೆ’ ಎಂದು ಹೇಳಿದೆನು.
ద్వితీయోపదేశకాండమ 1 : 32 (ERVTE)
“ಆದರೂ ನೀವು ಇನ್ನೂ ನಿಮ್ಮ ದೇವರಾದ ಯೆಹೋವನ ಮೇಲೆ ಭರವಸೆ ಇಡಲಿಲ್ಲ.
ద్వితీయోపదేశకాండమ 1 : 33 (ERVTE)
ನೀವು ಪ್ರಯಾಣ ಮಾಡುತ್ತಿರುವಾಗ ಆತನು ನಿಮ್ಮ ಮುಂದೆ ಹೋದನು. ತಂಗಲು ಯೋಗ್ಯವಾದ ಸ್ಥಳದಲ್ಲಿ ನೀವು ಪಾಳೆಯ ಮಾಡಿಕೊಳ್ಳುವಂತೆ ಮಾಡಿದನು. ಹಗಲಲ್ಲಿ ಮೇಘಸ್ತಂಭವಾಗಿಯೂ ರಾತ್ರಿಯಲ್ಲಿ ಅಗ್ನಿಸ್ತಂಭವಾಗಿಯೂ ಆತನು ನಿಮಗೆ ಮಾರ್ಗದರ್ಶಕನಾಗಿದ್ದನು.
ద్వితీయోపదేశకాండమ 1 : 34 (ERVTE)
{#1ಜನರನ್ನು ಕಾನಾನ್ ದೇಶದೊಳಗೆ ಹೋಗದಂತೆ ಮಾಡಿದ್ದು } “ನೀವು ಹೇಳುತ್ತಿದ್ದದ್ದನ್ನು ಯೆಹೋವನು ಕೇಳಿ ಸಿಟ್ಟುಗೊಂಡು,
ద్వితీయోపదేశకాండమ 1 : 35 (ERVTE)
‘ಈಗ ಜೀವಿಸುತ್ತಿರುವ ದುಷ್ಟಜನರಾದ ನಿಮ್ಮಲ್ಲಿ ಯಾರೂ ನಾನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ಒಳ್ಳೆಯನಾಡಿಗೆ ಹೋಗುವುದಿಲ್ಲ.
ద్వితీయోపదేశకాండమ 1 : 36 (ERVTE)
ಯೆಫುನ್ನೆಯ ಮಗನಾದ ಕಾಲೇಬನು ಮಾತ್ರ ಆ ದೇಶವನ್ನು ನೋಡುವನು. ಕಾಲೇಬನು ಸಂಚರಿಸಿದ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವೆನು. ಯಾಕೆಂದರೆ ನಾನು ಆಜ್ಞಾಪಿಸಿದ್ದನ್ನೆಲ್ಲ ಕಾಲೇಬನು ಮಾಡಿದನು’ ಎಂದು ಪ್ರಮಾಣಮಾಡಿದನು.
ద్వితీయోపదేశకాండమ 1 : 37 (ERVTE)
“ದೇವರಾದ ಯೆಹೋವನು ನಿಮ್ಮಿಂದಾಗಿ ನನ್ನ ಮೇಲೂ ಸಿಟ್ಟುಗೊಂಡು, ‘ಮೋಶೆಯೇ, ನೀನೂ ಸಹ ವಾಗ್ದಾನದ ದೇಶವನ್ನು ಪ್ರವೇಶಿಸುವುದಿಲ್ಲ.
ద్వితీయోపదేశకాండమ 1 : 38 (ERVTE)
ಆದರೆ ನಿನ್ನ ಸಹಾಯಕನಾದ ನೂನನ ಮಗನಾದ ಯೆಹೋಶುವನು ಆ ದೇಶವನ್ನು ಪ್ರವೇಶಿಸುವನು. ಯೆಹೋಶುವನನ್ನು ಪ್ರೋತ್ಸಾಹಿಸು; ಯಾಕೆಂದರೆ ಆ ದೇಶವನ್ನು ವಶಪಡಿಸಿಕೊಳ್ಳಲು ಅವನು ಇಸ್ರೇಲರನ್ನು ಮುನ್ನಡೆಸಬೇಕು’ ಎಂದು ಹೇಳಿದನು.
ద్వితీయోపదేశకాండమ 1 : 39 (ERVTE)
ದೇವರಾದ ಯೆಹೋವನು ನಮಗೆ ಹೇಳಿದ್ದೇನೆಂದರೆ: ‘ವೈರಿಗಳ ಪಾಲಾಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕಮಕ್ಕಳಿಗೂ ಒಳ್ಳೆಯದು ಮತ್ತು ಕೆಟ್ಟದ್ದು ಅರಿಯದ ನಿಮ್ಮ ಮಕ್ಕಳಿಗೂ ಆ ದೇಶವನ್ನು ಕೊಡುವೆನು; ಅವರು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.
ద్వితీయోపదేశకాండమ 1 : 40 (ERVTE)
ಆದರೆ ನೀವು ಹಿಂತಿರುಗಿ ಕೆಂಪುಸಮುದ್ರಕ್ಕೆ ಹೋಗುವ ಮರುಭೂಮಿಯ ಮಾರ್ಗದಲ್ಲಿ ಹೋಗಬೇಕು.’
ద్వితీయోపదేశకాండమ 1 : 41 (ERVTE)
“ಆಗ ನೀವು ಹೀಗೆ ಹೇಳಿದಿರಿ: ‘ಮೋಶೆಯೇ, ನಾವು ಯೆಹೋವನಿಗೆ ವಿರುದ್ಧವಾಗಿ ಪಾಪ ಮಾಡಿದೆವು. ದೇವರಾದ ಯೆಹೋವನು ನಮಗೆ ಆಜ್ಞೆಮಾಡಿದ ಪ್ರಕಾರ ನಾವು ಈಗ ಹೋಗಿ ಅವರೊಂದಿಗೆ ಯುದ್ಧಮಾಡುತ್ತೇವೆ.’ “ಆಮೇಲೆ ನೀವು ಪ್ರತಿಯೊಬ್ಬರೂ ಆಯುಧಗಳನ್ನು ಧರಿಸಿಕೊಂಡಿರಿ. ಬೆಟ್ಟಪ್ರದೇಶಗಳನ್ನು ಜಯಿಸುವುದು ಸುಲಭವೆಂದು ನೀವು ಭಾವಿಸಿದ್ದಿರಿ.
ద్వితీయోపదేశకాండమ 1 : 42 (ERVTE)
ಆದರೆ ಯೆಹೋವನು ನನಗೆ ಹೇಳಿದ್ದೇನೆಂದರೆ: ‘ಆ ಜನರಿಗೆ ಬೆಟ್ಟವನ್ನೇರಿ ಯುದ್ಧಮಾಡಬಾರದೆಂದು ಹೇಳು. ಯಾಕೆಂದರೆ ನಾನು ಅವರೊಂದಿಗಿರುವುದಿಲ್ಲ ಮತ್ತು ಅವರ ವೈರಿಗಳು ಅವರನ್ನು ಸೋಲಿಸಿಬಿಡುವರು!’
ద్వితీయోపదేశకాండమ 1 : 43 (ERVTE)
“ನಾನು ನಿಮ್ಮೊಂದಿಗೆ ಮಾತನಾಡಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ನೀವು ಯೆಹೋವನ ಆಜ್ಞೆಗೆ ವಿಧೇಯರಾಗಲು ಒಪ್ಪಲಿಲ್ಲ. ನೀವು ನಿಮ್ಮ ಸ್ವಂತ ಶಕ್ತಿಯಿಂದ ಜಯ ಹೊಂದುವುದಾಗಿ ಭಾವಿಸಿ ಬೆಟ್ಟಪ್ರದೇಶವನ್ನು ಏರಿದಿರಿ.
ద్వితీయోపదేశకాండమ 1 : 44 (ERVTE)
ಆದರೆ ಅಲ್ಲಿ ವಾಸಿಸುತ್ತಿದ್ದ ಅಮೋರಿಯರು ಹೊರಗೆ ಬಂದು ಜೇನುಹುಳಗಳಂತೆ ನಿಮ್ಮನ್ನು ಮುತ್ತಿ ಸೇಯೀರ್‌ನಿಂದ ಹೊರ್ಮದ ತನಕ ನಿಮ್ಮನ್ನು ಓಡಿಸಿದರು.
ద్వితీయోపదేశకాండమ 1 : 45 (ERVTE)
ಆಗ ನೀವು ಹಿಂತಿರುಗಿ ಬಂದು ಯೆಹೋವನ ಸಹಾಯಕ್ಕಾಗಿ ಮೊರೆಯಿಟ್ಟಿರಿ. ಆದರೆ ಯೆಹೋವನು ನಿಮಗೆ ಕಿವಿಗೊಡಲಿಲ್ಲ.
ద్వితీయోపదేశకాండమ 1 : 46 (ERVTE)
ಹೀಗೆ ನೀವು ಕಾದೇಶಿನಲ್ಲಿ ತುಂಬ ದಿನಗಳನ್ನು ಕಳೆದಿರುವಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46