ద్వితీయోపదేశకాండమ 16 : 1 (ERVTE)
{#1ಪಸ್ಕಹಬ್ಬ } “ಅಬೀಬ್ ್‌ನಬಮೇಲೆ ಚೆಲ್ಲಿ ಬಿಡಬೇಕು. ೆಲ್ನ ತಿನ್ನಬಾರದು. ಅದನ್ನು ನಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು. ಅವುಗಳನ್ನು ನಿಮ್ಮತಿಂಗಳನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಆ ತಿಂಗಳಲ್ಲಿ ನಿಮ್ಮ ದೇವರಾದ ಯೆಹೋವನನ್ನು ಗೌರವಿಸುವುದಕ್ಕಾಗಿ ಪಸ್ಕಹಬ್ಬವನ್ನು ಆಚರಿಸಬೇಕು. ಯಾಕೆಂದರೆ ಆ ತಿಂಗಳಲ್ಲೇ ನಿಮ್ಮ ದೇವರಾದ ಯೆಹೋವನು ರಾತ್ರಿಯಲ್ಲಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.
ద్వితీయోపదేశకాండమ 16 : 2 (ERVTE)
ನಿಮ್ಮ ದೇವರು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಪ್ರತ್ಯೇಕ ಸ್ಥಳಕ್ಕೆ ನೀವು ಹೋಗಿ ಅಲ್ಲಿ ಪಸ್ಕದ ಯಜ್ಞಾರ್ಪಣೆ ಮಾಡಿ ನಿಮ್ಮ ಯೆಹೋವನನ್ನು ಮಹಿಮೆಪಡಿಸಬೇಕು. ಅಲ್ಲಿ ದನವನ್ನಾಗಲಿ ಆಡನ್ನಾಗಲಿ ಯಜ್ಞವಾಗಿ ಅರ್ಪಿಸಬೇಕು.
ద్వితీయోపదేశకాండమ 16 : 3 (ERVTE)
ಯಜ್ಞ ಪಶುವಿನೊಂದಿಗೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನ ತಿನ್ನಬೇಕು. ಈ ಸಮಯದಲ್ಲಿ ಹುಳಿ ಬೆರೆಸಿದ ರೊಟ್ಟಿಯನ್ನು ತಿನ್ನಲೇಬಾರದು. ಹುಳಿಯಿಲ್ಲದ ರೊಟ್ಟಿಗೆ ‘ಸಂಕಟದ ರೊಟ್ಟಿ’ ಎಂದು ಕರೆಯಬೇಕು. ಯಾಕೆಂದರೆ ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದಾಗ ಅನುಭವಿಸಿದ್ದ ಸಂಕಟವನ್ನು ಅದು ನೆನಪಿಗೆ ತರುತ್ತದೆ. ನೀವು ಅಲ್ಲಿಂದ ತುಂಬಾ ಅವಸರವಾಗಿ ಹೊರಬಂದಿರಿ! ಇದನ್ನು ನಿಮ್ಮ ಜೀವಮಾನ ಪರ್ಯಂತ ಜ್ಞಾಪಿಸಿಕೊಳ್ಳಬೇಕು.
ద్వితీయోపదేశకాండమ 16 : 4 (ERVTE)
ಏಳು ದಿನಗಳ ತನಕ ಇಡೀ ದೇಶದಲ್ಲಿ ಯಾರ ಮನೆಯಲ್ಲಿಯಾದರೂ ರೊಟ್ಟಿಗೆ ಬೆರೆಸುವ ಹುಳಿಯು ಇರಬಾರದು. ಮತ್ತು ಮೊದಲನೇ ದಿನದ ಸಾಯಂಕಾಲ ನೀವು ವಧಿಸುವ ಪ್ರಾಣಿಯ ಮಾಂಸವನ್ನು ಮುಂಜಾನೆಯೊಳಗೆ ತಿಂದು ಮುಗಿಸತಕ್ಕದ್ದು.
ద్వితీయోపదేశకాండమ 16 : 5 (ERVTE)
“ಪಸ್ಕದ ಪಶುವನ್ನು ದೇಶದ ಬೇರೆ ಯಾವ ಸ್ಥಳದಲ್ಲಿಯೂ ಕೊಯ್ಯಬಾರದು.
ద్వితీయోపదేశకాండమ 16 : 6 (ERVTE)
ನಿಮ್ಮ ದೇವರಾದ ಯೆಹೋವನು ತನ್ನ ವಿಶೇಷವಾದ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿಯೇ ಸಾಯಂಕಾಲ ಸೂರ್ಯಾಸ್ತಮಾನ ಕಾಲದಲ್ಲಿ ಪಸ್ಕಹಬ್ಬದ ಪಶುವನ್ನು ಅರ್ಪಿಸಬೇಕು. ದೇವರು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದ ಕಾಲವನ್ನು ಈ ಪವಿತ್ರ ದಿನವು ನಿಮಗೆ ನೆನಪು ಮಾಡುತ್ತದೆ.
ద్వితీయోపదేశకాండమ 16 : 7 (ERVTE)
ನಿಮ್ಮ ದೇವರಾದ ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವು ಪಸ್ಕದ ಪಶುವನ್ನು ಅಡಿಗೆ ಮಾಡಿ ತಿನ್ನಬೇಕು. ಆಮೇಲೆ ಮುಂಜಾನೆ ನೀವು ನಿಮ್ಮನಿಮ್ಮ ಮನೆಗಳಿಗೆ ಹೋಗಬಹುದು.
ద్వితీయోపదేశకాండమ 16 : 8 (ERVTE)
ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.
ద్వితీయోపదేశకాండమ 16 : 9 (ERVTE)
{#1ಪಂಚಾಶತ್ತಮ ಹಬ್ಬ } “ನಿಮ್ಮ ಹೊಲಗಳ ಬೆಳೆಯನ್ನು ಕೊಯ್ಯಲು ಪ್ರಾರಂಭಿಸಿದ ದಿನದಿಂದ ಏಳು ವಾರಗಳನ್ನು ಲೆಕ್ಕ ಮಾಡಿರಿ.
ద్వితీయోపదేశకాండమ 16 : 10 (ERVTE)
ಅಲ್ಲಿ ನಿಮ್ಮ ದೇವರಾದ ಯೆಹೋವನಿಗೆ ವಾರಗಳ ಹಬ್ಬವನ್ನು ಆಚರಿಸಿರಿ. ಅಲ್ಲಿ ನಿಮ್ಮ ವಿಶೇಷ ಕಾಣಿಕೆಗಳನ್ನು ತಂದು ಸಮರ್ಪಿಸಿರಿ. ನಿಮ್ಮ ದೇವರು ನಿಮ್ಮನ್ನು ಎಷ್ಟು ಆಶೀರ್ವದಿಸಿರುತ್ತಾನೆಂದು ಯೋಚಿಸಿ ಅದರ ಪ್ರಕಾರ ನಿಮ್ಮ ಕಾಣಿಕೆಗಳನ್ನು ಸಲ್ಲಿಸಿರಿ.
ద్వితీయోపదేశకాండమ 16 : 11 (ERVTE)
ಯೆಹೋವನು ತನ್ನ ವಾಸಸ್ಥಾನಕ್ಕಾಗಿ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಜನರೂ ಒಟ್ಟಾಗಿ ಸೇರಿ ದೇವರ ಸನ್ನಿಧಾನದಲ್ಲಿ ಸಂತೋಷಪಡಿರಿ. ನಿಮ್ಮ ಹೆಂಡತಿಮಕ್ಕಳನ್ನು ಅಲ್ಲದೆ ನಿಮ್ಮ ಸೇವಕಸೇವಕಿಯರನ್ನು ನಿಮ್ಮ ಪಟ್ಟಣದಲ್ಲಿರುವ ಲೇವಿಯರನ್ನು ಮತ್ತು ವಿಧವೆಯರನ್ನು, ಅನಾಥರನ್ನು, ಪರದೇಶಿಗಳನ್ನು ಕರೆದುಕೊಂಡು ಸಂತೋಷಪಡಿರಿ.
ద్వితీయోపదేశకాండమ 16 : 12 (ERVTE)
ನೀವು ಈಜಿಪ್ಟಿನಲ್ಲಿ ಗುಲಾಮರಾಗಿದ್ದಿರಿ ಎಂದು ನೆನಪುಮಾಡಿಕೊಂಡು ಯೆಹೋವನ ವಿಧಿಗಳನ್ನು ತಪ್ಪದೇ ಅನುಸರಿಸಿರಿ.
ద్వితీయోపదేశకాండమ 16 : 13 (ERVTE)
{#1ಪರ್ಣಶಾಲೆಗಳ ಹಬ್ಬ } “ಕಣಗಳ ಕೆಲಸ ಮತ್ತು ದ್ರಾಕ್ಷಿಯ ಆಲೆಗಳ ಕೆಲಸ ಮುಕ್ತಾಯವಾಗಿ ನಿಮ್ಮ ಮನೆಗಳಲ್ಲಿ ಅವುಗಳನ್ನು ಶೇಖರಿಸಿದ ಬಳಿಕ ಏಳು ದಿನಗಳ ನಂತರ ನೀವು ಪರ್ಣಶಾಲೆಗಳ ಹಬ್ಬವನ್ನು ಆಚರಿಸಬೇಕು.
ద్వితీయోపదేశకాండమ 16 : 14 (ERVTE)
ನಿಮ್ಮ ಹೆಂಡತಿಮಕ್ಕಳೊಂದಿಗೆ, ಸೇವಕಸೇವಕಿಯರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿರುವ ಲೇವಿಯರೊಂದಿಗೆ, ಪರದೇಶಿಗಳೊಂದಿಗೆ, ಅನಾಥರೊಂದಿಗೆ ಮತ್ತು ವಿಧವೆಯರೊಂದಿಗೆ ಆನಂದದಿಂದ ಹಬ್ಬ ಮಾಡಿರಿ.
ద్వితీయోపదేశకాండమ 16 : 15 (ERVTE)
ನಿಮ್ಮ ಯೆಹೋವನು ಆರಿಸಿಕೊಂಡಿರುವ ವಿಶೇಷ ಸ್ಥಳದಲ್ಲಿ ಈ ಹಬ್ಬವನ್ನು ಏಳು ದಿನ ಆಚರಿಸಿರಿ. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸುವುದಕ್ಕಾಗಿ ಸಂತೋಷದಿಂದ ಹಬ್ಬವನ್ನು ಆಚರಿಸಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮ ಸುಗ್ಗಿಯನ್ನು ಮತ್ತು ನಿಮ್ಮ ಎಲ್ಲಾ ಕೆಲಸಕಾರ್ಯಗಳನ್ನು ಆಶೀರ್ವದಿಸಿದನು. ಆದ್ದರಿಂದ ಸಂತೋಷಪಡಿರಿ!
ద్వితీయోపదేశకాండమ 16 : 16 (ERVTE)
“ನಿಮ್ಮ ದೇವರಾದ ಯೆಹೋವನು ತನ್ನ ಆಲಯಕ್ಕಾಗಿ ಆರಿಸಿಕೊಳ್ಳುವ ಆ ವಿಶೇಷ ಸ್ಥಳಕ್ಕೆ ನೀವೆಲ್ಲಾ ವರ್ಷದಲ್ಲಿ ಮೂರು ಬಾರಿ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ, ಪಂಚಾಶತ್ತಮ ಹಬ್ಬ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿ ಸೇರಿಬರಬೇಕು. ಯೆಹೋವನ ಬಳಿಗೆ ಬರುವ ಪ್ರತಿಯೊಬ್ಬನು ಕಾಣಿಕೆಯೊಂದಿಗೆ ಬರಬೇಕು.
ద్వితీయోపదేశకాండమ 16 : 17 (ERVTE)
ಪ್ರತಿಯೊಬ್ಬನೂ ಯೆಹೋವನು ತನ್ನನ್ನು ಆಶೀರ್ವದಿಸಿದ ಮೇರೆಗೆ ಆತನಿಗೆ ಕಾಣಿಕೆಯನ್ನರ್ಪಿಸಬೇಕು.
ద్వితీయోపదేశకాండమ 16 : 18 (ERVTE)
{#1ನ್ಯಾಯಾಧಿಪತಿಗಳೂ ಅಧಿಕಾರಿಗಳೂ } “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.
ద్వితీయోపదేశకాండమ 16 : 19 (ERVTE)
ನೀವು ಯಾವಾಗಲೂ ಪಕ್ಷಪಾತವಿಲ್ಲದವರಾಗಿರಬೇಕು. ಜನರಿಂದ ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಮಾನ ಕೊಡಬಾರದು. ಹಣವು ಜ್ಞಾನಿಗಳನ್ನು ಕುರುಡುಮಾಡಿ ಅವರ ಬುದ್ಧಿಯನ್ನು ಮಂದ ಮಾಡುವುದು.
ద్వితీయోపదేశకాండమ 16 : 20 (ERVTE)
ನೀವು ಒಳ್ಳೆಯವರೂ ನ್ಯಾಯವಂತರೂ ಆಗಿದ್ದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ವಾಸಿಸುವಿರಿ ಮತ್ತು ಅದನ್ನು ನಿಮ್ಮ ವಶದಲ್ಲಿಟ್ಟುಕೊಳ್ಳುವಿರಿ.
ద్వితీయోపదేశకాండమ 16 : 21 (ERVTE)
{#1ದೇವರು ವಿಗ್ರಹಗಳನ್ನು ದ್ವೇಷಿಸುವನು } “ನೀವು ನಿಮ್ಮ ದೇವರಾದ ಯೆಹೋವನಿಗಾಗಿ ಯಜ್ಞವೇದಿಕೆಯನ್ನು ಕಟ್ಟುವಾಗ ಅದರ ಪಕ್ಕದಲ್ಲಿ ಅಶೇರ್ ದೇವತೆಗೆ ಗೌರವವನ್ನು ತರುವಂಥ ಯಾವ ಮರದ ಕಂಬಗಳನ್ನು ನೆಡಬಾರದು;
ద్వితీయోపదేశకాండమ 16 : 22 (ERVTE)
ಸುಳ್ಳುದೇವರುಗಳ ಪೂಜೆಗಾಗಿ ವಿಶೇಷವಾದ ಕಲ್ಲುಗಳನ್ನು ನೆಡಬಾರದು; ನಿಮ್ಮ ದೇವರಾದ ಯೆಹೋವನು ಅವುಗಳನ್ನು ದ್ವೇಷಿಸುತ್ತಾನೆ.

1 2 3 4 5 6 7 8 9 10 11 12 13 14 15 16 17 18 19 20 21 22