ద్వితీయోపదేశకాండమ 23 : 1 (ERVTE)
{#1ಇಸ್ರೇಲರ ದೇವಾರಾಧನೆಗೆ ಯೋಗ್ಯರಾದವರು } “ಜನನಾಂಗದ ಬೀಜವನ್ನು ಹೊಡಿಸಿಕೊಂಡವನಾಗಲಿ ಜನನಾಂಗದ ಒಂದು ಭಾಗವನ್ನು ಕತ್ತರಿಸಿಕೊಂಡವನಾಗಲಿ ಇಸ್ರೇಲ್ ಜನರೊಂದಿಗೆ ದೇವಾರಾಧನೆ ಮಾಡಬಾರದು.
ద్వితీయోపదేశకాండమ 23 : 2 (ERVTE)
ಒಬ್ಬನ ತಂದೆತಾಯಿಗಳು ಕಾನೂನು ಬದ್ಧವಾಗಿ ಮದುವೆಯಾಗಿಲ್ಲದಿದ್ದರೆ, ಅವನು ದೇವಾರಾಧನೆಯಲ್ಲಿ ಇಸ್ರೇಲರೊಡನೆ ಸೇರಕೂಡದು. ಅವನ ಸಂತತಿಯವರು ಹತ್ತನೆಯ ತಲೆಮಾರಿನ ತನಕ ಇಸ್ರೇಲ್ ಸಮೂಹದೊಂದಿಗೆ ಆರಾಧನೆ ಮಾಡಬಾರದು.
ద్వితీయోపదేశకాండమ 23 : 3 (ERVTE)
“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.
ద్వితీయోపదేశకాండమ 23 : 4 (ERVTE)
ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.
ద్వితీయోపదేశకాండమ 23 : 5 (ERVTE)
ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.
ద్వితీయోపదేశకాండమ 23 : 6 (ERVTE)
ಅಮ್ಮೋನಿಯರೊಂದಿಗಾಗಲಿ ಮೋವಾಬ್ಯರೊಂದಿಗಾಗಲಿ ನೀವು ಸಂಧಾನ ಮಾಡಿಕೊಳ್ಳಲೇಬಾರದು; ನಿಮ್ಮ ಜೀವಮಾನವೆಲ್ಲಾ ಅವರೊಂದಿಗೆ ಸ್ನೇಹತ್ವದಲ್ಲಿರಬಾರದು.
ద్వితీయోపదేశకాండమ 23 : 7 (ERVTE)
“ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.
ద్వితీయోపదేశకాండమ 23 : 8 (ERVTE)
ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವಾರಾಧನೆ ಮಾಡಬಹುದು.
ద్వితీయోపదేశకాండమ 23 : 9 (ERVTE)
{#1ಪಾಳೆಯವನ್ನು ಶುದ್ಧವಾಗಿಡಬೇಕು } “ನಿಮ್ಮ ಸೈನ್ಯವು ವೈರಿಗಳೊಂದಿಗೆ ಯುದ್ಧಮಾಡಲು ಹೋದಾಗ ನಿಮ್ಮನ್ನು ಅಶುದ್ಧಪಡಿಸುವ ಪ್ರತಿಯೊಂದರಿಂದಲೂ ನೀವು ದೂರವಾಗಿರಿ.
ద్వితీయోపదేశకాండమ 23 : 10 (ERVTE)
ಒಬ್ಬನಿಗೆ ರಾತ್ರಿ ಕಾಲದಲ್ಲಿ ವೀರ್ಯಸ್ಖಲನವಾದರೆ ಅವನು ಪಾಳೆಯದಿಂದ ಹೊರಗೆ ಹೋಗಿ ಪ್ರತ್ಯೇಕವಾಗಿರಬೇಕು.
ద్వితీయోపదేశకాండమ 23 : 11 (ERVTE)
ಸಾಯಂಕಾಲವಾದಾಗ ಅವನು ಸ್ನಾನಮಾಡಿ ಸೂರ್ಯ ಮುಳುಗಿದ ಬಳಿಕ ಪಾಳೆಯದೊಳಕ್ಕೆ ಬರಬಹುದು.
ద్వితీయోపదేశకాండమ 23 : 12 (ERVTE)
“ಪಾಳೆಯದ ಹೊರಗೆ ಬಹಿರ್ದೇಶಕ್ಕೆ ಹೋಗಲು ಒಂದು ಸ್ಥಳವನ್ನು ನೇಮಿಸಬೇಕು.
ద్వితీయోపదేశకాండమ 23 : 13 (ERVTE)
ನಿಮ್ಮ ಆಯುಧಗಳೊಂದಿಗೆ ನೀವು ಒಂದು ಕೋಲನ್ನು ಇಟ್ಟುಕೊಳ್ಳಬೇಕು. ಈ ಕೋಲಿನಿಂದ ಮಣ್ಣು ಅಗೆದು ನೆಲದಲ್ಲಿ ಚಿಕ್ಕ ಗುಂಡಿ ತೋಡಲೂ ಮತ್ತು ಹೊಟ್ಟೆ ಖಾಲಿ ಮಾಡಿದ ಬಳಿಕ ಆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲೂ ಸಹಾಯವಾಗುವುದು.
ద్వితీయోపదేశకాండమ 23 : 14 (ERVTE)
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು.
ద్వితీయోపదేశకాండమ 23 : 15 (ERVTE)
{#1ಇತರ ವಿಧಿನಿಯಮಗಳು } “ಒಬ್ಬ ಗುಲಾಮನು ತನ್ನ ಧಣಿಯ ಬಳಿಯಿಂದ ನಿಮ್ಮ ಬಳಿಗೆ ಓಡಿ ಬಂದರೆ ನೀವು ಅವನ ಧಣಿಗೆ ಅವನನ್ನು ಒಪ್ಪಿಸಬಾರದು.
ద్వితీయోపదేశకాండమ 23 : 16 (ERVTE)
ಅವನು ನಿಮ್ಮ ಬಳಿಯಲ್ಲಿ ಇರಲು ಇಷ್ಟಪಟ್ಟರೆ ಅಥವಾ ಬೇರೆ ಊರಿಗೆ ಹೋಗಲು ಇಷ್ಟಪಟ್ಟರೆ ನೀವು ಅವನಿಗೆ ತೊಂದರೆಕೊಡಬಾರದು.
ద్వితీయోపదేశకాండమ 23 : 17 (ERVTE)
“ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು.
ద్వితీయోపదేశకాండమ 23 : 18 (ERVTE)
ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ.
ద్వితీయోపదేశకాండమ 23 : 19 (ERVTE)
“ನೀವು ಇನ್ನೊಬ್ಬ ಇಸ್ರೇಲಿಗೆ ಸಾಲಕೊಟ್ಟರೆ ಅದಕ್ಕೆ ಬಡ್ಡಿ ವಸೂಲು ಮಾಡಬಾರದು.
ద్వితీయోపదేశకాండమ 23 : 20 (ERVTE)
ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು.
ద్వితీయోపదేశకాండమ 23 : 21 (ERVTE)
“ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆ ಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.
ద్వితీయోపదేశకాండమ 23 : 22 (ERVTE)
ನೀವು ಹರಕೆ ಮಾಡಿಕೊಳ್ಳದಿದ್ದರೆ ಪಾಪಮಾಡುವುದಿಲ್ಲ.
ద్వితీయోపదేశకాండమ 23 : 23 (ERVTE)
ಆದರೆ ನೀವು ಮಾಡಿದ ಹರಕೆಯನ್ನು ಪೂರೈಸಬೇಕು. ನೀವು ಹರಕೆ ಮಾಡುವಂತೆ ದೇವರು ನಿಮ್ಮನ್ನು ಬಲವಂತ ಮಾಡಲಿಲ್ಲವಲ್ಲಾ. ಆದ್ದರಿಂದ ನೀವು ವಾಗ್ದಾನ ಮಾಡಿದ್ದನ್ನು ಪೂರೈಸಬೇಕು.
ద్వితీయోపదేశకాండమ 23 : 24 (ERVTE)
“ಒಬ್ಬನ ತೋಟದೊಳಗಿಂದ ನೀವು ಹಾದುಹೋಗುತ್ತಿರುವಾಗ ನಿಮಗೆ ಬೇಕಾಗುವಷ್ಟು ಹಣ್ಣನ್ನು ಕಿತ್ತು ತಿನ್ನಿ. ಆದರೆ ನೀವು ಮಕ್ಕರಿಯಲ್ಲಿ ತುಂಬಿಸಿಕೊಂಡು ಹೋಗಬಾರದು.
ద్వితీయోపదేశకాండమ 23 : 25 (ERVTE)
ಒಬ್ಬನ ಧಾನ್ಯದ ಹೊಲದಲ್ಲಿ ನೀವು ಹಾದುಹೋಗುತ್ತಿರುವಾಗ ನಿಮ್ಮ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ.
❮
❯