ద్వితీయోపదేశకాండమ 31 : 1 (ERVTE)
{#1ಯೆಹೋಶುವನು ನಿಮ್ಮ ಹೊಸ ನಾಯಕನಾಗಿದ್ದಾನೆ } ಮೋಶೆಯು ಇಸ್ರೇಲರ ಸಮೂಹಕ್ಕೆ ಹೇಳಿದ್ದೇನೆಂದರೆ:
ద్వితీయోపదేశకాండమ 31 : 2 (ERVTE)
“ನಾನು ಈಗ ನೂರಿಪ್ಪತ್ತು ವರ್ಷದವನಾಗಿದ್ದೇನೆ. ನನಗೆ ನಿಮ್ಮನ್ನು ಇನ್ನೂ ನಡೆಸಲು ಸಾಧ್ಯವಿಲ್ಲ. ಯೆಹೋವನು, ‘ನೀನು ಜೋರ್ಡನ್ ಹೊಳೆಯನ್ನು ದಾಟಕೂಡದು’ ಎಂದು ಹೇಳಿರುತ್ತಾನೆ.
ద్వితీయోపదేశకాండమ 31 : 3 (ERVTE)
ಆದರೆ ನಿಮ್ಮನ್ನು ಯೆಹೋವನೇ, ಆಚೆ ಕಡೆಗೆ ನಡೆಸುವನು. ಆ ದೇಶದ ಜನರನ್ನು ಯೆಹೋವನು ನಾಶಮಾಡುವನು. ಅವರ ಕೈಯಿಂದ ನೀವು ಆ ದೇಶವನ್ನು ವಶಪಡಿಸಿಕೊಳ್ಳುವಿರಿ. ಯೆಹೋಶುವನು ನಿಮ್ಮನ್ನು ಇನ್ನು ಮುಂದೆ ನಡಿಸುವನು ಎಂದು ಯೆಹೋವನು ಹೇಳಿದ್ದಾನೆ.
ద్వితీయోపదేశకాండమ 31 : 4 (ERVTE)
“ಯೆಹೋವನು ಸೀಹೋನನನ್ನು ಮತ್ತು ಓಗನನ್ನು ನಾಶಮಾಡಿದನು. ಅಮೋರಿಯ ಅರಸರನ್ನು ನಾಶಮಾಡಿದನು; ಅದೇ ರೀತಿಯಾಗಿ ನೀವು ಹೋಗುವ ದೇಶದಲ್ಲಿಯೂ ಮಾಡುವನು.
ద్వితీయోపదేశకాండమ 31 : 5 (ERVTE)
ಯೆಹೋವನು ಆ ಜನಾಂಗಗಳನ್ನು ಸೋಲಿಸಲು ಸಹಾಯ ಮಾಡುವನು. ಆದರೆ ನಾನು ಹೇಳಿದ ಪ್ರಕಾರ ನೀವು ಅವರಿಗೆ ಮಾಡಬೇಕು.
ద్వితీయోపదేశకాండమ 31 : 6 (ERVTE)
ಧೈರ್ಯವಾಗಿರಿ, ಶಕ್ತಿಹೊಂದಿದವರಾಗಿರಿ, ಆ ಜನರಿಗೆ ಹೆದರಬೇಡಿರಿ. ಯಾಕೆಂದರೆ ದೇವರಾದ ಯೆಹೋವನು ನಿಮ್ಮ ಸಂಗಡ ಇರುವನು. ಆತನು ನಿಮ್ಮ ಕೈ ಬಿಡುವುದಿಲ್ಲ, ನಿಮ್ಮನ್ನು ತೊರೆಯುವುದಿಲ್ಲ.”
ద్వితీయోపదేశకాండమ 31 : 7 (ERVTE)
ಆಮೇಲೆ ಮೋಶೆಯು ಯೆಹೋಶುವನನ್ನು ಕರೆದು ಎಲ್ಲಾ ಇಸ್ರೇಲರ ಎದುರಿನಲ್ಲಿ, “ಶಕ್ತಿಶಾಲಿಯಾಗಿದ್ದು ಧೈರ್ಯಗೊಂಡಿರು. ನೀನು ಈ ಜನರನ್ನು ಯೆಹೋವನು ನಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದಂಥ ದೇಶಕ್ಕೆ ನಡೆಸು. ಆ ದೇಶವನ್ನು ಸ್ವಾಧೀನ ಮಾಡಿಕೊಳ್ಳಲು ಇಸ್ರೇಲರಿಗೆ ಸಹಾಯ ಮಾಡು.
ద్వితీయోపదేశకాండమ 31 : 8 (ERVTE)
ಯೆಹೋವನು ನಿನ್ನನ್ನು ನಡೆಸುತ್ತಾನೆ, ಆತನು ತಾನೇ ನಿನ್ನೊಂದಿಗಿರುವನು. ಆತನು ನಿನ್ನ ಕೈಬಿಡುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ. ಆದ್ದರಿಂದ ಚಿಂತಿಸಬೇಡ, ಭಯಪಡಬೇಡ” ಎಂದು ಹೇಳಿದನು.
ద్వితీయోపదేశకాండమ 31 : 9 (ERVTE)
{#1ಮೋಶೆಯು ಬೋಧನೆಗಳನ್ನೆಲ್ಲಾ ಬರೆದದ್ದು } ಆಮೇಲೆ ಮೋಶೆಯು ಬೋಧನೆಗಳನ್ನೆಲ್ಲಾ ಬರೆದು ಯಾಜಕರ ಕೈಯಲ್ಲಿ ಅದನ್ನು ಕೊಟ್ಟನು. ಯಾಜಕರು ಲೇವಿಯ ಕುಲದವರು. ಅವರ ಕರ್ತವ್ಯ ಏನಾಗಿತ್ತೆಂದರೆ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊರುವುದು. ಮೋಶೆಯು ಇಸ್ರೇಲರ ಎಲ್ಲಾ ಹಿರಿಯರಿಗೂ ಬೋಧನೆಯ ಪುಸ್ತಕವನ್ನು ಕೊಟ್ಟನು.
ద్వితీయోపదేశకాండమ 31 : 10 (ERVTE)
ಆಮೇಲೆ ಮೋಶೆಯು ನಾಯಕರೊಂದಿಗೆ ಮಾತನಾಡುತ್ತಾ, “ಪ್ರತಿ ಏಳನೆಯ ವರ್ಷದ ಕೊನೆಯಲ್ಲಿ ಅಂದರೆ ಬಿಡುಗಡೆಯ ವರ್ಷದಲ್ಲಿ ನಡೆಯುವ ಪರ್ಣಶಾಲೆಗಳ ಹಬ್ಬದ ಸಮಯದಲ್ಲಿ ಈ ಬೋಧನಾಪುಸ್ತಕವನ್ನು ಓದಬೇಕು.
ద్వితీయోపదేశకాండమ 31 : 11 (ERVTE)
ಆ ಹಬ್ಬದ ಸಮಯದಲ್ಲಿ ಇಸ್ರೇಲರೆಲ್ಲರು ತಮ್ಮ ದೇವರಾದ ಯೆಹೋವನು ಆರಿಸುವ ವಿಶೇಷ ಸ್ಥಳದಲ್ಲಿ ಕೂಡಿಬರುವಾಗ ಈ ಬೋಧನೆಯ ಪುಸ್ತಕವನ್ನು ಎಲ್ಲರಿಗೂ ಕೇಳಿಸುವಂತೆ ಓದಬೇಕು.
ద్వితీయోపదేశకాండమ 31 : 12 (ERVTE)
ಎಲ್ಲರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಚಿಕ್ಕಮಕ್ಕಳನ್ನೂ ಮತ್ತು ನಿಮ್ಮನಿಮ್ಮ ಊರಿನಲ್ಲಿ ವಾಸಿಸುವ ಪರದೇಶಸ್ಥರನ್ನೂ ಒಟ್ಟಾಗಿ ಸೇರಿಸಬೇಕು. ಅವರು ಬೋಧನೆಯನ್ನು ಕೇಳಿ ತಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಕಲಿಯುವರು ಮತ್ತು ಬೋಧನೆಯಲ್ಲಿ ತಿಳಿಸಿರುವ ಪ್ರಕಾರ ಮಾಡುವರು.
ద్వితీయోపదేశకాండమ 31 : 13 (ERVTE)
ಅವರ ಸಂತತಿಯವರಿಗೆ ಯೆಹೋವನ ಕಟ್ಟಳೆಯ ಬಗ್ಗೆ ಗೊತ್ತಿಲ್ಲದಿದ್ದರೆ ಅವರು ಬೋಧನಾಪುಸ್ತಕ ಓದುವಾಗ ತಿಳಿದುಕೊಳ್ಳುವರು. ನಿಮ್ಮ ದೇವರಾದ ಯೆಹೋವನನ್ನು ಗೌರವಿಸಲು ಅವರು ಅದರಿಂದ ಕಲಿತುಕೊಳ್ಳುವರು; ನೀವು ಜೋರ್ಡನ್ ನದಿ ದಾಟಿಹೋಗಿ ವಶಪಡಿಸಿಕೊಳ್ಳಲಿರುವ ದೇಶದಲ್ಲಿ ನೀವು ವಾಸವಾಗಿರುವ ತನಕ ಅವರು ಗೌರವಿಸುವರು.”
ద్వితీయోపదేశకాండమ 31 : 14 (ERVTE)
{#1ದೇವರು ಯೆಹೋಶುವನನ್ನೂ ಮೋಶೆಯನ್ನೂ ಒಟ್ಟಿಗೆ ಕರೆದದ್ದು }
ద్వితీయోపదేశకాండమ 31 : 15 (ERVTE)
ಯೆಹೋವನು ಮೋಶೆಗೆ, “ನೀನು ಸಾಯುವ ಸಮಯವು ಹತ್ತಿರವಾಗುತ್ತಾ ಬಂತು. ಯೆಹೋಶುವನನ್ನು ದೇವದರ್ಶನ ಗುಡಾರಕ್ಕೆ ಕರೆದುಕೊಂಡು ಬಾ. ಅವನು ಮಾಡಬೇಕಾದ ವಿಷಯಗಳನ್ನು ನಾನು ಯೆಹೋಶುವನಿಗೆ ತಿಳಿಸುವೆನು” ಎಂದು ಹೇಳಿದನು. ಮೋಶೆಯೂ ಯೆಹೋಶುವನೂ ದೇವದರ್ಶನ ಗುಡಾರದೊಳಗೆ ಹೋದರು. ಯೆಹೋವನು ಒಂದು ಮೇಘಸ್ತಂಭದಲ್ಲಿ ಪ್ರತ್ಯಕ್ಷನಾದನು. ಆ ಮೋಡವು ಗುಡಾರದ ಬಾಗಿಲಲ್ಲಿ ಬಂದು ನಿಂತಿತು.
ద్వితీయోపదేశకాండమ 31 : 16 (ERVTE)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಬೇಗನೇ ಸಾಯುವೆ. ನಿನ್ನ ಪೂರ್ವಿಕರ ಬಳಿಗೆ ನೀನು ಸೇರಿದಾಗ ಈ ಜನರು ನನಗೆ ನಂಬಿಗಸ್ತರಾಗಿರುವುದಿಲ್ಲ. ನಾನು ಅವರೊಡನೆ ಮಾಡಿರುವ ಒಡಂಬಡಿಕೆಯನ್ನು ಅವರು ಮುರಿಯುವರು. ಅವರು ನನ್ನನ್ನು ತೊರೆದು ತಾವು ಸ್ವಾಧೀನಮಾಡಿಕೊಳ್ಳುವ ದೇಶದ ಅನ್ಯದೇವತೆಗಳನ್ನು ಪೂಜಿಸುವರು.
ద్వితీయోపదేశకాండమ 31 : 17 (ERVTE)
ಆಗ ನಾನು ಅವರ ಮೇಲೆ ತುಂಬಾ ಕೋಪವುಳ್ಳವನಾಗಿರುವೆನು. ಅವರಿಗೆ ಸಹಾಯ ಮಾಡದೆ ಅವರನ್ನು ಬಿಟ್ಟುಬಿಡುವೆನು; ಅವರು ನಾಶವಾಗುವರು; ಅವರಿಗೆ ಭಯಂಕರ ಸಂಗತಿಗಳು ಸಂಭವಿಸುವವು; ಅನೇಕ ಕೇಡುಗಳಾಗುವುವು; ಆಗ, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದಿರುವ ಕಾರಣ ಇವೆಲ್ಲಾ ನಮಗೆ ಸಂಭವಿಸುತ್ತವೆ’ ಎಂದು ಅವರು ಹೇಳುವರು.
ద్వితీయోపదేశకాండమ 31 : 18 (ERVTE)
ಆಗಲೂ ನಾನು ಅವರಿಗೆ ಸಹಾಯ ಮಾಡುವುದಿಲ್ಲ. ಅವರು ಕೆಟ್ಟಕಾರ್ಯಗಳನ್ನು ಮಾಡಿ ಅನ್ಯದೇವರುಗಳನ್ನು ಅವಲಂಭಿಸಿದ್ದಾರಲ್ಲಾ!
ద్వితీయోపదేశకాండమ 31 : 19 (ERVTE)
“ಆದ್ದರಿಂದ ನೀನು ಈ ಹಾಡನ್ನು ಬರೆ, ಇಸ್ರೇಲರಿಗೆ ಇದನ್ನು ಕಲಿಸು. ಈ ಹಾಡನ್ನು ಹಾಡಲು ಅವರಿಗೆ ಕಲಿಸು. ಆಗ ಇದು ಇಸ್ರೇಲ್ ಜನರ ವಿರುದ್ಧವಾಗಿ ಸಾಕ್ಷಿಯಾಗುವುದು.
ద్వితీయోపదేశకాండమ 31 : 20 (ERVTE)
ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
ద్వితీయోపదేశకాండమ 31 : 21 (ERVTE)
ಆಗ ಭಯಂಕರವಾದ ಸಂಗತಿಗಳು ಅವರಿಗೆ ಉಂಟಾಗುವವು. ಅವರಿಗೆ ಅನೇಕ ಸಂಕಟಗಳು ಉಂಟಾಗುವವು. ಆಗ ಆ ಜನರಿಗೆ ಈ ಹಾಡು ತಿಳಿದಿರುವುದರಿಂದ ತಾವು ಎಷ್ಟು ತಪ್ಪಿತಸ್ಥರು ಎಂದು ತಿಳಿಯುವುದು. ನಾನು ಕೊಡುವುದಾಗಿ ವಾಗ್ದಾನ ಮಾಡಿರುವ ದೇಶಕ್ಕೆ ಅವರನ್ನು ಇನ್ನೂ ಕರೆದುಕೊಂಡು ಹೋಗಿಲ್ಲ. ಆದರೆ ಅವರು ಅಲ್ಲಿ ಏನು ಮಾಡುತ್ತಾರೆಂಬುದು ನನಗೆ ಆಗಲೇ ಗೊತ್ತಿದೆ.”
ద్వితీయోపదేశకాండమ 31 : 22 (ERVTE)
ద్వితీయోపదేశకాండమ 31 : 23 (ERVTE)
ಅದೇ ದಿವಸದಲ್ಲಿ ಮೋಶೆಯು ಹಾಡನ್ನು ಬರೆದಿಟ್ಟನು. ಇಸ್ರೇಲ್ ಜನರಿಗೆ ಆ ಹಾಡನ್ನು ಕಲಿಸಲಾಯಿತು.
ద్వితీయోపదేశకాండమ 31 : 24 (ERVTE)
ನೂನನ ಮಗನಾದ ಯೆಹೋಶುವನೊಂದಿಗೆ ಯೆಹೋವನು ಮಾತನಾಡಿ ಹೇಳಿದ್ದೇನೆಂದರೆ: “ಧೈರ್ಯವಂತನಾಗಿದ್ದು ಬಲಗೊಳ್ಳು, ನೀನು ಜನರನ್ನು ವಾಗ್ದಾನದ ದೇಶಕ್ಕೆ ನಡೆಸಬೇಕು. ನಾನು ನಿನ್ನೊಂದಿಗಿರುವೆನು.” {#1ಮೋಶೆ ಇಸ್ರೇಲರನ್ನು ಎಚ್ಚರಿಸಿದ್ದು } ಯೆಹೋವನ ಕಟ್ಟಳೆ, ವಿಧಿನಿಯಮಗಳ ಬೋಧನೆಯನ್ನೆಲ್ಲಾ ಮೋಶೆಯು ಪುಸ್ತಕದಲ್ಲಿ ಜಾಗ್ರತೆಯಾಗಿ ಬರೆದಿಟ್ಟನು.
ద్వితీయోపదేశకాండమ 31 : 25 (ERVTE)
ಬಳಿಕ ಮೋಶೆಯು
ద్వితీయోపదేశకాండమ 31 : 26 (ERVTE)
ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯನ್ನು ಹೊತ್ತುಕೊಂಡಿದ್ದ ಲೇವಿಯರಿಗೆ “ಈ ಪುಸ್ತಕವನ್ನು ತೆಗೆದುಕೊಂಡು ದೇವದರ್ಶನಗುಡಾರದೊಳಗಿರುವ ಪೆಟ್ಟಿಗೆಯ ಪಕ್ಕದಲ್ಲಿಡಿರಿ. ಅದು ನಿಮಗೆ ವಿರುದ್ಧವಾದ ಸಾಕ್ಷಿಯಾಗಿರುವುದು.
ద్వితీయోపదేశకాండమ 31 : 27 (ERVTE)
ನೀವು ಹಠಮಾರಿಗಳೆಂದು ನಾನು ಬಲ್ಲೆನು. ನಾನು ನಿಮ್ಮೊಂದಿಗೆ ಇದ್ದಾಗಲೇ ನೀವು ಯೆಹೋವನಿಗೆ ವಿಧೇಯರಾಗಲಿಲ್ಲ. ಆದ್ದರಿಂದ ನಾನು ಸತ್ತ ಬಳಿಕ ಆತನ ಮಾತುಗಳನ್ನು ನೀವು ಕೇಳುವುದಿಲ್ಲ ಎಂದು ನನಗೆ ಚೆನ್ನಾಗಿ ಗೊತ್ತು.
ద్వితీయోపదేశకాండమ 31 : 28 (ERVTE)
ಎಲ್ಲಾ ಕುಲಾಧಿಪತಿಗಳವರನ್ನು ಮತ್ತು ಗೋತ್ರಪ್ರಧಾನರನ್ನು ನನ್ನ ಬಳಿಗೆ ಕರೆದುತನ್ನಿರಿ; ಅವರಿಗೆ ನಾನಿದನ್ನು ತಿಳಿಸುವೆನು. ನಾನು ಆಕಾಶವನ್ನೂ ಭೂಮಿಯನ್ನೂ ಅದಕ್ಕೆ ಸಾಕ್ಷಿಯಾಗಿ ಮಾಡುವೆನು.
ద్వితీయోపదేశకాండమ 31 : 29 (ERVTE)
ನನ್ನ ಮರಣದ ಬಳಿಕ ನೀವು ಕೆಟ್ಟಕಾರ್ಯಗಳನ್ನು ಮಾಡುವಿರೆಂದು ನನಗೆ ಗೊತ್ತಿದೆ; ನನ್ನ ಅಪ್ಪಣೆಗಳನ್ನು ಮೀರುವಿರಿ. ನಿಮಗೆ ಭಯಂಕರ ಸಂಗತಿಗಳು ಸಂಭವಿಸುವವು. ಯಾಕೆಂದರೆ ಯೆಹೋವನನ್ನು ನೀವು ಸಿಟ್ಟಿಗೆಬ್ಬಿಸುವಿರಿ” ಎಂದು ಹೇಳಿದನು.
ద్వితీయోపదేశకాండమ 31 : 30 (ERVTE)
{#1ಮೋಶೆಯ ಹಾಡು } ಇಸ್ರೇಲ್ ಸಮೂಹವು ಒಟ್ಟಾಗಿ ಸೇರಿದಾಗ ಮೋಶೆಯು ಹೀಗೆ ಹಾಡಿದನು:

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30