[PS]ಗಾಳಿಯ ಬೀಸುವಿಕೆಯನ್ನೂ ತನ್ನ ತಾಯಿಯ ಗರ್ಭದಲ್ಲಿ ಮಗುವಿನ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿದಿಲ್ಲವೋ ಅದೇರೀತಿಯಲ್ಲಿ ಸೃಷ್ಟಿಕರ್ತನ ಕಾರ್ಯಗಳನ್ನು ನೀನು ಅರಿತುಕೊಳ್ಳಲಾರೆ. [PE]
ప్రసంగి 11 : 7 (ERVTE)
[PS]ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು. [PE][PS]ಬೆಳಕು ಹಿತ! ಸೂರ್ಯನ ಬೆಳಕು ನೋಡಲು ಚೆಂದ.
ప్రసంగి 11 : 8 (ERVTE)
ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ. [PE]
ప్రసంగి 11 : 9 (ERVTE)
{#1ಯೌವನದಲ್ಲಿ ದೇವರ ಸೇವೆ ಮಾಡಿ } [PS]ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.
ప్రసంగి 11 : 10 (ERVTE)
ನಿಮ್ಮ ಕೋಪವು ನಿಮ್ಮನ್ನು ಹತೋಟಿಯಲ್ಲಿಡದಂತೆ ನೋಡಿಕೊಳ್ಳಿರಿ. ನಿಮ್ಮ ದೇಹವು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿರಿ. ಜನರು ಯೌವನಪ್ರಾಯದಲ್ಲಿರುವಾಗ, ಜೀವನದ ಆರಂಭದಲ್ಲಿಯೇ ಮೂಢಕಾರ್ಯಗಳನ್ನು ಮಾಡುವರು. [PE]