ప్రసంగి 7 : 1 (ERVTE)
{#1ಜ್ಞಾನೋಪದೇಶಗಳ ಭಂಡಾರ } ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ.
ప్రసంగి 7 : 2 (ERVTE)
ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ ಹೋಗುವುದು ಇನ್ನೂ ಉತ್ತಮ. ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಸ್ಮರಿಸಿಕೊಳ್ಳುವನು.
ప్రసంగి 7 : 3 (ERVTE)
ನಗುವಿಗಿಂತ ವ್ಯಸನವು ಇನ್ನೂ ಉತ್ತಮ. ಯಾಕೆಂದರೆ ನಮ್ಮ ಮುಖವು ವ್ಯಸನದಿಂದಿರುವಾಗ ನಮ್ಮ ಹೃದಯಕ್ಕೆ ಒಳ್ಳೆಯದಾಗುವುದು.
ప్రసంగి 7 : 4 (ERVTE)
ಜ್ಞಾನಿಯು ಮರಣದ ಬಗ್ಗೆ ಆಲೋಚಿಸುವನು; ಮೂಢನಾದರೋ ಉಲ್ಲಾಸ ಸಮಯದ ಬಗ್ಗೆ ಆಲೋಚಿಸುವನು.
ప్రసంగి 7 : 5 (ERVTE)
ಮೂಢನ ಹೊಗಳಿಕೆಗಿಂತ ಜ್ಞಾನಿಯ ಗದರಿಕೆಯೇ ಉತ್ತಮ.
ప్రసంగి 7 : 6 (ERVTE)
ಮೂಢರ ನಗು ಉಪಯೋಗವಿಲ್ಲದ್ದು. ಅದು ಮಡಕೆಯ ಕೆಳಗೆ ಚಟಪಟನೆ ಉರಿದುಹೋಗುವ ಮುಳ್ಳುಕಡ್ಡಿಯಂತಿದೆ.
ప్రసంగి 7 : 7 (ERVTE)
ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು.
ప్రసంగి 7 : 8 (ERVTE)
ಆರಂಭಿಸುವ ಸಮಯಕ್ಕಿಂತಲೂ ಪೂರ್ಣಗೊಳಿಸುವ ಸಮಯವೇ ಮೇಲು. ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ.
ప్రసంగి 7 : 9 (ERVTE)
ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ.
ప్రసంగి 7 : 10 (ERVTE)
“ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ.
ప్రసంగి 7 : 11 (ERVTE)
ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು.
ప్రసంగి 7 : 12 (ERVTE)
ಜ್ಞಾನಿಯು ಐಶ್ವರ್ಯವಂತನಾಗುವನು; ಜ್ಞಾನವು ತನ್ನ ಯಜಮಾನನನ್ನು ನೋಡಿಕೊಳ್ಳುವುದು.
ప్రసంగి 7 : 13 (ERVTE)
ದೇವರ ಕಾರ್ಯಗಳನ್ನು ನೋಡು. ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡಲು ಯಾರಿಗೆ ಸಾಧ್ಯ?
ప్రసంగి 7 : 14 (ERVTE)
ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೊ ಯಾರಿಗೂ ಗೊತ್ತಿಲ್ಲ.
ప్రసంగి 7 : 15 (ERVTE)
{#1ಪಾಪವನ್ನೇ ಮಾಡದವರಿಲ್ಲ } ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.
ప్రసంగి 7 : 16 (ERVTE)
(16-17)ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು?
ప్రసంగి 7 : 18 (ERVTE)
ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ.
ప్రసంగి 7 : 19 (ERVTE)
(19-20)ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ.
ప్రసంగి 7 : 21 (ERVTE)
ಜನರ ಮಾತಿಗೆಲ್ಲಾ ಕಿವಿಗೊಡಬೇಡ. ನಿನ್ನ ಸ್ವಂತ ಸೇವಕನೇ ನಿನ್ನನ್ನು ಶಪಿಸಬಹುದು.
ప్రసంగి 7 : 22 (ERVTE)
ನೀನು ಸಹ ಅನೇಕಸಲ ಬೇರೆಯವರನ್ನು ಶಪಿಸಿರುವುದಕ್ಕೆ ನಿನ್ನ ಮನಸ್ಸೇ ಸಾಕ್ಷಿಯಾಗಿದೆ.
ప్రసంగి 7 : 23 (ERVTE)
ನನ್ನ ಜ್ಞಾನದಿಂದ ಇವೆಲ್ಲವುಗಳ ಕುರಿತಾಗಿ ಆಲೋಚಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಆದರೆ ಅದು ಅಸಾಧ್ಯವಾಗಿತ್ತು.
ప్రసంగి 7 : 24 (ERVTE)
ಪ್ರತಿಯೊಂದು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದನ್ನು ಅರ್ಥಮಾಡಿಕೊಳ್ಳುವುದಕ್ಕೂ ಕಷ್ಟ.
ప్రసంగి 7 : 25 (ERVTE)
ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ.
ప్రసంగి 7 : 26 (ERVTE)
ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿ ಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.
ప్రసంగి 7 : 28 (ERVTE)
(27-28)ಪ್ರಸಂಗಿಯು ಹೀಗೆನ್ನುತ್ತಾನೆ: “ಒಂದು ತೀರ್ಮಾನಕ್ಕೆ ಬರಬೇಕೆಂದು ಇವೆಲ್ಲವುಗಳನ್ನು ಒಟ್ಟಾಗಿ ಸೇರಿಸಿದೆ. ಆದರೂ ಒಂದು ತೀರ್ಮಾನಕ್ಕೆ ಬರಲಾಗುತ್ತಿಲ್ಲ. ಆದರೆ ನಾನು ಒಂದನ್ನು ಕಂಡುಕೊಂಡೆ. ಅದೇನೆಂದರೆ, ಸಾವಿರ ಪುರುಷರಲ್ಲಿ ಒಬ್ಬ ನೀತಿವಂತನು ಇದ್ದರೂ ಇರಬಹುದು; ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ನೀತಿವಂತಳನ್ನೂ ನಾನು ಕಾಣಲಿಲ್ಲ.
ప్రసంగి 7 : 29 (ERVTE)
“ನಾನು ಮತ್ತೊಂದು ವಿಷಯವನ್ನು ತಿಳಿದುಕೊಂಡೆನು. ಅದೇನೆಂದರೆ, ದೇವರು ಮನುಷ್ಯರನ್ನು ನೀತಿವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29