ప్రసంగి 7 : 1 (ERVTE)
{#1ಜ್ಞಾನೋಪದೇಶಗಳ ಭಂಡಾರ } [QS]ಸುಗಂಧತೈಲಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. [QE][QS2]ಜನನ ದಿನಕ್ಕಿಂತಲೂ ಮರಣ ದಿನವೇ ಉತ್ತಮ. [QE]
ప్రసంగి 7 : 2 (ERVTE)
[QS]ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ ಹೋಗುವುದು ಇನ್ನೂ ಉತ್ತಮ. [QE][QS]ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. [QE][QS2]ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಸ್ಮರಿಸಿಕೊಳ್ಳುವನು. [QE]
ప్రసంగి 7 : 3 (ERVTE)
[QS]ನಗುವಿಗಿಂತ ವ್ಯಸನವು ಇನ್ನೂ ಉತ್ತಮ. [QE][QS2]ಯಾಕೆಂದರೆ ನಮ್ಮ ಮುಖವು ವ್ಯಸನದಿಂದಿರುವಾಗ ನಮ್ಮ ಹೃದಯಕ್ಕೆ ಒಳ್ಳೆಯದಾಗುವುದು. [QE]
ప్రసంగి 7 : 4 (ERVTE)
[QS]ಜ್ಞಾನಿಯು ಮರಣದ ಬಗ್ಗೆ ಆಲೋಚಿಸುವನು; [QE][QS2]ಮೂಢನಾದರೋ ಉಲ್ಲಾಸ ಸಮಯದ ಬಗ್ಗೆ ಆಲೋಚಿಸುವನು. [QE]
ప్రసంగి 7 : 5 (ERVTE)
[QS]ಮೂಢನ ಹೊಗಳಿಕೆಗಿಂತ [QE][QS2]ಜ್ಞಾನಿಯ ಗದರಿಕೆಯೇ ಉತ್ತಮ. [QE]
ప్రసంగి 7 : 6 (ERVTE)
[QS]ಮೂಢರ ನಗು ಉಪಯೋಗವಿಲ್ಲದ್ದು. [QE][QS2]ಅದು ಮಡಕೆಯ ಕೆಳಗೆ ಚಟಪಟನೆ ಉರಿದುಹೋಗುವ ಮುಳ್ಳುಕಡ್ಡಿಯಂತಿದೆ. [QE]
ప్రసంగి 7 : 7 (ERVTE)
[QS]ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. [QE][QS2]ಲಂಚವು ಅವನ ವಿವೇಕವನ್ನು ಕೆಡಿಸುವುದು. [QE]
ప్రసంగి 7 : 8 (ERVTE)
[QS]ಆರಂಭಿಸುವ ಸಮಯಕ್ಕಿಂತಲೂ [QE][QS2]ಪೂರ್ಣಗೊಳಿಸುವ ಸಮಯವೇ ಮೇಲು. [QE][QS]ಗರ್ವಕ್ಕಿಂತಲೂ ತಾಳ್ಮೆಯೇ ಉತ್ತಮ. [QE]
ప్రసంగి 7 : 9 (ERVTE)
[QS]ಮುಂಗೋಪಿಯಾಗಿರಬೇಡ. [QE][QS2]ಯಾಕೆಂದರೆ ಕೋಪವು ಕೇವಲ ಮೂಢತನ. [QE]
ప్రసంగి 7 : 10 (ERVTE)
[QS]“ಈ ಕಾಲಕ್ಕಿಂತ ‘ಹಿಂದಿನ ಕಾಲವೇ’ ಚೆನ್ನಾಗಿತ್ತಲ್ಲವೇ?” ಎನ್ನಬೇಡ. [QE][QS2]ಅದು ಜ್ಞಾನವುಳ್ಳವರ ಪ್ರಶ್ನೆಯಲ್ಲ. [QE][PBR]
ప్రసంగి 7 : 11 (ERVTE)
[PS]ನಿನಗೆ ಆಸ್ತಿಯಿದ್ದರೆ ಜ್ಞಾನವು ಮತ್ತಷ್ಟು ಉಪಯುಕ್ತವಾಗಿದೆ. ನಿಜವಾಗಿಯೂ ಜ್ಞಾನಿಗಳು ಐಶ್ವರ್ಯವನ್ನು ಹೇರಳವಾಗಿ ಪಡೆದುಕೊಳ್ಳುವರು.
ప్రసంగి 7 : 12 (ERVTE)
ಜ್ಞಾನಿಯು ಐಶ್ವರ್ಯವಂತನಾಗುವನು; ಜ್ಞಾನವು ತನ್ನ ಯಜಮಾನನನ್ನು ನೋಡಿಕೊಳ್ಳುವುದು. [PE]
ప్రసంగి 7 : 13 (ERVTE)
[PS]ದೇವರ ಕಾರ್ಯಗಳನ್ನು ನೋಡು. ಆತನು ಸೊಟ್ಟಗೆ ಮಾಡಿದ್ದನ್ನು ನೆಟ್ಟಗೆ ಮಾಡಲು ಯಾರಿಗೆ ಸಾಧ್ಯ?
ప్రసంగి 7 : 14 (ERVTE)
ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೊ ಯಾರಿಗೂ ಗೊತ್ತಿಲ್ಲ. [PE]
ప్రసంగి 7 : 15 (ERVTE)
{#1ಪಾಪವನ್ನೇ ಮಾಡದವರಿಲ್ಲ } [PS]ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.
ప్రసంగి 7 : 16 (ERVTE)
(16-17)ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು? [PE]
ప్రసంగి 7 : 18 (ERVTE)
[PS]ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ.
ప్రసంగి 7 : 19 (ERVTE)
(19-20)ಒಳ್ಳೆಯದನ್ನೇ ಮಾಡುವ ಮತ್ತು ಪಾಪವನ್ನೇ ಮಾಡದ ನೀತಿವಂತನು ಭೂಮಿಯ ಮೇಲೆ ಇಲ್ಲವೇ ಇಲ್ಲ. ಜ್ಞಾನವು ಒಬ್ಬನಿಗೆ ಶಕ್ತಿಯನ್ನು ಕೊಡುತ್ತದೆ. ಒಬ್ಬ ಜ್ಞಾನಿಯು ನಗರದಲ್ಲಿರುವ ಹತ್ತುಮಂದಿ ಮೂಢ ನಾಯಕರುಗಳಿಗಿಂತಲೂ ಬಲಶಾಲಿ. [PE]
ప్రసంగి 7 : 21 (ERVTE)
[PS]ಜನರ ಮಾತಿಗೆಲ್ಲಾ ಕಿವಿಗೊಡಬೇಡ. ನಿನ್ನ ಸ್ವಂತ ಸೇವಕನೇ ನಿನ್ನನ್ನು ಶಪಿಸಬಹುದು.
ప్రసంగి 7 : 22 (ERVTE)
ನೀನು ಸಹ ಅನೇಕಸಲ ಬೇರೆಯವರನ್ನು ಶಪಿಸಿರುವುದಕ್ಕೆ ನಿನ್ನ ಮನಸ್ಸೇ ಸಾಕ್ಷಿಯಾಗಿದೆ. [PE]
ప్రసంగి 7 : 23 (ERVTE)
[PS]ನನ್ನ ಜ್ಞಾನದಿಂದ ಇವೆಲ್ಲವುಗಳ ಕುರಿತಾಗಿ ಆಲೋಚಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಆದರೆ ಅದು ಅಸಾಧ್ಯವಾಗಿತ್ತು.
ప్రసంగి 7 : 24 (ERVTE)
ಪ್ರತಿಯೊಂದು ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದೆ. ಅದನ್ನು ಅರ್ಥಮಾಡಿಕೊಳ್ಳುವುದಕ್ಕೂ ಕಷ್ಟ.
ప్రసంగి 7 : 25 (ERVTE)
ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. [PE][PS]ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ.
ప్రసంగి 7 : 26 (ERVTE)
ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿ ಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು. [PE]
ప్రసంగి 7 : 28 (ERVTE)
[PS](27-28)ಪ್ರಸಂಗಿಯು ಹೀಗೆನ್ನುತ್ತಾನೆ: “ಒಂದು ತೀರ್ಮಾನಕ್ಕೆ ಬರಬೇಕೆಂದು ಇವೆಲ್ಲವುಗಳನ್ನು ಒಟ್ಟಾಗಿ ಸೇರಿಸಿದೆ. ಆದರೂ ಒಂದು ತೀರ್ಮಾನಕ್ಕೆ ಬರಲಾಗುತ್ತಿಲ್ಲ. ಆದರೆ ನಾನು ಒಂದನ್ನು ಕಂಡುಕೊಂಡೆ. ಅದೇನೆಂದರೆ, ಸಾವಿರ ಪುರುಷರಲ್ಲಿ ಒಬ್ಬ ನೀತಿವಂತನು ಇದ್ದರೂ ಇರಬಹುದು; ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ನೀತಿವಂತಳನ್ನೂ ನಾನು ಕಾಣಲಿಲ್ಲ. [PE]
ప్రసంగి 7 : 29 (ERVTE)
[PS]“ನಾನು ಮತ್ತೊಂದು ವಿಷಯವನ್ನು ತಿಳಿದುಕೊಂಡೆನು. ಅದೇನೆಂದರೆ, ದೇವರು ಮನುಷ್ಯರನ್ನು ನೀತಿವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು.” [PE]
❮
❯