ఎఫెసీయులకు 2 : 1 (ERVTE)
{#1ಮರಣದಿಂದ ಜೀವಕ್ಕೆ } ಮೊದಲು ನಿಮ್ಮ ಆತ್ಮಿಕ ಜೀವಿತಗಳು, ನಿಮ್ಮ ಪಾಪಗಳ ಮತ್ತು ನೀವು ದೇವರಿಗೆ ವಿರುದ್ಧವಾಗಿ ಮಾಡಿದ ಕೆಟ್ಟಕಾರ್ಯಗಳ ದೆಸೆಯಿಂದ ಸತ್ತುಹೋಗಿದ್ದವು.
ఎఫెసీయులకు 2 : 2 (ERVTE)
ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.
ఎఫెసీయులకు 2 : 3 (ERVTE)
ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.
ఎఫెసీయులకు 2 : 4 (ERVTE)
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಬಹಳವಾಗಿ ಪ್ರೀತಿಸಿದನು.
ఎఫెసీయులకు 2 : 5 (ERVTE)
ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.
ఎఫెసీయులకు 2 : 6 (ERVTE)
ದೇವರು ನಮ್ಮನ್ನು ಕ್ರಿಸ್ತನೊಂದಿಗೆ ಎಬ್ಬಿಸಿ ಆತನೊಂದಿಗೆ ಪರಲೋಕದಲ್ಲಿ ಸಿಂಹಾಸನದ ಮೇಲೆ ಕುಳ್ಳಿರಿಸಿದ್ದಾನೆ. ಕ್ರಿಸ್ತ ಯೇಸುವಿನಲ್ಲಿರುವ ನಮಗಾಗಿ ದೇವರು ಇದನ್ನು ಮಾಡಿದನು.
ఎఫెసీయులకు 2 : 7 (ERVTE)
ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಈ ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ.
ఎఫెసీయులకు 2 : 8 (ERVTE)
ಆದ್ದರಿಂದ ನೀವು ನಂಬಿಕೆಯ ಮೂಲಕ ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಅದು ದೇವರ ವರ.
ఎఫెసీయులకు 2 : 9 (ERVTE)
ನಿಮಗೆ ರಕ್ಷಣೆ ದೊರೆತದ್ದು ನಿಮ್ಮ ಒಳ್ಳೆಯ ಕಾರ್ಯಗಳಿಂದಲ್ಲ. ಆದ್ದರಿಂದ ತನ್ನನ್ನು ತಾನೇ ರಕ್ಷಿಸಿಕೊಂಡಿರುವುದಾಗಿ ಯಾರೂ ಹೊಗಳಿಕೊಳ್ಳಲು ಸಾಧ್ಯವಿಲ್ಲ.
ఎఫెసీయులకు 2 : 10 (ERVTE)
ನಾವು ದೇವರ ನಿರ್ಮಾಣ. ನಾವು ಒಳ್ಳೆಯ ಕಾರ್ಯಗಳನ್ನು ಮಾಡಬೇಕೆಂದು ದೇವರು ನಮ್ಮನ್ನು ಕ್ರಿಸ್ತಯೇಸುವಿನಲ್ಲಿ ಹೊಸ ಜನರನ್ನಾಗಿ ಮಾಡಿದನು. ದೇವರು ನಮಗೋಸ್ಕರವಾಗಿ ಆ ಒಳ್ಳೆಯ ಕಾರ್ಯಗಳನ್ನು ಮೊದಲೇ ಯೋಜನೆ ಮಾಡಿದನು. ನಾವು ಆ ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಜೀವಿಸಬೇಕೆಂಬುದು ದೇವರ ಯೋಜನೆಯಾಗಿತ್ತು.
ఎఫెసీయులకు 2 : 11 (ERVTE)
{#1ಕ್ರಿಸ್ತನ ಮೂಲಕ ಸಮಾನತ್ವ } ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)
ఎఫెసీయులకు 2 : 12 (ERVTE)
ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.
ఎఫెసీయులకు 2 : 13 (ERVTE)
ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.
ఎఫెసీయులకు 2 : 14 (ERVTE)
ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಆ ಗೋಡೆಯನ್ನು ಕೆಡವಿದನು.
ఎఫెసీయులకు 2 : 15 (ERVTE)
ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.
ఎఫెసీయులకు 2 : 16 (ERVTE)
ಈ ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಈ ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಈ ಬಯಕೆಯನ್ನು ಪೂರೈಸಿದನು.
ఎఫెసీయులకు 2 : 17 (ERVTE)
ದೇವರಿಗೆ ದೂರವಾಗಿದ್ದ ನಿಮ್ಮ ಬಳಿಗೂ ಸಮೀಪಸ್ಥರಾಗಿದ್ದವರ ಬಳಿಗೂ ಕ್ರಿಸ್ತನು ಬಂದು ಸಮಾಧಾನದ ಕುರಿತು ಉಪದೇಶಿಸಿದನು.
ఎఫెసీయులకు 2 : 18 (ERVTE)
ಹೌದು, ಕ್ರಿಸ್ತನ ಮೂಲಕ ನಾವೆಲ್ಲರೂ ಒಬ್ಬ ಆತ್ಮನಿಂದ ನಮ್ಮ ತಂದೆಯಾದ ದೇವರ ಬಳಿಗೆ ಬರಲು ಶಕ್ತರಾಗಿದ್ದೇವೆ.
ఎఫెసీయులకు 2 : 19 (ERVTE)
ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.
ఎఫెసీయులకు 2 : 20 (ERVTE)
ವಿಶ್ವಾಸಿಗಳಾದ ನೀವು ದೇವರ ಸ್ವಂತ ಕಟ್ಟಡವಾಗಿದ್ದೀರಿ. ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ಆ ಕಟ್ಟಡವು ಕಟ್ಟಲ್ಪಟ್ಟಿದೆ. ಕ್ರಿಸ್ತನೇ ಆ ಕಟ್ಟಡಕ್ಕೆ ಮೂಲೆಗಲ್ಲಾಗಿದ್ದಾನೆ.
ఎఫెసీయులకు 2 : 21 (ERVTE)
ಇಡೀ ಕಟ್ಟಡವು ಕ್ರಿಸ್ತನಲ್ಲಿ ಒಂದಾಗಿ ಸೇರಿಕೊಂಡಿದೆ. ಕ್ರಿಸ್ತನೇ ಅದನ್ನು ಬೆಳೆಯಿಸಿ ಪ್ರಭುವಿನಲ್ಲಿ ಪರಿಶುದ್ಧವಾದ ದೇವಾಲಯವನ್ನಾಗಿ ಮಾಡುತ್ತಾನೆ.
ఎఫెసీయులకు 2 : 22 (ERVTE)
ನೀವು ಕ್ರಿಸ್ತನಲ್ಲಿ ಇತರ ಜನರೊಂದಿಗೆ (ಯೆಹೂದ್ಯರೊಂದಿಗೆ) ಕಟ್ಟಲ್ಪಡುತ್ತಿದ್ದೀರಿ. ದೇವರು ತನ್ನ ಆತ್ಮನ ಮೂಲಕ ವಾಸಿಸತಕ್ಕ ನಿವಾಸಸ್ಥಾನವಾಗಿ ನಿರ್ಮಿತರಾಗುತ್ತಿದ್ದೀರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22