ఎఫెసీయులకు 6 : 1 (ERVTE)
{#1ಮಕ್ಕಳು ಮತ್ತು ತಂದೆತಾಯಿಗಳು } ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ.
ఎఫెసీయులకు 6 : 2 (ERVTE)
ದೇವಾಜ್ಞೆಯು ಹೇಳುವಂತೆ, “ನೀವು ನಿಮ್ಮ ತಂದೆತಾಯಿಗಳನ್ನು ಗೌರವಿಸಬೇಕು.”[✡ ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5: 16 ] ಈ ಮೊದಲನೆಯ ಆಜ್ಞೆಯು ವಾಗ್ದಾನವನ್ನು ಒಳಗೊಂಡಿದೆ.
ఎఫెసీయులకు 6 : 3 (ERVTE)
ಆ ವಾಗ್ದಾನವು ಇಂತಿದೆ: “ಆಗ ನಿಮಗೆ ಒಳ್ಳೆಯದಾಗುವುದು ಮತ್ತು ನೀವು ಭೂಮಿಯ ಮೇಲೆ ಬಹುಕಾಲ ಬದುಕುವಿರಿ.”[✡ ಉಲ್ಲೇಖನ: ವಿಮೋಚನ. 20:12; ಧರ್ಮೋಪದೇಶ. 5: 16 ]
ఎఫెసీయులకు 6 : 4 (ERVTE)
ఎఫెసీయులకు 6 : 5 (ERVTE)
ತಂದೆಗಳೇ, ನಿಮ್ಮ ಮಕ್ಕಳನ್ನು ಸಿಟ್ಟಿಗೆಬ್ಬಿಸದೆ ಪ್ರಭುವಿನ ಉಪದೇಶದಿಂದಲೂ ಬಾಲಶಿಕ್ಷೆಯಿಂದಲೂ ಬೆಳೆಸಿರಿ. {#1ಸೇವಕರು ಮತ್ತು ಯಜಮಾನರು } ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.
ఎఫెసీయులకు 6 : 6 (ERVTE)
ಅವರ ಮೆಚ್ಚಿಕೆಯನ್ನು ಗಳಿಸಿಕೊಳ್ಳಬೇಕೆಂದು ಅವರು ಗಮನಿಸುತ್ತಿರುವಾಗ ಮಾತ್ರ ಸೇವೆ ಮಾಡದೆ ನೀವು ಕ್ರಿಸ್ತನಿಗೆ ವಿಧೇಯರಾಗಿರುವಂತೆ ಅವರಿಗೆ ವಿಧೇಯರಾಗಿರಬೇಕು. ದೇವರಿಗೆ ಇಷ್ಟವಾದದ್ದನ್ನು ನೀವು ಪೂರ್ಣಹೃದಯದಿಂದ ಮಾಡಬೇಕು.
ఎఫెసీయులకు 6 : 7 (ERVTE)
ನೀವು ಮಾಡತಕ್ಕ ಕೆಲಸವನ್ನು ಸಂತೋಷದಿಂದ ಮಾಡಿರಿ. ಕೇವಲ ಮನುಷ್ಯರ ಸೇವೆಯನ್ನು ಮಾಡುವವರಂತೆ ಮಾಡದೆ ಪ್ರಭುವಿನ ಸೇವೆಯನ್ನು ಮಾಡುವವರಂತೆ ಮಾಡಿರಿ.
ఎఫెసీయులకు 6 : 8 (ERVTE)
ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬನಿಗೂ ದೇವರು ಪ್ರತಿಫಲವನ್ನು ಕೊಡುತ್ತಾನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಳ್ಳಿರಿ. ಪ್ರತಿಯೊಬ್ಬ ವ್ಯಕ್ತಿಯು ಅವನು ಸೇವಕನಾಗಿರಲಿ ಅಥವಾ ಸ್ವತಂತ್ರನಾಗಿರಲಿ ತಾನು ಮಾಡುವ ಒಳ್ಳೆಯ ಕಾರ್ಯಗಳಿಗೆ ಪ್ರತಿಫಲವನ್ನು ಹೊಂದುವನು.
ఎఫెసీయులకు 6 : 9 (ERVTE)
ఎఫెసీయులకు 6 : 10 (ERVTE)
ಯಜಮಾನರೇ, ಅದೇರೀತಿಯಲ್ಲಿ ನಿಮ್ಮ ಸೇವಕರಿಗೆ ಒಳ್ಳೆಯವರಾಗಿರಿ. ಅವರಿಗೆ ಹೆದರಿಕೆಯಾಗುವಂಥ ಮಾತುಗಳನ್ನಾಡಬೇಡಿ. ನಿಮಗೂ ಅವರಿಗೂ ಒಡೆಯನಾಗಿರುವಾತನು ಪರಲೋಕದಲ್ಲಿದ್ದಾನೆ ಎಂಬುದು ನಿಮಗೆ ತಿಳಿದಿದೆ. ಆತನು ಪ್ರತಿಯೊಬ್ಬನಿಗೂ ಪಕ್ಷಪಾತವಿಲ್ಲದೆ ನ್ಯಾಯತೀರಿಸುವನು. {#1ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ } ಕಡೇ ಮಾತೇನೆಂದರೆ, ಪ್ರಭುವಿನಲ್ಲಿಯೂ ಆತನ ಮಹಾಶಕ್ತಿಯಲ್ಲಿಯೂ ಬಲವಾಗಿರಿ.
ఎఫెసీయులకు 6 : 11 (ERVTE)
ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. ಆಗ ಸೈತಾನನ ಕುತಂತ್ರಗಳಿಗೆ ವಿರುದ್ಧವಾಗಿ ಹೋರಾಡಲು ನಿಮಗೆ ಸಾಧ್ಯವಾಗುವುದು.
ఎఫెసీయులకు 6 : 12 (ERVTE)
ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ.
ఎఫెసీయులకు 6 : 13 (ERVTE)
ಆದಕಾರಣವೇ ನೀವು ದೇವರ ಸರ್ವಾಯುಧಗಳನ್ನು ಧರಿಸಿಕೊಳ್ಳಬೇಕು. ಆಗ ಯುದ್ಧದ ದಿನದಲ್ಲಿಯೂ ಹೋರಾಟವು ಸಂಪೂರ್ಣವಾಗಿ ಮುಗಿದಾದ ಮೇಲೆಯೂ ದೃಢವಾಗಿನಿಂತುಕೊಳ್ಳಲು ನಿಮಗೆ ಸಾಧ್ಯವಾಗುವುದು.
ఎఫెసీయులకు 6 : 14 (ERVTE)
ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು
ఎఫెసీయులకు 6 : 15 (ERVTE)
ಸಮಾಧಾನದ ಸುವಾರ್ತೆಯೆಂಬ ಪಾದರಕ್ಷೆಯನ್ನು ಹಾಕಿಕೊಂಡು ದೃಢವಾಗಿ ನಿಂತುಕೊಳ್ಳಿರಿ.
ఎఫెసీయులకు 6 : 16 (ERVTE)
ಅಲ್ಲದೆ ನಂಬಿಕೆಯೆಂಬ ಗುರಾಣಿಯನ್ನೂ ಹಿಡಿದುಕೊಳ್ಳಿರಿ. ಕೆಡುಕನ ಅಗ್ನಿಬಾಣಗಳನ್ನೆಲ್ಲಾ ತಡೆಯಲು ನಿಮಗೆ ಇದರಿಂದ ಸಾಧ್ಯವಾಗುವುದು.
ఎఫెసీయులకు 6 : 17 (ERVTE)
ದೇವರ ರಕ್ಷಣೆಯನ್ನು ಶಿರಸ್ತ್ರಾಣವನ್ನಾಗಿ ಧರಿಸಿಕೊಳ್ಳಿರಿ. ಪವಿತ್ರಾತ್ಮನ ಖಡ್ಗವನ್ನು ಅಂದರೆ ದೇವರ ವಾಕ್ಯವನ್ನು ತೆಗೆದುಕೊಳ್ಳಿರಿ.
ఎఫెసీయులకు 6 : 18 (ERVTE)
ನೀವು ಪವಿತ್ರಾತ್ಮನ ಸಹಾಯದಿಂದ ಯಾವಾಗಲೂ ದೇವರಲ್ಲಿ ಪ್ರಾರ್ಥಿಸುತ್ತಾ ಸಕಲವಿಧವಾದ ವಿಜ್ಞಾಪನೆಗಳನ್ನು ಮಾಡಿರಿ ಮತ್ತು ನಿಮಗೆ ಅಗತ್ಯವಾದವುಗಳಿಗಾಗಿ ಬೇಡಿಕೊಳ್ಳಿರಿ. ಇದಕ್ಕಾಗಿ ಯಾವಾಗಲೂ ಸಿದ್ಧರಾಗಿರಿ. ಪ್ರಾರ್ಥನೆಯನ್ನು ಬಿಟ್ಟುಕೊಡಬೇಡಿರಿ. ದೇವಜನರೆಲ್ಲರಿಗೋಸ್ಕರ ಯಾವಾಗಲೂ ಪ್ರಾರ್ಥಿಸಿರಿ.
ఎఫెసీయులకు 6 : 19 (ERVTE)
ಅಲ್ಲದೆ ನನಗಾಗಿಯೂ ಪ್ರಾರ್ಥಿಸಿರಿ. ನಾನು ಮಾತಾಡುವಾಗ ಸುವಾರ್ತೆಯ ರಹಸ್ಯಸತ್ಯವನ್ನು ನಿರ್ಭಯದಿಂದ ತಿಳಿಸಲು ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸುವಂತೆ ಪ್ರಾರ್ಥಿಸಿರಿ.
ఎఫెసీయులకు 6 : 20 (ERVTE)
ಸುವಾರ್ತೆಯನ್ನು ತಿಳಿಸುವುದೇ ನನ್ನ ಕೆಲಸ. ಈಗ ಸೆರೆಮನೆಯಲ್ಲಿಯೂ ನಾನು ಆ ಕೆಲಸವನ್ನು ಮಾಡುತ್ತಿದ್ದೇನೆ. ನಾನು ಯಾವ ರೀತಿ ಮಾತಾಡಬೇಕೋ ಅದೇ ರೀತಿ ನಿರ್ಭಯದಿಂದ ಮಾತಾಡಲು ಸಾಧ್ಯವಾಗುವಂತೆ ಪ್ರಾರ್ಥಿಸಿರಿ.
ఎఫెసీయులకు 6 : 21 (ERVTE)
{#1ವಂದನೆಗಳು } ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು.
ఎఫెసీయులకు 6 : 22 (ERVTE)
ನಮ್ಮ ಸ್ಥಿತಿಗತಿಗಳು ನಿಮಗೆ ತಿಳಿದಿರಬೇಕೆಂಬುದು ನನ್ನ ಇಷ್ಟ. ಅಲ್ಲದೆ ಅವನು ನಿಮ್ಮನ್ನು ಪ್ರೋತ್ಸಾಹಿಸುವನು.
ఎఫెసీయులకు 6 : 23 (ERVTE)
ತಂದೆಯಾದ ದೇವರಿಂದಲೂ ಪ್ರಭುವಾದ ಯೇಸು ಕ್ರಿಸ್ತನಿಂದಲೂ ನಿಮಗೆ ಶಾಂತಿಯೂ ನಂಬಿಕೆಯಿಂದ ಕೂಡಿದ ಪ್ರೀತಿಯೂ ಉಂಟಾಗಲಿ.
ఎఫెసీయులకు 6 : 24 (ERVTE)
ನಮ್ಮ ಪ್ರಭುವಾದ ಯೇಸು ಕ್ರಿಸ್ತನನ್ನು ನಿರಂತರವಾದ ಪ್ರೀತಿಯಿಂದ ಪ್ರೀತಿಸುವ ನಿಮ್ಮೆಲ್ಲರ ಮೇಲೆ ದೇವರ ಕೃಪೆಯಿರಲಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24