నిర్గమకాండము 1 : 1 (ERVTE)
{#1ಈಜಿಪ್ಟಿನಲ್ಲಿ ಯಾಕೋಬನ ಕುಟುಂಬ } ಯಾಕೋಬನು (ಇಸ್ರೇಲನು) ತನ್ನ ಗಂಡುಮಕ್ಕಳೊಂದಿಗೆ ಈಜಿಪ್ಟಿಗೆ ಪ್ರಯಾಣ ಮಾಡಿದನು; ತಮ್ಮ ಕುಟುಂಬಗಳೊಡನೆ ಹೋದ ಅವನ ಗಂಡುಮಕ್ಕಳು ಯಾರೆಂದರೆ:
నిర్గమకాండము 1 : 2 (ERVTE)
ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
నిర్గమకాండము 1 : 3 (ERVTE)
ಇಸ್ಸಾಕಾರ್, ಜೆಬುಲೂನ್, ಬೆನ್ಯಾಮೀನ್,
నిర్గమకాండము 1 : 4 (ERVTE)
ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.
నిర్గమకాండము 1 : 5 (ERVTE)
ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.)
నిర్గమకాండము 1 : 6 (ERVTE)
ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.
నిర్గమకాండము 1 : 7 (ERVTE)
ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.
నిర్గమకాండము 1 : 8 (ERVTE)
{#1ಇಸ್ರೇಲರಿಗೆ ಹಿಂಸೆ } ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.
నిర్గమకాండము 1 : 9 (ERVTE)
ಈ ರಾಜನು ತನ್ನ ಜನರಿಗೆ, “ಇಸ್ರೇಲರ ಸಂಖ್ಯೆಯು ಹೆಚ್ಚಾಯಿತು; ಅವರು ನಮಗಿಂತಲೂ ಬಲಿಷ್ಠರಾದರು.
నిర్గమకాండము 1 : 10 (ERVTE)
ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.
నిర్గమకాండము 1 : 11 (ERVTE)
నిర్గమకాండము 1 : 12 (ERVTE)
ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು. ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.
నిర్గమకాండము 1 : 13 (ERVTE)
ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.
నిర్గమకాండము 1 : 14 (ERVTE)
నిర్గమకాండము 1 : 15 (ERVTE)
ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆಗಳನ್ನೂ ಗಾರೆಗಳನ್ನೂ ಬೇಸಾಯವನ್ನೂ ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು. {#1ದೇವರನ್ನು ಹಿಂಬಾಲಿಸಿದ ದಾದಿಯರು } ಇಸ್ರೇಲಿನ ಸ್ತ್ರೀಯರಿಗೆ ಹೆರಿಗೆ ಮಾಡಿಸಲು ಇಬ್ರಿಯರಾದ ಇಬ್ಬರು ದಾದಿಯರಿದ್ದರು. ಇವರ ಹೆಸರು: ಶಿಫ್ರಾ ಮತ್ತು ಪೂಗಾ. ಈಜಿಪ್ಟಿನ ರಾಜನು ಈ ದಾದಿಯರೊಡನೆ ಮಾತಾಡಿ ಅವರಿಗೆ,
నిర్గమకాండము 1 : 16 (ERVTE)
“ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.
నిర్గమకాండము 1 : 17 (ERVTE)
నిర్గమకాండము 1 : 18 (ERVTE)
ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.
నిర్గమకాండము 1 : 19 (ERVTE)
ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು. ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು.
నిర్గమకాండము 1 : 20 (ERVTE)
(20-21)ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು. ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು.
నిర్గమకాండము 1 : 21 (ERVTE)
నిర్గమకాండము 1 : 22 (ERVTE)
ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22