నిర్గమకాండము 16 : 1 (ERVTE)
{#1ದೇವರು ಆಹಾರವನ್ನು ಕಳುಹಿಸಿದ್ದು } ಬಳಿಕ ಅವರು ಏಲೀಮಿನಿಂದ ಪ್ರಯಾಣಮಾಡಿ ಸಿನ್ ಅರಣ್ಯಕ್ಕೆ ಬಂದರು. ಈ ಸ್ಥಳವು ಏಲೀಮಿನ ಮತ್ತು ಸೀನಾಯ್ ಬೆಟ್ಟದ ನಡುವೆ ಇತ್ತು. ಈಜಿಪ್ಟನ್ನು ಬಿಟ್ಟ ನಂತರ ಎರಡನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅವರು ಈ ಸ್ಥಳಕ್ಕೆ ಬಂದರು.
నిర్గమకాండము 16 : 2 (ERVTE)
ಆಗ ಇಸ್ರೇಲರು ಮತ್ತೆ ಮರುಭೂಮಿಯಲ್ಲಿ ಮೋಶೆ ಆರೋನರ ಮೇಲೆ ಗುಣುಗುಟ್ಟಿದರು.
నిర్గమకాండము 16 : 3 (ERVTE)
ಅವರು, “ಯೆಹೋವನು ನಮ್ಮನ್ನು ಈಜಿಪ್ಟಿನಲ್ಲಿ ಕೊಂದಿದ್ದರೆ ಎಷ್ಟೋ ಒಳ್ಳೆಯದಾಗುತ್ತಿತ್ತು. ನಮಗೆ ಈಜಿಪ್ಟಿನಲ್ಲಿ ಮಾಂಸವೂ ರೊಟ್ಟಿಯೂ ಇತ್ತು. ನಮಗೆ ಬೇಕಿದ್ದ ಆಹಾರವೆಲ್ಲಾ ನಮ್ಮಲ್ಲಿತ್ತು. ಆದರೆ ಈಗ ನೀವು ನಮ್ಮನ್ನು ಈ ಅರಣ್ಯಕ್ಕೆ ಕರೆದುಕೊಂಡು ಬಂದಿರಿ. ನಾವೆಲ್ಲರೂ ಇಲ್ಲಿ ಹಸಿವೆಯಿಂದ ಸಾಯುವೆವು” ಎಂದು ಹೇಳಿದರು.
నిర్గమకాండము 16 : 4 (ERVTE)
ಆಗ ಯೆಹೋವನು ಮೋಶೆಗೆ, “ಆಕಾಶದಿಂದ ನಿಮಗೋಸ್ಕರ ರೊಟ್ಟಿ ಸುರಿಯುವಂತೆ ಮಾಡುವೆನು. ಪ್ರತಿದಿನ ಅವರು ಹೊರಗೆ ಹೋಗಿ, ತಮಗೆ ಆ ದಿನದಲ್ಲಿ ತಿನ್ನಲು ಬೇಕಾದ ಆಹಾರವನ್ನು ಕೂಡಿಸಿಕೊಳ್ಳಬೇಕು. ನಾನು ಹೇಳುವುದನ್ನು ಅವರು ಮಾಡುತ್ತಾರೊ ಇಲ್ಲವೊ ಎಂದು ನೋಡಲು ನಾನು ಇದನ್ನು ಮಾಡುವೆನು.
నిర్గమకాండము 16 : 5 (ERVTE)
ಪ್ರತಿದಿನವು ಅವರು ಒಂದು ದಿನಕ್ಕೆ ಬೇಕಾದಷ್ಟು ಆಹಾರವನ್ನು ಕೂಡಿಸಿಕೊಳ್ಳಬೇಕು. ಆದರೆ ಶುಕ್ರವಾರ ಅವರು ತಮ್ಮ ಆಹಾರವನ್ನು ಸಿದ್ಧಪಡಿಸುವಾಗ ಎರಡು ದಿನಗಳಿಗೆ ಬೇಕಾದಷ್ಟು ಆಹಾರವಿರುವುದನ್ನು ಅವರು ನೋಡುವರು” ಎಂದು ಹೇಳಿದನು.
నిర్గమకాండము 16 : 6 (ERVTE)
ಆದ್ದರಿಂದ ಮೋಶೆಯು ಮತ್ತು ಆರೋನನು ಇಸ್ರೇಲರಿಗೆ, “ಈ ರಾತ್ರಿ ನೀವು ಯೆಹೋವನ ಶಕ್ತಿಯನ್ನು ನೋಡುವಿರಿ. ನಿಮ್ಮನ್ನು ಈಜಿಪ್ಟಿನಿಂದ ರಕ್ಷಿಸಿದವನು ಆತನೇ ಎಂದು ತಿಳಿದುಕೊಳ್ಳುವಿರಿ.
నిర్గమకాండము 16 : 7 (ERVTE)
ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.
నిర్గమకాండము 16 : 8 (ERVTE)
నిర్గమకాండము 16 : 9 (ERVTE)
ಅಲ್ಲದೆ ಮೋಶೆಯು, “ನೀವು ಗುಣುಗುಟ್ಟುತ್ತಿರುವುದನ್ನು ಯೆಹೋವನು ಕೇಳಿದ್ದಾನೆ. ಆದ್ದರಿಂದ ರಾತ್ರಿಯಲ್ಲಿ ಆತನು ನಿಮಗೆ ಮಾಂಸವನ್ನು ಕೊಡುವನು. ಪ್ರತಿ ಮುಂಜಾನೆ ನಿಮಗೆ ಬೇಕಾದಷ್ಟು ರೊಟ್ಟಿಯು ದೊರಕುವುದು. ನೀವು (ಆರೋನನ ಮೇಲೂ ನನ್ನ ಮೇಲೂ) ಗುಣುಗುಟ್ಟುತ್ತಿದ್ದೀರಿ? ಆದರೆ ನಮಗೆ ದೂರು ಹೇಳಲು ನಾವೆಷ್ಟರವರು? ನೀವು ಯೆಹೋವನ ವಿರುದ್ಧವಾಗಿ ದೂರು ಹೇಳುತ್ತಿದ್ದೀರೆಂಬುದು ನಿಮ್ಮ ಜ್ಞಾಪಕದಲ್ಲಿರಲಿ” ಎಂದು ಹೇಳಿದನು.
నిర్గమకాండము 16 : 10 (ERVTE)
ಬಳಿಕ ಮೋಶೆ ಆರೋನನಿಗೆ, “ಇಸ್ರೇಲರೊಂದಿಗೆ ಮಾತಾಡು. ಅವರಿಗೆ, ‘ಯೆಹೋವನ ಮುಂದೆ ಒಟ್ಟಾಗಿ ನೆರೆದು ಬನ್ನಿ: ಯಾಕೆಂದರೆ ಆತನು ನಿಮ್ಮ ಗುಣುಗುಟ್ಟುವಿಕೆಗಳನ್ನು ಕೇಳಿದ್ದಾನೆ’ ಎಂದು ಹೇಳು” ಅಂದನು.
నిర్గమకాండము 16 : 11 (ERVTE)
ಅರೋನನು ಇಸ್ರೇಲರೆಲ್ಲರೊಂದಿಗೆ ಮಾತಾಡಿದನು. ಅವರೆಲ್ಲರೂ ಒಂದು ಸ್ಥಳದಲ್ಲಿ ಕೂಡಿಬಂದರು. ಆರೋನನು ಅವರೊಂದಿಗೆ ಮಾತಾಡುತ್ತಿದ್ದಾಗ ಅವರೆಲ್ಲರೂ ಅರಣ್ಯದ ಕಡೆಗೆ ತಿರುಗಿನೋಡಿದರು. ಮೇಘದಲ್ಲಿ ಯೆಹೋವನ ಮಹಿಮೆಯು ಪ್ರತ್ಯಕ್ಷವಾದದ್ದನ್ನು ಅವರೆಲ್ಲರೂ ಕಂಡರು. ಯೆಹೋವನು ಮೋಶೆಗೆ,
నిర్గమకాండము 16 : 12 (ERVTE)
“ನಾನು ಇಸ್ರೇಲರ ಗುಣುಗುಟ್ಟುವಿಕೆಗಳನ್ನು ಕೇಳಿದ್ದೇನೆ. ಆದ್ದರಿಂದ ಅವರಿಗೆ ಹೀಗೆ ಹೇಳು: ‘ಸೂರ್ಯಾಸ್ತ್ತಮದ ಮುನ್ನ ನೀವು ಮಾಂಸವನ್ನು ತಿನ್ನುವಿರಿ; ಪ್ರತಿ ಮುಂಜಾನೆ ಸೂರ್ಯೋದಯದ ಮುನ್ನ ನಿಮಗೆ ಬೇಕಾದಷ್ಟು ರೊಟ್ಟಿಯನ್ನು ತಿನ್ನುವಿರಿ. ಆಗ ನಾನೇ ದೇವರಾದ ಯೆಹೋವನೆಂಬುದನ್ನು ನೀವು ತಿಳಿದುಕೊಳ್ಳುವಿರಿ; ನನ್ನಲ್ಲಿ ಭರವಸೆ ಇಡುವಿರಿ’ ” ಎಂದು ಹೇಳಿದನು.
నిర్గమకాండము 16 : 13 (ERVTE)
ಸಾಯಂಕಾಲ ಲಾವಕ್ಕಿಗಳು ಪಾಳೆಯದ ಸುತ್ತಲೂ ಬಂದವು. ಜನರು ಮಾಂಸಕ್ಕಾಗಿ ಈ ಪಕ್ಷಿಗಳನ್ನು ಹಿಡಿದರು ಮತ್ತು ಪ್ರತಿ ಮುಂಜಾನೆ ಅವರ ಪಾಳೆಯದ ಸುತ್ತಲೂ ಮಂಜು ನೆಲದ ಮೇಲೆ ಬಿದ್ದಿತ್ತು.
నిర్గమకాండము 16 : 14 (ERVTE)
ಸೂರ್ಯನು ಮೇಲಕ್ಕೇರಿದ ನಂತರ ಮಂಜು ಕರಗಿ ಇಲ್ಲವಾಯಿತು. ಆದರೆ ಮಂಜು ಕರಗಿ ಹೋದನಂತರ ನೆಲದ ಮೇಲೆ ಮಂಜಿನ ಹನಿಗಳಂತಿದ್ದ ತೆಳುವಾದ ಕಾಳುಗಳು ಬಿದ್ದಿದ್ದವು.
నిర్గమకాండము 16 : 15 (ERVTE)
ಇಸ್ರೇಲರು ಅದನ್ನು ನೋಡಿ “ಏನದು” ಎಂಬುದಾಗಿ ಒಬ್ಬರನ್ನೊಬ್ಬರು ಕೇಳಿದರು. ಅದು ಏನೆಂದು ಅವರಿಗೆ ಗೊತ್ತಿಲ್ಲದ ಕಾರಣ ಅವರು ಈ ಪ್ರಶ್ನೆಯನ್ನು ಕೇಳಿದರು. ಆದ್ದರಿಂದ ಮೋಶೆ ಅವರಿಗೆ, “ಇದು ಯೆಹೋವನು ನಿಮಗೆ ಕೊಟ್ಟಿರುವ ಆಹಾರ.
నిర్గమకాండము 16 : 16 (ERVTE)
ಯೆಹೋವನು ಆಜ್ಞಾಪಿಸುವುದೇನೆಂದರೆ, ‘ಪ್ರತಿಯೊಬ್ಬನು ತನಗೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ಕುಟುಂಬದಲ್ಲಿರುವ ಪ್ರತಿಯೊಬ್ಬನಿಗೆ ಸುಮಾರು ಮೂರು ಸೇರಿನಷ್ಟು ಕೂಡಿಸಿಕೊಳ್ಳಬೇಕು’ ” ಎಂದು ಹೇಳಿದನು.
నిర్గమకాండము 16 : 17 (ERVTE)
ಅಂತೆಯೇ ಇಸ್ರೇಲರು ಮಾಡಿದರು. ಪ್ರತಿಯೊಬ್ಬನೂ ತನ್ನ ಆಹಾರವನ್ನು ಕೂಡಿಸಿಕೊಂಡನು. ಕೆಲವರು ಇತರರಿಗಿಂತ ಹೆಚ್ಚಾಗಿ ಕೂಡಿಸಿಕೊಂಡರು.
నిర్గమకాండము 16 : 18 (ERVTE)
ಅವರು ತಮ್ಮ ಕುಟುಂಬದಲ್ಲಿದ್ದ ಪ್ರತಿಯೊಬ್ಬರ ಆಹಾರವನ್ನು ಒಟ್ಟಾಗಿ ಸೇರಿಸಿ ಅಳತೆಮಾಡಿದಾಗ ಅಲ್ಲಿ ಯಾವಾಗಲೂ ಪ್ರತಿಯೊಬ್ಬನಿಗೆ ಬೇಕಾದಷ್ಟು ಮಾತ್ರ ಆಹಾರವಿರುತ್ತಿತ್ತು. ಅದು ಹೆಚ್ಚಾಗಿಯೂ ಇರುತ್ತಿರಲಿಲ್ಲ; ಕಡಿಮೆಯಾಗಿಯೂ ಇರುತ್ತಿರಲಿಲ್ಲ. ಹೀಗೆ ಪ್ರತಿಯೊಬ್ಬನು ತನಗೆ ಮತ್ತು ತನ್ನ ಕುಟುಂಬಕ್ಕೆ ಬೇಕಾದಷ್ಟನ್ನು ಮಾತ್ರ ಕೂಡಿಸಿಕೊಂಡನು.
నిర్గమకాండము 16 : 19 (ERVTE)
ಮೋಶೆಯು ಅವರಿಗೆ, “ಆಹಾರವನ್ನು ಮರುದಿನಕ್ಕಾಗಿ ಉಳಿಸಿಕೊಳ್ಳಬೇಡಿರಿ” ಎಂದು ಹೇಳಿದನು.
నిర్గమకాండము 16 : 20 (ERVTE)
ಆದರೆ ಅವರು ಮೋಶೆಯ ಮಾತಿಗೆ ವಿಧೇಯರಾಗಲಿಲ್ಲ. ಕೆಲವು ಜನರು ಮರುದಿನ ತಿನ್ನುವುದಕ್ಕಾಗಿ ಆಹಾರವನ್ನು ಉಳಿಸಿಕೊಂಡರು; ಹೀಗೆ ಉಳಿಸಿಟ್ಟ ಆಹಾರವು ಹುಳಗಳಿಂದ ತುಂಬಿ ಕೊಳೆಯತೊಡಗಿತು. ಮೋಶೆಯು ಹೀಗೆ ಮಾಡಿದ ಜನರ ಮೇಲೆ ಕೋಪಗೊಂಡನು.
నిర్గమకాండము 16 : 21 (ERVTE)
నిర్గమకాండము 16 : 22 (ERVTE)
ಪ್ರತಿ ಮುಂಜಾನೆ ಅವರು ಆಹಾರವನ್ನು ಕೂಡಿಸಿಕೊಂಡರು. ಪ್ರತಿಯೊಬ್ಬನು ತಾನು ಎಷ್ಟು ತಿನ್ನಬಹುದೋ ಅಷ್ಟನ್ನೇ ಕೂಡಿಸಿಕೊಂಡನು. ಆದರೆ ಬಿಸಿಲೇರಿದಾಗ ಆಹಾರವು ಕರಗಿಹೋಯಿತು.
నిర్గమకాండము 16 : 23 (ERVTE)
ಆರನೆಯ ದಿನವಾದ ಶುಕ್ರವಾರದಲ್ಲಿ ಜನರು ಎರಡರಷ್ಟನ್ನು ಕೂಡಿಸಿಕೊಂಡರು. ಅವರು ಪ್ರತಿಯೊಬ್ಬನಿಗೆ ಆರು ಸೇರಿನಷ್ಟು ಕೂಡಿಸಿಕೊಂಡರು. ಆದ್ದರಿಂದ ಜನನಾಯಕರೆಲ್ಲರೂ ಬಂದು ಮೋಶೆಗೆ ಇದನ್ನು ತಿಳಿಸಿದರು.
నిర్గమకాండము 16 : 24 (ERVTE)
ಮೋಶೆಯು ಅವರಿಗೆ, “ಯೆಹೋವನೇ ಇದರ ಬಗ್ಗೆ ತಿಳಿಸಿದ್ದನು. ನಾಳೆ ಮುಂಜಾನೆ ಯೆಹೋವನನ್ನು ಸನ್ಮಾನಿಸತಕ್ಕ ವಿಶೇಷ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆದ್ದರಿಂದ ಇದು ಹೀಗೆ ಸಂಭವಿಸಿತು. ಈ ದಿನಕ್ಕೆ ಬೇಕಾದ ಅಡಿಗೆಯನ್ನು ನೀವು ತಯಾರಿಸಿಕೊಳ್ಳಿರಿ. ಆದರೆ ಈ ಆಹಾರದಲ್ಲಿ ಉಳಿದದ್ದನ್ನು ನಾಳೆ ಪ್ರಾತಃಕಾಲಕ್ಕಾಗಿ ಉಳಿಸಿಕೊಳ್ಳಿರಿ” ಎಂದು ಹೇಳಿದನು.
నిర్గమకాండము 16 : 25 (ERVTE)
ಆದ್ದರಿಂದ ಉಳಿದ ಆಹಾರವನ್ನು ಜನರು ಮರುದಿನಕ್ಕಾಗಿ ಉಳಿಸಿದರು; ಆದರೆ ಆ ಆಹಾರವು ಕೆಡಲಿಲ್ಲ ಮತ್ತು ಹುಳಗಳು ಆ ಆಹಾರಕ್ಕೆ ಬರಲಿಲ್ಲ. ಶನಿವಾರದಲ್ಲಿ ಮೋಶೆಯು ಜನರಿಗೆ, “ಈ ದಿನ ಸಬ್ಬತ್ತಾಗಿದೆ. ಇದು ಯೆಹೋವನನ್ನು ಸನ್ಮಾನಿಸುವುದಕ್ಕಿರುವ ವಿಶೇಷವಾದ ವಿಶ್ರಾಂತಿ ದಿನವಾಗಿದೆ. ನೀವು ನಿನ್ನೆಯಿಂದ ಇಟ್ಟುಕೊಂಡಿದ್ದ ಆಹಾರವನ್ನು ಊಟಮಾಡಿರಿ. ಇಂದು ನೀವು ಹೊಲದಲ್ಲಿ ಯಾವ ಆಹಾರವನ್ನೂ ಕಾಣುವುದಿಲ್ಲ.
నిర్గమకాండము 16 : 26 (ERVTE)
ನೀವು ಆರು ದಿನಗಳಲ್ಲಿ ಆಹಾರವನ್ನು ಕೂಡಿಸಬೇಕು. ಆದರೆ ವಾರದ ಏಳನೆಯ ದಿನವು ಸಬ್ಬತ್ ದಿನವಾಗಿದೆ, ಅಂದರೆ ವಿಶ್ರಾಂತಿಯ ದಿನವಾಗಿದೆ. ಆದ್ದರಿಂದ ಆ ದಿನದಲ್ಲಿ ನೆಲದ ಮೇಲೆ ಯಾವ ಆಹಾರವೂ ಇರುವುದಿಲ್ಲ” ಅಂದನು.
నిర్గమకాండము 16 : 27 (ERVTE)
ಏಳನೆಯ ದಿನದಲ್ಲಿ ಕೆಲವು ಜನರು ಆಹಾರವನ್ನು ಕೂಡಿಸಿಕೊಳ್ಳಲು ಹೊರಗೆ ಹೋದರು. ಆದರೆ ಅವರಿಗೆ ಏನೂ ಸಿಕ್ಕಲಿಲ್ಲ.
నిర్గమకాండము 16 : 28 (ERVTE)
ಆಗ ಯೆಹೋವನು ಮೋಶೆಗೆ, “ಜನರೇ, ನೀವು ಇನ್ನೆಷ್ಟರವರೆಗೆ ನನ್ನ ಆಜ್ಞೆಗಳಿಗೆ ಮತ್ತು ಬೋಧನೆಗಳಿಗೆ ವಿಧೇಯರಾಗುವುದಿಲ್ಲ?
నిర్గమకాండము 16 : 29 (ERVTE)
ನೋಡಿರಿ, ಯೆಹೋವನು ಸಬ್ಬತ್ ದಿನವನ್ನು ನಿಮಗೆ ವಿಶ್ರಾಂತಿ ದಿನವನ್ನಾಗಿ ಮಾಡಿದ್ದಾನೆ. ಆದ್ದರಿಂದ ಯೆಹೋವನು ಶುಕ್ರವಾರದಂದು ನಿಮಗೆ ಎರಡು ದಿನಗಳಿಗೆ ಬೇಕಾದಷ್ಟು ಆಹಾರವನ್ನು ಕೊಡುವನು. ಆದ್ದರಿಂದ ಸಬ್ಬತ್ತಿನಲ್ಲಿ ನಿಮ್ಮಲ್ಲಿ ಪ್ರತಿಯೊಬ್ಬನು ಕುಳಿತುಕೊಂಡು ವಿಶ್ರಮಿಸಿಕೊಳ್ಳಬೇಕು. ನೀವು ಇರುವಲ್ಲೇ ಇರಿ” ಎಂದು ಹೇಳಿದನು.
నిర్గమకాండము 16 : 30 (ERVTE)
ಆದ್ದರಿಂದ ಜನರು ಸಬ್ಬತ್ತಿನಲ್ಲಿ ವಿಶ್ರಮಿಸಿಕೊಂಡರು.
నిర్గమకాండము 16 : 31 (ERVTE)
ಜನರು ಈ ವಿಶೇಷ ಆಹಾರವನ್ನು ಮನ್ನ ಎಂದು ಕರೆಯತೊಡಗಿದರು. ಮನ್ನವು ಚಿಕ್ಕದಾದ ಬಿಳಿ ಕೊತ್ತಂಬರಿ ಬೀಜಗಳಂತಿದ್ದವು ಮತ್ತು ಜೇನುತುಪ್ಪದಿಂದ ಮಾಡಿದ ತೆಳುವಾದ ರೊಟ್ಟಿಯಂತೆ ರುಚಿಯಾಗಿತ್ತು.
నిర్గమకాండము 16 : 32 (ERVTE)
ಮೋಶೆಯು, “ಯೆಹೋವನು ಆಜ್ಞಾಪಿಸಿದ್ದೇನೆಂದರೆ, ‘ಮೂರು ಸೇರಿನಷ್ಟು ಮನ್ನವನ್ನು ನಿಮ್ಮ ಮುಂದಿನ ಸಂತತಿಯವರಿಗಾಗಿ ಉಳಿಸಿರಿ. ನಾನು ನಿಮ್ಮನ್ನು ಈಜಿಪ್ಟಿನಿಂದ ಹೊರಗೆ ನಡೆಸಿದಾಗ ಅರಣ್ಯದಲ್ಲಿ ನಾನು ನಿಮಗೆ ಕೊಟ್ಟ ಈ ಆಹಾರವನ್ನು ನೋಡುವರು’ ” ಎಂದು ಹೇಳಿದನು.
నిర్గమకాండము 16 : 33 (ERVTE)
ಆದ್ದರಿಂದ ಮೋಶೆಯು ಆರೋನನಿಗೆ, “ಒಂದು ಭರಣಿಯನ್ನು ತೆಗೆದುಕೊಂಡು ಅದರಲ್ಲಿ ಮೂರು ಸೇರಿನಷ್ಟು ಮನ್ನವನ್ನು ತುಂಬಿಸು. ನಿಮ್ಮ ಮುಂದಿನ ಸಂತತಿಯವರು ನೋಡುವುದಕೋಸ್ಕರ ಇದನ್ನು ಉಳಿಸಿ ಯೆಹೋವನ ಮುಂದೆ ಇಡು” ಎಂದು ಹೇಳಿದನು.
నిర్గమకాండము 16 : 34 (ERVTE)
(ನಂತರ ಆರೋನನು, ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಮಾಡಿದನು. ಆರೋನನು ಮನ್ನದ ಭರಣಿಯನ್ನು ಒಡಂಬಡಿಕೆಯ ಮುಂದುಗಡೆಯಲ್ಲಿ ಇಟ್ಟನು.)
నిర్గమకాండము 16 : 35 (ERVTE)
ನಲವತ್ತು ವರ್ಷಗಳವರೆಗೆ ಜನರು ಮನ್ನವನ್ನು ತಿಂದರು. ಅವರು ವಿಶ್ರಾಂತಿಯ ದೇಶಕ್ಕೆ ಬರುವ ತನಕ, ಅಂದರೆ ಕಾನಾನಿನ ಗಡಿಗೆ ಬರುವವರೆಗೆ ಮನ್ನವನ್ನು ತಿಂದರು.
నిర్గమకాండము 16 : 36 (ERVTE)
(ಅವರು ಮನ್ನವನ್ನು ಅಳೆಯುವುದಕ್ಕೆ ಗೋಮೆರ್ ಎಂಬ ಅಳತೆಯನ್ನು ಉಪಯೋಗಿಸಿದರು.)
❮
❯