నిర్గమకాండము 2 : 1 (ERVTE)
{#1ಮೋಶೆಯ ಬಾಲ್ಯ } ಲೇವಿ ಕುಟುಂಬದ ಒಬ್ಬನು ಲೇವಿ ಕುಟುಂಬಕ್ಕೆ ಸೇರಿದ ಸ್ತ್ರೀಯೊಬ್ಬಳನ್ನು ಮದುವೆಯಾದನು.
నిర్గమకాండము 2 : 2 (ERVTE)
ಆ ಸ್ತ್ರೀಯು ಗರ್ಭಿಣಿಯಾಗಿ ಗಂಡುಮಗುವಿಗೆ ಜನ್ಮವಿತ್ತಳು. ಮಗುವು ಸುಂದರವಾಗಿತ್ತು. ಆಕೆ ಮೂರು ತಿಂಗಳವರೆಗೆ ಆ ಮಗುವನ್ನು ಬಚ್ಚಿಟ್ಟಳು.
నిర్గమకాండము 2 : 3 (ERVTE)
ಇನ್ನೂ ಹೆಚ್ಚು ಕಾಲ ಬಚ್ಚಿಡಲಾಗದೆ ಆಕೆ ಒಂದು ಬುಟ್ಟಿಯನ್ನು ಮಾಡಿ ಅದಕ್ಕೆ ರಾಳವನ್ನು ಹಚ್ಚಿದಳು. ಆಕೆ ಮಗುವನ್ನು ಬುಟ್ಟಿಯಲ್ಲಿಟ್ಟು ಆ ಬುಟ್ಟಿಯನ್ನು ನೀರಿನಲ್ಲಿ ಎತ್ತರವಾಗಿ ಬೆಳೆದ ಹುಲ್ಲಿನಲ್ಲಿ ಇಟ್ಟಳು.
నిర్గమకాండము 2 : 4 (ERVTE)
ಮಗುವಿಗೆ ಏನಾಗುವುದೋ ಎಂದು ನೋಡಲು ಮಗುವಿನ ಅಕ್ಕ ಅಲ್ಲಿದ್ದುಕೊಂಡು ಕಾಯುತ್ತಿದ್ದಳು.
నిర్గమకాండము 2 : 5 (ERVTE)
ಅದೇ ಸಮಯದಲ್ಲಿ ಫರೋಹನ ಮಗಳು ಸ್ನಾನ ಮಾಡುವುದಕ್ಕೆ ನದಿಗೆ ಹೋದಳು. ಆಕೆಯ ಸೇವಕಿಯರು ನದಿಯ ದಡದಲ್ಲಿ ತಿರುಗಾಡುತ್ತಿದ್ದರು. ಆಕೆ ಎತ್ತರವಾದ ಹುಲ್ಲಿನ ಮೇಲಿದ್ದ ಬುಟ್ಟಿಯನ್ನು ನೋಡಿ ತನ್ನ ಸೇವಕಿಯರಲ್ಲಿ ಒಬ್ಬಳಿಗೆ, “ಹೋಗಿ ಅದನ್ನು ತೆಗೆದುಕೊಂಡು ಬಾ” ಎಂದು ಹೇಳಿದಳು.
నిర్గమకాండము 2 : 6 (ERVTE)
ರಾಜನ ಮಗಳು ಬುಟ್ಟಿಯನ್ನು ತೆಗೆದು ನೋಡಿದಾಗ ಅಳುತ್ತಿದ್ದ ಗಂಡುಮಗುವನ್ನು ಕಂಡಳು. ಆಕೆಗೆ ಅದರ ಮೇಲೆ ಮರುಕವಾಯಿತು. ಆಕೆ, “ಇದು ಇಬ್ರಿಯರ ಮಗು” ಎಂದು ಹೇಳಿದಳು.
నిర్గమకాండము 2 : 7 (ERVTE)
నిర్గమకాండము 2 : 8 (ERVTE)
ಮಗುವಿನ ಅಕ್ಕ ಆಕೆಯ ಬಳಿಗೆ ಬಂದು, “ಮಗುವಿಗೆ ಹಾಲು ಕುಡಿಸಲು ಒಬ್ಬ ಇಬ್ರಿಯ ಸ್ತ್ರೀಯನ್ನು ಕರೆದುಕೊಂಡು ಬರಲೇ?” ಎಂದು ಕೇಳಿದಳು.
నిర్గమకాండము 2 : 9 (ERVTE)
ಅರಸನ ಮಗಳು, “ಹೋಗಿ, ಕರೆದುಕೊಂಡು ಬಾ” ಅಂದಳು. ಆದ್ದರಿಂದ ಆ ಹುಡುಗಿ ಹೋಗಿ ಮಗುವಿನ ಸ್ವಂತ ತಾಯಿಯನ್ನು ಕರೆದುಕೊಂಡು ಬಂದಳು. ರಾಜನ ಮಗಳು ತಾಯಿಗೆ, “ಈ ಮಗುವಿಗೆ ಹಾಲು ಕುಡಿಸಿ ನೋಡಿಕೊ, ನಾನು ನಿನಗೆ ಸಂಬಳ ಕೊಡುವೆನು” ಎಂದು ಹೇಳಿದಳು. ಆದ್ದರಿಂದ ಆ ಸ್ತ್ರೀ ತನ್ನ ಮಗುವನ್ನು ತೆಗೆದುಕೊಂಡು ಸಾಕಿದಳು.
నిర్గమకాండము 2 : 10 (ERVTE)
ಮಗುವು ಬೆಳೆಯಿತು. ಸ್ವಲ್ಪಕಾಲದ ನಂತರ ಆ ಸ್ತ್ರೀಯು ಬಾಲಕನನ್ನು ರಾಜನ ಮಗಳ ಬಳಿಗೆ ಕರೆದುಕೊಂಡು ಬಂದಳು. ರಾಜನ ಮಗಳು ಆ ಬಾಲಕನನ್ನು ತನ್ನ ಸ್ವಂತ ಮಗನೆಂದು ಸ್ವೀಕರಿಸಿದಳು. ಆ ಬಾಲಕನನ್ನು ನೀರಿನೊಳಗಿಂದ ಎಳೆದೆನೆಂದು ಆ ಬಾಲಕನಿಗೆ “ಮೋಶೆ” ಎಂದು ಹೆಸರಿಟ್ಟಳು.
నిర్గమకాండము 2 : 11 (ERVTE)
{#1ಮೋಶೆ ತನ್ನ ಜನರಿಗೆ ಸಹಾಯ ಮಾಡಿದ್ದು } ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ
నిర్గమకాండము 2 : 12 (ERVTE)
ಮೋಶೆಯು ಸುತ್ತಲೂ ನೋಡಿ ಯಾರೂ ಗಮನಿಸುತ್ತಿಲ್ಲವೆಂದು ತಿಳಿದುಕೊಂಡು ಈಜಿಪ್ಟಿನವನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
నిర్గమకాండము 2 : 13 (ERVTE)
నిర్గమకాండము 2 : 14 (ERVTE)
ಮರುದಿನ, ಇಬ್ಬರು ಇಬ್ರಿಯರು ಜಗಳವಾಡುತ್ತಿರುವುದನ್ನು ಕಂಡ ಮೋಶೆಯು ಅವರಲ್ಲಿ ತಪ್ಪು ಮಾಡಿದವನಿಗೆ, “ನಿನ್ನ ನೆರೆಯವನಿಗೆ ಯಾಕೆ ಹೊಡೆಯುತ್ತಿರುವೆ?” ಎಂದು ಕೇಳಿದನು.
నిర్గమకాండము 2 : 15 (ERVTE)
ಅದಕ್ಕೆ ಆ ಮನುಷ್ಯನು, “ನಿನ್ನನ್ನು ನಮ್ಮ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು? ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿರುವಿಯೋ?” ಎಂದು ಉತ್ತರಿಸಿದನು. ಆಗ ಮೋಶೆಗೆ ಭಯವಾಯಿತು. ಮೋಶೆಯು ತನ್ನೊಳಗೆ, “ನಾನು ಮಾಡಿದ್ದು ಪ್ರತಿಯೊಬ್ಬರಿಗೂ ತಿಳಿದಿದೆ” ಅಂದುಕೊಂಡನು.
నిర్గమకాండము 2 : 16 (ERVTE)
ಮೋಶೆಯು ಮಾಡಿದ್ದು ಫರೋಹನಿಗೂ ತಿಳಿಯಿತು. ಆದ್ದರಿಂದ ಮೋಶೆಯನ್ನು ಕೊಲ್ಲಿಸಲು ಅವನು ತೀರ್ಮಾನಿಸಿದನು. ಆದರೆ ಮೋಶೆ ಫರೋಹನ ಬಳಿಯಿಂದ ಮಿದ್ಯಾನ್ ದೇಶಕ್ಕೆ ಓಡಿಹೋದನು. {#1ಮಿದ್ಯಾನಿನಲ್ಲಿ ಮೋಶೆ } ಮೋಶೆಯು ಮಿದ್ಯಾನ್ಯರ ಒಂದು ಬಾವಿಯ ಬಳಿ ಕುಳಿತುಕೊಂಡಿದ್ದನು. ಮಿದ್ಯಾನ್ಯರ ಒಬ್ಬ ಪುರೋಹಿತನಿಗೆ ಏಳು ಮಂದಿ ಹೆಣ್ಣುಮಕ್ಕಳಿದ್ದರು. ಆ ಹುಡುಗಿಯರು ಬಂದು ತಮ್ಮ ತಂದೆಯ ಕುರಿಗಳಿಗೆ ನೀರನ್ನು ಕುಡಿಸಲು ಬಾವಿಯಿಂದ ನೀರು ಸೇದಿ ತೊಟ್ಟಿಗಳಲ್ಲಿ ಹಾಕುತ್ತಿದ್ದರು.
నిర్గమకాండము 2 : 17 (ERVTE)
ಅಷ್ಟರಲ್ಲಿ ಅಲ್ಲಿಗೆ ಬಂದ ಕೆಲವು ಕುರುಬರು ನೀರು ಸೇದಲು ಅವರಿಗೆ ಅಡ್ಡಿಮಾಡಿದ್ದರಿಂದ ಮೋಶೆಯು ಅವರಿಗೆ ಸಹಾಯಕನಾಗಿ ಬಂದು ಅವರ ಕುರಿಗಳಿಗೆ ನೀರು ಕುಡಿಸಿದನು.
నిర్గమకాండము 2 : 18 (ERVTE)
నిర్గమకాండము 2 : 19 (ERVTE)
ಬಳಿಕ ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಮರಳಿಹೋದರು. ಅವರ ತಂದೆ, “ಈ ದಿನ ನೀವು ಬಹುಬೇಗನೆ ಮನೆಗೆ ಬಂದಿದ್ದೀರಲ್ಲಾ!” ಎಂದು ಕೇಳಿದನು.
నిర్గమకాండము 2 : 20 (ERVTE)
ಆ ಹುಡುಗಿಯರು, “ಕುರುಬರು ನಮಗೆ ಅಡ್ಡಿ ಮಾಡಿದಾಗ ಈಜಿಪ್ಟಿನವನೊಬ್ಬನು ನಮ್ಮ ನೆರವಿಗೆ ಬಂದು ನಮಗೂ ನಮ್ಮ ಕುರಿಗಳಿಗೂ ನೀರು ಸೇದಿ ಕೊಟ್ಟನು” ಎಂದು ಉತ್ತರಿಸಿದರು.
నిర్గమకాండము 2 : 21 (ERVTE)
ಅದಕ್ಕೆ ರೆಗೂವೇಲನು ತನ್ನ ಹೆಣ್ಣುಮಕ್ಕಳಿಗೆ, “ಆ ಮನುಷ್ಯನು ಎಲ್ಲಿದ್ದಾನೆ? ಅವನನ್ನು ನೀವು ಯಾಕೆ ಬಿಟ್ಟುಬಂದಿರಿ? ಅವನನ್ನು ಕರೆಯಿರಿ; ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು. ಮೋಶೆಯು ರೆಗೂವೇಲನೊಂದಿಗೆ ವಾಸಮಾಡಲು ಇಷ್ಟಪಟ್ಟನು; ರೆಗೂವೇಲನು ತನ್ನ ಮಗಳಾದ ಚಿಪ್ಪೋರಳನ್ನು ಮೋಶೆಗೆ ಮದುವೆ ಮಾಡಿಸಿದನು.
నిర్గమకాండము 2 : 22 (ERVTE)
ಚಿಪ್ಪೋರಳು ಗಂಡುಮಗುವಿಗೆ ಜನ್ಮವಿತ್ತಳು. ಮೋಶೆಯು ಅನ್ಯದೇಶದಲ್ಲಿ ಪ್ರವಾಸಿಯಾಗಿದ್ದ ಕಾರಣ ಆ ಮಗುವಿಗೆ “ಗೇರ್ಷೋಮ್” ಎಂದು ಹೆಸರಿಟ್ಟನು.
నిర్గమకాండము 2 : 23 (ERVTE)
{#1ಇಸ್ರೇಲರಿಗೆ ಸಹಾಯ ಮಾಡಲು ದೇವರ ನಿರ್ಧಾರ } ಸ್ವಲ್ಪಕಾಲದ ಬಳಿಕ ಈಜಿಪ್ಟಿನ ರಾಜನೂ ಸತ್ತುಹೋದನು. ಇಸ್ರೇಲರು ತಾವು ಮಾಡಬೇಕಾದ ಪ್ರಯಾಸಕರವಾದ ಬಿಟ್ಟೀಕೆಲಸದಿಂದ ನಿಟ್ಟುಸಿರುಬಿಡುತ್ತಾ ಗೋಳಾಡುತ್ತಾ ಇದ್ದರು. ಅವರ ಗೋಳು ದೇವರಿಗೆ ಮುಟ್ಟಿತು.
నిర్గమకాండము 2 : 24 (ERVTE)
ದೇವರು ಅವರ ನರಳಾಟವನ್ನು ಕೇಳಿ ತಾನು ಅಬ್ರಹಾಮನೊಂದಿಗೂ ಇಸಾಕನೊಂದಿಗೂ ಯಾಕೋಬನೊಂದಿಗೂ ಮಾಡಿದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಂಡನು.
నిర్గమకాండము 2 : 25 (ERVTE)
ದೇವರು ಇಸ್ರೇಲರ ಸಂಕಟಗಳನ್ನು ನೋಡಿ ಅವರಿಗೆ ಸಹಾಯಮಾಡಲು ನಿಶ್ಚಯಿಸಿಕೊಂಡನು.
❮
❯