నిర్గమకాండము 20 : 1 (ERVTE)
{#1ದಶಾಜ್ಞೆಗಳು } ಬಳಿಕ ಯೆಹೋವನು ಈ ದಶಾಜ್ಞೆಗಳನ್ನು ಅವರಿಗೆ ಕೊಟ್ಟನು:
నిర్గమకాండము 20 : 2 (ERVTE)
2 “ಯೆಹೋವನೆಂಬ ನಾನೇ ನಿಮ್ಮ ದೇವರು. ಈಜಿಪ್ಟಿನಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಆ ದೇಶದಿಂದ ಹೊರಗೆ ನಡಿಸಿದವನು ನಾನೇ.
నిర్గమకాండము 20 : 3 (ERVTE)
3 “ನನ್ನನ್ನಲ್ಲದೆ ಬೇರೆ ಯಾವ ದೇವರುಗಳನ್ನೂ ನೀವು ಆರಾಧಿಸಬಾರದು.
నిర్గమకాండము 20 : 4 (ERVTE)
4 “ನೀವು ಯಾವ ವಿಗ್ರಹಗಳನ್ನೂ ಮಾಡಬಾರದು. ಆಕಾಶದಲ್ಲಿಯಾಗಲಿ ಭೂಮಿಯ ಮೇಲಾಗಲಿ ನೀರಿನಲ್ಲಾಗಲಿ ಇರುವ ಯಾವುದೇ ವಸ್ತುವಿನ ರೂಪವನ್ನು ನೀವು ಮಾಡಿಕೊಳ್ಳಬಾರದು. ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜಿಸಲೂ ಬಾರದು.
నిర్గమకాండము 20 : 5 (ERVTE)
ನಿಮ್ಮ ದೇವರಾದ ಯೆಹೋವನೆಂಬ ನನಗೆ ಸಲ್ಲತಕ್ಕ ಗೌರವವನ್ನು ನೀವು ಬೇರೆಯವರಿಗೆ ಸಲ್ಲಿಸಿದರೆ ನಾನು ನಿಮ್ಮನ್ನು ದ್ವೇಷಿಸುತ್ತೇನೆ. ನನಗೆ ವಿರುದ್ಧವಾಗಿ ಪಾಪಮಾಡುವವರ ದೋಷಫಲವನ್ನು ಅವರ ಮೂರು ನಾಲ್ಕು ತಲೆಮಾರುಗಳವರೆಗೂ ಬರಮಾಡುವೆನು.
నిర్గమకాండము 20 : 6 (ERVTE)
ಆದರೆ ನನ್ನ ಆಜ್ಞೆಗಳಿಗೆ ವಿಧೇಯರಾಗಿರುವವರಿಗೆ ಅವರ ಸಾವಿರ ತಲೆಮಾರುಗಳವರೆಗೂ ದಯೆತೋರಿಸುವೆನು.
నిర్గమకాండము 20 : 7 (ERVTE)
7 “ನಿಮ್ಮ ದೇವರಾದ ಯೆಹೋವನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
నిర్గమకాండము 20 : 8 (ERVTE)
8 “ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.
నిర్గమకాండము 20 : 9 (ERVTE)
ವಾರದ ಆರು ದಿನಗಳಲ್ಲಿ ಕೆಲಸಮಾಡಿರಿ.
నిర్గమకాండము 20 : 10 (ERVTE)
ಆದರೆ ಏಳನೆ ದಿನವು ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಲು ಮೀಸಲಾಗಿರುವ ವಿಶ್ರಾಂತಿ ದಿನವಾಗಿದೆ. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ನೀವಾಗಲಿ ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಸೇವಕರಾಗಲಿ ಸೇವಕಿಯರಾಗಲಿ ನಿಮ್ಮ ಪಶುಗಳಾಗಲಿ ನಿಮ್ಮಲ್ಲಿರುವ ವಿದೇಶಿಯರಾಗಲಿ ಕೆಲಸ ಮಾಡಬಾರದು.
నిర్గమకాండము 20 : 11 (ERVTE)
ಯಾಕೆಂದರೆ ಯೆಹೋವನು ಆರು ದಿನಗಳಲ್ಲಿ ಕೆಲಸ ಮಾಡಿ ಭೂಮ್ಯಾಕಾಶಗಳನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಿಸಿ ಏಳನೆಯ ದಿನದಲ್ಲಿ ವಿಶ್ರಮಿಸಿದನು. ಆದ್ದರಿಂದ ಯೆಹೋವನು ಸಬ್ಬತ್ ದಿನವನ್ನು ಆಶೀರ್ವದಿಸಿ ಅದನ್ನು ತನ್ನ ದಿನವನ್ನಾಗಿ ಮಾಡಿದನು.
నిర్గమకాండము 20 : 12 (ERVTE)
12 “ನೀವು ನಿಮ್ಮ ತಂದೆತಾಯಿಗಳನ್ನು ಸನ್ಮಾನಿಸಬೇಕು; ನೀವು ಸನ್ಮಾನಿಸಿದರೆ, ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಬಹುಕಾಲ ಬಾಳುವಿರಿ.
నిర్గమకాండము 20 : 13 (ERVTE)
13 “ನೀವು ಯಾರನ್ನೂ ಕೊಲೆ ಮಾಡಬಾರದು.
నిర్గమకాండము 20 : 14 (ERVTE)
14 “ನೀವು ವ್ಯಭಿಚಾರ ಮಾಡಬಾರದು.
నిర్గమకాండము 20 : 15 (ERVTE)
15 “ನೀವು ಕದಿಯಬಾರದು.
నిర్గమకాండము 20 : 16 (ERVTE)
16 “ನೀವು ಬೇರೆಯವರ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.[* ನೀವು … ಹೇಳಬಾರದು ಅಥವಾ “ನೀವು ನಿಮ್ಮ ನೆರೆಯವರ ವಿರುದ್ಧ ಸಾಕ್ಷಿಯಾಗಿರಬಾರದು.” ]
నిర్గమకాండము 20 : 17 (ERVTE)
17 “ನೀವು ನೆರೆಯವನ ಮನೆಯನ್ನು ಆಶಿಸಬಾರದು. ನೀವು ಮತ್ತೊಬ್ಬನ ಹೆಂಡತಿಯನ್ನಾಗಲಿ ಸೇವಕರನ್ನಾಗಲಿ ದಾಸಿಯರನ್ನಾಗಲಿ ಪಶುಗಳನ್ನಾಗಲಿ ಆಶಿಸಬಾರದು.”
నిర్గమకాండము 20 : 18 (ERVTE)
{#1ಜನರು ದೇವರಿಗೆ ಭಯಪಟ್ಟಿದು } ಆಗ ಅಲ್ಲಿದ್ದ ಜನರು ಗುಡುಗಿನ ಧ್ವನಿಯನ್ನು ಕೇಳಿದರು; ಬೆಟ್ಟದ ಮೇಲೆ ಮಿಂಚುಗಳನ್ನು ನೋಡಿದರು; ಹೊಗೆಯು ಬೆಟ್ಟದಿಂದ ಏರುವುದನ್ನು ಕಂಡರು. ಅವರೆಲ್ಲರೂ ಭಯದಿಂದ ನಡುಗಿದರು; ಬೆಟ್ಟದಿಂದ ದೂರದಲ್ಲಿದ್ದುಕೊಂಡು ಅವುಗಳನ್ನೆಲ್ಲಾ ಗಮನಿಸಿದರು.
నిర్గమకాండము 20 : 19 (ERVTE)
ಆಗ ಜನರು ಮೋಶೆಗೆ, “ನೀನು ನಮ್ಮೊಡನೆ ಮಾತಾಡು; ನಾವು ನಿನಗೆ ಕಿವಿಗೊಡುವೆವು. ಆದರೆ ಯೆಹೋವನು ನಮ್ಮೊಡನೆ ಮಾತಾಡದಿರಲಿ. ಇಲ್ಲವಾದರೆ ನಾವು ಸಾಯುವೆವು” ಅಂದರು.
నిర్గమకాండము 20 : 20 (ERVTE)
నిర్గమకాండము 20 : 21 (ERVTE)
ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ, ಯೆಹೋವನು ನಿಮ್ಮನ್ನು ಪರೀಕ್ಷಿಸಲು ಬಂದಿದ್ದಾನೆ. ನೀವು ಆತನಲ್ಲಿ ಭಕ್ತಿಯುಳ್ಳವರಾಗಿರಬೇಕೆಂದು ಆತನು ಬಯಸುತ್ತಾನೆ. ಆಗ ನೀವು ಪಾಪ ಮಾಡುವುದಿಲ್ಲ” ಎಂದು ಹೇಳಿದನು. ದೇವರ ಸನ್ನಿಧಾನಕ್ಕೆ ಹೋಗಲು ಮೋಶೆಯು ಕಾರ್ಮುಗಿಲಿನೊಳಗೆ ಹೋದಾಗ, ಜನರು ಬೆಟ್ಟದಿಂದ ದೂರ ನಿಂತುಕೊಂಡರು.
నిర్గమకాండము 20 : 22 (ERVTE)
ಆಗ ಯೆಹೋವನು ಈ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸಲು ಮೋಶೆಗೆ ಆಜ್ಞಾಪಿಸಿದನು: “ನಾನು ಪರಲೋಕದಿಂದ ನಿಮ್ಮ ಸಂಗಡ ಮಾತಾಡಿದ್ದನ್ನು ನೀವು ನೋಡಿದ್ದೀರಿ.
నిర్గమకాండము 20 : 23 (ERVTE)
ಆದ್ದರಿಂದ ನನ್ನೊಡನೆ ಸ್ಪರ್ಧಿಸಲು, ನೀವು ಬೆಳ್ಳಿಬಂಗಾರಗಳಿಂದ ಮೂರ್ತಿಗಳನ್ನು ಮಾಡಿಕೊಳ್ಳಬಾರದು. ಈ ಸುಳ್ಳು ದೇವರುಗಳನ್ನು ನೀವು ಮಾಡಿಕೊಳ್ಳಲೇಬಾರದು.”
నిర్గమకాండము 20 : 24 (ERVTE)
“ಒಂದು ವಿಶೇಷ ಯಜ್ಞವೇದಿಕೆಯನ್ನು ನನಗೋಸ್ಕರ ಮಣ್ಣಿನಿಂದ ಕಟ್ಟಿರಿ. ಈ ಯಜ್ಞವೇದಿಕೆಯ ಮೇಲೆ ಕುರಿದನಗಳನ್ನು ನನಗೆ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಸಮರ್ಪಿಸಿರಿ. ನಾನು ನಿಮಗೆ ಹೇಳುವ ಪ್ರತಿಯೊಂದು ಸ್ಥಳದಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಳ್ಳಲು ಹೀಗೆಯೇ ಮಾಡಿರಿ. ಆಗ ನಾನು ಬಂದು ನಿಮ್ಮನ್ನು ಆಶೀರ್ವದಿಸುವೆನು.
నిర్గమకాండము 20 : 25 (ERVTE)
ನೀವು ಯಜ್ಞವೇದಿಕೆಯನ್ನು ಕಲ್ಲುಗಳಿಂದ ಕಟ್ಟಬೇಕೆಂದಿದ್ದರೆ, ಉಳಿಯಿಂದ[† ಉಳಿ ಅಕ್ಷರಶಃ, “ಕತ್ತಿ.” ] ಕೆತ್ತಿದ ಕಲ್ಲುಗಳನ್ನು ಉಪಯೋಗಿಸಬೇಡಿರಿ. ಅಂಥ ಕಲ್ಲುಗಳನ್ನು ಉಪಯೋಗಿಸಿದರೆ, ಯಜ್ಞವೇದಿಕೆಯು ಅಪವಿತ್ರವಾಗುವುದು.
నిర్గమకాండము 20 : 26 (ERVTE)
ಅಲ್ಲದೆ ಯಜ್ಞವೇದಿಕೆಯನ್ನು ಹತ್ತುವುದಕ್ಕೆ ಮೆಟ್ಟಲುಗಳನ್ನು ಮಾಡಬಾರದು. ಮೆಟ್ಟಲುಗಳಿದ್ದರೆ ಜನರು ತಲೆ ಎತ್ತಿ ಯಜ್ಞವೇದಿಕೆಯನ್ನು ನೋಡುವಾಗ ನಿಮ್ಮ ರಹಸ್ಯಾಂಗವು ಕಾಣಿಸೀತು.”

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26