నిర్గమకాండము 21 : 1 (ERVTE)
{#1ಇತರ ಕಟ್ಟಳೆಗಳು ಮತ್ತು ಆಜ್ಞೆಗಳು }
నిర్గమకాండము 21 : 2 (ERVTE)
ಬಳಿಕ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರಿಗೆ ನೇಮಿಸಬೇಕಾದ ಇತರ ಕಟ್ಟಳೆಗಳು ಯಾವುವೆಂದರೆ: “ನೀವು ಇಬ್ರಿಯ ಗುಲಾಮನನ್ನು ಕೊಂಡುಕೊಂಡರೆ, ಆ ಗುಲಾಮನು ಆರು ವರ್ಷಗಳವರೆಗೆ ಮಾತ್ರ ನಿಮ್ಮ ಸೇವೆಮಾಡುವನು. ಆರು ವರ್ಷಗಳ ನಂತರ, ಅವನು ಬಿಡುಗಡೆಯಾಗುವನು, ಅವನು ಏನೂ ಕೊಡಬೇಕಾಗಿರುವುದಿಲ್ಲ.
నిర్గమకాండము 21 : 3 (ERVTE)
ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿಲ್ಲದಿದ್ದರೆ, ಅವನು ಬಿಡುಗಡೆ ಹೊಂದುವಾಗಲೂ ಹೆಂಡತಿಯಿಲ್ಲದವನಾಗಿ ಹೋಗುವನು. ಆದರೆ ಅವನು ನಿಮ್ಮ ಗುಲಾಮನಾಗುವಾಗ ಮದುವೆಯಾಗಿದ್ದರೆ ಅವನು ಬಿಡುಗಡೆ ಹೊಂದುವಾಗ ತನ್ನ ಹೆಂಡತಿಯನ್ನು ಕರೆದುಕೊಂಡು ಹೋಗುವನು.
నిర్గమకాండము 21 : 4 (ERVTE)
ಗುಲಾಮನು ಮದುವೆಯಾಗಿಲ್ಲದಿದ್ದರೆ, ಅವನ ಯಜಮಾನನು ಅವನಿಗೆ ಮದುವೆ ಮಾಡಿಸಬಹುದು. ಆ ಸ್ತ್ರೀಯು ಮಕ್ಕಳನ್ನು ಹೆತ್ತರೆ, ಆಕೆಯೂ ಆಕೆಯ ಮಕ್ಕಳೂ ಯಜಮಾನನ ಸ್ವತ್ತಾಗುವರು. ಗುಲಾಮನು ತನ್ನ ಸೇವಾ ವರ್ಷಗಳನ್ನು ಮುಗಿಸಿದ ತರುವಾಯ ಬಿಡುಗಡೆ ಹೊಂದುವನು.
నిర్గమకాండము 21 : 5 (ERVTE)
“ಆದರೆ ಒಂದುವೇಳೆ ಆ ಗುಲಾಮನು ತನ್ನ ಯಜಮಾನನ ಸಂಗಡವಿರಲು ದೃಢವಾಗಿ ಬಯಸಿದರೆ ಅವನು, ‘ನಾನು ನನ್ನ ಯಜಮಾನನನ್ನು ಪ್ರೀತಿಸುತ್ತೇನೆ. ನಾನು ನನ್ನ ಹೆಂಡತಿಯನ್ನೂ ಮಕ್ಕಳನ್ನೂ ಪ್ರೀತಿಸುತ್ತೇನೆ. ನಾನು ಬಿಡುಗಡೆ ಹೊಂದದೆ ಇಲ್ಲೇ ಇರುವೆನು’ ಎಂದು ಹೇಳಬೇಕು.
నిర్గమకాండము 21 : 6 (ERVTE)
ಹೀಗಾದರೆ ಯಜಮಾನನು ಆ ಗುಲಾಮನನ್ನು ದೇವರ ಸನ್ನಿಧಿಗೆ[* ದೇವರ ಸನ್ನಿಧಿ ನ್ಯಾಯಾಧಿಪತಿಗಳನ್ನು “ದೇವರು” ಎಂದು ಕರೆಯಲಾಗುತ್ತಿತ್ತು. ಯಜಮಾನನು ಗುಲಾಮನನ್ನು ನ್ಯಾಯಾಲಯಕ್ಕೆ ಕೊಂಡೊಯ್ಯುತ್ತಾನೆ ಎಂಬರ್ಥವನ್ನು ಕೊಡುತ್ತದೆ. ] ಕರೆದುಕೊಂಡು ಬರುವನು. ಯಜಮಾನನು ಗುಲಾಮನನ್ನು ಬಾಗಿಲ ಬಳಿಗೆ ಅಥವಾ ಬಾಗಿಲಿನ ಮರದ ನಿಲುವುಪಟ್ಟಿಗಳ ಬಳಿಗೆ ಕರೆದುಕೊಂಡು ಬರುವನು. ಯಜಮಾನನು ಗುಲಾಮನ ಕಿವಿಗೆ ಚೂಪಾದ ಸಲಾಕೆಯಿಂದ ರಂಧ್ರ ಮಾಡುವನು. ಆಗ ಗುಲಾಮನು ತನ್ನ ಜೀವಮಾನಪರ್ಯಂತ ಆ ಯಜಮಾನನಿಗೆ ಸೇವೆ ಮಾಡುವನು.
నిర్గమకాండము 21 : 7 (ERVTE)
“ಒಬ್ಬನು ತನ್ನ ಮಗಳನ್ನು ಗುಲಾಮಳನ್ನಾಗಿ ಮಾರಲು ತೀರ್ಮಾನಿಸಿದರೆ, ಆಕೆಯನ್ನು ಬಿಡುಗಡೆಗೊಳಿಸುವ ನಿಯಮಗಳು ಗುಲಾಮರಾದ ಪುರುಷರನ್ನು ಬಿಡುಗಡೆಗೊಳಿಸುವ ನಿಯಮಗಳ ಪ್ರಕಾರ ಇರುವುದಿಲ್ಲ.
నిర్గమకాండము 21 : 8 (ERVTE)
ಯಜಮಾನನು ತನಗಾಗಿ ಆರಿಸಿಕೊಂಡ ಗುಲಾಮಳನ್ನು ಇಷ್ಟಪಡದಿದ್ದರೆ, ಅವಳನ್ನು ಬಿಡುಗಡೆ ಮಾಡಬಹುದು. (ಅವಳ ತಂದೆಗೆ ಅವಳನ್ನು ಮಾರಬಹುದು.) ಅವಳನ್ನು ವಿದೇಶಿಯರಿಗೆ ಮಾರುವ ಹಕ್ಕನ್ನು ಯಜಮಾನನು ಕಳೆದುಕೊಳ್ಳುತ್ತಾನೆ; ಯಾಕೆಂದರೆ ಆಕೆಯಲ್ಲಿ ಅವನಿಗಿದ್ದ ನಂಬಿಕೆಯು ಮುರಿದುಹೋಯಿತು.
నిర్గమకాండము 21 : 9 (ERVTE)
ಯಜಮಾನನು ಗುಲಾಮಳನ್ನು ತನ್ನ ಸ್ವಂತ ಮಗನಿಗೆ ಮದುವೆ ಮಾಡಿಸುವುದಾಗಿ ವಾಗ್ದಾನ ಮಾಡಿದರೆ, ಅವಳನ್ನು ಗುಲಾಮಳನ್ನಾಗಿ ನೋಡಿಕೊಳ್ಳದೆ ಸೊಸೆಯಾಗಿ ನೋಡಿಕೊಳ್ಳಬೇಕು.
నిర్గమకాండము 21 : 10 (ERVTE)
“ಯಜಮಾನನು ಇನ್ನೊಬ್ಬ ಸ್ತ್ರೀಯನ್ನು ಮದುವೆಯಾದರೆ, ಅವನು ತನ್ನ ಮೊದಲನೆಯ ಹೆಂಡತಿಗೆ ಅವನು ಕೊಡುವ ಆಹಾರ ಅಥವಾ ಬಟ್ಟೆಬರೆಗಳಲ್ಲಿ ಏನೂ ಕಡಿಮೆ ಮಾಡಬಾರದು; ಮದುವೆಯ ಮೂಲಕ ಆಕೆಯು ಯಾವ್ಯಾವ ವಸ್ತುಗಳನ್ನು ಹೊಂದಲು ಹಕ್ಕು ಪಡೆದಿರುತ್ತಾಳೊ ಅವೆಲ್ಲವನ್ನು ಅವನು ಆಕೆಗೆ ಕೊಡಬೇಕು.
నిర్గమకాండము 21 : 11 (ERVTE)
ಅವನು ಆಕೆಗಾಗಿ ಈ ಮೂರು ಸಂಗತಿಗಳನ್ನು ಮಾಡಬೇಕು. ಇಲ್ಲವಾದರೆ ಅವಳು ಬಿಡುಗಡೆಯಾಗಿದ್ದಾಳೆ. ಅವಳು ಅವನಿಗೆ ಯಾವ ಸಾಲವನ್ನೂ ತೀರಿಸಬೇಕಾಗಿಲ್ಲ.
నిర్గమకాండము 21 : 12 (ERVTE)
“ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದರೆ, ಅವನೂ ಕೊಲ್ಲಲ್ಪಡಬೇಕು.
నిర్గమకాండము 21 : 13 (ERVTE)
ಆದರೆ ಕೊಲ್ಲಬೇಕೆಂಬ ಉದ್ದೇಶವಿಲ್ಲದೆ ಹೊಡೆದಾಗ ಸತ್ತುಹೋದರೆ ಅದು ದೇವರ ಸಂಕಲ್ಪವೆಂದು ಪರಿಗಣಿಸಬೇಕು. ನಾನು ನೇಮಿಸಲಿರುವ ಆಶ್ರಯಸ್ಥಳಗಳಿಗೆ ಹೊಡೆದವನು ಓಡಿಹೋಗಿ ಸುರಕ್ಷಿತವಾಗಿ ಬದುಕಲಿ.
నిర్గమకాండము 21 : 14 (ERVTE)
ಆದರೆ ಒಬ್ಬನು ಕೋಪದಿಂದಾಗಲಿ ದ್ವೇಷದಿಂದಾಗಲಿ ಇನ್ನೊಬ್ಬನನ್ನು ಕೊಂದರೆ, ಆ ಕೊಲೆಗಾರನಿಗೆ ದಂಡನೆಯಾಗಬೇಕು. ನನ್ನ ಯಜ್ಞವೇದಿಕೆಯಿಂದ ಅವನನ್ನು ದೂರಕ್ಕೆ ತೆಗೆದುಕೊಂಡು ಹೋಗಿ ಕೊಲ್ಲಬೇಕು.
నిర్గమకాండము 21 : 15 (ERVTE)
నిర్గమకాండము 21 : 16 (ERVTE)
“ತಂದೆಯನ್ನಾಗಲಿ ತಾಯಿಯನ್ನಾಗಲಿ ಹೊಡೆಯುವವನನ್ನು ಕೊಲ್ಲಬೇಕು.
నిర్గమకాండము 21 : 17 (ERVTE)
“ಯಾವನಾದರೂ ಮತ್ತೊಬ್ಬನನ್ನು ಕದ್ದು ಗುಲಾಮನನ್ನಾಗಿ ಮಾರಿದರೆ ಅಥವಾ ತನ್ನ ಗುಲಾಮನನ್ನಾಗಿ ಮಾಡಿಕೊಂಡರೆ ಅವನಿಗೆ ಮರಣಶಿಕ್ಷೆಯಾಗಬೇಕು.
నిర్గమకాండము 21 : 18 (ERVTE)
“ತಂದೆಯನ್ನಾಗಲಿ ತಾಯಿಯನ್ನಾಗಲಿ ಶಪಿಸುವವನನ್ನೂ ಕೊಲ್ಲಬೇಕು. “ಇಬ್ಬರು ಜಗಳವಾಡುತ್ತಿರುವಾಗ ಒಬ್ಬನನ್ನು ಕಲ್ಲಿನಿಂದಾಗಲಿ ಮುಷ್ಟಿಯಿಂದಾಗಲಿ ಹೊಡೆದಾಗ, ಪೆಟ್ಟಾದ ಮನುಷ್ಯನು ಸಾಯದಿದ್ದರೆ, ಹೊಡೆದವನನ್ನು ಕೊಲ್ಲಬಾರದು.
నిర్గమకాండము 21 : 19 (ERVTE)
ಗಾಯಗೊಂಡವನು ಕೆಲವು ಕಾಲದವರೆಗೆ ಹಾಸಿಗೆಯಲ್ಲಿರಬೇಕಾದರೆ, ಬಳಿಕ ಅವನು ಎದ್ದು ಊರುಗೋಲಿನ ಸಹಾಯದಿಂದ ನಡೆಯಬಲ್ಲವನಾದರೆ, ಹೊಡೆದವನು ಅವನನ್ನು ಆರೈಕೆ ಮಾಡಬೇಕು. ಗಾಯಗೊಂಡವನು ಕೆಲಸಮಾಡಲಾರದೆ ಹೋದ ಸಮಯಕ್ಕೆ ಹೊಡೆದವನು ಹಣ ಕೊಡಬೇಕು; ಅವನು ಸಂಪೂರ್ಣ ವಾಸಿಯಾಗುವವರೆಗೆ ಆರೈಕೆ ಮಾಡಬೇಕು.
నిర్గమకాండము 21 : 20 (ERVTE)
“ಕೆಲವು ಸಲ ಯಜಮಾನರು ಗುಲಾಮನನ್ನಾಗಲಿ ಗುಲಾಮಳನ್ನಾಗಲಿ ಹೊಡೆಯುತ್ತಾರೆ. ಹೊಡೆದಾಗ ಆ ವ್ಯಕ್ತಿಯು ಸತ್ತರೆ, ಯಜಮಾನನಿಗೆ ಶಿಕ್ಷೆಯಾಗಬೇಕು.
నిర్గమకాండము 21 : 21 (ERVTE)
ಆದರೆ ಆ ವ್ಯಕ್ತಿಯು ಸಾಯದೆ ಕೆಲವು ದಿನಗಳ ನಂತರ ಗುಣವಾದರೆ ಯಜಮಾನನಿಗೆ ಶಿಕ್ಷೆಯಾಗಬಾರದು. ಯಾಕೆಂದರೆ ಯಜಮಾನನು ಹಣವನ್ನು ಕೊಟ್ಟು ಆ ವ್ಯಕ್ತಿಯನ್ನು ಕೊಂಡುಕೊಂಡಿದ್ದಾನೆ ಮತ್ತು ಆ ವ್ಯಕ್ತಿಯು ಅವನ ಸ್ವತ್ತಾಗಿದ್ದಾನೆ.
నిర్గమకాండము 21 : 22 (ERVTE)
“ಇಬ್ಬರು ಜಗಳವಾಡುವಾಗ ಗರ್ಭಿಣೆ ಸ್ತ್ರೀಗೆ ಪೆಟ್ಟಾಗಿ ಗರ್ಭಸ್ರಾವವಾದರೆ ಅದಕ್ಕೆ ಕಾರಣನಾದ ವ್ಯಕ್ತಿಯು ಅವಳಿಗೆ ದಂಡ ಕೊಡಬೇಕು. ಅವನು ಎಷ್ಟು ದಂಡ ಕೊಡಬೇಕೆಂಬುದನ್ನು ಅವಳ ಗಂಡನು ನ್ಯಾಯಾಧಿಪತಿಗಳ ಸಹಾಯದಿಂದ ತೀರ್ಮಾನಿಸುವನು.
నిర్గమకాండము 21 : 23 (ERVTE)
ಆದರೆ ಆ ಸ್ತ್ರೀಯು ತೀರಿಕೊಂಡರೆ ಅದಕ್ಕೆ ಕಾರಣನಾದವನಿಗೆ ಮರಣದಂಡನೆಯಾಗಬೇಕು. ನೀವು ಪ್ರಾಣಕ್ಕೆ ಪ್ರತಿಯಾಗಿ ಪ್ರಾಣವನ್ನು ಕೊಡಿಸಬೇಕು.
నిర్గమకాండము 21 : 24 (ERVTE)
ಕಣ್ಣಿಗೆ ಪ್ರತಿಯಾಗಿ ಕಣ್ಣು, ಹಲ್ಲಿಗೆ ಪ್ರತಿಯಾಗಿ ಹಲ್ಲು, ಕೈಗೆ ಪ್ರತಿಯಾಗಿ ಕೈ, ಕಾಲಿಗೆ ಪ್ರತಿಯಾಗಿ ಕಾಲು,
నిర్గమకాండము 21 : 25 (ERVTE)
ಬರೆಗೆ ಪ್ರತಿಯಾಗಿ ಬರೆ, ಗಾಯಕ್ಕೆ ಪ್ರತಿಯಾಗಿ ಗಾಯ, ಏಟಿಗೆ ಪ್ರತಿಯಾಗಿ ಏಟು, ಈ ಮೇರೆಗೆ ಪ್ರತಿದಂಡನೆಯಾಗಬೇಕು.
నిర్గమకాండము 21 : 26 (ERVTE)
“ಯಜಮಾನನು ಗುಲಾಮನಿಗೆ ಹೊಡೆದಾಗ ಗುಲಾಮನು ಕುರುಡನಾದರೆ, ಆ ಗುಲಾಮನು ಬಿಡುಗಡೆ ಹೊಂದಿದ್ದಾನೆ. ಅವನು ತನ್ನ ಬಿಡುಗಡೆಗೆ ತನ್ನ ಕಣ್ಣನ್ನೇ ಪ್ರತಿಯಾಗಿ ಕೊಟ್ಟಿದ್ದಾನೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ.
నిర్గమకాండము 21 : 27 (ERVTE)
ಯಜಮಾನನು ಗುಲಾಮನ ಬಾಯಿಗೆ ಹೊಡೆದದ್ದರಿಂದ, ಗುಲಾಮನು ತನ್ನ ಹಲ್ಲನ್ನು ಕಳೆದುಕೊಂಡರೆ, ಆ ಗುಲಾಮನ ಹಲ್ಲು ಅವನ ಬಿಡುಗಡೆಗೆ ಕೊಟ್ಟ ಹಣವಾಗಿದೆ. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವು ಅನ್ವಯಿಸುತ್ತದೆ.
నిర్గమకాండము 21 : 28 (ERVTE)
“ಒಬ್ಬನ ಎತ್ತು ಪುರುಷನನ್ನಾಗಲಿ ಸ್ತ್ರೀಯನ್ನಾಗಲಿ ಕೊಂದರೆ, ಆಗ ನೀವು ಕಲ್ಲುಗಳಿಂದ ಆ ಎತ್ತನ್ನು ಕೊಲ್ಲಬೇಕು. ನೀವು ಅದರ ಮಾಂಸವನ್ನು ತಿನ್ನಬಾರದು. ಆದರೆ ಎತ್ತಿನ ಮಾಲಿಕನು ತಪ್ಪಿಸಸ್ಥನಲ್ಲ.
నిర్గమకాండము 21 : 29 (ERVTE)
ಆದರೆ ಹಿಂದೊಮ್ಮೆ ಆ ಎತ್ತು ಜನರಿಗೆ ತಿವಿದಿದ್ದು, ಅದರ ಮಾಲಿಕನಿಗೆ ಇದರ ವಿಷಯದಲ್ಲಿ ಎಚ್ಚರಿಕೆ ನೀಡಿದ್ದರೆ ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ಯಾಕೆಂದರೆ ಅವನು ಆ ಎತ್ತನ್ನು ಕಟ್ಟಿಹಾಕಲಿಲ್ಲ ಅಥವಾ ಅದರ ಸ್ಥಳದಲ್ಲಿ ಬಂಧಿಸಿರಲಿಲ್ಲ. ಆದ್ದರಿಂದ ಎತ್ತನ್ನು ಕಟ್ಟಿಹಾಕದೆ ಇದ್ದುದರಿಂದ, ಅದು ಯಾರನ್ನಾದರೂ ಕೊಂದರೆ, ಆಗ ಆ ಮಾಲಿಕನು ತಪ್ಪಿತಸ್ಥನಾಗಿದ್ದಾನೆ. ನೀವು ಎತ್ತನ್ನು ಕಲ್ಲೆಸೆದು ಕೊಲ್ಲಬೇಕಲ್ಲದೆ ಅದರ ಮಾಲಿಕನನ್ನೂ ಕೊಲ್ಲಬೇಕು.
నిర్గమకాండము 21 : 30 (ERVTE)
ಆದರೆ ಸತ್ತವನ ಕುಟುಂಬದವರು ಅವನಿಂದ ಹಣವನ್ನು ಕೇಳಿದರೆ ಮತ್ತು ಅವನು ಹಣವನ್ನು ಕೊಟ್ಟರೆ, ಅವನು ತನ್ನ ಜೀವವನ್ನು ಬಿಡಿಸಿಕೊಂಡಂತಾಗುವುದು. ಆಗ ಆ ಎತ್ತಿನ ಮಾಲಿಕನನ್ನು ಕೊಲ್ಲಬಾರದು. ಆದರೆ ನ್ಯಾಯಾಧಿಪತಿಗಳು ತೀರ್ಮಾನಿಸುವಷ್ಟು ಹಣವನ್ನು ಅವನು ಕೊಡಬೇಕು.
నిర్గమకాండము 21 : 31 (ERVTE)
“ಎತ್ತು ಒಬ್ಬನ ಮಗನನ್ನಾಗಲಿ ಅಥಲಾ ಮಗಳನ್ನಾಗಲಿ ಕೊಂದರೆ ಇದೇ ನಿಯಮವನ್ನು ಪಾಲಿಸಬೇಕು.
నిర్గమకాండము 21 : 32 (ERVTE)
ಆದರೆ ಎತ್ತು ಗುಲಾಮನನ್ನು ಕೊಂದರೆ, ಆಗ ಆ ಪಶುವಿನ ಮಾಲಿಕನು ಗುಲಾಮನ ಯಜಮಾನನಿಗೆ ಮೂವತ್ತು ಬೆಳ್ಳಿಯ ನಾಣ್ಯಗಳನ್ನು ಕೊಡಬೇಕು ಮತ್ತು ಎತ್ತನ್ನು ಕಲ್ಲುಗಳಿಂದ ಹೊಡೆದು ಕೊಲ್ಲಬೇಕು. ಗುಲಾಮನ ಅಥವಾ ಗುಲಾಮಳ ವಿಷಯದಲ್ಲಿ ಇದೇ ನಿಯಮವನ್ನು ಪಾಲಿಸಬೇಕು.
నిర్గమకాండము 21 : 33 (ERVTE)
“ಒಬ್ಬ ಮನುಷ್ಯನು ಕುಣಿಯೊಂದನ್ನು ತೋಡಿ ಅದನ್ನು ಮುಚ್ಚಿಲ್ಲದಿದ್ದರೆ ಮತ್ತು ಆ ಕುಣಿಯಲ್ಲಿ ಬೇರೊಬ್ಬನ ಪಶುವು ಬಿದ್ದು ಸತ್ತುಹೋದರೆ,
నిర్గమకాండము 21 : 34 (ERVTE)
ಕುಣಿಯನ್ನು ತೋಡಿದವನು ಆ ಪಶುವಿಗೆ ಪ್ರತಿಯಾಗಿ ಈಡುಕೊಡಬೇಕು. ಅವನು ಈಡುಕೊಟ್ಟ ನಂತರ ಆ ಸತ್ತ ಪಶುವು ಅವನದಾಗುತ್ತದೆ.
నిర్గమకాండము 21 : 35 (ERVTE)
“ಒಬ್ಬನ ಎತ್ತು ಇನ್ನೊಬ್ಬನ ಎತ್ತನ್ನು ಹಾದು ಕೊಂದರೆ ಆಗ ಜೀವಂತವಾಗಿರುವ ಎತ್ತನ್ನು ಮಾರಬೇಕು. ಆ ಎತ್ತನ್ನು ಮಾರಿದ್ದರಿಂದ ಬಂದ ಹಣವನ್ನು ಸಮವಾಗಿ ಹಂಚಿಕೊಳ್ಳಬೇಕು. ಕೊಲ್ಲಲ್ಪಟ್ಟ ಎತ್ತನ್ನು ಸಮವಾಗಿ ಹಂಚಿಕೊಳ್ಳಬೇಕು.
నిర్గమకాండము 21 : 36 (ERVTE)
ಆದರೆ ಒಬ್ಬನ ಎತ್ತು ಮೊದಲೊಮ್ಮೆ ಇತರ ಪಶುಗಳಿಗೆ ಗಾಯಮಾಡಿದ್ದರೆ, ಅದರ ಮಾಲಿಕನು ಅದನ್ನು ಕಟ್ಟಿಹಾಕದೆ ಇದ್ದುದರ ನಿಮಿತ್ತ ತಪ್ಪಿತಸ್ಥನಾಗಿದ್ದಾನೆ. ಅವನು ಸತ್ತ ಎತ್ತಿಗೆ ಪ್ರತಿಯಾಗಿ ಸ್ವಂತ ಎತ್ತನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬೇಕು.
❮
❯