నిర్గమకాండము 23 : 1 (ERVTE)
నిర్గమకాండము 23 : 2 (ERVTE)
“ಬೇರೆಯವರ ವಿರುದ್ಧವಾಗಿ ಸುಳ್ಳು ಹೇಳಬೇಡಿರಿ. ನೀವು ನ್ಯಾಯಾಲಯದಲ್ಲಿ ದುಷ್ಟರ ಸಹಾಯಕ್ಕಾಗಿ ಸುಳ್ಳುಸಾಕ್ಷಿ ಹೇಳದಿರಿ.
నిర్గమకాండము 23 : 3 (ERVTE)
“ದುಷ್ಕೃತ್ಯವನ್ನು ಮಾಡುವವರು ಬಹಳ ಮಂದಿಯೆಂದು ಅವರ ಜೊತೆಯಲ್ಲಿ ಸೇರಿಕೊಳ್ಳಬೇಡಿ. ಬಹಳ ಮಂದಿಯ ಮಾತಿಗೆ ಒಪ್ಪಿ ನ್ಯಾಯವನ್ನು ಕೆಡಿಸುವ ಸಾಕ್ಷಿಯನ್ನು ಹೇಳದಿರಿ.
నిర్గమకాండము 23 : 4 (ERVTE)
“ಇದಲ್ಲದೆ ಬಡವನೆಂದು ಕರುಣಿಸಿ ಪಕ್ಷಪಾತದ ತೀರ್ಪನ್ನು ನೀಡಬಾರದು.
నిర్గమకాండము 23 : 5 (ERVTE)
“ನೀವು ಕಳೆದುಹೋದ ಎತ್ತನ್ನಾಗಲಿ ಕತ್ತೆಯನ್ನಾಗಲಿ ನೋಡಿದರೆ, ಆಗ ನೀವು ಅದನ್ನು ಅದರ ಮಾಲಿಕನಿಗೆ ಹಿಂತಿರುಗಿಸಬೇಕು. ಒಂದುವೇಳೆ ಆ ಮಾಲಿಕನು ನಿಮ್ಮ ವೈರಿಯಾಗಿದ್ದರೂ ನೀವು ಈ ಕಾರ್ಯವನ್ನು ಮಾಡಬೇಕು.
నిర్గమకాండము 23 : 6 (ERVTE)
“ಬಹು ತೂಕದ ಹೊರೆಯಿಂದ ನಡೆಯಲಾಗದೆ ಬಿದ್ದಿರುವ ಕತ್ತೆಯನ್ನು ನೀವು ನೋಡಿದರೆ ಅದನ್ನು ಎಬ್ಬಿಸಲು ನೀವು ನಿಂತು ಸಹಾಯ ಮಾಡಬೇಕು. ಆ ಕತ್ತೆಯು ನಿಮ್ಮ ವೈರಿಯದಾಗಿದ್ದರೂ ನೀವು ಅದಕ್ಕೆ ಸಹಾಯ ಮಾಡಬೇಕು.
నిర్గమకాండము 23 : 7 (ERVTE)
“ಬಡವರು ವ್ಯಾಜ್ಯವಾಡುವಾಗ ನೀವು ಅನ್ಯಾಯವಾದ ತೀರ್ಪನ್ನು ನೀಡಕೂಡದು.
నిర్గమకాండము 23 : 8 (ERVTE)
“ನೀವು ಮೋಸದ ಕಾರ್ಯದಿಂದ ದೂರವಾಗಿರಬೇಕು. ನಿರಪರಾಧಿಯೂ ನೀತಿವಂತನೂ ಆಗಿರುವ ವ್ಯಕ್ತಿಗೆ ಮರಣದಂಡನೆ ವಿಧಿಸಲೇಬಾರದು. ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ದಂಡನೆಯನ್ನು ವಿಧಿಸದೆ ಬಿಡುವುದಿಲ್ಲ.
నిర్గమకాండము 23 : 9 (ERVTE)
“ಲಂಚವನ್ನು ತೆಗೆದುಕೊಳ್ಳಕೂಡದು; ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿ ಮಾಡುತ್ತದೆ; ನಿರಪರಾಧಿಗೆ ಅನ್ಯಾಯವನ್ನು ಬರಮಾಡುತ್ತದೆ.
నిర్గమకాండము 23 : 10 (ERVTE)
“ನೀವು ಪರದೇಶಸ್ಥರಿಗೆ ತೊಂದರೆ ಕೊಡಬಾರದು. ನೀವು ಈಜಿಪ್ಟಿನಲ್ಲಿ ಪರದೇಶಸ್ಥರಾಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. {#1ವಿಶೇಷ ವಿಶ್ರಾಂತಿ ದಿನಗಳು } “ಆರು ವರ್ಷ ನಿಮ್ಮ ಭೂಮಿಯಲ್ಲಿ ಬೀಜಬಿತ್ತಿ ಬೆಳೆಯನ್ನು ಬೆಳೆಯಿರಿ.
నిర్గమకాండము 23 : 11 (ERVTE)
ಆದರೆ ಏಳನೆಯ ವರ್ಷದಲ್ಲಿ ನಿಮ್ಮ ಭೂಮಿಯನ್ನು ಬೀಳುಬಿಡಿರಿ; ಬೀಜಬಿತ್ತಬೇಡಿರಿ. ಏಳನೆಯ ವರ್ಷ ನೀವು ಏನನ್ನೂ ಬೆಳೆಸಬಾರದು. ನಿಮ್ಮ ಭೂಮಿಯಲ್ಲಿ ಏನಾದರೂ ಬೆಳೆದರೆ ಅದನ್ನು ಬಡವರು ತಿನ್ನಲಿ. ಉಳಿದದ್ದನ್ನು ಪ್ರಾಣಿಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ವಿಷಯದಲ್ಲಿಯೂ ಆಲಿವ್ ಮರಗಳ ತೋಪಿನ ವಿಷಯದಲ್ಲಿಯೂ ಇದೇ ನಿಯಮವನ್ನು ಪಾಲಿಸಬೇಕು.
నిర్గమకాండము 23 : 12 (ERVTE)
నిర్గమకాండము 23 : 13 (ERVTE)
“ಆರು ದಿನಗಳಲ್ಲಿ ನಿಮ್ಮ ಕೆಲಸ ಮಾಡಿರಿ. ಏಳನೆಯ ದಿನದಲ್ಲಿ ವಿಶ್ರಮಿಸಿಕೊಳ್ಳಿರಿ. ಏಳನೆಯ ದಿನದಲ್ಲಿ ನಿಮ್ಮ ಗುಲಾಮರೂ ಎತ್ತುಗಳೂ ಕತ್ತೆಗಳೂ ವಿದೇಶಿಯರೂ ವಿಶ್ರಮಿಸಿಕೊಳ್ಳಲಿ.
నిర్గమకాండము 23 : 14 (ERVTE)
“ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು. “ಪ್ರತಿವರ್ಷ ನೀವು ಮೂರುಜಾತ್ರೆಗಳನ್ನು ಮಾಡಬೇಕು.
నిర్గమకాండము 23 : 15 (ERVTE)
ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ ಅವುಗಳಲ್ಲಿ ಒಂದಾಗಿದೆ. ನಾನು ನಿಮಗೆ ಆಜ್ಞಾಪಿಸಿದಂತೆ ಈ ಜಾತ್ರೆಯಲ್ಲಿ ಏಳು ದಿನ ಹುಳಿಯಿಲ್ಲದ ರೊಟ್ಟಿಯನ್ನು ನೀವು ತಿನ್ನಬೇಕು. ಈ ಹಬ್ಬವು ಏಳು ದಿನಗಳವರೆಗೆ ನಡೆಯುವುದು. ನೀವು ಇದನ್ನು ಅಬೀಬ್ ತಿಂಗಳಲ್ಲಿ ಮಾಡಬೇಕು. ಯಾಕೆಂದರೆ ಈ ತಿಂಗಳಲ್ಲಿಯೇ ನೀವು ಈಜಿಪ್ಟಿನಿಂದ ಹೊರಗೆ ಬಂದಿರಿ! ಈ ಹಬ್ಬದಲ್ಲಿ ಪ್ರತಿಯೊಬ್ಬನೂ ನನಗೆ ಕಾಣಿಕೆಯನ್ನು ಅರ್ಪಿಸಬೇಕು.
నిర్గమకాండము 23 : 16 (ERVTE)
నిర్గమకాండము 23 : 17 (ERVTE)
“ಇದಲ್ಲದೆ ನೀವು ಸುಗ್ಗಿಯ ಜಾತ್ರೆಯನ್ನು ಆಚರಿಸಬೇಕು. ನೀವು ಬಿತ್ತಿದ ಹೊಲಗಳಲ್ಲಿ ಬೆಳೆಗಳನ್ನು ಕೊಯ್ಯುವ ಕಾಲದಲ್ಲಿ ಈ ಜಾತ್ರೆಯು ಆರಂಭವಾಗುವುದು. “ಇದಲ್ಲದೆ ಫಲಸಂಗ್ರಹ ಜಾತ್ರೆಯನ್ನೂ ನೀವು ಆಚರಿಸಬೇಕು. ವರ್ಷಾಂತ್ಯದಲ್ಲಿ ನೀವು ಹೊಲತೋಟಗಳ ಬೆಳೆಗಳನ್ನೆಲ್ಲಾ ಒಟ್ಟುಗೂಡಿಸುವ ಕಾಲದಲ್ಲಿ ಇದು ಆರಂಭವಾಗುವುದು.
నిర్గమకాండము 23 : 18 (ERVTE)
“ಹೀಗೆ ಪ್ರತಿವರ್ಷ ಮೂರು ಸಲ ಗಂಡಸರೆಲ್ಲರೂ ಒಂದು ವಿಶೇಷ ಸ್ಥಳಕ್ಕೆ ದೇವರಾದ ಯೆಹೋವನ ಸನ್ನಿಧಿಗೆ ಬರಬೇಕು.
నిర్గమకాండము 23 : 19 (ERVTE)
“ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು.
నిర్గమకాండము 23 : 20 (ERVTE)
“ಸುಗ್ಗಿ ಕಾಲದಲ್ಲಿ ನಿಮ್ಮ ಬೆಳೆಯ ಫಲವನ್ನು ನಿಮ್ಮ ದೇವರಾದ ಯೆಹೋವನ ಆಲಯಕ್ಕೆ[* ಆಲಯ ಪವಿತ್ರಗುಡಾರ ದೇವರನ್ನು ಭೇಟಿಯಾಗಲು ಜನರು ಇಲ್ಲಿಗೆ ಹೋಗಬೇಕಾಗಿತ್ತು. ವಿಮೋಚನಕಾಂಡ 25:8, 9ನ್ನು ನೋಡಿರಿ. ] ತರಬೇಕು. “ಆಡುಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.” “ಇಗೋ, ನಿಮ್ಮ ಮುಂದೆ ನಾನು ಒಬ್ಬ ದೂತನನ್ನು[† ದೂತ ದೇವದೂತ. ] ಕಳುಹಿಸುತ್ತಿದ್ದೇನೆ. ನಾನು ನಿಮಗಾಗಿ ಸಿದ್ಧಮಾಡಿದ ಸ್ಥಳಕ್ಕೆ ಈ ದೂತನು ನಿಮ್ಮನ್ನು ಮುನ್ನಡೆಸುವನು; ದಾರಿಯುದ್ದಕ್ಕೂ ಸಂರಕ್ಷಿಸುವನು.
నిర్గమకాండము 23 : 21 (ERVTE)
ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.[‡ ಶಕ್ತಿ ಇರುತ್ತದೆ ಹೀಬ್ರೂವಿನಲ್ಲಿ: ನನ್ನ ಹೆಸರು ಆತನಲ್ಲಿರುವುದರಿಂದ. ]
నిర్గమకాండము 23 : 22 (ERVTE)
ಆತನು ಹೇಳುವ ಪ್ರತಿಯೊಂದಕ್ಕೆ ನೀವು ವಿಧೇಯರಾಗಬೇಕು. ನನ್ನ ಆಜ್ಞೆಗಳನ್ನೆಲ್ಲಾ ನೀವು ಅನುಸರಿಸಬೇಕು. ಆಗ ನಾನು ನಿಮ್ಮ ಸಂಗಡ ಇರುವೆನು. ನಾನು ನಿಮ್ಮ ಶತ್ರುಗಳಿಗೆ ಶತ್ರುವಾಗಿರುವೆನು; ನಿಮಗೆ ಕೇಡುಮಾಡುವವರಿಗೆಲ್ಲಾ ಕೇಡುಮಾಡುವೆನು.
నిర్గమకాండము 23 : 23 (ERVTE)
నిర్గమకాండము 23 : 24 (ERVTE)
“ನನ್ನ ದೂತನು ನಿಮ್ಮ ಮುಂದೆ ನಡೆದು ಅಮೋರಿಯರು, ಹಿತ್ತಿಯರು, ಪೆರಿಜೀಯರು, ಕಾನಾನ್ಯರು, ಹಿವ್ವಿಯರು ಮತ್ತು ಯೆಬೂಸಿಯರು ಇರುವ ದೇಶಕ್ಕೆ ನಿಮ್ಮನ್ನು ನಡಿಸುವನು. ನಾನು ಅವರನ್ನೆಲ್ಲಾ ಸೋಲಿಸುವೆನು. “ಅವರ ದೇವರುಗಳನ್ನು ಪೂಜಿಸಬೇಡಿರಿ. ಆ ದೇವರುಗಳಿಗೆ ನಮಸ್ಕರಿಸಬೇಡಿರಿ. ಅವರ ಆಚರಣೆಗಳನ್ನು ಅನುಸರಿಸಬೇಡಿರಿ. ನೀವು ಅವರ ವಿಗ್ರಹಗಳನ್ನು ನಾಶಮಾಡಬೇಕು. ಅವರ ಸ್ಮಾರಕ ಸ್ತಂಭಗಳನ್ನು ಕೆಡವಿಹಾಕಬೇಕು.
నిర్గమకాండము 23 : 25 (ERVTE)
ನೀವು ನಿಮ್ಮ ದೇವರಾದ ಯೆಹೋವನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಾನು ನಿಮ್ಮೊಳಗಿಂದ ಎಲ್ಲಾ ವ್ಯಾಧಿಯನ್ನು ತೆಗೆದುಬಿಡುವೆನು.
నిర్గమకాండము 23 : 26 (ERVTE)
ನಿಮ್ಮ ಸ್ತ್ರೀಯರು ಮಕ್ಕಳನ್ನು ಪಡೆಯಲು ಶಕ್ತರಾಗುವರು. ನಿಮ್ಮ ಮಕ್ಕಳು ಹುಟ್ಟುವಾಗಲೇ ಸಾಯುವುದಿಲ್ಲ; ನಿಮಗೆ ದೀರ್ಘಾಯುಷ್ಯವನ್ನು ಅನುಗ್ರಹಿಸುವೆನು.
నిర్గమకాండము 23 : 27 (ERVTE)
“ನೀವು ನಿಮ್ಮ ವೈರಿಗಳ ವಿರುದ್ಧ ಯುದ್ಧ ಮಾಡುವಾಗ, ನಿಮ್ಮ ವೈರಿಗಳನ್ನೆಲ್ಲಾ ಸೋಲಿಸುವಂತೆ ನಾನು ನಿಮಗೆ ನನ್ನ ಮಹಾಶಕ್ತಿಯಿಂದ ಸಹಾಯ ಮಾಡುವೆನು. ನಿಮ್ಮ ವೈರಿಗಳು ಯುದ್ಧದಲ್ಲಿ ಭಯದಿಂದಲೂ ಗಲಿಬಿಲಿಯಿಂದಲೂ ಓಡಿಹೋಗುವರು.
నిర్గమకాండము 23 : 28 (ERVTE)
ನಾನು ನಿಮ್ಮ ಮುಂದೆ ಹೆದ್ದುಂಬಿಯನ್ನು[§ ಹೆದ್ದುಂಬಿ ಕಣಜದ ಹುಳ. ದುಂಬಿಯಂತೆ ಕೊಂಡಿಯಿರುವ ಹುಳ. ಇದು ನಿಜವಾದ ಹೆದ್ದುಂಬಿಯಿರಬಹುದು ಅಥವಾ ಇದು ದೇವರ ದೂತನು ಅಥವಾ ಅತನ ಮಹಾಶಕ್ತಿಯೆಂಬ ಅರ್ಥ ಕೊಡಬಹುದು. ] ಕಳುಹಿಸುವೆನು. ನಿಮ್ಮ ವೈರಿಗಳಾದ ಹಿವ್ವಿಯರನ್ನು ಕಾನಾನ್ಯರನ್ನು ಮತ್ತು ಹಿತ್ತಿಯರನ್ನು ಅದು ಬಲವಂತದಿಂದ ಅಟ್ಟಿಬಿಡುವುದು.
నిర్గమకాండము 23 : 29 (ERVTE)
ಆದರೆ ನಾನು ಒಂದೇ ವರ್ಷದಲ್ಲಿ ಅವರೆಲ್ಲರನ್ನೂ ಅಲ್ಲಿಂದ ಹೊರಡಿಸುವುದಿಲ್ಲ. ಯಾಕೆಂದರೆ ದೇಶದಲ್ಲಿ ಜನರು ಕಡಿಮೆಯಾಗುವುದರಿಂದ ಕ್ರೂರ ಪ್ರಾಣಿಗಳೆಲ್ಲಾ ಹೆಚ್ಚಾಗಿ ನಿಮಗೆ ಬಹಳ ತೊಂದರೆಯಾಗಬಹುದು.
నిర్గమకాండము 23 : 30 (ERVTE)
ಆದ್ದರಿಂದ ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರದೂಡುವೆನು.
నిర్గమకాండము 23 : 31 (ERVTE)
నిర్గమకాండము 23 : 32 (ERVTE)
“ಕೆಂಪುಸಮುದ್ರದಿಂದ ಯೂಫ್ರೇಟೀಸ್ ನದಿಯವರೆಗೆ ಇರುವ ಪ್ರದೇಶವನ್ನೆಲ್ಲಾ ಕೊಡುವೆನು. ಪಶ್ಚಿಮ ಗಡಿಯು ಫಿಲಿಷ್ಟಿಯ ಸಮುದ್ರವಾಗಿರುವುದು (ಮೆಡಿಟರೇನಿಯನ್ ಸಮುದ್ರ) ಮತ್ತು ಪೂರ್ವ ಗಡಿಯು ಅರೇಬಿಯಾ ಮರುಭೂಮಿಯಾಗಿರುವುದು. ನೀವು ಅಲ್ಲಿ ವಾಸಿಸುವ ಜನರನ್ನು ಸೋಲಿಸುವಂತೆ ನಾನು ಮಾಡುವೆನು; ಅವರೆಲ್ಲರನ್ನು ನೀವು ಬಲವಂತವಾಗಿ ಹೊರಗಟ್ಟುವಿರಿ. “ನೀವು ಆ ಜನರೊಡನೆಯಾಗಲಿ ಅವರ ದೇವರುಗಳೊಡನೆಯಾಗಲಿ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.
నిర్గమకాండము 23 : 33 (ERVTE)
ನಿಮ್ಮ ದೇಶದಲ್ಲಿ ವಾಸಿಸಲು ಅವರನ್ನು ಬಿಡಬೇಡಿರಿ. ಇಲ್ಲವಾದರೆ ಅವರು ನಿಮ್ಮಲ್ಲಿ ದ್ರೋಹ ಬುದ್ಧಿಯನ್ನು ಹುಟ್ಟಿಸಬಹುದು. ನೀವು ಅವರ ದೇವರುಗಳನ್ನು ಪೂಜಿಸಿದರೆ ಆ ಪೂಜೆಯೂ ನಿಮಗೆ ಉರುಲಾಗುವುದು.”
❮
❯