నిర్గమకాండము 25 : 1 (ERVTE)
{#1ಪವಿತ್ರ ವಸ್ತುಗಳಿಗಾಗಿ ಕಾಣಿಕೆಗಳು } ಯೆಹೋವನು ಮೋಶೆಗೆ,
నిర్గమకాండము 25 : 2 (ERVTE)
“ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.
నిర్గమకాండము 25 : 3 (ERVTE)
ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ: ಚಿನ್ನ, ಬೆಳ್ಳಿ, ತಾಮ್ರ,
నిర్గమకాండము 25 : 4 (ERVTE)
ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ,
నిర్గమకాండము 25 : 5 (ERVTE)
ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು,[* ಉತ್ತಮ ತೊಗಲು ಕಡಲು ಹಂದಿಯ ಅಥವಾ ಕಡಲು ದನದ ತೊಗಲು. ] ಜಾಲೀಮರ,
నిర్గమకాండము 25 : 6 (ERVTE)
ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,
నిర్గమకాండము 25 : 7 (ERVTE)
ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕ ರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.
నిర్గమకాండము 25 : 8 (ERVTE)
{#1ಪವಿತ್ರ ಗುಡಾರ } ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.
నిర్గమకాండము 25 : 9 (ERVTE)
ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.
నిర్గమకాండము 25 : 10 (ERVTE)
{#1ಒಡಂಬಡಿಕೆಯ ಪೆಟ್ಟಿಗೆ } “ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
నిర్గమకాండము 25 : 11 (ERVTE)
ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
నిర్గమకాండము 25 : 12 (ERVTE)
ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
నిర్గమకాండము 25 : 13 (ERVTE)
ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
నిర్గమకాండము 25 : 14 (ERVTE)
ಕಂಬಗಳನ್ನು ಪೆಟ್ಟಿಗೆ ಕೊನೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಬೇಕು.
నిర్గమకాండము 25 : 15 (ERVTE)
ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು.
నిర్గమకాండము 25 : 16 (ERVTE)
“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು.
నిర్గమకాండము 25 : 17 (ERVTE)
ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು.
నిర్గమకాండము 25 : 18 (ERVTE)
ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು.
నిర్గమకాండము 25 : 19 (ERVTE)
ಕೃಪಾಸನದ ಒಂದು ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಕೊನೆಯಲ್ಲಿ ಇನ್ನೊಂದು ಕೆರೂಬಿಯನ್ನೂ ಜೋಡಿಸಬೇಕು.
నిర్గమకాండము 25 : 20 (ERVTE)
ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.
నిర్గమకాండము 25 : 21 (ERVTE)
“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು.
నిర్గమకాండము 25 : 22 (ERVTE)
ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.
నిర్గమకాండము 25 : 23 (ERVTE)
{#1ಮೇಜು } “ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
నిర్గమకాండము 25 : 24 (ERVTE)
ಶುದ್ಧಬಂಗಾರದ ತಗಡುಗಳನ್ನು ಮೇಜಿಗೆ ಹೊದಿಸಿ ಅದರ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
నిర్గమకాండము 25 : 25 (ERVTE)
ಬಳಿಕ ಮೇಜಿನ ಸುತ್ತಲೂ ಮೂರು ಇಂಚು[† ಮೂರು ಇಂಚು ಅಕ್ಷರಶಃ, “ಒಂದು ತೋಷಹ.” ] ಅಗಲದ ಚೌಕಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.
నిర్గమకాండము 25 : 26 (ERVTE)
ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು.
నిర్గమకాండము 25 : 27 (ERVTE)
ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
నిర్గమకాండము 25 : 28 (ERVTE)
ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು.
నిర్గమకాండము 25 : 29 (ERVTE)
ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.
నిర్గమకాండము 25 : 30 (ERVTE)
ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.
నిర్గమకాండము 25 : 31 (ERVTE)
{#1ದೀಪಸ್ತಂಭ }
నిర్గమకాండము 25 : 32 (ERVTE)
“ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು. “ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.
నిర్గమకాండము 25 : 33 (ERVTE)
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
నిర్గమకాండము 25 : 34 (ERVTE)
ದೀಪದ ಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
నిర్గమకాండము 25 : 35 (ERVTE)
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು.
నిర్గమకాండము 25 : 36 (ERVTE)
ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು.
నిర్గమకాండము 25 : 37 (ERVTE)
ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.
నిర్గమకాండము 25 : 38 (ERVTE)
ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು.
నిర్గమకాండము 25 : 39 (ERVTE)
ದೀಪಸ್ತಂಭವನ್ನು ಮತ್ತು ಅದರ ಎಲ್ಲಾ ಉಪಕರಣಗಳನ್ನು ಎಪ್ಪತ್ತೈದು ಪೌಂಡು[‡ ಎಪ್ಪತ್ತೈದು ಪೌಂಡು ಅಕ್ಷರಶಃ, “ಒಂದು ಪಿಕಾರ್, ಅಥವಾ ಮೂರು ಸಾವಿರ ತೊಲೆ.” ]
నిర్గమకాండము 25 : 40 (ERVTE)
ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40