నిర్గమకాండము 26 : 1 (ERVTE)
{#1ಪವಿತ್ರ ಗುಡಾರ } ಯೆಹೋವನು ಮೋಶೆಗೆ, “ಪವಿತ್ರ ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳನ್ನು ನಾರುಬಟ್ಟೆ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರದಿಂದ ಮಾಡಿಸಬೇಕು. ನುರಿತ ಕೆಲಸಗಾರನು ಪರದೆಗಳಲ್ಲಿ ರೆಕ್ಕೆಗಳಿರುವ ಕೆರೂಬಿಗಳ ಚಿತ್ರವನ್ನು ಕಸೂತಿ ಹಾಕಬೇಕು.
నిర్గమకాండము 26 : 2 (ERVTE)
ಪ್ರತಿಯೊಂದು ಪರದೆಯ ಅಳತೆಯು ಒಂದೇ ಆಗಿರಬೇಕು. ಪ್ರತಿ ಪರದೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.
నిర్గమకాండము 26 : 3 (ERVTE)
ಪರದೆಗಳನ್ನು ಒಟ್ಟಾಗಿ ಜೋಡಿಸಿ ಎರಡು ಭಾಗಗಳನ್ನಾಗಿ ಮಾಡಬೇಕು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಬೇಕು.
నిర్గమకాండము 26 : 4 (ERVTE)
ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ನೀಲಿ ಬಟ್ಟೆಯಿಂದ ಮಾಡಬೇಕು; ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿಯೂ ಅದೇ ರೀತಿ ಮಾಡಬೇಕು.
నిర్గమకాండము 26 : 5 (ERVTE)
ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳು ಇರಬೇಕು. ಇನ್ನೊಂದು ಭಾಗದ ಕೊನೆಯ ಪರದೆಯ ಅಂಚಿನಲ್ಲೂ ಐವತ್ತು ಕುಣಿಕೆಗಳು ಇರಬೇಕು.
నిర్గమకాండము 26 : 6 (ERVTE)
ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.
నిర్గమకాండము 26 : 7 (ERVTE)
“ಪವಿತ್ರಗುಡಾರದ ಮೇಲೆ ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿಸಬೇಕು. ಈ ಗುಡಾರವನ್ನು ಹನ್ನೊಂದು ಪರದೆಗಳಿಂದ ಮಾಡಿಸಬೇಕು. ಈ ಪರದೆಗಳು ಆಡುಕೂದಲಿನಿಂದ ಮಾಡಲ್ಪಟ್ಟಿರಬೇಕು.
నిర్గమకాండము 26 : 8 (ERVTE)
ಈ ಎಲ್ಲಾ ಪರದೆಗಳ ಅಳತೆಯು ಒಂದೇ ಆಗಿರಬೇಕು. ಅವು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು.
నిర్గమకాండము 26 : 9 (ERVTE)
ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡು. ಬಳಿಕ ಉಳಿದ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡು. ಆರನೇ ಪರದೆಯ ಅರ್ಧದಷ್ಟನ್ನು ಡೇರೆಯ ಮುಂದುಗಡೆಯಲ್ಲಿ ಮಡಚಬೇಕು.
నిర్గమకాండము 26 : 10 (ERVTE)
ಒಂದು ಭಾಗದ ಕೊನೇ ಪರದೆಯ ಕೆಳಗಿನ ಭಾಗದ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಬೇಕು. ಇನ್ನೊಂದು ಭಾಗದ ಕೊನೇ ಪರದೆಯ ಕೆಳಭಾಗದಲ್ಲಿಯೂ ಅದೇ ರೀತಿಯಾಗಿ ಮಾಡಬೇಕು.
నిర్గమకాండము 26 : 11 (ERVTE)
ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಕೊಂಡಿಗಳನ್ನು ಮಾಡಬೇಕು. ಹೀಗೆ ಒಂದೇ ಗುಡಾರವಾಗುವುದು.
నిర్గమకాండము 26 : 12 (ERVTE)
ಈ ಗುಡಾರದ ಪರದೆಗಳಲ್ಲಿ ಉಳಿದ ಹೆಚ್ಚಿನ ಭಾಗಗಳನ್ನು ಅಂದರೆ ಉಳಿದ ಅರ್ಧಭಾಗವನ್ನು ಪವಿತ್ರಗುಡಾರದ ಹಿಂಬದಿಯಲ್ಲಿ ತೂಗುಹಾಕಬೇಕು.
నిర్గమకాండము 26 : 13 (ERVTE)
ಪಾರ್ಶ್ವಗಳಲ್ಲಿ ಈ ಗುಡಾರದ ಪರದೆಗಳು, ಪವಿತ್ರಗುಡಾರದ ಕೆಳಗಣ ಅಂಚುಗಳಿಂದ ಕೆಳಗೆ ಒಂದು ಮೊಳದಷ್ಟು ತೂಗಾಡುವವು. ಆದ್ದರಿಂದ ಈ ಡೇರೆಯು ಸಂಪೂರ್ಣವಾಗಿ ಪವಿತ್ರಗುಡಾರವನ್ನು ಮುಚ್ಚಿಕೊಳ್ಳುವುದು.
నిర్గమకాండము 26 : 14 (ERVTE)
ಹೊರಗಿನ ಗುಡಾರಕ್ಕೆ ಸರಿಹೊಂದುವ ಎರಡು ಹೊದಿಕೆಗಳನ್ನು ಮಾಡಿಸಬೇಕು. ಒಂದು ಹೊದಿಕೆಯನ್ನು ಕೆಂಪುಬಣ್ಣದ ಕುರಿದೊಗಲಿನ ಚರ್ಮದಿಂದ ಮಾಡಬೇಕು. ಇನ್ನೊಂದು ಹೊದಿಕೆಯನ್ನು ಉತ್ತಮ ತೊಗಲಿನಿಂದ ಮಾಡಿಸಬೇಕು.
నిర్గమకాండము 26 : 15 (ERVTE)
“ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
నిర్గమకాండము 26 : 16 (ERVTE)
ಚೌಕಟ್ಟುಗಳು ಹತ್ತುಮೊಳ ಎತ್ತರವಾಗಿಯೂ ಒಂದೂವರೆ ಮೊಳ ಅಗಲವಾಗಿಯೂ ಇರಬೇಕು.
నిర్గమకాండము 26 : 17 (ERVTE)
ಪ್ರತಿ ಚೌಕಟ್ಟನ್ನು ಮಾಡುವುದಕ್ಕೆ ಎರಡು ಕಡೆಯ ಕೋಲುಗಳನ್ನು ಅಡ್ಡಪಟ್ಟಿಗಳೊಂದಿಗೆ ಒಟ್ಟಾಗಿ ಜೋಡಿಸಬೇಕು. ಪವಿತ್ರಗುಡಾರದ ಎಲ್ಲಾ ಚೌಕಟ್ಟುಗಳು ಒಂದೇ ರೀತಿಯಾಗಿರಬೇಕು.
నిర్గమకాండము 26 : 18 (ERVTE)
ಪವಿತ್ರಗುಡಾರದ ದಕ್ಷಿಣ ಭಾಗಕ್ಕೆ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು.
నిర్గమకాండము 26 : 19 (ERVTE)
ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸು. ಪ್ರತಿಯೊಂದು ಕಡೆಯ ಕಂಬಕ್ಕೆ ಒಂದು ಗದ್ದಿಗೇಕಲ್ಲಿನಂತೆ ಪ್ರತಿಯೊಂದು ಚೌಕಟ್ಟಿಗೆ ಎರಡು ಬೆಳ್ಳಿಯ ಗದ್ದಿಗೇಕಲ್ಲುಗಳು ಇರಬೇಕು.
నిర్గమకాండము 26 : 20 (ERVTE)
ಪವಿತ್ರಗುಡಾರದ ಇನ್ನೊಂದು ಕಡೆಗೆ ಅಂದರೆ, ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳನ್ನು ಮಾಡಿಸಬೇಕು.
నిర్గమకాండము 26 : 21 (ERVTE)
ಪ್ರತಿಯೊಂದು ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳು ಇರುವಂತೆ ಪ್ರತಿಯೊಂದು ಕಡೆಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು.
నిర్గమకాండము 26 : 22 (ERVTE)
ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ದಿಕ್ಕಿನಲ್ಲಿಯೂ ಆರು ಚೌಕಟ್ಟುಗಳನ್ನು ಮಾಡಿಸಬೇಕು.
నిర్గమకాండము 26 : 23 (ERVTE)
ಪವಿತ್ರಗುಡಾರದ ಹಿಂಭಾಗದಲ್ಲಿರುವ ಮೂಲೆಗಳಿಗೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.
నిర్గమకాండము 26 : 24 (ERVTE)
ಮೂಲೆಗಳಲ್ಲಿರುವ ಚೌಕಟ್ಟುಗಳು ಕೆಳಗಿನ ಭಾಗದಲ್ಲಿ ಒಟ್ಟಾಗಿ ಜೋಡಿಸಿರಬೇಕು. ತುದಿಯಲ್ಲಿ ಒಂದು ಬಳೆಯು ಚೌಕಟ್ಟುಗಳನ್ನು ಒಟ್ಟಾಗಿ ಹಿಡಿದುಕೊಂಡಿರುವುದು. ಎರಡು ಮೂಲೆಗಳಿಗೂ ಅದೇ ರೀತಿಯಾಗಿ ಮಾಡಿಸಬೇಕು.
నిర్గమకాండము 26 : 25 (ERVTE)
ಗುಡಾರದ ಪಶ್ಚಿಮ ದಿಕ್ಕಿನ ಕೊನೆಯಲ್ಲಿ ಒಟ್ಟು ಎಂಟು ಚೌಕಟ್ಟುಗಳಿರುವವು. ಪ್ರತಿ ಚೌಕಟ್ಟಿನ ಕೆಳಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿರುವವು.
నిర్గమకాండము 26 : 26 (ERVTE)
“ಜಾಲೀಮರದಿಂದ ಪವಿತ್ರಗುಡಾರದ ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಿಸು. ಪವಿತ್ರಗುಡಾರದ ಒಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು.
నిర్గమకాండము 26 : 27 (ERVTE)
ಪವಿತ್ರಗುಡಾರದ ಇನ್ನೊಂದು ಭಾಗದಲ್ಲಿ ಐದು ಅಗುಳಿಗಳು ಇರಬೇಕು. ಪವಿತ್ರಗುಡಾರದ ಹಿಂಭಾಗದಲ್ಲಿರುವ, ಅಂದರೆ ಪಶ್ಚಿಮ ಭಾಗದಲ್ಲಿರುವ ಚೌಕಟ್ಟುಗಳಿಗೆ ಐದು ಅಗುಳಿಗಳು ಇರಬೇಕು.
నిర్గమకాండము 26 : 28 (ERVTE)
ಮಧ್ಯದಲ್ಲಿರುವ ಅಗುಳಿಯು ಚೌಕಟ್ಟುಗಳ ಮೂಲಕ ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗಬೇಕು.
నిర్గమకాండము 26 : 29 (ERVTE)
“ಚೌಕಟ್ಟುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು; ಅಗುಳಿಗಳನ್ನು ಹಿಡಿದುಕೊಂಡಿರಲು ಚೌಕಟ್ಟುಗಳಿಗೆ ಬಳೆಗಳನ್ನು ಮಾಡಿಸಬೇಕು. ಮಾತ್ರವಲ್ಲದೆ ಅಗುಳಿಗಳನ್ನು ಚಿನ್ನದಿಂದ ಹೊದಿಸಬೇಕು.
నిర్గమకాండము 26 : 30 (ERVTE)
ನಾನು ನಿನಗೆ ಬೆಟ್ಟದಲ್ಲಿ ತೋರಿಸಿದ ಪ್ರಕಾರವೇ ಪವಿತ್ರಗುಡಾರವನ್ನು ಮಾಡಿಸಬೇಕು.
నిర్గమకాండము 26 : 31 (ERVTE)
{#1ಪವಿತ್ರಗುಡಾರದ ಒಳಭಾಗ } “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು.
నిర్గమకాండము 26 : 32 (ERVTE)
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು.
నిర్గమకాండము 26 : 33 (ERVTE)
ಚಿನ್ನದ ಬಳೆಗಳ ಕೆಳಗೆ ಪರದೆಯನ್ನು ಹಾಕಿಸಬೇಕು; ಪರದೆಯ ಹಿಂಭಾಗದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡಬೇಕು. ಈ ಪರದೆಯು ಪವಿತ್ರ ಸ್ಥಳವನ್ನು ಮಹಾಪವಿತ್ರ ಸ್ಥಳದಿಂದ ಪ್ರತ್ಯೇಕಿಸುವುದು.
నిర్గమకాండము 26 : 34 (ERVTE)
ಮಹಾಪವಿತ್ರ ಸ್ಥಾನದಲ್ಲಿರುವ ಒಡಂಬಡಿಕೆಯ ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಡಬೇಕು.
నిర్గమకాండము 26 : 35 (ERVTE)
నిర్గమకాండము 26 : 36 (ERVTE)
“ಪರದೆಯ ಇನ್ನೊಂದು ಭಾಗದಲ್ಲಿ ನೀನು ಮಾಡಿಸಿದ ವಿಶೇಷ ಮೇಜನ್ನು ಇಡಬೇಕು. ಮೇಜು ಪರಿಶುದ್ಧ ಗುಡಾರದ ಉತ್ತರಭಾಗದಲ್ಲಿರಬೇಕು. ಬಳಿಕ ದೀಪಸ್ತಂಭವನ್ನು ದಕ್ಷಿಣಭಾಗದಲ್ಲಿಡಬೇಕು. ಇದು ಮೇಜಿನ ಎದುರಿಗೆ ಇರಬೇಕು. {#1ಪವಿತ್ರಗುಡಾರದ ಬಾಗಿಲು } “ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು.
నిర్గమకాండము 26 : 37 (ERVTE)
ಈ ಪರದೆಗೆ ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು ಮತ್ತು ಈ ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು” ಎಂದು ಹೇಳಿದನು.
❮
❯