నిర్గమకాండము 31 : 1 (ERVTE)
{#1ಬೆಚಲೇಲ್ ಮತ್ತು ಒಹೊಲೀಯಾಬ } ತರುವಾಯ ಯೆಹೋವನು ಮೋಶೆಗೆ ಹೀಗೆಂದನು:
నిర్గమకాండము 31 : 2 (ERVTE)
“ನಾನು ಯೆಹೂದ ಕುಲದಿಂದ ಊರಿಯ ಮಗನಾದ ಬೆಚಲೇಲನನ್ನು ಆರಿಸಿಕೊಂಡಿದ್ದೇನೆ. ಊರಿಯು ಹೂರನ ಮಗನು.
నిర్గమకాండము 31 : 3 (ERVTE)
ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.
నిర్గమకాండము 31 : 4 (ERVTE)
ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು.
నిర్గమకాండము 31 : 5 (ERVTE)
ಅವನು ರತ್ನಗಳನ್ನು ಕೆತ್ತಿ ಅಂದವಾದ ಆಭರಣಗಳನ್ನು ಮಾಡಬಲ್ಲನು ಮತ್ತು ಮರಗೆಲಸವನ್ನು ಮಾಡಬಲ್ಲನು. ಅವನು ಎಲ್ಲಾ ತರದ ಕೆಲಸಗಳನ್ನು ಮಾಡಬಲ್ಲನು.
నిర్గమకాండము 31 : 6 (ERVTE)
ಅವನೊಂದಿಗೆ ಕೆಲಸ ಮಾಡಲು ನಾನು ಒಹೊಲೀಯಾಬನನ್ನು ಆರಿಸಿಕೊಂಡಿದ್ದೇನೆ. ಒಹೊಲೀಯಾಬನು ದಾನ್ ಕುಲದ ಅಹೀಸಾಮಾಕನ ಮಗನು. ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಬೇರೆ ಕೆಲಸಗಾರರಿಗೆಲ್ಲಾ ನಿಪುಣತೆಯನ್ನು ಅನುಗ್ರಹಿಸಿದ್ದೇನೆ:
నిర్గమకాండము 31 : 7 (ERVTE)
ದೇವದರ್ಶನಗುಡಾರ, ಒಡಂಬಡಿಕೆ ಪೆಟ್ಟಿಗೆ, ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,
నిర్గమకాండము 31 : 8 (ERVTE)
ಮೇಜು ಮತ್ತು ಅದರ ಮೇಲಿನ ವಸ್ತುಗಳು, ಬಂಗಾರದ ದೀಪಸ್ತಂಭ ಮತ್ತು ಅದರ ಉಪಕರಣಗಳು,
నిర్గమకాండము 31 : 9 (ERVTE)
ಧೂಪವೇದಿಕೆ, ಯಜ್ಞವೇದಿಕೆ ಮತ್ತು ಅವುಗಳ ಉಪಕರಣಗಳು, ಗಂಗಾಳ ಮತ್ತು ಅದರ ಪೀಠ.
నిర్గమకాండము 31 : 10 (ERVTE)
ಯಾಜಕನಾದ ಆರೋನನ ಎಲ್ಲಾ ವಿಶೇಷ ಬಟ್ಟೆಗಳು, ಆರೋನನ ಪುತ್ರರು ಯಾಜಕರಾಗಿ ಸೇವೆ ಮಾಡುವಾಗ ಧರಿಸಿಕೊಳ್ಳತಕ್ಕ ಎಲ್ಲಾ ಬಟ್ಟೆಗಳು.
నిర్గమకాండము 31 : 11 (ERVTE)
ಸುವಾಸನೆಯುಳ್ಳ ಅಭಿಷೇಕತೈಲ, ಪವಿತ್ರ ಸ್ಥಳದಲ್ಲಿ ಉಪಯೋಗಿಸುವ ಸುವಾಸನೆಯುಳ್ಳ ಧೂಪ. ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲೇ ಈ ಕೆಲಸಗಾರರು ಈ ವಸ್ತುಗಳನ್ನೆಲ್ಲಾ ಮಾಡತಕ್ಕದ್ದು.”
నిర్గమకాండము 31 : 12 (ERVTE)
{#1ಸಬ್ಬತ್ } ತರುವಾಯ ಯೆಹೋವನು ಮೋಶೆಗೆ ಹೀಗೆಂದನು:
నిర్గమకాండము 31 : 13 (ERVTE)
“ಇದನ್ನು ಇಸ್ರೇಲರಿಗೆ ಹೇಳು: ‘ನೀವು ನನ್ನ ವಿಶೇಷವಾದ ಸಬ್ಬತ್ ದಿನವನ್ನು ಖಂಡಿತವಾಗಿ ಆಚರಿಸಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿರುವುದಕ್ಕೆ ಇದು ಗುರುತಾಗಿದೆ.
నిర్గమకాండము 31 : 14 (ERVTE)
“ ‘ಸಬ್ಬತ್ ದಿನವನ್ನು ವಿಶೇಷ ದಿನವೆಂದು ಪರಿಗಣಿಸಿ ಆಚರಿಸಿರಿ. ಆ ದಿನವನ್ನು ಬೇರೆ ದಿನದಂತೆ ಪರಿಗಣಿಸಿ ನಡೆಯುವವನಿಗೆ ಮರಣದಂಡನೆಯಾಗಬೇಕು. ಸಬ್ಬತ್ ದಿನದಲ್ಲಿ ಯಾವನಾದರೂ ಕೆಲಸಮಾಡಿದರೆ ಅವನನ್ನು ಬಹಿಷ್ಕರಿಸಬೇಕು.
నిర్గమకాండము 31 : 15 (ERVTE)
ಕೆಲಸ ಮಾಡುವುದಕ್ಕೆ ವಾರದಲ್ಲಿ ಬೇರೆ ಆರು ದಿನಗಳಿವೆ. ಆದರೆ ಏಳನೆಯ ದಿನವು ವಿಶ್ರಾಂತಿಯ ಬಹು ವಿಶೇಷವಾದ ದಿನವಾಗಿದೆ. ಯೆಹೋವನನ್ನು ಸನ್ಮಾನಿಸಲು ಅದೊಂದು ವಿಶೇಷ ದಿನವಾಗಿದೆ. ಸಬ್ಬತ್ತಿನ ಸಮಯದಲ್ಲಿ ಕೆಲಸಮಾಡುವವನು ಕೊಲ್ಲಲ್ಪಡಬೇಕು.
నిర్గమకాండము 31 : 16 (ERVTE)
ಇಸ್ರೇಲರು ಸಬ್ಬತ್ ದಿನವನ್ನು ಜ್ಞಾಪಿಸಿಕೊಂಡು ಅದನ್ನು ವಿಶೇಷ ದಿನವನ್ನಾಗಿ ಮಾಡಿಕೊಳ್ಳತಕ್ಕದ್ದು. ಅವರು ಇದನ್ನು ಎಂದೆಂದೂ ಮಾಡತಕ್ಕದ್ದು. ಇದು ಎಂದೆಂದಿಗೂ ಮುಂದುವರಿಯುವ ಒಡಂಬಡಿಕೆ.
నిర్గమకాండము 31 : 17 (ERVTE)
ಸಬ್ಬತ್ ನನಗೂ ಮತ್ತು ಇಸ್ರೇಲರಿಗೂ ನಡುವೆ ಎಂದೆಂದೂ ಇರುವ ಸೂಚನೆಯಾಗಿರುವುದು.’ ” ಯೆಹೋವನು ಆರು ದಿನಗಳಲ್ಲಿ ಕೆಲಸಮಾಡಿ ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದನು. ಏಳನೆಯ ದಿನದಲ್ಲಿ ಕೆಲಸ ಮಾಡದೆ ವಿಶ್ರಮಿಸಿಕೊಂಡನು.
నిర్గమకాండము 31 : 18 (ERVTE)
ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು.
❮
❯
1
2
3
4
5
6
7
8
9
10
11
12
13
14
15
16
17
18