నిర్గమకాండము 36 : 1 (ERVTE)
నిర్గమకాండము 36 : 2 (ERVTE)
“ಆದ್ದರಿಂದ ಬೆಚಲೇಲನೂ ಒಹೊಲೀಯಾಬನೂ ಮತ್ತು ಇತರ ಎಲ್ಲಾ ನಿಪುಣರೂ ಯೆಹೋವನು ಆಜ್ಞಾಪಿಸಿದ ಕೆಲಸವನ್ನು ಮಾಡಬೇಕು. ಈ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಅವಶ್ಯವಿರುವ ಎಲ್ಲಾ ಸೂಕ್ಷ್ಮವಾದ ಕೆಲಸವನ್ನು ಮಾಡುವುದಕ್ಕೆ ಯೆಹೋವನು ಈ ಜನರಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಅನುಗ್ರಹಿಸಿದ್ದಾನೆ.” ಬಳಿಕ ಮೋಶೆಯು ಬೆಚಲೇಲನನ್ನೂ ಒಹೊಲೀಯಾಬನನ್ನೂ ಮತ್ತು ಯೆಹೋವನಿಂದ ವಿಶೇಷ ಜ್ಞಾನ ಹೊಂದಿದ ಇತರ ಎಲ್ಲಾ ನಿಪುಣರನ್ನೂ ಕರೆದನು. ಕೆಲಸದಲ್ಲಿ ಸಹಾಯಮಾಡಲು ಇವರು ಬಯಸಿದ್ದರಿಂದ ಬಂದರು.
నిర్గమకాండము 36 : 3 (ERVTE)
ಇಸ್ರೇಲರು ಕಾಣಿಕೆಗಳಾಗಿ ತಂದ ವಸ್ತುಗಳನ್ನೆಲ್ಲಾ ಮೋಶೆಯು ಅವರಿಗೆ ಕೊಟ್ಟನು. ಅವರು ದೇವರ ಪವಿತ್ರಸ್ಥಳವನ್ನು ಕಟ್ಟುವುದಕ್ಕಾಗಿ ಈ ವಸ್ತುಗಳನ್ನು ಉಪಯೋಗಿಸಿದರು. ಪ್ರತಿ ಮುಂಜಾನೆ ಜನರು ಕಾಣಿಕೆಗಳನ್ನು ತರುತ್ತಲೇ ಇದ್ದರು.
నిర్గమకాండము 36 : 4 (ERVTE)
ಆಗ ಆ ನಿಪುಣರೆಲ್ಲಾ ತಾವು ಮಾಡುತ್ತಿದ್ದ ಪವಿತ್ರಸ್ಥಳದ ಕೆಲಸವನ್ನು ಬಿಟ್ಟು ಮೋಶೆಯೊಡನೆ ಮಾತಾಡಲು ಹೋದರು. ಅವರು,
నిర్గమకాండము 36 : 5 (ERVTE)
“ಜನರು ಬಹಳ ಹೆಚ್ಚಾಗಿ ತಂದಿದ್ದಾರೆ! ಗುಡಾರದ ಕೆಲಸವನ್ನು ಮುಗಿಸುವುದಕ್ಕೆ ನಮಗೆ ಬೇಕಾಗಿರುವುದಕ್ಕಿಂತ ಹೆಚ್ಚಾಗಿ ನಮ್ಮಲ್ಲಿ ಇವೆ!” ಎಂದು ಹೇಳಿದರು.
నిర్గమకాండము 36 : 6 (ERVTE)
ಆಗ ಮೋಶೆಯು, “ಪವಿತ್ರಸ್ಥಳದ ಕೆಲಸಕ್ಕಾಗಿ ಯಾವ ಪುರುಷನಾಗಲಿ ಸ್ತ್ರೀಯಾಗಲಿ ಇನ್ನು ಮುಂದೆ ಯಾವುದನ್ನೂ ಕಾಣಿಕೆಯಾಗಿ ಸಿದ್ಧಮಾಡಬಾರದು” ಎಂಬ ಸಂದೇಶವನ್ನು ಪಾಳೆಯದಲ್ಲೆಲ್ಲಾ ಕಳುಹಿಸಿದನು. ಆದ್ದರಿಂದ ಜನರು ಹೆಚ್ಚಾಗಿ ಕೊಡುವುದನ್ನು ನಿಲ್ಲಿಸಬೇಕಾಯಿತು.
నిర్గమకాండము 36 : 7 (ERVTE)
ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು.
నిర్గమకాండము 36 : 8 (ERVTE)
{#1ಪವಿತ್ರಗುಡಾರ } ತರುವಾಯ ನಿಪುಣರು ಪವಿತ್ರಗುಡಾರವನ್ನು ಮಾಡಲು ಪ್ರಾರಂಭಿಸಿದರು. ಅವರು ಶ್ರೇಷ್ಠ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪು ದಾರಗಳಿಂದಲೂ ಹತ್ತು ಪರದೆಗಳನ್ನು ಮಾಡಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಗಳಲ್ಲಿ ಕಸೂತಿ ಹಾಕಿದರು.
నిర్గమకాండము 36 : 9 (ERVTE)
ಪ್ರತಿ ಪರದೆಯೂ ಒಂದೇ ಅಳತೆಯುಳ್ಳದ್ದಾಗಿ ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇತ್ತು.
నిర్గమకాండము 36 : 10 (ERVTE)
ಕೆಲಸಗಾರರು ಪರದೆಗಳನ್ನು ಒಟ್ಟಾಗಿ ಜೋಡಿಸಿ ಪರದೆಗಳ ಎರಡು ಭಾಗಗಳನ್ನಾಗಿ ಮಾಡಿದರು. ಒಂದು ಭಾಗದಲ್ಲಿ ಐದು ಪರದೆಗಳನ್ನೂ ಇನ್ನೊಂದು ಭಾಗದಲ್ಲಿ ಐದು ಪರದೆಗಳನ್ನೂ ಒಟ್ಟಾಗಿ ಜೋಡಿಸಿದರು.
నిర్గమకాండము 36 : 11 (ERVTE)
ಬಳಿಕ ಅವರು ಒಂದು ಗುಂಪಿನ ಕೊನೆಯ ಪರದೆಯ ಅಂಚಿನಲ್ಲಿ ಕುಣಿಕೆಗಳನ್ನು ಮಾಡಲು ನೀಲಿಬಟ್ಟೆಯನ್ನು ಉಪಯೋಗಿಸಿದರು. ಇನ್ನೊಂದು ಗುಂಪಿನಲ್ಲಿದ್ದ ಕೊನೆಯ ಪರದೆಯಲ್ಲೂ ಹಾಗೆಯೇ ಮಾಡಿದರು.
నిర్గమకాండము 36 : 12 (ERVTE)
ಒಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಇನ್ನೊಂದು ಗುಂಪಿನ ಕೊನೆಯ ಪರದೆಯಲ್ಲೂ ಐವತ್ತು ಕುಣಿಕೆಗಳಿದ್ದವು. ಕುಣಿಕೆಗಳನ್ನು ಒಂದಕ್ಕೊಂದು ಎದುರಾಗಿ ಇರಿಸಿದರು.
నిర్గమకాండము 36 : 13 (ERVTE)
ಬಳಿಕ ಅವರು ಐವತ್ತು ಚಿನ್ನದ ಬಳೆಗಳನ್ನು ಮಾಡಿ ಎರಡು ಪರದೆಗಳನ್ನು ಒಟ್ಟಾಗಿ ಸೇರಿಸಿದರು. ಹೀಗೆ ಪವಿತ್ರಗುಡಾರವು ಜೋಡಿಸಲ್ಪಟ್ಟು ಒಂದೇ ಗುಡಾರವಾಯಿತು.
నిర్గమకాండము 36 : 14 (ERVTE)
ಬಳಿಕ ಕೆಲಸಗಾರರು ಪವಿತ್ರಗುಡಾರವನ್ನು ಹೊದಿಸುವುದಕ್ಕೆ ಇನ್ನೊಂದು ಗುಡಾರವನ್ನು ಮಾಡಿದರು. ಈ ಗುಡಾರವನ್ನು ಮಾಡಲು ಹನ್ನೊಂದು ಪರದೆಗಳನ್ನು ಉಪಯೋಗಿಸಿದರು. ಅವರು ಆಡುಕೂದಲಿನಿಂದ ಈ ಪರದೆಗಳನ್ನು ಮಾಡಿದರು.
నిర్గమకాండము 36 : 15 (ERVTE)
ಈ ಎಲ್ಲಾ ಪರದೆಗಳು ಒಂದೇ ಅಳತೆಯುಳ್ಳದ್ದಾಗಿ ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇದ್ದವು.
నిర్గమకాండము 36 : 16 (ERVTE)
ಕೆಲಸಗಾರರು ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡಿದರು. ಬಳಿಕ ಅವರು ಇತರ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡಿದರು.
నిర్గమకాండము 36 : 17 (ERVTE)
ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು.
నిర్గమకాండము 36 : 18 (ERVTE)
ಕೆಲಸಗಾರರು ಎರಡು ಪರದೆಗಳನ್ನು ಒಟ್ಟಾಗಿ ಜೋಡಿಸಲು ಐವತ್ತು ತಾಮ್ರದ ಬಳೆಗಳನ್ನು ಮಾಡಿದರು. ಇದು ಸಮಸ್ತವನ್ನು ಒಂದೇ ಗುಡಾರವಾಗುವಂತೆ ಮಾಡಿತು.
నిర్గమకాండము 36 : 19 (ERVTE)
ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು.
నిర్గమకాండము 36 : 20 (ERVTE)
ಬಳಿಕ ಕೆಲಸಗಾರರು ಪವಿತ್ರಗುಡಾರದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿದರು.
నిర్గమకాండము 36 : 21 (ERVTE)
ಪ್ರತಿಯೊಂದು ಚೌಕಟ್ಟು ಹತ್ತು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಇತ್ತು.
నిర్గమకాండము 36 : 22 (ERVTE)
ಎರಡು ಕಂಬಗಳಿಗೆ ಎರಡು ಅಡ್ಡಕಂಬಗಳನ್ನು ಜೋಡಿಸಿ ಚೌಕಟ್ಟನ್ನು ಮಾಡಲಾಗಿತ್ತು. ಪವಿತ್ರಗುಡಾರದ ಪ್ರತಿ ಚೌಕಟ್ಟನ್ನು ಅದೇ ರೀತಿಯಲ್ಲಿ ಮಾಡಲಾಗಿತ್ತು.
నిర్గమకాండము 36 : 23 (ERVTE)
ಪವಿತ್ರಗುಡಾರದ ದಕ್ಷಿಣ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.
నిర్గమకాండము 36 : 24 (ERVTE)
ಬಳಿಕ ಅವರು ಚೌಕಟ್ಟುಗಳಿಗೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು. ಒಂದು ನಿಲುವುಪೆಟ್ಟಿಗೆಗೆ ಒಂದರಂತೆ ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಿದ್ದವು.
నిర్గమకాండము 36 : 25 (ERVTE)
ಅವರು ಪವಿತ್ರಗುಡಾರದ ಇನ್ನೊಂದು ಕಡೆಯ ಉತ್ತರ ಭಾಗದಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ಮಾಡಿದರು.
నిర్గమకాండము 36 : 26 (ERVTE)
ಅವರು ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ನಲವತ್ತು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
నిర్గమకాండము 36 : 27 (ERVTE)
ಅವರು ಪವಿತ್ರಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮ ಭಾಗಕ್ಕೆ ಇನ್ನೂ ಆರು ಚೌಕಟ್ಟುಗಳನ್ನು ಮಾಡಿದರು.
నిర్గమకాండము 36 : 28 (ERVTE)
ಪವಿತ್ರಗುಡಾರದ ಹಿಂಭಾಗದಲ್ಲಿನ ಮೂಲೆಗಳಿಗೂ ಎರಡು ಚೌಕಟ್ಟುಗಳನ್ನು ಮಾಡಿದರು.
నిర్గమకాండము 36 : 29 (ERVTE)
ಈ ಚೌಕಟ್ಟುಗಳು ಕೆಳಭಾಗಕ್ಕೆ ಒಟ್ಟಾಗಿ ಸೇರಿಸಲ್ಪಟ್ಟಿದ್ದವು; ತುದಿಯಲ್ಲಿ ಒಂದು ಬಳೆಯು ಮೂಲೆ ಚೌಕಟ್ಟುಗಳನ್ನು ಒಟ್ಟಿಗೆ ಹಿಡಿದುಕೊಂಡಿತ್ತು. ಅವರು ಎರಡೂ ಮೂಲೆಗಳಿಗೆ ಹಾಗೆಯೇ ಮಾಡಿದರು.
నిర్గమకాండము 36 : 30 (ERVTE)
ಪವಿತ್ರಗುಡಾರದ ಪಶ್ಚಿಮ ದಿಕ್ಕಿನಲ್ಲಿ ಒಟ್ಟು ಎಂಟು ಚೌಕಟ್ಟುಗಳಿದ್ದವು. ಪ್ರತಿ ಚೌಕಟ್ಟಿಗೆ ಎರಡು ಗದ್ದಿಗೇಕಲ್ಲುಗಳಂತೆ ಹದಿನಾರು ಬೆಳ್ಳಿಯ ಗದ್ದಿಗೇಕಲ್ಲುಗಳಿದ್ದವು.
నిర్గమకాండము 36 : 31 (ERVTE)
ಬಳಿಕ ಕೆಲಸಗಾರರು ಚೌಕಟ್ಟುಗಳಿಗೆ ಅಗುಳಿಗಳನ್ನು ಮಾಡಲು ಜಾಲೀಮರವನ್ನು ಉಪಯೋಗಿಸಿದರು. ಪವಿತ್ರಗುಡಾರದ ಮೊದಲಿನ ಕಡೆಯಲ್ಲಿ ಐದು ಅಗುಳಿಗಳೂ
నిర్గమకాండము 36 : 32 (ERVTE)
ಇನ್ನೊಂದು ಕಡೆಯಲ್ಲಿ ಐದು ಅಗುಳಿಗಳೂ ಪವಿತ್ರಗುಡಾರದ ಹಿಂಭಾಗದಲ್ಲಿ ಅಂದರೆ ಪಶ್ಚಿಮ ಭಾಗದಲ್ಲಿ ಐದು ಅಗುಳಿಗಳೂ ಇದ್ದವು.
నిర్గమకాండము 36 : 33 (ERVTE)
ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು.
నిర్గమకాండము 36 : 34 (ERVTE)
ಅವರು ಈ ಚೌಕಟ್ಟುಗಳನ್ನು ಚಿನ್ನದಿಂದ ಹೊದಿಸಿದರು. ಅಗುಳಿಗಳಿಗಾಗಿ ಚಿನ್ನದ ಕೊಂಡಿಗಳನ್ನು ಮಾಡಿದರು; ಅಗುಳಿಗಳನ್ನು ಚಿನ್ನದಿಂದ ಹೊದಿಸಿದರು.
నిర్గమకాండము 36 : 35 (ERVTE)
ಮಹಾಪವಿತ್ರಸ್ಥಳದ ದ್ವಾರಕ್ಕೆ ವಿಶೇಷ ಪರದೆಯನ್ನು ಮಾಡಲು ಅವರು ಶ್ರೇಷ್ಠ ನಾರುಬಟ್ಟೆಯನ್ನು, ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು. ಅವರು ಕೆರೂಬಿಗಳ ಚಿತ್ರಗಳನ್ನು ಪರದೆಯಲ್ಲಿ ಕಸೂತಿ ಹಾಕಿದರು.
నిర్గమకాండము 36 : 36 (ERVTE)
ಅವರು ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿದರು ಮತ್ತು ಕಂಬಗಳನ್ನು ಚಿನ್ನದಿಂದ ಹೊದಿಸಿದರು. ಬಳಿಕ ಅವರು ಕಂಬಗಳಿಗೆ ಚಿನ್ನದ ಕೊಂಡಿಗಳನ್ನು ಮಾಡಿದರು. ಅವರು ಕಂಬಗಳಿಗೆ ನಾಲ್ಕು ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಮಾಡಿದರು.
నిర్గమకాండము 36 : 37 (ERVTE)
ಬಳಿಕ ಗುಡಾರದ ಬಾಗಿಲಿಗೆ ಪರದೆಯನ್ನು ಮಾಡಿದರು. ಅವರು ಈ ಪರದೆಯನ್ನು ಮಾಡಲು ನೀಲಿ, ನೇರಳೆ, ಕೆಂಪುದಾರವನ್ನು, ಶ್ರೇಷ್ಠ ನಾರುಬಟ್ಟೆಯನ್ನು ಉಪಯೋಗಿಸಿದರು ಮತ್ತು ಅವರು ಚಿತ್ರಗಳನ್ನು ಅದರಲ್ಲಿ ಹೆಣೆದರು.
నిర్గమకాండము 36 : 38 (ERVTE)
ಬಳಿಕ ಅವರು ಐದು ಕಂಬಗಳನ್ನೂ ಬಾಗಿಲಿನ ಪರದೆಗೆ ಕೊಂಡಿಗಳನ್ನೂ ಮಾಡಿದರು. ಅವರು ಕಂಬಗಳ ತುದಿಯನ್ನು ಮತ್ತು ಪರದೆಯ ಕೋಲುಗಳನ್ನು ಚಿನ್ನದಿಂದ ಹೊದಿಸಿದರು. ಅವರು ಕಂಬಗಳಿಗೆ ಐದು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿದರು.
❮
❯