నిర్గమకాండము 38 : 1 (ERVTE)
{#1ಯಜ್ಞವೇದಿಕೆ } ತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.
నిర్గమకాండము 38 : 2 (ERVTE)
ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು.
నిర్గమకాండము 38 : 3 (ERVTE)
ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು.
నిర్గమకాండము 38 : 4 (ERVTE)
ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು.
నిర్గమకాండము 38 : 5 (ERVTE)
ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು.
నిర్గమకాండము 38 : 6 (ERVTE)
ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು.
నిర్గమకాండము 38 : 7 (ERVTE)
ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು.
నిర్గమకాండము 38 : 8 (ERVTE)
నిర్గమకాండము 38 : 9 (ERVTE)
ಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು. {#1ಪವಿತ್ರಗುಡಾರದ ಸುತ್ತಲಿನ ಅಂಗಳ } ಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು.
నిర్గమకాండము 38 : 10 (ERVTE)
ದಕ್ಷಿಣ ಭಾಗದಲ್ಲಿದ್ದ ಪರದೆಗಳಿಗೆ ಇಪ್ಪತ್ತು ಕಂಬಗಳಿದ್ದವು. ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳಿದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
నిర్గమకాండము 38 : 11 (ERVTE)
ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
నిర్గమకాండము 38 : 12 (ERVTE)
నిర్గమకాండము 38 : 13 (ERVTE)
ಅಂಗಳದ ಪಶ್ಚಿಮ ಭಾಗದಲ್ಲಿ ಪರದೆಗಳ ಗೋಡೆಯು ಐವತ್ತು ಮೊಳ ಉದ್ದವಾಗಿತ್ತು. ಅಲ್ಲಿ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. ಅಂಗಳದ ಪೂರ್ವ ಭಾಗವು ಐವತ್ತು ಮೊಳ ಅಗಲವಾಗಿತ್ತು. ಅಂಗಳದ ಪ್ರವೇಶದ್ವಾರವು ಈ ಭಾಗದಲ್ಲಿತ್ತು.
నిర్గమకాండము 38 : 14 (ERVTE)
ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು.
నిర్గమకాండము 38 : 15 (ERVTE)
ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು.
నిర్గమకాండము 38 : 16 (ERVTE)
ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು.
నిర్గమకాండము 38 : 17 (ERVTE)
ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳಿಗೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು.
నిర్గమకాండము 38 : 18 (ERVTE)
ಅಂಗಳದ ಬಾಗಿಲಿನ ಪರದೆಯು ಶ್ರೇಷ್ಠ ನಾರುಬಟ್ಟೆಯಿಂದಲೂ, ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಗಿತ್ತು. ಪರದೆಯಲ್ಲಿ ನಕಾಸಿ ಕೆಲಸ ಮಾಡಲಾಗಿತ್ತು. ಪರದೆಯು ಇಪ್ಪತ್ತು ಮೊಳ ಉದ್ದ ಮತ್ತು ಐದು ಮೊಳ ಅಗಲವಾಗಿತ್ತು. ಅಂಗಳದ ಸುತ್ತಲಿದ್ದ ಎಲ್ಲಾ ಪರದೆಗಳ ಎತ್ತರ ಒಂದೇ ಆಗಿತ್ತು.
నిర్గమకాండము 38 : 19 (ERVTE)
ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
నిర్గమకాండము 38 : 20 (ERVTE)
ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು.
నిర్గమకాండము 38 : 21 (ERVTE)
నిర్గమకాండము 38 : 22 (ERVTE)
ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು.
నిర్గమకాండము 38 : 23 (ERVTE)
ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು.
నిర్గమకాండము 38 : 24 (ERVTE)
నిర్గమకాండము 38 : 25 (ERVTE)
ಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.) ಲೆಕ್ಕಿಸಲ್ಪಟ್ಟ ಒಟ್ಟು ಗಂಡಸರು ಮೂರುಮುಕ್ಕಾಲು ಟನ್‌ಗಿಂತ ಹೆಚ್ಚು ಬೆಳ್ಳಿಯನ್ನು ಕೊಟ್ಟರು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)
నిర్గమకాండము 38 : 26 (ERVTE)
ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು ಬೆಕಾ[* ಬೆಕಾ 6 ಗ್ರಾಂ. ] ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು ಬೆಕಾ ಅಂದರೆ ಅರ್ಧ ಶೆಕೆಲ್.)
నిర్గమకాండము 38 : 27 (ERVTE)
ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು.
నిర్గమకాండము 38 : 28 (ERVTE)
ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು.
నిర్గమకాండము 38 : 29 (ERVTE)
ಇಪ್ಪತ್ತಾರುವರೆ ಟನ್‌ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು.
నిర్గమకాండము 38 : 30 (ERVTE)
ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.
నిర్గమకాండము 38 : 31 (ERVTE)
ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31