నిర్గమకాండము 40 : 1 (ERVTE)
{#1ಪವಿತ್ರಗುಡಾರದ ಸ್ಥಾಪನೆ } ತರುವಾಯ ಯೆಹೋವನು ಮೋಶೆಗೆ,
నిర్గమకాండము 40 : 2 (ERVTE)
“ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ದೇವದರ್ಶನಗುಡಾರವಾದ ಪವಿತ್ರಗುಡಾರವನ್ನು ಎತ್ತಿನಿಲ್ಲಿಸು.
నిర్గమకాండము 40 : 3 (ERVTE)
ಪವಿತ್ರ ಗುಡಾರದಲ್ಲಿ ಒಡಂಬಡಿಕೆಯ ಪೆಟ್ಟಿಗೆಯನ್ನು ಇಡು. ಪೆಟ್ಟಿಗೆಯನ್ನು ಪರದೆಯಿಂದ ಮುಚ್ಚಿಸು.
నిర్గమకాండము 40 : 4 (ERVTE)
ಬಳಿಕ ಮೇಜನ್ನು ಒಳಗೆ ತರಿಸಿ ಮೇಜಿನ ಮೇಲಿರಬೇಕಾದ ವಸ್ತುಗಳನ್ನು ಅದರ ಮೇಲಿರಿಸು. ದೀಪಸ್ತಂಭವನ್ನು ಗುಡಾರದಲ್ಲಿ ಇರಿಸು. ದೀಪಸ್ತಂಭದಲ್ಲಿ ಸರಿಯಾದ ಜಾಗಗಳಲ್ಲಿ ಹಣತೆಗಳನ್ನು ಇರಿಸು.
నిర్గమకాండము 40 : 5 (ERVTE)
ಗುಡಾರದೊಳಗೆ ಧೂಪವನ್ನು ಅರ್ಪಿಸಲು ಬಂಗಾರದ ವೇದಿಕೆಯನ್ನು ಇಡು. ವೇದಿಕೆಯನ್ನು ಒಡಂಬಡಿಕೆಯ ಪೆಟ್ಟಿಗೆಯ ಮುಂದಿರಿಸು. ಬಳಿಕ ಪವಿತ್ರಗುಡಾರದ ಪ್ರವೇಶದಲ್ಲಿ ಪರದೆಯನ್ನು ಇರಿಸು.
నిర్గమకాండము 40 : 6 (ERVTE)
“ದೇವದರ್ಶನಗುಡಾರವಾದ ಪವಿತ್ರಗುಡಾರದ ಪ್ರವೇಶದ್ವಾರದ ಮುಂದೆ ಯಜ್ಞವೇದಿಕೆಯನ್ನು ಇರಿಸು.
నిర్గమకాండము 40 : 7 (ERVTE)
ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇರಿಸು. ಗಂಗಾಳದಲ್ಲಿ ನೀರನ್ನು ಹಾಕಿಸು.
నిర్గమకాండము 40 : 8 (ERVTE)
ಅಂಗಳದ ಸುತ್ತಲೂ ಪರದೆಗಳ ಗೋಡೆಯನ್ನು ನಿಲ್ಲಿಸು. ಬಳಿಕ ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಬೇಕು.
నిర్గమకాండము 40 : 9 (ERVTE)
“ಅಭಿಷೇಕತೈಲವನ್ನು ಉಪಯೋಗಿಸಿ ಪವಿತ್ರಗುಡಾರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಅಭಿಷೇಕಿಸು. ನೀನು ತೈಲವನ್ನು ಈ ವಸ್ತುಗಳ ಮೇಲೆ ಹಾಕುವಾಗ, ಅವುಗಳನ್ನು ಪವಿತ್ರಗೊಳಿಸುವೆ.
నిర్గమకాండము 40 : 10 (ERVTE)
ಯಜ್ಞವೇದಿಕೆಯನ್ನು ಅಭಿಷೇಕಿಸು. ವೇದಿಕೆಯ ಮೇಲಿರುವ ಪ್ರತಿಯೊಂದನ್ನು ಅಭಿಷೇಕಿಸಿ ಪ್ರತಿಷ್ಠಿಸು. ಆಗ ಅದು ಬಹು ಪವಿತ್ರವಾಗುವುದು.
నిర్గమకాండము 40 : 11 (ERVTE)
ಬಳಿಕ ಗಂಗಾಳವನ್ನೂ ಅದರ ಕೆಳಗಿರುವ ಪೀಠವನ್ನೂ ಅಭಿಷೇಕಿಸಿ ಪವಿತ್ರಗೊಳಿಸು.
నిర్గమకాండము 40 : 12 (ERVTE)
“ಆರೋನನನ್ನೂ ಅವನ ಪುತ್ರರನ್ನೂ ದೇವದರ್ಶನಗುಡಾರದ ಬಾಗಿಲಿಗೆ ಕರೆಸು. ಅವರಿಗೆ ನೀರಿನಿಂದ ಸ್ನಾನ ಮಾಡಿಸು.
నిర్గమకాండము 40 : 13 (ERVTE)
ಬಳಿಕ ಆರೋನನಿಗೆ ವಿಶೇಷ ಬಟ್ಟೆಯನ್ನು ತೊಡಿಸು. ತೈಲದಿಂದ ಅವನನ್ನು ಅಭಿಷೇಕಿಸಿ ಪವಿತ್ರಗೊಳಿಸು. ಆಗ ಅವನು ಯಾಜಕನಾಗಿ ನನ್ನ ಸೇವೆ ಮಾಡಬಹುದು.
నిర్గమకాండము 40 : 14 (ERVTE)
ಬಳಿಕ ಅವನ ಪುತ್ರರಿಗೆ ಬಟ್ಟೆಗಳನ್ನು ತೊಡಿಸು.
నిర్గమకాండము 40 : 15 (ERVTE)
ಅವರ ತಂದೆಯನ್ನು ಅಭಿಷೇಕಿಸಿದಂತೆ ಪುತ್ರರನ್ನೂ ಅಭಿಷೇಕಿಸು. ಆಗ ಅವರು ಯಾಜಕರಾಗಿ ತಲೆತಲೆಮಾರುಗಳವರೆಗೆ ನನ್ನ ಸೇವೆ ಮಾಡಬಹುದು. ನೀನು ಅವರನ್ನು ಅಭಿಷೇಕಿಸಿದಾಗ, ಅವರು ಯಾಜಕರಾಗುವರು. ಇನ್ನು ಮುಂದೆ ಆ ಕುಟುಂಬವು ಯಾಜಕರಾಗಿ ಮುಂದುವರಿಯುವುದು” ಎಂದು ಹೇಳಿದನು.
నిర్గమకాండము 40 : 16 (ERVTE)
ಯೆಹೋವನು ಆಜ್ಞಾಪಿಸಿದಂತೆಯೇ ಪ್ರತಿಯೊಂದನ್ನೂ ಮೋಶೆಯು ಮಾಡಿದನು.
నిర్గమకాండము 40 : 17 (ERVTE)
ಆದ್ದರಿಂದ ಪವಿತ್ರಗುಡಾರವು, ಅವರು ಈಜಿಪ್ಟನ್ನು ಬಿಟ್ಟಕಾಲದಿಂದ ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಸ್ಥಾಪಿಸಲ್ಪಟ್ಟಿತು.
నిర్గమకాండము 40 : 18 (ERVTE)
ಯೆಹೋವನು ಹೇಳಿದಂತೆಯೇ ಮೋಶೆಯು ಪವಿತ್ರಗುಡಾರವನ್ನು ನಿಲ್ಲಿಸಿದನು. ಅವನು ಮೊದಲು ಗದ್ದಿಗೇಕಲ್ಲುಗಳನ್ನು ಕೆಳಗೆ ಇರಿಸಿದನು. ಬಳಿಕ ಅವನು ಗದ್ದಿಗೇಕಲ್ಲುಗಳ ಮೇಲೆ ಚೌಕಟ್ಟುಗಳನ್ನು ಇರಿಸಿದನು. ಬಳಿಕ ಅವನು ಅಗುಳಿಗಳನ್ನಿರಿಸಿ ಕಂಬಗಳನ್ನು ನಿಲ್ಲಿಸಿದನು.
నిర్గమకాండము 40 : 19 (ERVTE)
ನಂತರ, ಮೋಶೆಯು ಪವಿತ್ರಗುಡಾರದ ಮೇಲೆ ಹೊರಗಣ ಡೇರೆಯನ್ನು ಹಾಕಿಸಿದನು. ಬಳಿಕ ಅವನು ಹೊರಗಿನ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಈ ಕಾರ್ಯಗಳನ್ನು ಮಾಡಿದನು.
నిర్గమకాండము 40 : 20 (ERVTE)
ಮೋಶೆಯು ಒಡಂಬಡಿಕೆಯ ಆಜ್ಞಾಶಾಸನಗಳನ್ನು ತೆಗೆದುಕೊಂಡು ಪವಿತ್ರ ಪೆಟ್ಟಿಗೆಯಲ್ಲಿಟ್ಟನು. ಮೋಶೆಯು ಪೆಟ್ಟಿಗೆಯ ಎರಡು ಕಡೆಗಳಲ್ಲಿ ಕೋಲುಗಳನ್ನು ಇರಿಸಿದನು. ಬಳಿಕ ಅವನು ಪೆಟ್ಟಿಗೆಯ ಮೇಲೆ ಕೃಪಾಸನವನ್ನು ಇಟ್ಟನು.
నిర్గమకాండము 40 : 21 (ERVTE)
ಬಳಿಕ ಮೋಶೆಯು ಪವಿತ್ರಪೆಟ್ಟಿಗೆಯನ್ನು ಪವಿತ್ರಗುಡಾರದೊಳಗೆ ತಂದನು. ಅದನ್ನು ಸಂರಕ್ಷಿಸುವುದಕ್ಕಾಗಿ ಸರಿಯಾದ ಸ್ಥಳದಲ್ಲಿ ಪರದೆಯನ್ನು ಹಾಕಿದನು. ಹೀಗೆ ಒಡಂಬಡಿಕೆ ಪೆಟ್ಟಿಗೆಯನ್ನು ಪರದೆಯ ಹಿಂಭಾಗದಲ್ಲಿರಿಸಿ ಸಂರಕ್ಷಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
నిర్గమకాండము 40 : 22 (ERVTE)
ತರುವಾಯ ಮೋಶೆಯು ದೇವದರ್ಶನಗುಡಾರದಲ್ಲಿ ಮೇಜನ್ನು ಇರಿಸಿದನು. ಪವಿತ್ರಗುಡಾರದ ಉತ್ತರಭಾಗದಲ್ಲಿ ಅದನ್ನು ಇರಿಸಿದನು. ಅವನು ಅದನ್ನು ಪವಿತ್ರಸ್ಥಳದಲ್ಲಿ ಪರದೆಯ ಮುಂಭಾಗದಲ್ಲಿ ಇರಿಸಿದನು.
నిర్గమకాండము 40 : 23 (ERVTE)
ಬಳಿಕ ಅವನು ಯೆಹೋವನ ಸನ್ನಿಧಿಯಲ್ಲಿ ಮೇಜಿನ ಮೇಲೆ ನೈವೇದ್ಯದ ರೊಟ್ಟಿಯನ್ನಿರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
నిర్గమకాండము 40 : 24 (ERVTE)
ಬಳಿಕ ಮೋಶೆಯು ದೀಪಸ್ತಂಭವನ್ನು ಪವಿತ್ರಗುಡಾರದೊಳಗೆ ಇರಿಸಿದನು. ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನಿರಿಸಿದನು.
నిర్గమకాండము 40 : 25 (ERVTE)
ತರುವಾಯ ಮೋಶೆಯು ಯೆಹೋವನ ಮುಂದಿರುವ ದೀಪಸ್ತಂಭದಲ್ಲಿ ಹಣತೆಗಳನ್ನು ಇರಿಸಿದನು. ಯೆಹೋವನು ಆಜ್ಞಾಪಿಸಿದಂತೆಯೇ ಅವನು ಇದನ್ನು ಮಾಡಿದನು.
నిర్గమకాండము 40 : 26 (ERVTE)
ಬಳಿಕ ಮೋಶೆಯು ಚಿನ್ನದ ವೇದಿಕೆಯನ್ನು ದೇವದರ್ಶನಗುಡಾರದೊಳಗೆ ಇರಿಸಿದನು. ಅವನು ವೇದಿಕೆಯನ್ನು ಪರದೆಯ ಮುಂಭಾಗದಲ್ಲಿ ಇರಿಸಿದನು.
నిర్గమకాండము 40 : 27 (ERVTE)
ಬಳಿಕ ಅವನು ವೇದಿಕೆಯ ಮೇಲೆ ಸುಗಂಧವಾಸನೆಯುಳ್ಳ ಧೂಪವನ್ನು ಉರಿಸಿದನು. ಯೆಹೋವನು ಅವನಿಗೆ ಆಜ್ಞಾಪಿಸಿದಂತೆಯೇ ಇದನ್ನು ಮಾಡಿದನು.
నిర్గమకాండము 40 : 28 (ERVTE)
ಬಳಿಕ ಮೋಶೆಯು ಪವಿತ್ರಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿಸಿದನು.
నిర్గమకాండము 40 : 29 (ERVTE)
నిర్గమకాండము 40 : 30 (ERVTE)
ಪವಿತ್ರಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಯಜ್ಞವೇದಿಕೆಯನ್ನು ಇರಿಸಿದನು. ಅವನು ಯೆಹೋವನಿಗಾಗಿ ಆ ವೇದಿಕೆಯ ಮೇಲೆ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಮಾಡಿದನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು. ತರುವಾಯ ಮೋಶೆಯು ಗಂಗಾಳವನ್ನು ದೇವದರ್ಶನಗುಡಾರ ಮತ್ತು ವೇದಿಕೆಯ ನಡುವೆ ಇಟ್ಟನು. ತೊಳೆದುಕೊಳ್ಳುವುದಕ್ಕಾಗಿ ನೀರನ್ನು ಗಂಗಾಳದಲ್ಲಿ ಹಾಕಿಸಿದನು.
నిర్గమకాండము 40 : 31 (ERVTE)
ಮೋಶೆ, ಆರೋನ ಮತ್ತು ಆರೋನನ ಪುತ್ರರು ತಮ್ಮ ಕೈಕಾಲುಗಳನ್ನು ತೊಳೆದುಕೊಳ್ಳುವುದಕ್ಕಾಗಿ ಈ ಗಂಗಾಳವನ್ನು ಉಪಯೋಗಿಸಿದರು.
నిర్గమకాండము 40 : 32 (ERVTE)
ಅವರು ದೇವದರ್ಶನಗುಡಾರವನ್ನು ಪ್ರವೇಶಿಸುವಾಗಲೆಲ್ಲಾ ಮತ್ತು ಯಜ್ಞವೇದಿಕೆಯ ಸಮೀಪ ಹೋಗುವಾಗಲೆಲ್ಲಾ ತಮ್ಮನ್ನು ತೊಳೆದುಕೊಳ್ಳುತ್ತಿದ್ದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡಿದರು.
నిర్గమకాండము 40 : 33 (ERVTE)
నిర్గమకాండము 40 : 34 (ERVTE)
ತರುವಾಯ ಮೋಶೆಯು ಪವಿತ್ರಗುಡಾರದ ಅಂಗಳದ ಸುತ್ತಲೂ ಪರದೆಗಳನ್ನು ನಿಲ್ಲಿಸಿದನು. ಮೋಶೆಯು ವೇದಿಕೆಯನ್ನು ಅಂಗಳದಲ್ಲಿರಿಸಿದನು. ಬಳಿಕ ಅವನು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿಸಿದನು. ಹೀಗೆ ಮೋಶೆ ಯೆಹೋವನು ತನಗೆ ಕೊಟ್ಟ ಎಲ್ಲಾ ಕೆಲಸವನ್ನು ಮಾಡಿ ಮುಗಿಸಿದನು. {#1ಯೆಹೋವನ ಮಹಿಮೆ } ತರುವಾಯ ಮೋಡವು ದೇವದರ್ಶನಗುಡಾರವನ್ನು ಕವಿಯಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿತು.
నిర్గమకాండము 40 : 35 (ERVTE)
ಮೋಡವು ದೇವದರ್ಶನಗುಡಾರದ ಮೇಲೆ ನಿಂತಿತು. ಯೆಹೋವನ ಮಹಿಮೆಯು ಪವಿತ್ರಗುಡಾರವನ್ನು ತುಂಬಿಕೊಂಡಿದ್ದರಿಂದ ಮೋಶೆಯು ಒಳಗೆ ಪ್ರವೇಶಿಸಲಾಗಲಿಲ್ಲ.
నిర్గమకాండము 40 : 36 (ERVTE)
ಜನರು ಯಾವಾಗ ಚಲಿಸಬೇಕೆಂದು ಮೋಡವು ತೋರಿಸುತ್ತಿತ್ತು. ಮೋಡವು ಪವಿತ್ರಗುಡಾರವನ್ನು ಬಿಟ್ಟು ಮೇಲೆದ್ದಾಗ, ಜನರು ಪ್ರಯಾಣ ಮಾಡತೊಡಗುತ್ತಿದ್ದರು.
నిర్గమకాండము 40 : 37 (ERVTE)
ಆದರೆ ಮೋಡವು ಪವಿತ್ರಗುಡಾರದ ಮೇಲಿದ್ದಾಗ ಜನರು ಪ್ರಯಾಣ ಮಾಡುತ್ತಿರಲಿಲ್ಲ. ಮೋಡವು ಮೇಲೇಳುವವರೆಗೆ ಅವರು ಅಲ್ಲೇ ಇರುತ್ತಿದ್ದರು.
నిర్గమకాండము 40 : 38 (ERVTE)
ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.
❮
❯