యెహెజ్కేలు 12 : 1 (ERVTE)
{#1ಯೆಹೆಜ್ಕೇಲನು ಸೆರೆಯಾಳಿನಂತೆ ಜೀವಿಸಿದ್ದು } ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ:
యెహెజ్కేలు 12 : 2 (ERVTE)
“ನರಪುತ್ರನೇ, ನೀನು ದಂಗೆಕೋರರ ಮಧ್ಯೆ ವಾಸಿಸುತ್ತೀ. ಅವರಿಗೆ ಕಣ್ಣಿದ್ದರೂ ನೋಡುವದಿಲ್ಲ; ಅವರಿಗೆ ಕಿವಿಗಳಿದ್ದರೂ ಕೇಳುವದಿಲ್ಲ; ಯಾಕೆಂದರೆ ಅವರು ದಂಗೆಕೋರರಾಗಿದ್ದಾರೆ.
యెహెజ్కేలు 12 : 3 (ERVTE)
ಆದ್ದರಿಂದ ನರಪುತ್ರನೇ, ನಿನ್ನ ಚೀಲಗಳನ್ನು ತುಂಬಿಸಿ ಸೆರೆಯಾಳಾಗಿ ಹೋಗುವವನಂತೆ ನಟಿಸು. ನೀನು ಹಗಲಲ್ಲಿ ಹೋಗುವುದನ್ನು ಜನರು ನೋಡಲಿ. ಸೆರೆಯಾಳಿನಂತೆ ಅವರ ಕಣ್ಣೆದುರಿನಲ್ಲೆ ನಿನ್ನ ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಹೋಗು. ಒಂದುವೇಳೆ ಅವರು ತಾವು ದಂಗೆಕೋರರೆಂದು ತಿಳಿದುಕೊಳ್ಳಬಹುದು.
యెహెజ్కేలు 12 : 4 (ERVTE)
“ಸೆರೆಯಾಳಾಗಿ ಹೋಗುವವನಂತೆ ಹಗಲಲ್ಲಿ ನಿನ್ನ ಚೀಲಗಳನ್ನು ಹೊರಗೆ ತೆಗೆದುಕೊಂಡು ಬಾ. ಸಾಯಂಕಾಲವಾದಾಗ ಅವರ ಕಣ್ಣೆದುರಿನಲ್ಲಿಯೇ ನೀನು ದೂರದೇಶಕ್ಕೆ ಸೆರೆಯವನಾಗಿ ಹೋಗುವವನಂತೆ ನಟನೆ ಮಾಡು.
యెహెజ్కేలు 12 : 5 (ERVTE)
ಜನರು ನಿನ್ನನ್ನು ನೋಡುತ್ತಿರುವಾಗ ಗೋಡೆಯಲ್ಲಿ ರಂಧ್ರ ಮಾಡಿ ಅದರಿಂದ ನುಸುಳಿ ಹೊರಗೆ ಹೋಗು.
యెహెజ్కేలు 12 : 6 (ERVTE)
ರಾತ್ರಿಕಾಲದಲ್ಲಿ ಚೀಲವನ್ನು ಹೆಗಲಿಗೇರಿಸಿ ಹೊರಗೆ ನಡಿ. ನೀನು ನೆಲವನ್ನು ನೋಡಲಾಗದಂತೆ ನಿನ್ನ ಮುಖವನ್ನು ಮುಚ್ಚಿಕೋ. ಇದೆಲ್ಲಾ ಮಾಡುವಾಗ ಜನರು ನಿನ್ನನ್ನು ನೋಡುತ್ತಿರಬೇಕು. ಯಾಕೆಂದರೆ ನಿನ್ನನ್ನು ನಾನು ಇಸ್ರೇಲರಿಗೆ ಒಂದು ನಿದರ್ಶನವಾಗಿ ಉಪಯೋಗಿಸುತ್ತಿದ್ದೇನೆ.”
యెహెజ్కేలు 12 : 7 (ERVTE)
యెహెజ్కేలు 12 : 8 (ERVTE)
ಹೀಗೆ ನನಗೆ ಆಜ್ಞಾಪಿಸಿದ ಪ್ರಕಾರ ಮಾಡಿದೆನು. ನಾನು ಸೆರೆಯಾಳಿನಂತೆ ಹಗಲಲ್ಲಿ ಚೀಲಗಳನ್ನು ತಂದು ಹೊರಗಿಟ್ಟೆನು. ಸಾಯಂಕಾಲ ನನ್ನ ಕೈಗಳಿಂದ ಗೋಡೆಯಲ್ಲಿ ರಂಧ್ರ ಮಾಡಿ, ರಾತ್ರಿಕಾಲದಲ್ಲಿ ಆ ಚೀಲಗಳನ್ನು ಹೆಗಲ ಮೇಲೆ ಹೊತ್ತು ಹೊರಟೆನು. ಜನರು ನನ್ನನ್ನು ಗಮನಿಸುತ್ತಿರುವಾಗಲೇ ನಾನೆಲ್ಲಾ ಮಾಡಿದೆನು. ಮರುದಿನ ಬೆಳಿಗ್ಗೆ ಯೆಹೋವನ ಸಂದೇಶವು ನನಗೆ ಬಂತು. ಆತನು ಹೀಗೆ ಅಂದನು:
యెహెజ్కేలు 12 : 9 (ERVTE)
“ನರಪುತ್ರನೇ, ನೀನು ಏನು ಮಾಡುತ್ತಿರುವೆ ಎಂದು ಇಸ್ರೇಲಿನ ಈ ದಂಗೆಕೋರರು ನಿನ್ನನ್ನು ಕೇಳಲಿಲ್ಲವೇ?
యెహెజ్కేలు 12 : 10 (ERVTE)
ಅವರ ಒಡೆಯನಾದ ಯೆಹೋವನು ಇದನ್ನೆಲ್ಲಾ ಹೇಳಿದನು ಎಂದು ಅವರಿಗೆ ತಿಳಿಸು. ಈ ಸಂದೇಶವು ಜೆರುಸಲೇಮಿನ ನಾಯಕರ ಮತ್ತು ಅಲ್ಲಿ ವಾಸಿಸುವ ಇಸ್ರೇಲ್ ಜನರೆಲ್ಲರ ಕುರಿತಾಗಿದೆ.
యెహెజ్కేలు 12 : 11 (ERVTE)
‘ನೀನು ಅವರಿಗೆ ಹೀಗೆ ಹೇಳು: ನಾನು ನಿಮಗೆ ಒಂದು ಸೂಚನೆಯಾಗಿದ್ದೇನೆ. ನಾನು ಮಾಡಿದ ಸೂಚಕಕಾರ್ಯ ಖಂಡಿತವಾಗಿ ನಿಮಗೆ ಸಂಭವಿಸುವುದು. ನೀವು ದೂರದೇಶಕ್ಕೆ ಸೆರೆಯಾಳುಗಳಾಗಿ ಹೋಗುವಿರಿ.’
యెహెజ్కేలు 12 : 12 (ERVTE)
ನಿಮ್ಮ ನಾಯಕನು ಗೋಡೆಯಲ್ಲಿ ರಂಧ್ರ ಮಾಡಿ ರಾತ್ರಿ ಕಾಲದಲ್ಲಿ ಅದರಲ್ಲಿ ನುಸುಳಿ ಪಾರಾಗುವನು. ಜನರು ತನ್ನನ್ನು ಗುರುತಿಸದಂತೆ ತನ್ನ ಮುಖವನ್ನು ಮುಚ್ಚಿಕೊಳ್ಳುವನು. ಅವನು ಯಾವ ಕಡೆಗೆ ಹೋಗುತ್ತಿದ್ದಾನೆಂದು ಅವನ ಕಣ್ಣುಗಳಿಗೆ ಕಾಣಿಸದು.
యెహెజ్కేలు 12 : 13 (ERVTE)
ಅವನು ತಪ್ಪಿಸಿಕೊಳ್ಳಲು ಪ್ರಯತ್ನ ಮಾಡುವನು. ಆದರೆ, ನಾನು (ಯೆಹೋವನು) ಅವನನ್ನು ಹಿಡಿಯುವೆನು. ಅವನು ನನ್ನ ಬಲೆಯೊಳಗೆ ಬೀಳುವನು. ನಾನು ಅವನನ್ನು ಕಸ್ದೀಯರ ದೇಶವಾದ ಬಾಬಿಲೋನಿಗೆ ತರುವೆನು. ಅವನು ಆ ದೇಶವನ್ನು ನೋಡುವುದಿಲ್ಲ; ಅಲ್ಲದೆ ಅವನು ಅಲ್ಲಿ ಸಾಯುವನು.
యెహెజ్కేలు 12 : 14 (ERVTE)
ಅವನ ಸುತ್ತಲೂ ಇರುವವರನ್ನೆಲ್ಲ ನಾನು ಸುತ್ತಮುತ್ತಲಿನ ದೇಶಗಳಿಗೆ ಓಡಿಸಿಬಿಡುವೆನು. ಅವನ ಕೆಲಸಗಾರರನ್ನು ಮತ್ತು ಅವನ ಸೈನ್ಯವನ್ನು ಗಾಳಿಗೆ ತೂರಿಬಿಡುವೆನು. ಮತ್ತು ಅವರನ್ನು ಖಡ್ಗದೊಡನೆ ಬೆನ್ನಟ್ಟುವೆನು.
యెహెజ్కేలు 12 : 15 (ERVTE)
ನಾನೇ ಯೆಹೋವನೆಂದು ಆಗ ಜನರು ತಿಳಿದುಕೊಳ್ಳುವರು; ಯಾಕೆಂದರೆ ನಾನು ಅವರನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿದ್ದೇನೆ ಮತ್ತು ಬೇರೆ ದೇಶಗಳಿಗೆ ಓಡಿಸಿದ್ದೇನೆ.
యెహెజ్కేలు 12 : 16 (ERVTE)
యెహెజ్కేలు 12 : 17 (ERVTE)
“ಆದರೆ ನಾನು ಅವರಲ್ಲಿ ಕೆಲವರನ್ನು ಯುದ್ಧಗಳಿಂದ, ಬರಗಾಲಗಳಿಂದ ಮತ್ತು ರೋಗಗಳಿಂದ ಉಳಿಸುವೆನು. ಅವರು ತಾವು ಹೋಗುವ ದೇಶಗಳಲ್ಲಿನ ಜನರಿಗೆ ತಮ್ಮ ಅಸಹ್ಯವಾದ ಆಚರಣೆಗಳ ಕುರಿತು ಹೇಳಲಾಗುವಂತೆ ನಾನು ಇದನ್ನು ಮಾಡುತ್ತೇನೆ. ನಾನೇ ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.” {#1ಜನರು ಭಯಭೀತರಾಗಿ ನಡುಗುವರು } ಆಗ ಯೆಹೋವನ ವಾಕ್ಯವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,
యెహెజ్కేలు 12 : 18 (ERVTE)
“ನರಪುತ್ರನೇ, ನೀನು ಭೀತಿಯಲ್ಲಿರುವವನಂತೆ ನಟನೆ ಮಾಡಬೇಕು. ನೀನು ಆಹಾರ ತೆಗೆದುಕೊಳ್ಳುವಾಗ ನಡುಗಬೇಕು. ನೀರು ಕುಡಿಯುವಾಗ ಭಯಪಡಬೇಕು ಮತ್ತು ಚಿಂತಿಸಬೇಕು.
యెహెజ్కేలు 12 : 19 (ERVTE)
ಇದನ್ನು ನೀನು ಸಾಮಾನ್ಯ ಜನರಿಗೆ ತಿಳಿಸಬೇಕು. ನೀನು ಹೀಗೆ ಹೇಳಬೇಕು, ‘ಇನ್ನೂ ಇಸ್ರೇಲ್ ದೇಶದಲ್ಲಿರುವ ಜೆರುಸಲೇಮಿನ ನಿವಾಸಿಗಳ ಬಗ್ಗೆ ನಮ್ಮ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ಅವರು ಊಟಮಾಡುವಾಗ ಉದೆಬಗದಿಂದಿರುವರು; ಅವರು ಕುಡಿಯುವಾಗ ಭಯದಿಂದಿರುವರು. ಯಾಕೆಂದರೆ ಅವರ ದೇಶದಲ್ಲಿರುವ ಸಮಸ್ತವು ನಾಶವಾಗುತ್ತದೆ, ಯಾಕೆಂದರೆ ಅಲ್ಲಿ ವಾಸಿಸುವವರೆಲ್ಲರೂ ಹಿಂಸಕರಾಗಿದ್ದಾರೆ.
యెహెజ్కేలు 12 : 20 (ERVTE)
ಜನರು ವಾಸವಾಗಿರುವ ಪಟ್ಟಣಗಳು ನಾಶವಾಗುತ್ತವೆ; ಇಡೀ ದೇಶವೇ ನಾಶವಾಗುತ್ತದೆ. ನಾನೇ ಯೆಹೋವನೆಂದು ಆಗ ನಿಮಗೆ ತಿಳಿಯುವುದು.’ ”
యెహెజ్కేలు 12 : 21 (ERVTE)
{#1ಇಸ್ರೇಲಿಗೆ ಬರುವ ದುರ್ಗತಿ } ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,
యెహెజ్కేలు 12 : 22 (ERVTE)
“ನರಪುತ್ರನೇ, ‘ಸಂಕಷ್ಟದದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಬ ಈ ಗಾದೆಯನ್ನು ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?
యెహెజ్కేలు 12 : 23 (ERVTE)
“ಆ ಜನರಿಗೆ ಹೀಗೆ ಹೇಳು: ಅವರ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಾನು ಈ ಗಾದೆಗೆ ಅಂತ್ಯವನ್ನು ಬರಮಾಡುವೆನು. ಇಸ್ರೇಲಿನಲ್ಲಿ ಆ ಗಾದೆಯನ್ನು ಅವರು ಇನ್ನೆಂದಿಗೂ ಬಳಸುವುದಿಲ್ಲ. ಅದರ ಬದಲಾಗಿ ಅವರಿಗೆ ಹೀಗೆ ಹೇಳು: ‘ಸಂಕಷ್ಟದ ದಿನಗಳು ಸಮೀಪಿಸಿವೆ; ಪ್ರತಿಯೊಂದು ದರ್ಶನವೂ ನೆರವೇರುವುದು.’
యెహెజ్కేలు 12 : 24 (ERVTE)
“ಇಸ್ರೇಲಿನಲ್ಲಿ ಇನ್ನು ಮೇಲೆ ಸುಳ್ಳುದರ್ಶನಗಳಿರುವುದಿಲ್ಲ; ಮುಖಸ್ತುತಿಯ ಕಣಿಯೂ ಇರುವುದಿಲ್ಲ.
యెహెజ్కేలు 12 : 25 (ERVTE)
ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.
యెహెజ్కేలు 12 : 26 (ERVTE)
ಆಗ ಯೆಹೋವನ ಸಂದೇಶವು ನನಗೆ ಬಂದಿತು. ಆತನು ಹೇಳಿದ್ದೇನೆಂದರೆ,
యెహెజ్కేలు 12 : 27 (ERVTE)
“ನರಪುತ್ರನೇ, ನಿನಗೆ ನಾನು ಕೊಟ್ಟ ದರ್ಶನಗಳ ಕುರಿತು ಬಹಳ ಕಾಲದ ನಂತರ ಅದು ನೆರವೇರುವುದು ಎಂದು ಇಸ್ರೇಲರ ಜನರು ನೆನೆಸುತ್ತಿದ್ದಾರೆ.
యెహెజ్కేలు 12 : 28 (ERVTE)
ಆದ್ದರಿಂದ ಅವರಿಗೆ ನೀನು ಈ ವಿಷಯವನ್ನು ತಿಳಿಸು, ‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: ಏನೆಂದರೆ ನಾನು ಇನ್ನು ಹೆಚ್ಚು ತಡಮಾಡುವುದಿಲ್ಲ. ನಾನೊಂದು ವಿಷಯವು ನೆರವೇರುವುದು ಎಂದು ಹೇಳಿದರೆ ಅದು ಖಂಡಿತ ನೆರವೇರುವುದು.’ ” ಇವು ನನ್ನ ಒಡೆಯನಾದ ಯೆಹೋವನ ನುಡಿಗಳು.
❮
❯