యెహెజ్కేలు 18 : 1 (ERVTE)
{#1ನೀತಿಯ ನ್ಯಾಯತೀರ್ಪು } ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,
యెహెజ్కేలు 18 : 2 (ERVTE)
“ಇಸ್ರೇಲ್ ದೇಶದ ಕುರಿತಾದ ಈ ಗಾದೆಯನ್ನು ನೀವೆಲ್ಲರೂ ಮರುನುಡಿಯುವುದೇಕೆ? ‘ಹೆತ್ತವರು ಹುಳಿ ದ್ರಾಕ್ಷಿಹಣ್ಣನ್ನು ತಿಂದಾಗ ಮಕ್ಕಳ ಬಾಯಿ ಹುಳಿಯಾಗುವುದು.’ ”[* ಹೆತ್ತವರು … ಹುಳಿಯಾಗುವುದು ಅಂದರೆ ಹೆತ್ತವರು ಮಾಡಿದ ಪಾಪವನ್ನು ಮಕ್ಕಳು ಅನುಭವಿಸುವರು. ]
యెహెజ్కేలు 18 : 3 (ERVTE)
ಆದರೆ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ಇಸ್ರೇಲಿನ ಜನರು ಇನ್ನು ಮುಂದಕ್ಕೆ ಈ ಗಾದೆಯು ಸತ್ಯವೆಂದು ನೆನಸುವದಿಲ್ಲ.
యెహెజ్కేలు 18 : 4 (ERVTE)
ಎಲ್ಲಾ ಪ್ರಾಣಗಳು ನನ್ನವೇ. ತಂದೆಯ ಪ್ರಾಣವೂ ಮಗನ ಪ್ರಾಣವೂ ನನ್ನವೇ. ಪಾಪಮಾಡುವವನು ಮಾತ್ರ ಸಾಯುವನು.
యెహెజ్కేలు 18 : 5 (ERVTE)
“ಒಬ್ಬ ವ್ಯಕ್ತಿ ನೀತಿವಂತನಾಗಿದ್ದರೆ ಅವನು ಬಾಳುವನು. ಆ ಮನುಷ್ಯನು ಜನರನ್ನು ಸರಿಯಾದ ರೀತಿಯಲ್ಲಿ ನೋಡುವನು.
యెహెజ్కేలు 18 : 6 (ERVTE)
ಆ ನೀತಿವಂತ ಮನುಷ್ಯನು ಬೆಟ್ಟಗಳಿಗೆ ಹೋಗಿ ಅಲ್ಲಿ ಸುಳ್ಳು ದೇವರಿಗೆ ಅರ್ಪಿಸಿದ ಆಹಾರದಲ್ಲಿ ಪಾಲು ತೆಗೆದುಕೊಳ್ಳುವದಿಲ್ಲ. ಇಸ್ರೇಲಿನಲ್ಲಿರುವ ಆ ಹೊಲಸು ವಿಗ್ರಹಗಳಿಗೆ ಅವನು ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ. ತನ್ನ ಹೆಂಡತಿಯು ಮುಟ್ಟಾದಾಗ ಆಕೆಯನ್ನು ಕೂಡುವುದಿಲ್ಲ.
యెహెజ్కేలు 18 : 7 (ERVTE)
ಆ ಒಳ್ಳೆಯ ಮನುಷ್ಯನು ಜನರ ಬಲಹೀನತೆಯನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ; ಸಾಲ ಮಾಡಿದವನ ಒತ್ತೆಯನ್ನು ಬಿಗಿಹಿಡಿಯುವುದಿಲ್ಲ; ಯಾರ ಸೊತ್ತನ್ನೂ ದರೋಡೆ ಮಾಡುವುದಿಲ್ಲ; ಹಸಿದವನಿಗೆ ಅನ್ನ ಕೊಡುವನು; ಬಟ್ಟೆಯಿಲ್ಲದವನಿಗೆ ಬಟ್ಟೆ ಕೊಡುವನು;
యెహెజ్కేలు 18 : 8 (ERVTE)
ಅವನು ಸಾಲ ಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ಕೆಡುಕುಗಳನ್ನು ಮಾಡುವುದಿಲ್ಲ. ಅವನು ತನ್ನ ವ್ಯವಹಾರಗಳಲ್ಲಿ ಪ್ರತಿಯೊಬ್ಬನೊಂದಿಗೂ ಯಥಾರ್ಥವಾಗಿಯೂ ನ್ಯಾಯವಾಗಿಯೂ ಇರುವನು.
యెహెజ్కేలు 18 : 9 (ERVTE)
ಅವನು ನನ್ನ ನಿಯಮಗಳಿಗನುಸಾರವಾಗಿ ಜೀವಿಸುವನು ಮತ್ತು ನನ್ನ ಕಟ್ಟಳೆಗಳಿಗೆ ನಂಬಿಗಸ್ತಿಕೆಯಿಂದ ವಿಧೇಯನಾಗುವನು. ಅಂಥಾ ಮನುಷ್ಯನು ನೀತಿವಂತನಾಗಿದ್ದಾನೆ ಮತ್ತು ಅವನು ಖಂಡಿತವಾಗಿಯೂ ಬಂದುಕುವನು.
యెహెజ్కేలు 18 : 10 (ERVTE)
“ಆದರೆ ಒಂದುವೇಳೆ ಆ ನೀತಿವಂತನ ಮಗನು ಒಳ್ಳೆಯ ಕಾರ್ಯಗಳನ್ನು ಮಾಡದೆ ದರೋಡೆ ಮಾಡುವವನೂ ಕೊಲೆಮಾಡುವವನೂ ಆಗಿರಬಹುದು.
యెహెజ్కేలు 18 : 11 (ERVTE)
ಅವನ ತಂದೆಯು ಈ ಪಾಪಗಳಿಂದ ದೂರವಿದ್ದಾಗ್ಯೂ, ಮಗನು ಈ ಪಾಪಗಳಲ್ಲಿ ಪ್ರತಿಯೊಂದನ್ನೂ ಮಾಡಿದ್ದಿರಬಹುದು. ಅವನು ಬೆಟ್ಟದ ಮೇಲೆ ಹೋಗಿ ಅಲ್ಲಿ ವಿಗ್ರಹಗಳಿಗರ್ಪಿಸಿದ ನೈವೇದ್ಯದಲ್ಲಿ ಪಾಲು ತೆಗೆದುಕೊಳ್ಳಬಹುದು. ಆ ಕೆಟ್ಟ ಮಗನು ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ನಡೆಸಿದ್ದಿರಬಹುದು.
యెహెజ్కేలు 18 : 12 (ERVTE)
ಬಡ, ನಿಸ್ಸಹಾಯಕರಾದ ಜನರಿಗೆ ಕಿರುಕುಳ ಕೊಟ್ಟಿರಬಹುದು. ಜನರ ನಿಸ್ಸಹಾಯಕತೆಯ ಪ್ರಯೋಜನ ಪಡೆಯುತ್ತಿರಬಹುದು. ಒತ್ತೆಗೆ ತೆಗೆದುಕೊಂಡ ವಸ್ತುವನ್ನು ಹಿಂದಕ್ಕೆ ಕೊಡದೆ ಇದ್ದಿರಬಹುದು. ಆ ಮಗನು ವಿಗ್ರಹಗಳಿಗೆ ಪ್ರಾರ್ಥಿಸಿ ಇನ್ನೂ ಅನೇಕ ಭಯಂಕರ ಕೃತ್ಯಗಳನ್ನೂ ಮಾಡಿದ್ದಿರಬಹುದು.
యెహెజ్కేలు 18 : 13 (ERVTE)
ಆ ಕೆಟ್ಟ ಮಗನಿಂದ ಯಾರಾದರೂ ಸಾಲ ತೆಗೆದುಕೊಂಡಿದ್ದರೆ ಅವನು ಅವರಿಂದ ಬಡ್ಡಿಯನ್ನು ಕಡ್ಡಾಯವಾಗಿ ವಸೂಲು ಮಾಡಿದ್ದಿರಬಹುದು. ಹೀಗಿರುವದರಿಂದ ಆ ಕೆಟ್ಟ ಮಗನು ಹೆಚ್ಚುಕಾಲ ಬಂದುಕುವುದಿಲ್ಲ. ಅವನು ಭಯಂಕರ ಕೃತ್ಯಗಳನ್ನು ಮಾಡಿರುವದರಿಂದ ಕೊಲ್ಲಲ್ಪಡುವನು. ಅವನ ಮರಣಕ್ಕೆ ಅವನೇ ಜವಾಬ್ದಾರನು.
యెహెజ్కేలు 18 : 14 (ERVTE)
“ಇಗೋ, ಆ ಕೆಟ್ಟ ಮಗನಿಗೆ ಒಬ್ಬ ಮಗನಿರಬಹುದು. ತಂದೆ ಮಾಡುವ ದುಷ್ಕೃತ್ಯಗಳನ್ನು ನೋಡಿದ ಅವನು ತಂದೆಯಂತೆ ಜೀವಿಸದಿರಬಹುದು.
యెహెజ్కేలు 18 : 15 (ERVTE)
ಈ ಒಳ್ಳೆಯ ಮಗನು ಬೆಟ್ಟಕ್ಕೆ ಹೋಗಿ ಅಲ್ಲಿ ವಿಗ್ರಹಗಳಿಗೆ ಅರ್ಪಿಸಿದ ನೈವೇದ್ಯವನ್ನು ತಿನ್ನುವುದಿಲ್ಲ. ಅವನು ಇಸ್ರೇಲಿನ ಹೊಲಸು ವಿಗ್ರಹಗಳಿಗೆ ಪ್ರಾರ್ಥಿಸುವುದಿಲ್ಲ. ಅವನು ತನ್ನ ನೆರೆಯವನ ಹೆಂಡತಿಯೊಂದಿಗೆ ವ್ಯಭಿಚಾರ ಮಾಡುವುದಿಲ್ಲ.
యెహెజ్కేలు 18 : 16 (ERVTE)
ಆ ಒಳ್ಳೆಯ ಮಗನು ಯಾರ ಮೇಲೂ ದಬ್ಬಾಳಿಕೆ ನಡೆಸುವುದಿಲ್ಲ. ಅವನು ಒತ್ತೆಯಿಲ್ಲದೆ ಸಾಲಕೊಡುವನು. ಅವನು ಯಾರನ್ನೂ ದರೋಡೆ ಮಾಡುವುದಿಲ್ಲ. ಅವನು ಹಸಿದವರಿಗೆ ಊಟ ಕೊಡುವನು; ಬಟ್ಟೆಯಿಲ್ಲದವರಿಗೆ ಬಟ್ಟೆಯನ್ನು ಕೊಡುವನು.
యెహెజ్కేలు 18 : 17 (ERVTE)
ಅವನು ಬಡವರಿಗೆ ನೋವು ಮಾಡುವುದಿಲ್ಲ. ಅವನು ಹಣವನ್ನು ಸಾಲಕೊಡುವಾಗ ಬಡ್ಡಿಹಾಕುವುದಿಲ್ಲ. ಅವನು ನನ್ನ ಕಟ್ಟಳೆಗಳಿಗೆ ವಿಧೇಯನಾಗುವನು. ಮತ್ತು ನನ್ನ ನಿಯಮಗಳನ್ನು ಅನುಸರಿಸುವನು. ಈ ಒಳ್ಳೆಯ ಮಗನು ತಂದೆಯ ದುಷ್ಟತನದ ಕಾರಣಕ್ಕಾಗಿ ಮರಣಶಿಕ್ಷೆಯನ್ನು ಅನುಭವಿಸುವದಿಲ್ಲ. ಆ ಒಳ್ಳೆಯ ಮಗನು ಬಾಳುವನು.
యెహెజ్కేలు 18 : 18 (ERVTE)
ತಂದೆಯು ಜನರನ್ನು ಹೆದರಿಸಿಯಾಗಲಿ ದರೋಡೆ ಮಾಡಿಯಾಗಲಿ ವಸ್ತುಗಳನ್ನು ತೆಗೆದುಕೊಂಡಿರಬಹುದು. ತನ್ನ ಜನರ ಮಧ್ಯದಲ್ಲಿ ಕೆಟ್ಟದಾಗಿರುವುದನ್ನು ಅವನು ಮಾಡಿರಬಹುದು. ಆ ತಂದೆಯು ತನ್ನ ಪಾಪಗಳ ಸಲುವಾಗಿ ಸಾಯುವನು. ಆದರೆ ತಂದೆಯ ಪಾಪಗಳಿಗಾಗಿ ಮಗನು ಶಿಕ್ಷಿಸಲ್ಪಡುವುದಿಲ್ಲ.
యెహెజ్కేలు 18 : 19 (ERVTE)
“ ‘ತಂದೆಯ ಪಾಪಗಳಿಗಿರುವ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳದಿರುವದೇಕೆ?’ ಎಂದು ನೀವು ಕೇಳಬಹುದು. ಮಗನು ನ್ಯಾಯವಾದುದ್ದನ್ನು ಮತ್ತು ಸರಿಯಾದುದ್ದನ್ನು ಮಾಡಿದ್ದಾನೆ. ಅವನು ಎಚ್ಚರಿಕೆಯಿಂದ ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾಗಿದ್ದನು. ಆದ್ದರಿಂದ ಅವನು ಬಾಳುವನು.
యెహెజ్కేలు 18 : 20 (ERVTE)
ಯಾರು ಪಾಪ ಮಾಡುತ್ತಾರೋ ಅವರೇ ಮರಣಶಿಕ್ಷೆ ಹೊಂದುವರು. ತಂದೆಯ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ಮಗನು ಹೊತ್ತುಕೊಳ್ಳುವುದಿಲ್ಲ. ಮತ್ತು ಮಗನ ಪಾಪಗಳ ಪ್ರತಿಫಲಗಳಲ್ಲಿ ಯಾವುದನ್ನೂ ತಂದೆಯು ಹೊತ್ತುಕೊಳ್ಳುವದಿಲ್ಲ. ಒಬ್ಬ ಒಳ್ಳೆ ಮನುಷ್ಯನ ನೀತಿಯು ಅವನಿಗೇ ಸೇರಿದ್ದು. ಕೆಟ್ಟ ಮನುಷ್ಯನ ದುಷ್ಟತ್ವವೂ ಆ ಕೆಟ್ಟ ಮನುಷ್ಯನಿಗೆ ಸೇರಿದ್ದಾಗಿದೆ.
యెహెజ్కేలు 18 : 21 (ERVTE)
“ಒಂದುವೇಳೆ ದುಷ್ಟನೊಬ್ಬನು ತಾನು ಮಾಡಿದ ಎಲ್ಲಾ ಪಾಪಗಳಿಗೆ ವಿಮುಖನಾದರೆ, ನನ್ನ ಎಲ್ಲಾ ನಿಯಮಗಳಿಗೆ ವಿಧೇಯನಾದರೆ, ನ್ಯಾಯವಾದುದ್ದನ್ನೂ ಸರಿಯಾದುದ್ದನ್ನೂ ಮಾಡಿದರೆ, ಅವನು ಸಾಯದೆ ಬಂದುಕುವನು.
యెహెజ్కేలు 18 : 22 (ERVTE)
ದೇವರು ಅವನ ಹಿಂದಿನ ಪಾಪಗಳನ್ನು ನೆನಪಿಗೆ ತರುವದಿಲ್ಲ. ಅವನು ತಾನು ಮಾಡಿದ ಒಳ್ಳೆಯ ಕಾರ್ಯಗಳ ನಿಮಿತ್ತ ಬಂದುಕುವನು.”
యెహెజ్కేలు 18 : 23 (ERVTE)
యెహెజ్కేలు 18 : 24 (ERVTE)
ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನಗೆ ಪಾಪಿಗಳು ಸಾಯುವದರಲ್ಲಿ ಇಷ್ಟವಿಲ್ಲ. ಅವರು ತಮ್ಮ ಜೀವಿತವನ್ನು ಬದಲಾಯಿಸಿ ಜೀವವನ್ನು ಹೊಂದಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ.
యెహెజ్కేలు 18 : 25 (ERVTE)
“ಒಂದುವೇಳೆ ಒಳ್ಳೆಯವನೊಬ್ಬನು ತನ್ನ ಒಳ್ಳೆಯತನವನ್ನು ಬಿಟ್ಟು ಪಾಪ ಮಾಡಬಹುದು; ದುಷ್ಟರು ಮಾಡುವ ಅಸಹ್ಯಕೃತ್ಯಗಳನ್ನೆಲ್ಲ ಮಾಡಬಹುದು. ಅವನು ಹೀಗೆ ಮಾಡುತ್ತಾ ಬಂದುಕಲು ಸಾಧ್ಯವೇ ಇಲ್ಲ! ಅವನು ಅಪನಂಬಿಗಸ್ತನಾದ್ದರಿಂದ ಮತ್ತು ಪಾಪ ಮಾಡಿದ್ದರಿಂದ ದೇವರು ಅವನ ಎಲ್ಲಾ ಒಳ್ಳೆಯ ಕಾರ್ಯಗಳನ್ನೂ ಮರೆತುಬಿಡುವನು. ಅವನು ತನ್ನ ಪಾಪಗಳ ದೆಸೆಯಿಂದ ಸಾಯುವನು.” ದೇವರು ಹೇಳಿದ್ದೇನೆಂದರೆ: “ಒಂದುವೇಳೆ ನೀವು ಹೇಳಬಹುದು: ‘ನನ್ನ ಒಡೆಯನಾದ ದೇವರ ಕ್ರಮವು ದೃಢವಾಗಿಲ್ಲ.’ ಆದರೆ, ಇಸ್ರೇಲಿನ ಜನರೇ, ಕೇಳಿರಿ. ನಿಮ್ಮ ನಡತೆಯೇ ದೃಢವಾಗಿಲ್ಲ.
యెహెజ్కేలు 18 : 26 (ERVTE)
ಒಬ್ಬ ಒಳ್ಳೆಯವನು ಬದಲಾವಣೆ ಹೊಂದಿ ಕೆಟ್ಟಕಾರ್ಯಗಳನ್ನು ಮಾಡಿದರೆ, ಅವನ ದುಷ್ಟತ್ವಕ್ಕಾಗಿ ಅವನು ಸಾಯಲೇಬೇಕು.
యెహెజ్కేలు 18 : 27 (ERVTE)
ಆದರೆ ಒಬ್ಬ ಪಾಪಿ ಬದಲಾವಣೆ ಹೊಂದಿ ನೀತಿವಂತನಾಗಿ ಬಾಳಿದರೆ ಅವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವನು.
యెహెజ్కేలు 18 : 28 (ERVTE)
ತಾನು ಎಷ್ಟು ಕೆಟ್ಟವನಾಗಿ ಜೀವಿಸಿದನೆಂದು ತಿಳಿದು ನನ್ನ ಕಡೆಗೆ ತಿರುಗಿ ದುಷ್ಟತನ ಮಾಡುವದನ್ನು ನಿಲ್ಲಿಸಿದರೆ. ಅಂಥವನು ಸಾಯದೆ, ಬಾಳುವನು.”
యెహెజ్కేలు 18 : 29 (ERVTE)
ಆದರೆ ಇಸ್ರೇಲ್ ಜನರು, “ಅದು ಸರಿಯಲ್ಲ. ನನ್ನ ಒಡೆಯನಾದ ಯೆಹೋವನ ಕ್ರಮವು ದೃಢವಲ್ಲ” ಎಂದರು. ಆಗ ದೇವರು “ನಾನು ದೃಢವಾಗಿದ್ದೇನೆ. ನಿಮ್ಮ ನಡತೆಯೇ ದೃಢವಾಗಿಲ್ಲ.
యెహెజ్కేలు 18 : 30 (ERVTE)
ಇಸ್ರೇಲರೇ, ನಾನು ಪ್ರತಿಯೊಬ್ಬನನ್ನು ಅವನವನ ಕಾರ್ಯಗಳ ಪ್ರಕಾರ ನ್ಯಾಯತೀರಿಸುವೆನು” ಎಂದು ಹೇಳಿದನು. ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಆದ್ದರಿಂದ ನನ್ನ ಬಳಿಗೆ ಬನ್ನಿರಿ, ದುಷ್ಟತನ ಮಾಡುವದನ್ನು ನಿಲ್ಲಿಸಿರಿ, ಪಾಪವು ನಿಮ್ಮ ನಾಶನಕ್ಕೆ ಕಾರಣವಾಗದಂತೆ ಎಚ್ಚರಿಕೆಯಾಗಿರಿ.
యెహెజ్కేలు 18 : 31 (ERVTE)
ನಿಮ್ಮ ದಂಗೆಕೋರತನದ ಮಾರ್ಗಗಳನ್ನೆಲ್ಲ ತೊರೆದುಬಿಟ್ಟು ನಿಮ್ಮ ಹೃದಯವನ್ನೂ ಸಬಭಾವವನ್ನೂ ನೂತನ ಮಾಡಿಕೊಳ್ಳಿರಿ. ಇಸ್ರೇಲ್ ಜನರೇ, ನೀವು ಮರಣವನ್ನು ಬರಮಾಡಿಕೊಳ್ಳುವುದೇಕೆ?
యెహెజ్కేలు 18 : 32 (ERVTE)
ನಿಮ್ಮನ್ನು ಸಾಯಿಸಲು ನನಗೆ ಇಷ್ಟವಿಲ್ಲ. ನೀವು ನನ್ನ ಕಡೆಗೆ ಹಿಂದಿರುಗಿ ಜೀವಿಸಿರಿ.” ಇದು ನನ್ನ ಒಡೆಯನಾದ ಯೆಹೋವನ ನುಡಿ.
❮
❯