యెహెజ్కేలు 19 : 1 (ERVTE)
{#1ಇಸ್ರೇಲಿನ ಪ್ರಭುಗಳ ಕುರಿತು ಶೋಕಗೀತೆ } ದೇವರು ನನಗೆ, “ಇಸ್ರೇಲರ ಅಧಿಪತಿಗಳ ವಿಷಯವಾದ ಈ ಶೋಕಗೀತೆಯನ್ನು ನೀನು ಹಾಡಬೇಕು” ಎಂದು ಹೇಳಿದನು:
యెహెజ్కేలు 19 : 2 (ERVTE)
“ ‘ನಿನ್ನ ತಾಯಿಯು ಏನಾಗಿದ್ದಳು? ಆಕೆಯು ಸಿಂಹಗಳ ಮಧ್ಯದಲ್ಲಿ ಸಿಂಹಿಣಿಯಾಗಿದ್ದಳು. ಆಕೆಯು ಪ್ರಾಯದ ಸಿಂಹಗಳೊಡನೆ ಮಲಗಿ ತನ್ನ ಮರಿಗಳನ್ನು ಸಾಕಿದಳು.
యెహెజ్కేలు 19 : 3 (ERVTE)
ಮರಿಗಳಲ್ಲೊಂದು ಎದ್ದು ಗಟ್ಟಿಮುಟ್ಟಾದ ಸಿಂಹವಾಗಿ ಬೆಳೆಯುತ್ತಾ ಬಂತು. ತನ್ನ ಆಹಾರವನ್ನು ತಾನೇ ಬೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.
యెహెజ్కేలు 19 : 4 (ERVTE)
“ ‘ಅದು ಗರ್ಜಿಸುವ ಶಬ್ದವನ್ನು ಜನರು ಕೇಳಿದರು. ಜನಾಂಗಗಳು ಅದರ ಬಗ್ಗೆ ಕೇಳಿದರು. ಅದನ್ನು ತಮ್ಮ ಗುಂಡಿಯಲ್ಲಿ ಅವರು ಬಂಧಿಸಿದರು. ಅವರು ಅದರ ಬಾಯಿಗೆ ಕೊಂಡಿಯನ್ನು ಹಾಕಿ ಈಜಿಪ್ಟಿಗೆ ಅದನ್ನು ಕೊಂಡೊಯ್ದರು.
యెహెజ్కేలు 19 : 5 (ERVTE)
“ ‘ಆ ಸಿಂಹಿಣಿಯು ತನಗಾದ ನಿರಾಶೆಯನ್ನೂ ತನ್ನ ಮರಿಸಿಂಹದ ಮೇಲೆ ತನಗಿದ್ದ ನಿರೀಕ್ಷೆ ಹಾಳಾದದ್ದನ್ನು ಕಂಡು, ತನ್ನ ಮರಿಗಳಲ್ಲಿ ಮತ್ತೊಂದನ್ನು ತೆಗೆದುಕೊಂಡು ಅದನ್ನು ಪ್ರಾಯದ ಸಿಂಹವನ್ನಾಗಿ ಮಾಡಿತು.
యెహెజ్కేలు 19 : 6 (ERVTE)
ಅದು ಬೆಳೆದು ಪ್ರಾಯದ ಸಿಂಹವಾಗಿ ಸಿಂಹಗಳೊಂದಿಗೆ ಬೇಟೆಯಾಡಲು ಹೋಯಿತು; ತನ್ನ ಆಹಾರವನ್ನು ತಾನೇ ಬೇಟೆಯಾಡತೊಡಗಿ ಮನುಷ್ಯರನ್ನು ಕೊಂದು ತಿನ್ನಲಾರಂಭಿಸಿತು.
యెహెజ్కేలు 19 : 7 (ERVTE)
ಅದು ಸ್ತ್ರೀಯರನ್ನು ವಿಧವೆಯರನ್ನಾಗಿ ಮಾಡಿತು; ಪಟ್ಟಣಗಳನ್ನು ನಿರ್ಜನವನ್ನಾಗಿ ಮಾಡಿತು; ಅದು ಗರ್ಜಿಸಿದಾಗ ದೇಶವೂ ಅದರಲ್ಲಿರುವ ಪ್ರತಿಯೊಂದೂ ಭಯಗೊಂಡವು.
యెహెజ్కేలు 19 : 8 (ERVTE)
ಸುತ್ತಮುತ್ತಲಿನ ಜನಾಂಗಗಳವರು ಕೂಡಿಬಂದು ಅದರ ವಿರುದ್ಧವಾಗಿ ನಿಂತು, ಬಲೆಹರಡಿ ಅದನ್ನು ಬಂಧಿಸಿದರು.
యెహెజ్కేలు 19 : 9 (ERVTE)
ಅವರು ಅದನ್ನು ಮರದ ಪಂಜರದಲ್ಲಿಟ್ಟು ಕೊಂಡಿಗಳನ್ನು ಹಾಕಿ, ಬಾಬಿಲೋನಿನ ರಾಜನ ಬಳಿಗೆ ಕೊಂಡೊಯ್ದರು. ಅದರ ಗರ್ಜನೆಯು ಇಸ್ರೇಲಿನ ಪರ್ವತಗಳ ಮೇಲೆ ಇನ್ನೆದಿಗೂ ಕೇಳದಿರಲಿ ಎಂದು ಅದನ್ನು ಅಲ್ಲಿ ಸೆರೆಮನೆಗೆ ಹಾಕಿದರು.
యెహెజ్కేలు 19 : 10 (ERVTE)
“ ‘ನಿನ್ನ ತಾಯಿಯು ನೀರಾವರಿಯಲ್ಲಿ ನೆಟ್ಟ ದ್ರಾಕ್ಷಾಲತೆಯಂತಿದ್ದಳು. ಬೇಕಾದಷ್ಟು ನೀರು ಇದ್ದುದರಿಂದ ಅದು ಫಲಭರಿತವಾಗಿದ್ದು ಅನೇಕ ಕೊಂಬೆಗಳನ್ನು ಹೊಂದಿತ್ತು.
యెహెజ్కేలు 19 : 11 (ERVTE)
ಅದು ಬಲವಾದ ಕಾಂಡಗಳನ್ನು ಬೆಳೆಸಿತು. ಅದರ ಕಾಂಡಗಳು ಅಧಿಪತಿಗಳ ರಾಜದಂಡದಂತಿದ್ದವು. ಅವುಗಳಲ್ಲಿ ಒಂದು ಮೋಡಗಳ ಮಧ್ಯದಲ್ಲಿ ಎತ್ತರವಾಗಿ ಬೆಳೆಯಿತು. ಅದು ತನ್ನ ಎತ್ತರದಿಂದ ಮತ್ತು ತನ್ನ ಅನೇಕ ಕೊಂಬೆಗಳಿಂದ ಎದ್ದುಕಾಣುತ್ತಿತ್ತು.
యెహెజ్కేలు 19 : 12 (ERVTE)
ಆದರೆ ದ್ರಾಕ್ಷಾಲತೆಯು ಬೇರು ಸಮೇತ ಕಿತ್ತುಹಾಕಲ್ಪಟ್ಟಿತು. ಅದು ನೆಲದ ಮೇಲೆ ಬಿಸಾಡಲ್ಪಟ್ಟಿತು. ಪೂರ್ವದ ಬಿಸಿಗಾಳಿಯು ಅದರ ಹಣ್ಣುಗಳನ್ನು ಒಣಗಿಸಿತು. ಅದರ ಬಲವಾದ ಕೊಂಬೆಗಳು ಮುರಿಯಲ್ಪಟ್ಟವು. ಅವುಗಳನ್ನು ಬೆಂಕಿಯು ಸುಟ್ಟುಹಾಕಿತು.
యెహెజ్కేలు 19 : 13 (ERVTE)
“ ‘ಈಗ ಆ ದ್ರಾಕ್ಷಾಬಳ್ಳಿಯನ್ನು ಮರುಭೂಮಿಯಲ್ಲಿ ನೆಡಲ್ಪಟ್ಟಿರುತ್ತದೆ. ಅದು ನೀರಿಲ್ಲದ ಬಂಜರು ಭೂಮಿ.
యెహెజ్కేలు 19 : 14 (ERVTE)
ಅದರ ಸ್ವಂತ ಕಾಂಡದಿಂದಲೇ ಬೆಂಕಿಯು ಹೊರಟುಬಂದು ಅದರ ಚಿಕ್ಕ ಕೊಂಬೆಗಳನ್ನು ಮತ್ತು ಫಲಗಳನ್ನು ನಾಶಮಾಡಿತು. ಈಗ ಬಲವಾದ ಕಾಂಡ ಅದರಲ್ಲಿಲ್ಲ. ಆಳುವದಕ್ಕೆ ರಾಜದಂಡವೂ ಅದರಲ್ಲಿಲ್ಲ.’ ಇದು ಮರಣದ ಶೋಕಗೀತೆ. ಇದನ್ನು ಶೋಕಗೀತೆಯನ್ನಾಗಿಯೇ ಬಳಸಲಾಗುತ್ತಿದೆ.”
❮
❯
1
2
3
4
5
6
7
8
9
10
11
12
13
14