యెహెజ్కేలు 25 : 1 (ERVTE)
{#1ಅಮ್ಮೋನಿಗೆ ವಿರುದ್ಧ ಪ್ರವಾದನೆ } ಒಡೆಯನಾದ ಯೆಹೋವನ ಮಾತುಗಳು ನನಗೆ ಬಂದವು. ಆತನು ಹೀಗೆ ಹೇಳಿದನು:
యెహెజ్కేలు 25 : 2 (ERVTE)
“ನರಪುತ್ರನೇ, ಅಮ್ಮೋನಿನ ಕಡೆಗೆ ಮುಖಮಾಡಿ, ಅವರಿಗೆ ವಿರುದ್ಧವಾಗಿ ಪ್ರವಾದಿಸು.
యెహెజ్కేలు 25 : 3 (ERVTE)
ಅಮ್ಮೋನಿಯರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನ ಮಾತುಗಳನ್ನು ಕೇಳಿರಿ. ಆತನು ಹೇಳುವುದೇನೆಂದರೆ, ನನ್ನ ಪವಿತ್ರಾಲಯವು ಅಪವಿತ್ರಗೊಂಡಾಗಲೂ ಇಸ್ರೇಲ್ ದೇಶವು ನಾಶವಾದಾಗಲೂ ಯೆಹೂದದ ಜನರು ಸೆರೆ ಒಯ್ಯಲ್ಪಟ್ಟಾಗಲೂ ನೀವು ಸಂತೋಷಪಟ್ಟಿರಿ.
యెహెజ్కేలు 25 : 4 (ERVTE)
ಅದಕ್ಕಾಗಿ ನಾನು ನಿಮ್ಮನ್ನು ಪೂರ್ವದ ಜನರಿಗೆ ಬಿಟ್ಟುಕೊಡುವೆನು. ಅವರು ಬಂದು ನಿಮ್ಮ ದೇಶವನ್ನು ಕಿತ್ತುಕೊಳ್ಳುವರು. ಅವರ ಸೈನ್ಯವು ಬಂದು ನಿಮ್ಮ ದೇಶದೊಳಗೆ ಪಾಳೆಯ ಮಾಡುವದು. ಅವರು ನಿಮ್ಮ ಮಧ್ಯದಲ್ಲಿ ವಾಸಿಸಿ ನಿಮ್ಮ ಹಣ್ಣುಗಳನ್ನು ತಿಂದು ನಿಮ್ಮ ಹಾಲನ್ನು ಕುಡಿಯುವರು.
యెహెజ్కేలు 25 : 5 (ERVTE)
“ ‘ನಾನು ರಬ್ಬಾ ನಗರವನ್ನು ಒಂಟೆಗಳು ಮೇಯುವ ಸ್ಥಳವನ್ನಾಗಿಯೂ, ಅಮ್ಮೋನ್ ದೇಶವನ್ನು ಕುರಿಹಟ್ಟಿಯನ್ನಾಗಿಯೂ ಮಾಡುವೆನು. ಆಗ ನಾನು ಯೆಹೋವನೆಂದು ನಿಮಗೆ ಗೊತ್ತಾಗುವದು.
యెహెజ్కేలు 25 : 6 (ERVTE)
ಯೆಹೋವನು ಹೇಳುವುದೇನೆಂದರೆ: ಜೆರುಸಲೇಮ್ ನಾಶವಾಯಿತೆಂದು ನೀವು ಸಂತೋಷಪಟ್ಟಿರಿ. ನೀವು ಚಪ್ಪಾಳೆತಟ್ಟಿ ಕಾಲಿನಿಂದ ನೆಲವನ್ನು ಬಡಿದಿರಿ. ಇಸ್ರೇಲ್ ದೇಶವನ್ನು ಕಡೆಗಣಿಸಿ ನಗಾಡಿದಿರಿ.
యెహెజ్కేలు 25 : 7 (ERVTE)
ಅದಕ್ಕಾಗಿ ನಾನು ನಿಮ್ಮನ್ನು ದಂಡಿಸುವೆನು. ಜನಾಂಗಗಳಿಂದ ನಿಮ್ಮನ್ನು ಕೊಳ್ಳೆ ಹೊಡೆಸಿ ನಿರ್ಮೂಲ ಮಾಡುವೆನು. ದೇಶಗಳೊಳಗಿಂದ ನಿಮ್ಮ ಹೆಸರನ್ನು ಅಳಿಸಿಹಾಕುವೆನು; ನಿಮ್ಮನ್ನು ನಾಶಮಾಡುವೆನು. ನಾನೇ ಯೆಹೋವನೆಂಬುದು ಆಗ ನಿಮಗೆ ತಿಳಿಯುವುದು.’ ”
యెహెజ్కేలు 25 : 8 (ERVTE)
{#1ಮೋವಾಬ್ ಮತ್ತು ಸೇಯೀರ್ ವಿರುದ್ಧ ಪ್ರವಾದನೆ } ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಮೋವಾಬ್ ಮತ್ತು ಸೇಯೀರ್, ‘ಯೆಹೂದ ಜನಾಂಗದವರು ಇತರ ಎಲ್ಲಾ ಜನಾಂಗಗಳವರಂತಿದ್ದಾರೆ.’ ಎಂದು ಹೇಳುತ್ತಾರೆ.
యెహెజ్కేలు 25 : 9 (ERVTE)
ಮೋವಾಬಿನ ಗಡಿಯನ್ನು ಸಂರಕ್ಷಿಸುತ್ತಿರುವ ಪಟ್ಟಣಗಳು ಆಕ್ರಮಣಕ್ಕೆ ಗುರಿಯಾಗುವಂತೆ ಮಾಡುತ್ತೇನೆ. ಬೇತ್‌ಯೆಷೀಮೋತ್, ಬಾಳ್‌ಮೆಯೋನ್, ಕಿರ್ಯಾಥಯಿಮ್, ಅದರ ವೈಭವಯುತವಾದ ಸರಹದ್ದಿನ ಪಟ್ಟಣಗಳನ್ನು ನಾನು ತೆಗೆದುಹಾಕುವೆನು.
యెహెజ్కేలు 25 : 10 (ERVTE)
ಪೂರ್ವದಿಕ್ಕಿನ ಜನರು ಮೋವಾಬನ್ನೂ ಅಮ್ಮೋನನ್ನೂ ಗೆದ್ದುಕೊಳ್ಳುವಂತೆ ನಾನು ಮಾಡುವೆನು. ಆಗ ಜನರು ಮೋವಾಬಿನವರನ್ನು ಮರೆತುಬಿಡುವರು.
యెహెజ్కేలు 25 : 11 (ERVTE)
ಹೀಗೆ ನಾನು ಮೋವಾಬನ್ನು ಶಿಕ್ಷಿಸುವೆನು. ಆಗ ನಾನೇ ಯೆಹೋವನೆಂದು ಅವರು ತಿಳಿಯುವರು.”
యెహెజ్కేలు 25 : 12 (ERVTE)
{#1ಎದೋಮ್ ವಿರುದ್ಧ ಪ್ರವಾದನೆಗಳು } ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ: “ಎದೋಮ್ಯರು ಯೆಹೂದದ ಜನರು ಮೇಲೆ ಕ್ರೂರವಾದ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರ ಮೇಲೆ ಸತತವಾಗಿ ಸೇಡು ತೀರಿಸಿಕೊಳ್ಳುವುದರ ಮೂಲಕ ಎದೋಮ್ಯರು ಮಹಾಪರಾಧ ಮಾಡಿದ ದೋಷಿಗಳಾಗಿದ್ದಾರೆ.”
యెహెజ్కేలు 25 : 13 (ERVTE)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದೋಮನ್ನು ಶಿಕ್ಷಿಸುವೆನು. ಎದೋಮಿನ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆನು. ತೇಮಾನಿನಿಂದ ಹಿಡಿದು ದೆದಾನ್‌ತನಕ ಆ ದೇಶವನ್ನೆಲ್ಲಾ ನಾಶಮಾಡುವೆನು. ಎದೋಮ್ಯರು ರಣರಂಗದಲ್ಲಿ ಸಾಯುವರು.
యెహెజ్కేలు 25 : 14 (ERVTE)
ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.
యెహెజ్కేలు 25 : 15 (ERVTE)
{#1ಫಿಲಿಷ್ಟಿಯರ ವಿರುದ್ಧ ಪ್ರವಾದನೆಗಳು } ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆ, “ಫಿಲಿಷ್ಟಿಯರು ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ಆವೇಶದಿಂದ ತಿರಸ್ಕರಿಸಿ ಸೇಡನ್ನು ತೀರಿಸಿಕೊಂಡಿದ್ದಾರೆ. ಅವರು ತಮ್ಮ ದೀರ್ಬಕಾಲದ ದೆಬಷದಿಂದ ನಾಶನವು ಬರುವಂತೆ ಮಾಡಿದ್ದಾರೆ.”
యెహెజ్కేలు 25 : 16 (ERVTE)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳಿದ್ದೇನೆಂದರೆ, “ನಾನು ಫಿಲಿಷ್ಟಿಯರನ್ನು ಶಿಕ್ಷಿಸುವೆನು, ಹೌದು, ಕೆರೇತದ ಆ ಜನರನ್ನು ನಾಶಮಾಡುವೆನು. ಸಮುದ್ರ ಕರಾವಳಿಯಲ್ಲಿ ವಾಸಿಸುವ ಉಳಿದ ಜನರನ್ನೆಲ್ಲಾ ನಾಶಮಾಡುವೆನು.
యెహెజ్కేలు 25 : 17 (ERVTE)
ನಾನು ಅವರೊಂದಿಗೆ ಮುಯ್ಯಿತೀರಿಸಿಕೊಳ್ಳುವೆನು. ನನ್ನ ಕೋಪವು ಅವರಿಗೆ ಪಾಠ ಕಲಿಸುವದು. ನಾನು ಯೆಹೋವನೆಂದು ಆಗ ಅವರು ತಿಳಿದುಕೊಳ್ಳುವರು.”

1 2 3 4 5 6 7 8 9 10 11 12 13 14 15 16 17